AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಭೀಮ’ನಾಗಿ ರೌದ್ರಾವತಾರ ತಾಳಿದ ‘ದುನಿಯಾ’ ವಿಜಯ್; ‘ಕೆಣಕದಿದ್ರೆ ಕ್ಷೇಮ’

‘ಸಲಗ’ ಸಿನಿಮಾದಲ್ಲಿ ದುನಿಯಾ ವಿಜಯ್​ ಅವರು ರೌಡಿಸಂನ ಕಥೆ ಹೇಳಿದ್ದರು. ಈ ಸಿನಿಮಾ ಬಗ್ಗೆ ಎಲ್ಲ ಕಡೆಗಳಿಂದಲೂ ಮೆಚ್ಚುಗೆ ವ್ಯಕ್ತವಾಗಿತ್ತು. ಈ ಯಶಸ್ಸಿನಿಂದ ವಿಜಯ್​ ಅವರ ಕಾನ್ಫಿಡೆನ್ಸ್​ ಹೆಚ್ಚಿದೆ. ಹೀಗಾಗಿ, ಹೊಸ ಸಿನಿಮಾ ನಿರ್ದೇಶನಕ್ಕೆ ಇಳಿದಿದ್ದಾರೆ.

‘ಭೀಮ’ನಾಗಿ ರೌದ್ರಾವತಾರ ತಾಳಿದ ‘ದುನಿಯಾ’ ವಿಜಯ್; ‘ಕೆಣಕದಿದ್ರೆ ಕ್ಷೇಮ’
ವಿಜಯ್
TV9 Web
| Edited By: |

Updated on:Mar 01, 2022 | 5:49 PM

Share

ಶಿವರಾತ್ರಿ ಹಬ್ಬದಂದು ಸಿನಿಪ್ರಿಯರಿಗೆ ಸರ್​ಪ್ರೈಸ್​ ಮೇಲೆ ಸರ್​ಪ್ರೈಸ್ ಸಿಗುತ್ತಿದೆ. ಹಲವು ಚಿತ್ರತಂಡಗಳು ಈ ವಿಶೇಷ ದಿನದಂದು ಹೊಸಹೊಸ ಅಪ್​ಡೇಟ್​ ನೀಡುತ್ತಿವೆ. ಈಗ ದುನಿಯಾ ವಿಜಯ್​ ಕಡೆಯಿಂದ ಅವರ ಮುಂದಿನ ಸಿನಿಮಾ ಬಗ್ಗೆ ದೊಡ್ಡ ಅಪ್​ಡೇಟ್​ ಸಿಕ್ಕಿದೆ.  ಕಳೆದ ವರ್ಷ ತೆರೆಗೆ ಬಂದ ದುನಿಯಾ ವಿಜಯ್ (Duniya Vijay)​ ನಟನೆಯ ‘ಸಲಗ’ ಸಿನಿಮಾ (Salaga Movie) ಮಾಡಿದ ಹವಾ ಅಷ್ಟಿಷ್ಟಲ್ಲ. ಈ ಚಿತ್ರದಲ್ಲಿ ದುನಿಯಾ ವಿಜಯ್​ ನಟಿಸೋದು ಮಾತ್ರವಲ್ಲ, ಆ್ಯಕ್ಷನ್​ ಕಟ್​ ಕೂಡ ಹೇಳಿದ್ದರು. ಮೊದಲ ನಿರ್ದೇಶನದಲ್ಲೇ ಅವರು ಗೆದ್ದು ಬೀಗಿದ್ದರು. ಇತ್ತೀಚೆಗೆ ಚಿತ್ರತಂಡ ಈ ಸಿನಿಮಾ ಯಶಸ್ಸನ್ನು ಸಂಭ್ರಮಿಸಿತ್ತು. ‘ಸಲಗ’ ಬಳಿಕ ಮತ್ತೆ ನಿರ್ದೇಶನಕ್ಕೆ ಇಳಿಯೋಕೆ ದುನಿಯಾ ವಿಜಯ್​ ರೆಡಿ ಆಗಿದ್ದಾರೆ . ಶಿವರಾತ್ರಿ ಪ್ರಯುಕ್ತ ಸಿನಿಮಾದ ಟೈಟಲ್​ ಘೋಷಣೆ ಆಗಿದ್ದು, ‘ಭೀಮ’ (Bheema Movie) ಎಂದು ಇಡಲಾಗಿದೆ.

‘ಸಲಗ’ ಸಿನಿಮಾದಲ್ಲಿ ದುನಿಯಾ ವಿಜಯ್​ ಅವರು ರೌಡಿಸಂನ ಕಥೆ ಹೇಳಿದ್ದರು. ಈ ಚಿತ್ರವನ್ನು ಅದ್ಭುತವಾಗಿ ಕಟ್ಟಿಕೊಟ್ಟಿದ್ದರು. ಈ ಸಿನಿಮಾ ಬಗ್ಗೆ ಎಲ್ಲ ಕಡೆಗಳಿಂದಲೂ ಮೆಚ್ಚುಗೆ ವ್ಯಕ್ತವಾಗಿತ್ತು. ಅನೇಕ ಸ್ಟಾರ್​ ನಟರು ಈ ಚಿತ್ರವನ್ನು ಹೊಗಳಿದ್ದರು. ಈ ಯಶಸ್ಸಿನಿಂದ ವಿಜಯ್​ ಅವರ ಕಾನ್ಫಿಡೆನ್ಸ್​ ಹೆಚ್ಚಿದೆ. ಹೀಗಾಗಿ, ಹೊಸ ಸಿನಿಮಾ ನಿರ್ದೇಶನಕ್ಕೆ ಇಳಿದಿದ್ದಾರೆ.

ವಿಜಯ್​ ಅವರು ಸೋಶಿಯಲ್​ ಮೀಡಿಯಾದಲ್ಲಿ ಟೈಟಲ್​ ಅನೌನ್ಸ್​ ಮಾಡುವುದರ ಜತೆಗೆ ಮೋಷನ್ ವಿಡಿಯೋ ​​ಹಂಚಿಕೊಂಡಿದ್ದಾರೆ. ವಿಜಯ್​ ಅವರ ಮುಖ ರಕ್ತಸಿಕ್ತವಾಗಿದೆ. ಸಿನಿಮಾ ಟೈಟಲ್​ ಅಡಿಗೆ ‘ಕೆಣಕದಿದ್ರೆ ಕ್ಷೇಮ’ ಎನ್ನುವ ಟ್ಯಾಗ್​ಲೈನ್​ ನೀಡಲಾಗಿದೆ. ವಿಜಯ್​ ನಟನೆಯ 28ನೇ ಸಿನಿಮಾ ಇದಾಗಿದ್ದು, ಕೃಷ್ಣ ಸಾರ್ಥಕ್​ ಹಾಗೂ ಜಗದೀಶ್​ ಗೌಡ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಈ ಮೊದಲು ಹಂಚಿಕೊಂಡಿದ್ದ ಪೋಸ್ಟರ್​ನಲ್ಲಿ ಕೈ ಹಾಗೂ ಯಮಹಾ ಆರ್​ಎಕ್ಸ್​ 100 ಬೈಕ್​ ತೋರಿಸಲಾಗಿತ್ತು.

ತೆಲುಗಿನ ಖ್ಯಾತ ನಟ ನಂದಮೂರಿ ಬಾಲಕೃಷ್ಣ ಅವರು ಅಭಿನಯಿಸಲಿರುವ ಹೊಸ ಸಿನಿಮಾದಲ್ಲಿ ದುನಿಯಾ ವಿಜಯ್​ ನಟಿಸಲಿದ್ದಾರೆ.  ಈ ಚಿತ್ರಕ್ಕೆ ಖ್ಯಾತ ನಿರ್ದೇಶಕ ಗೋಪಿಚಂದ್​ ಮಲಿನೇನಿ ಆ್ಯಕ್ಷನ್​-ಕಟ್​ ಹೇಳಲಿದ್ದಾರೆ. ಇದು ನಂದಮೂರಿ ಬಾಲಕೃಷ್ಣ ನಟಿಸಲಿರುವ 107ನೇ ಸಿನಿಮಾವಾಗಿದ್ದು, ಅವರಿಗೆ ನಾಯಕಿಯಾಗಿ ಶ್ರುತಿ ಹಾಸನ್​ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರಕ್ಕಿನ್ನೂ ಶೀರ್ಷಿಕೆ ಅಂತಿಮವಾಗಿಲ್ಲ. ರಾಯಲಸೀಮಾ ಹಿನ್ನೆಲೆಯಲ್ಲಿ ಸಿನಿಮಾ ಮೂಡಿಬರಲಿದೆ. ನೈಜ ಘಟನೆಗಳನ್ನು ಆಧರಿಸಿ ನಿರ್ದೇಶಕರು ಈ ಚಿತ್ರ ಮಾಡುತ್ತಿದ್ದಾರೆ. ಸದ್ಯ ಪಾತ್ರವರ್ಗದ ಆಯ್ಕೆ ನಡೆಯುತ್ತಿದೆ. ಖ್ಯಾತ ನಿರ್ಮಾಣ ಸಂಸ್ಥೆ ‘ಮೈತ್ರಿ ಮೂವೀ ಮೇಕರ್ಸ್​’ ಈ ಚಿತ್ರವನ್ನು ನಿರ್ಮಿಸುತ್ತಿದೆ.

ಇದನ್ನೂ ಓದಿ: Duniya Vijay: ಕೊರೊನಾದಿಂದ ಗುಣಮುಖರಾಗಿದ್ದ ದುನಿಯಾ ವಿಜಯ್ ತಾಯಿ ಆರೋಗ್ಯದಲ್ಲಿ ಏರುಪೇರು..

NBK107: ದುನಿಯಾ ವಿಜಯ್ ಆಯ್ತು, ಇದೀಗ ‘ಮಾಣಿಕ್ಯ’ದ ಬೆಡಗಿಯ ಸರದಿ; ಹಿರಿದಾಗುತ್ತಿದೆ ‘ಎನ್​ಬಿಕೆ107’ ತಾರಾಗಣ

Published On - 5:48 pm, Tue, 1 March 22

ಗಿಲ್ಲಿ ನನಗೆ ಹೊಡೆದಾಗ ಖುಷಿ ಆಗುತ್ತಿತ್ತು, ಎಂಜಾಯ್ ಮಾಡಿದೆ: ರಕ್ಷಿತಾ
ಗಿಲ್ಲಿ ನನಗೆ ಹೊಡೆದಾಗ ಖುಷಿ ಆಗುತ್ತಿತ್ತು, ಎಂಜಾಯ್ ಮಾಡಿದೆ: ರಕ್ಷಿತಾ
ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಶಂಕಿತ ಬಾಂಗ್ಲಾ ವಲಸಿಗರ ಶೆಡ್​ಗಳು
ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಶಂಕಿತ ಬಾಂಗ್ಲಾ ವಲಸಿಗರ ಶೆಡ್​ಗಳು
ಬಿಗ್​​ಬಾಸ್​​ಗೆ ಹೋಗಿದ್ದು ಏಕೆ? ಕಾವ್ಯಾ ಕೊಟ್ಟರು ಕಾರಣ
ಬಿಗ್​​ಬಾಸ್​​ಗೆ ಹೋಗಿದ್ದು ಏಕೆ? ಕಾವ್ಯಾ ಕೊಟ್ಟರು ಕಾರಣ
ಬಿಗ್​​ಬಾಸ್ ಬಳಿಕ ರಕ್ಷಿತಾ ಶೆಟ್ಟಿಯ ಮುಂದಿನ ಯೋಜನೆಗಳೇನು?
ಬಿಗ್​​ಬಾಸ್ ಬಳಿಕ ರಕ್ಷಿತಾ ಶೆಟ್ಟಿಯ ಮುಂದಿನ ಯೋಜನೆಗಳೇನು?
ಶಾಲಾ ಬಾಲಕಿಯನ್ನು ಹಿಂಬಾಲಿಸಿ ಮನೆ ಬಾಗಿಲಿಗೆ ಬಂದ ಆಗಂತುಕ!
ಶಾಲಾ ಬಾಲಕಿಯನ್ನು ಹಿಂಬಾಲಿಸಿ ಮನೆ ಬಾಗಿಲಿಗೆ ಬಂದ ಆಗಂತುಕ!
ಗಿಲ್ಲಿ ಬಗ್ಗೆ ಜನರಿಗೆ ಇರುವ ಕ್ರೇಜ್ ನೋಡಿ ಫಸ್ಟ್ ರಿಯಾಕ್ಷನ್ ಕೊಟ್ಟ ಕಾವ್ಯಾ
ಗಿಲ್ಲಿ ಬಗ್ಗೆ ಜನರಿಗೆ ಇರುವ ಕ್ರೇಜ್ ನೋಡಿ ಫಸ್ಟ್ ರಿಯಾಕ್ಷನ್ ಕೊಟ್ಟ ಕಾವ್ಯಾ
ಅಧಿಕಾರ ಬಿಟ್ಟಕೊಡಿ ಎಂದು ಕೇಳೋದು ಕಷ್ಟ: ಸಿಎಂಗೆ ಟಾಂಗ್ ಕೊಟ್ರಾ ಡಿಕೆಸು!
ಅಧಿಕಾರ ಬಿಟ್ಟಕೊಡಿ ಎಂದು ಕೇಳೋದು ಕಷ್ಟ: ಸಿಎಂಗೆ ಟಾಂಗ್ ಕೊಟ್ರಾ ಡಿಕೆಸು!
ನಿತಿನ್ ನಬಿನ್ ನನ್ನ ಬಾಸ್, ನಾನು ಕೇವಲ ಪಕ್ಷದ ಕಾರ್ಯಕರ್ತ: ಪ್ರಧಾನಿ ಮೋದಿ
ನಿತಿನ್ ನಬಿನ್ ನನ್ನ ಬಾಸ್, ನಾನು ಕೇವಲ ಪಕ್ಷದ ಕಾರ್ಯಕರ್ತ: ಪ್ರಧಾನಿ ಮೋದಿ
ಲಕ್ಕುಂಡಿ: ಉತ್ಖನನ ವೇಳೆ ಮನೆಯೊಂದರಲ್ಲಿ ಪುರಾತನ ದೇವಸ್ಥಾನ ಪತ್ತೆ!
ಲಕ್ಕುಂಡಿ: ಉತ್ಖನನ ವೇಳೆ ಮನೆಯೊಂದರಲ್ಲಿ ಪುರಾತನ ದೇವಸ್ಥಾನ ಪತ್ತೆ!
ಶ್ರೀಕೃಷ್ಣಮಠದಲ್ಲಿ ವಸ್ತ್ರಸಂಹಿತೆ ಜಾರಿ: ಇಲ್ಲಿದೆ ಭಕ್ತರಿಗೆ ಕೆಲ ಸೂಚನೆ
ಶ್ರೀಕೃಷ್ಣಮಠದಲ್ಲಿ ವಸ್ತ್ರಸಂಹಿತೆ ಜಾರಿ: ಇಲ್ಲಿದೆ ಭಕ್ತರಿಗೆ ಕೆಲ ಸೂಚನೆ