ದುನಿಯಾ ವಿಜಯ್​ ನಟನೆಯ ಸಲಗ ರಿಲೀಸ್​ ಡೇಟ್​ ಬಗ್ಗೆ ಇಲ್ಲಿದೆ ಲೇಟೆಸ್ಟ್​ ನ್ಯೂಸ್​

TV9 Digital Desk

| Edited By: Rajesh Duggumane

Updated on:Aug 13, 2021 | 2:50 PM

‘ಸಲಗ’ ಸಿನಿಮಾ ಸ್ಯಾಂಡಲ್​ವುಡ್​ನ ನಿರೀಕ್ಷಿತ ಚಿತ್ರಗಳಲ್ಲಿ ಒಂದು. ಇಷ್ಟು ದಿನ ನಾಯಕ ನಟನಾಗಿ ಗುರುತಿಸಿಕೊಂಡಿದ್ದ ದುನಿಯಾ ವಿಜಯ್​ ಇದೇ ಮೊದಲ ಬಾರಿಗೆ ನಿರ್ದೇಶಕನ ಕ್ಯಾಪ್​ ತೊಟ್ಟಿದ್ದಾರೆ.

ದುನಿಯಾ ವಿಜಯ್​ ನಟನೆಯ ಸಲಗ ರಿಲೀಸ್​ ಡೇಟ್​ ಬಗ್ಗೆ ಇಲ್ಲಿದೆ ಲೇಟೆಸ್ಟ್​ ನ್ಯೂಸ್​
ದುನಿಯಾ ವಿಜಯ್

Follow us on

ದೇಶಾದ್ಯಂತ ಕಾಣಿಸಿಕೊಂಡಿದ್ದ ಕೊರೊನಾ ಎರಡನೇ ಅಲೆ ಸಾಕಷ್ಟು ತೊಂದರೆ ತಂದಿತ್ತು. ಕೊರೊನಾ ನಿಯಂತ್ರಣಕ್ಕೆ ಸರ್ಕಾರ ಜಾರಿಗೆ ತಂದಿದ್ದ ಲಾಕ್​ಡೌನ್​ನಿಂದ ಚಿತ್ರಮಂದಿರಗಳು ಮುಚ್ಚಲ್ಪಟ್ಟಿದ್ದವು. ಈಗ ಕೊವಿಡ್​ ಪ್ರಕರಣ ಕಡಿಮೆ ಆದ ಹಿನ್ನೆಲೆಯಲ್ಲಿ ಚಿತ್ರಮಂದಿರಗಳನ್ನು ತೆರೆಯಲಾಗಿದೆ. ಆದರೆ, ಶೇ.100 ಆಸನ ವ್ಯವಸ್ಥೆಗೆ ಸರ್ಕಾರ ಅವಕಾಶ ನೀಡಿಲ್ಲ. ಇದರ ಜತೆಗೆ ಕೊರೊನಾ ಮೂರನೇ ಅಲೆ ಭೀತಿ ಕೂಡ ಕಾಡಿದೆ. ಈ ಹಿನ್ನೆಲೆಯಲ್ಲಿ ಸಲಗ ರಿಲೀಸ್​ ದಿನಾಂಕ ಮುಂದೂಡಲ್ಪಟ್ಟಿದೆ.

‘ಸಲಗ’ ಸಿನಿಮಾ ಸ್ಯಾಂಡಲ್​ವುಡ್​ನ ನಿರೀಕ್ಷಿತ ಚಿತ್ರಗಳಲ್ಲಿ ಒಂದು. ಇಷ್ಟು ದಿನ ನಾಯಕ ನಟನಾಗಿ ಗುರುತಿಸಿಕೊಂಡಿದ್ದ ದುನಿಯಾ ವಿಜಯ್​ ಇದೇ ಮೊದಲ ಬಾರಿಗೆ ನಿರ್ದೇಶಕನ ಕ್ಯಾಪ್​ ತೊಟ್ಟಿದ್ದಾರೆ. ಈ ಚಿತ್ರ ಏಪ್ರಿಲ್​ 15ಕ್ಕೆ ಎಂಟ್ರಿ ಕೊಡಬೇಕಿತ್ತು. ಆದರೆ, ಕೊವಿಡ್​ನಿಂದ ಅದು ಸಾಧ್ಯವಾಗಿಲ್ಲ. ಹೀಗಾಗಿ, ಆಗಸ್ಟ್ 20 ‘ಸಲಗ’ ರಿಲೀಸ್ ಮಾಡುತ್ತೇವೆ ಎಂದು ಚಿತ್ರತಂಡ ಘೋಷಿಸಿತ್ತು. ಆದರೆ, ಈಗ ಮತ್ತೆ ಸಿನಿಮಾ ರಿಲೀಸ್​ ದಿನಾಂಕ ಮುಂದೂಡಲ್ಪಟ್ಟಿದೆ.

ಇಂದು ಚಿತ್ರತಂಡ ಸುದ್ದಿಗೋಷ್ಠಿ ಹಮ್ಮಿಕೊಂಡಿತ್ತು. ಈ ವೇಳೆ ಚಿತ್ರದ ನಿರ್ಮಾಪಕ ಕೆ.ಪಿ. ಶ್ರೀಕಾಂತ್​ ಈ ವಿಚಾರ ಬಹಿರಂಗ ಮಾಡಿದ್ದಾರೆ. ಕೊರೊನಾ 3ನೇ ಅಲೆ ಭೀತಿ ಕಾಡುತ್ತಿದೆ. ಈ ಹಿನ್ನೆಲೆಯಲ್ಲಿ ಸಿನಿಮಾ ರಿಲೀಸ್​ ದಿನಾಂಕ ಮುಂದೂಡುತ್ತಿದ್ದೇವೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಗಣೇಶ ಚತುರ್ಥಿ ಪ್ರಯುಕ್ತ ಸೆಪ್ಟೆಂಬರ್‌ 10ರಂದು ಶಿವರಾಜ್ ಕುಮಾರ್ ನಟನೆಯ ‘ಭಜರಂಗಿ 2’ ಚಿತ್ರ ರಿಲೀಸ್​ ಆಗುತ್ತಿದೆ. ನಿರ್ದೇಶಕ ಹರ್ಷ ಹಾಗೂ ನಟ ಶಿವರಾಜ್​ಕುಮಾರ್​ ಕಾಂಬಿನೇಷನ್​ನಲ್ಲಿ ಬಂದ ಭಜರಂಗಿ ಚಿತ್ರ ದೊಡ್ಡಮಟ್ಟದಲ್ಲಿ ಹಿಟ್​ ಆಗಿತ್ತು. ಇದೇ ಕಾಂಬಿನೇಷನ್​ನಲ್ಲಿ  ‘ಭಜರಂಗಿ 2’ ಸಿದ್ಧಗೊಂಡಿದೆ.  ಈ ಚಿತ್ರಕ್ಕೂ ಈಗ ಕೊರೊನಾ ಭೀತಿ ಕಾಡಿದ್ದು, ಈ ಚಿತ್ರದ ರಿಲೀಸ್​ ತಡವಾಗಬಹುದು.

ಇದನ್ನೂ ಓದಿ: ‘ಸಲಗ’ ಚಿತ್ರದ ಹಾಡಿಗೆ ಸಿಕ್ಕ ಯಶಸ್ಸಿನ ಹಿನ್ನೆಲೆ; ವೇದಿಕೆಯಲ್ಲೇ ಭಾವುಕರಾದ ಗೀತಾ ಸಿದ್ದಿ 

ದುನಿಯಾ ವಿಜಯ್​ ‘ಸಲಗ’ ಬೇರೆ ಭಾಷೆಗಳಲ್ಲೇಕೆ ರಿಲೀಸ್​ ಆಗುತ್ತಿಲ್ಲ? ಇಲ್ಲಿದೆ ಮಹತ್ವದ ಕಾರಣ

ತಾಜಾ ಸುದ್ದಿ

Related Stories

Most Read Stories

Click on your DTH Provider to Add TV9 Kannada