ಸಿಎಂ ಸಿದ್ದರಾಮಯ್ಯರ ಭೇಟಿಯಾದ ದುನಿಯಾ ವಿಜಿ, ‘ಭೀಮ’ ವೀಕ್ಷಿಸಲು ಆಹ್ವಾನ

ದುನಿಯಾ ವಿಜಯ್ ನಟಿಸಿ, ನಿರ್ದೇಶನ ಮಾಡಿರುವ ‘ಭೀಮ’ ಸಿನಿಮಾ ಆಗಸ್ಟ್ 09 ರಂದು ಬಿಡುಗಡೆ ಆಗಲಿದೆ. ಸಿನಿಮಾದ ವೀಕ್ಷಣೆಗೆ ಸಿದ್ದರಾಮಯ್ಯ ಅವರನ್ನು ದುನಿಯಾ ವಿಜಯ್ ಆಹ್ವಾನಿಸಿದ್ದಾರೆ.

ಸಿಎಂ ಸಿದ್ದರಾಮಯ್ಯರ ಭೇಟಿಯಾದ ದುನಿಯಾ ವಿಜಿ, ‘ಭೀಮ’ ವೀಕ್ಷಿಸಲು ಆಹ್ವಾನ

Updated on: Aug 01, 2024 | 2:51 PM

‘ಭೀಮ’ ಸಿನಿಮಾದ ಪ್ರಚಾರ ಕಾರ್ಯದಲ್ಲಿ ನಿರತರಾಗಿರುವ ನಟ, ನಿರ್ದೇಶಕ ದುನಿಯಾ ವಿಜಯ್, ಸಿಎಂ ಸಿದ್ದರಾಮಯ್ಯ ಅವರನ್ನು ಇಂದು (ಆಗಸ್ಟ್ 09) ಭೇಟಿಯಾಗಿದ್ದಾರೆ. ಆಗಸ್ಟ್ 9 ರಂದು ತಮ್ಮ ‘ಭೀಮ’ ಸಿನಿಮಾ ಬಿಡುಗಡೆ ಆಗುತ್ತಿದ್ದು, ಸಿನಿಮಾ ನೋಡಲು ಸಿದ್ದರಾಮಯ್ಯ ಅವರನ್ನು ದುನಿಯಾ ವಿಜಯ್ ಆಹ್ವಾನಿಸಿದ್ದಾರೆ. ಸಿದ್ದರಾಮಯ್ಯ ಅವರು ಸಹ ದುನಿಯಾ ವಿಜಯ್​ರ ಆಹ್ವಾನವನ್ನು ಮನ್ನಿಸಿ, ಸಿನಿಮಾ ನೋಡುವಾಗಿ ಹೇಳಿದ್ದಾರೆ ಎನ್ನಲಾಗಿದೆ.

ಕಳೆದ ವರ್ಷ ನಡೆದಿದ್ದ ‘ಭೀಮ’ ಸಿನಿಮಾಕ್ಕೆ ಸಂಬಂಧಿಸಿದ ಕಾರ್ಯಕ್ರಮವೊಂದರಲ್ಲಿಯೂ ಸಿದ್ದರಾಮಯ್ಯ ಭಾಗಿ ಆಗಿದ್ದರು. ಅದಕ್ಕೂ ಮುಂಚೆ ‘ಸಲಗ’ ಸಿನಿಮಾದ ಪ್ರೀ ರಿಲೀಸ್ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಇಬ್ಬರೂ ಭಾಗಿಯಾಗಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದರು. ತಮ್ಮನ್ನು ಸಿದ್ದರಾಮಯ್ಯ ಅಭಿಮಾನಿ ಎಂದು ದುನಿಯಾ ವಿಜಯ್ ಹೇಳಿಕೊಳ್ಳುತ್ತಾರೆ. ಸಿದ್ದರಾಮಯ್ಯ ಅವರೊಟ್ಟಿಗೆ ಉತ್ತಮ ನಂಟನ್ನು ದುನಿಯಾ ವಿಜಯ್ ಹೊಂದಿದ್ದಾರೆ.

ಇದೇ ವರ್ಷ ನಡೆದ ಚುನಾವಣೆ ಸಮಯದಲ್ಲಿ ಸಿಎಂ ಸಿದ್ದರಾಮಯ್ಯ ಪರವಾಗಿ ದುನಿಯಾ ವಿಜಯ್ ಪ್ರಚಾರ ಮಾಡಿದ್ದರು. ಸಿದ್ದರಾಮಯ್ಯ ಅವರು ಮತ್ತೆ ಸಿಎಂ ಆಗಬೇಕು ಎಂದು ಅಪೇಕ್ಷಿಸಿದ್ದರು. ತಮ್ಮ ಪರವಾಗಿ ಪ್ರಚಾರ ಮಾಡಿದ್ದ ದುನಿಯಾ ವಿಜಯ್​ಗೆ ಸಿದ್ದರಾಮಯ್ಯ ಧನ್ಯವಾದ ಸಹ ಅರ್ಪಣೆ ಮಾಡಿದ್ದರು. ಅಂತೆಯೇ ಈಗ ಸಿದ್ದರಾಮಯ್ಯ ಮತ್ತೆ ಸಿಎಂ ಆಗಿದ್ದಾರೆ.

ಇದನ್ನೂ ಓದಿ:ಕನ್ನಡ ಚಿತ್ರರಂಗದಲ್ಲಿರುವ ಮುಖ್ಯ ಸಮಸ್ಯೆ ಏನು? ಬೊಟ್ಟು ಮಾಡಿ ತೋರಿದ ದುನಿಯಾ ವಿಜಯ್

‘ಭೀಮ’ ದುನಿಯಾ ವಿಜಯ್ ನಟಿಸಿ, ನಿರ್ದೇಶನ ಮಾಡಿರುವ ಎರಡನೇ ಸಿನಿಮಾ. ಈ ಹಿಂದೆ ‘ಸಲಗ’ ಸಿನಿಮಾವನ್ನು ದುನಿಯಾ ವಿಜಯ್ ನಿರ್ದೇಶನ ಮಾಡಿದ್ದರು. ‘ಭೀಮ’ ಸಿನಿಮಾ ಆಗಸ್ಟ್ 09 ರಂದು ಬಿಡುಗಡೆ ಆಗಲಿದೆ. ಸಿನಿಮಾ ಬೆಂಗಳೂರಿನ ಅಂಡರ್ವಲ್ಡ್ ಕತೆಯನ್ನು ಒಳಗೊಂಡಿದೆ. ಸಿನಿಮಾದ ಕೆಲವು ಹಾಡುಗಳು ಈಗಾಗಲೇ ಬಿಡುಗಡೆ ಆಗಿದ್ದು, ಹಾಡುಗಳು ಟ್ರೆಂಡ್ ಸೃಷ್ಟಿಸಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
Loading...
Unable to load recommendations.
Follow Us