ಆನೇಕಲ್​ನ‌ ಕುಂಬಾರನಹಳ್ಳಿಯಲ್ಲಿ ದುನಿಯಾ ವಿಜಯ್​ ತಾಯಿ ನಾರಾಯಣಮ್ಮ ಅಂತ್ಯಕ್ರಿಯೆ

Duniya Vijay: ನಟ ದುನಿಯಾ ವಿಜಯ್​ ತಂದೆಯ ಊರು ಆನೇಕಲ್ ತಾಲ್ಲೂಕಿನ ಕುಂಬಾರನಹಳ್ಳಿ. ಹಾಗಾಗಿ ಅಲ್ಲಿಯೇ ವಿಜಯ್ ತಾಯಿ ನಾರಾಯಣಮ್ಮ ಅವರ ಅಂತ್ಯ ಸಂಸ್ಕಾರ ಮಾಡಲಾಗಿದೆ.

ಆನೇಕಲ್​ನ‌ ಕುಂಬಾರನಹಳ್ಳಿಯಲ್ಲಿ ದುನಿಯಾ ವಿಜಯ್​ ತಾಯಿ ನಾರಾಯಣಮ್ಮ ಅಂತ್ಯಕ್ರಿಯೆ
ದುನಿಯಾ ವಿಜಯ್​, ನಾರಾಯಣಮ್ಮ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Jul 09, 2021 | 5:28 PM

ಖ್ಯಾತ ನಟ ದುನಿಯಾ ವಿಜಯ್​ ಅವರ ತಾಯಿ ನಾರಾಯಣಮ್ಮ ಅಂತಿಮ‌ ಯಾತ್ರೆ ಮುಗಿಸಿದ್ದಾರೆ. ಅನಾರೋಗ್ಯದಿಂದ ಮೃತರಾದ ಅವರ ಅಂತ್ಯ ಸಂಸ್ಕಾರವನ್ನು ಶುಕ್ರವಾರ (ಜು.9) ನೆರವೇರಿಸಲಾಯಿತು. ಆನೇಕಲ್​ನ‌ ಕುಂಬಾರನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಯಿತು. ನಾರಾಯಣಮ್ಮ ಅವರ ಅಂತಿಮ ಸಂಸ್ಕಾರದಲ್ಲಿ ದುನಿಯಾ ವಿಜಯ್​ ಹಾಗೂ ಕುಟುಂಬದ ಇತರೆ ಸದಸ್ಯರು ಭಾಗಿ ಆಗಿದ್ದರು. ದುನಿಯಾ ವಿಜಯ್​ ತಂದೆಯ ಊರು ಆನೇಕಲ್ ತಾಲ್ಲೂಕಿನ ಕುಂಬಾರನಹಳ್ಳಿ. ಹಾಗಾಗಿ ಅಲ್ಲಿಯೇ ನಾರಾಯಣಮ್ಮ ಅವರ ಅಂತ್ಯಕ್ರಿಯೆ ಮಾಡಲಾಗಿದೆ.

ಕೆಲವೇ ದಿನಗಳ ಹಿಂದೆ ನಾರಾಯಣಮ್ಮ ಅವರು ಕೊವಿಡ್​ನಿಂದ ಚೇತರಿಸಿಕೊಂಡಿದ್ದರು. ಬಳಿಕ ಅವರಿಗೆ ಮತ್ತೆ ಅನಾರೋಗ್ಯ ಸಮಸ್ಯೆ ಕಾಣಿಸಿಕೊಂಡಿತ್ತು. ಬ್ರೇನ್​ ಸ್ಟ್ರೋಕ್​ ಆದ ಪರಿಣಾಮ ಪರಿಸ್ಥಿತಿ ಚಿಂತಾಜನಕ ಆಗಿತ್ತು. ಆದರೂ ಅವರಿಗೆ ಆಸ್ಪತ್ರೆಗೆ ಹೋಗಲು ಇಷ್ಟ ಇರಲಿಲ್ಲ. ಹಾಗಾಗಿ ಮನೆಯಲ್ಲಿಯೇ ವಿಜಯ್​ ಅವರು ತಾಯಿಯ ಆರೈಕೆ ಮಾಡುತ್ತಿದ್ದರು. ಆದರೂ ಚಿಕಿತ್ಸೆ ಫಲಕಾರಿ ಆಗದೇ ಅವರು ಗುರುವಾರ (ಜು.8) ಕೊನೆಯುಸಿರು ಎಳೆದರು.

ತಾಯಿ ಗುಣಮುಖರಾಗುತ್ತಾರೆ ಎಂದು ದುನಿಯಾ ವಿಜಯ್​ ಬಹಳ ನಂಬಿಕೆ ಇಟ್ಟುಕೊಂಡಿದ್ದರು. ಆ ಬಗ್ಗೆ ಅವರು ಟಿವಿ9ಗೆ ಪ್ರತಿಕ್ರಿಯಿಸಿದ್ದರು. ‘ಮನೆಯಲ್ಲಿಯೇ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ. ತಾಯಿ ಮತ್ತೆ ಸಿಗಲ್ಲ, ಅವರು ಇರುವವರೆಗೂ ಚೆನ್ನಾಗಿ ನೋಡಿಕೊಳ್ಳಬೇಕು ಅನ್ನೋದಷ್ಟೇ ನನ್ನ ಆಸೆ. ಪ್ರತಿದಿನ ಅವರ ಆರೋಗ್ಯ ಕ್ಷೀಣಿಸುತ್ತಿದೆ. ಆದರೆ ಮತ್ತೆ ಆರೋಗ್ಯ ಸರಿಯಾಗುತ್ತೆ ಎಂಬ ವಿಶ್ವಾಸವಿದೆ’ ಎಂದು ಅವರು ಹೇಳಿದ್ದರು. ಆದರೆ ನಾರಾಯಣಮ್ಮ ಇಹಲೋಕ ತ್ಯಜಿಸಿರುವುದು ನೋವಿನ ಸಂಗತಿ.

ನಾರಾಯಣಮ್ಮ ನಿಧನಕ್ಕೆ ಗಾಯಕ ನವೀನ್​ ಸಜ್ಜು ಕಂಬನಿ ಮಿಡಿದಿದ್ದಾರೆ. ‘ದುನಿಯಾ ವಿಜಯ್​ ಅಮ್ಮ ನಮ್ಮನ್ನೆಲ್ಲಾ ಬಿಟ್ಟು ಹೋಗಿದ್ದಾರೆ. ಮನೆಗೆ ಹೋದಾಗಲೆಲ್ಲ ಮಗನೇ ಎಂದೇ ಬಾಯ್ತುಂಬ ಕರೆಯುತ್ತಿದ್ದ ಅಮ್ಮ, ನಮ್ಮನ್ನು ನೋಡಿಕೊಳ್ಳುತ್ತಿದ್ದ ಪ್ರೀತಿಗೆ ಸರಿಸಾಟಿಯೇ ಇಲ್ಲ. ಅವರಿಗೆ ನಾನು ಹಾಡುವ ‘ಒಳಿತು ಮಾಡು ಮನುಸ, ನೀ ಇರೋದು ಮೂರೇ ದಿವಸ’ ಹಾಡೆಂದರೆ ಬಹಳ ಇಷ್ಟ. ಅವರಿಗೆ ಇಷ್ಟವಾದಾಗಲೆಲ್ಲ ಈ ಹಾಡು ಹೇಳಪ್ಪ ಎಂದು ಹೇಳಿ ಕೇಳುತ್ತಿದ್ದರು. ಹಾಡು ಕೇಳಿ ಮೌನವಾಗಿ ಕಣ್ಣಂಚಲ್ಲಿ ನೀರು ತಂದುಕೊಳ್ಳುತ್ತಿದ್ದರು. ಸಮಾಧಾನಪಟ್ಟುಕೊಳ್ಳುತ್ತಿದ್ದರು’ ಎಂದು ನವೀನ್​ ಸಜ್ಜು ಸೋಶಿಯಲ್​ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ:

ಕೋಮಾ ಸ್ಥಿತಿಯಲ್ಲೂ ನವೀನ್​ ಸಜ್ಜು ಹಾಡು ಕೇಳಿ ಅತ್ತಿದ್ದ ದುನಿಯಾ ವಿಜಯ್​ ತಾಯಿ; ವಿಡಿಯೋ ಹಂಚಿಕೊಂಡ ಗಾಯಕ

‘ಅಮ್ಮನಿಗೆ ಸಲಗ ನೋಡೋಕೆ ಆಗಲ್ಲ’; ತಾಯಿ ಆರೋಗ್ಯ ನೆನೆದು ಭಾವುಕರಾದ ದುನಿಯಾ ವಿಜಯ್

ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ