ದುನಿಯಾ ವಿಜಿ ಅಭಿಮಾನಿಗಳಿಗೆ ಬ್ಯಾಡ್​ ನ್ಯೂಸ್​! ಸಲಗ ರಿಲೀಸ್​ಗೆ ಏನಿದು ವಿಘ್ನ?

ಈಗಾಗಲೇ ಚಿತ್ರರಂಗ ಸಂಕಷ್ಟದಲ್ಲಿದೆ. ಸರ್ಕಾರ ನಮಗೆ ಅವಕಾಶ ನೀಡಬೇಕು. ಸಾಕಷ್ಟು ಚಿತ್ರ ರೀಲೀಸ್​ಗೆ ಕಾಯುತ್ತಿವೆ. ಹೀಗಾಗಿ ಸರ್ಕಾರ ಸ್ಪಷ್ಟ ನಿರ್ಧಾರಕ್ಕೆ ಬರಬೇಕು ಎಂದು ದುನಿಯಾ ವಿಜಯ್ ಆಗ್ರಹಿಸಿದ್ದಾರೆ.

ದುನಿಯಾ ವಿಜಿ ಅಭಿಮಾನಿಗಳಿಗೆ ಬ್ಯಾಡ್​ ನ್ಯೂಸ್​! ಸಲಗ ರಿಲೀಸ್​ಗೆ ಏನಿದು ವಿಘ್ನ?
ದುನಿಯಾ ವಿಜಯ್​

Updated on: Apr 04, 2021 | 5:40 PM

ಸಲಗ ಸಿನಿಮಾ ಸ್ಯಾಂಡಲ್​ವುಡ್​ನ ಬಹುನಿರೀಕ್ಷಿತ ಚಿತ್ರಗಳಲ್ಲಿ ಒಂದು. ಇಷ್ಟು ದಿನ ನಾಯಕ ನಟನಾಗಿ ಗುರುತಿಸಿಕೊಂಡಿದ್ದ ದುನಿಯಾ ವಿಜಯ್​ ಇದೇ ಮೊದಲ ಬಾರಿಗೆ ನಿರ್ದೇಶಕನ ಕ್ಯಾಪ್​ ತೊಟ್ಟಿದ್ದಾರೆ. ಈ ಚಿತ್ರ ಏಪ್ರಿಲ್​ 15ಕ್ಕೆ ತೆರೆಕಾಣಬೇಕಿತ್ತು. ಆದರೆ, ಈಗ ಸಿನಿಮಾ ರಿಲೀಸ್​ ದಿನಾಂಕ ಮೂಂದೂಡುವ ಸೂಚನೆ ಸಿಕ್ಕಿದೆ. ಖುದ್ದು ದುನಿಯಾ ವಿಜಯ್ ಈ ವಿಚಾರ ಹೇಳಿಕೊಂಡಿದ್ದಾರೆ.

ಕೊರೊನಾ ವೈರಸ್​ ಹೆಚ್ಚುತ್ತಿದೆ. ಹೀಗಾಗಿ ಇದನ್ನು ನಿಯಂತ್ರಿಸಲು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಉಡುಪಿ, ಕಲಬುರಗಿ, ದಕ್ಷಿಣ ಕನ್ನಡ, ಬೀದರ್, ಧಾರವಾಡ ಜಿಲ್ಲೆಗಳಿಗೆ ಸಿನಿಮಾ ಹಾಲ್​ಗಳಲ್ಲಿ ಶೇ.50 ಆಸನ ವ್ಯವಸ್ಥೆಗೆ ಮಾತ್ರ ಅವಕಾಶ ನೀಡುವ ಆದೇಶವನ್ನು ಸರ್ಕಾರ ಹೊರಡಿಸಿದ್ದು, ಏಪ್ರಿಲ್​ 7ರಿಂದ ನಿಯಮ ಜಾರಿಗೆ ಬರಲಿದೆ. ಇದರಿಂದ ಮುಂದೆ ತೆರೆಗೆ ಬರಲಿರುವ ಸಿನಿಮಾಗಳ ರಿಲೀಸ್​ ದಿನಾಂಕ ಮುಂದೂಡುವ ಸೂಚನೆ ಸಿಕ್ಕಿದೆ. ಇದಕ್ಕೆ ದುನಿಯಾ ವಿಜಯ್ ಸಿನಿಮಾ​ ಕೂಡ ಹೊರತಾಗಿಲ್ಲ.

ಹುಬ್ಬಳ್ಳಿಯಲ್ಲಿ ಸಿನಿಮಾ ಪ್ರಚಾರಕ್ಕೆಂದು ತೆರಳಿದ್ದ ವೇಳೆ ಮಾತನಾಡಿರುವ ದುನಿಯಾ ವಿಜಯ್​, ನಾವು ಸಲಗ ಚಿತ್ರವನ್ನು ಈ ಭಾಗದಲ್ಲೇ ಶೂಟ್​ ಮಾಡಿದ್ದೇವೆ. ಹೀಗಾಗಿ ಇಂದು ಪ್ರಮೋಷನ್​ಗಾಗಿ  ಇಲ್ಲಿಗೆ ಬಂದಿದ್ದೇವೆ. ಈಗಾಗಲೇ ಚಿತ್ರರಂಗ ಸಂಕಷ್ಟದಲ್ಲಿದೆ. ಸರ್ಕಾರ ನಮಗೆ ಅವಕಾಶ ನೀಡಬೇಕು. ಸಾಕಷ್ಟು ಚಿತ್ರ ರೀಲೀಸ್​ಗೆ ಕಾಯುತ್ತಿವೆ. ಹೀಗಾಗಿ ಸರ್ಕಾರ ಸ್ಪಷ್ಟ ನಿರ್ಧಾರಕ್ಕೆ ಬರಬೇಕು ಎಂದು ಆಗ್ರಹಿಸಿದರು.

ಸಲಗ ರಿಲೀಸ್​ ಬಗ್ಗೆ ಮಾತನಾಡಿದ ಅವರು, ಚಿತ್ರಮಂದಿರ ಹೌಸ್​ ಫುಲ್​ ಮಾಡೋಕೆ ಅವಕಾಶ ಸಿಕ್ಕರೆ ಮಾತ್ರ ನಾವು ಸಿನಿಮಾ ರಿಲೀಸ್ ಮಾಡುತ್ತೇವೆ. ಸರ್ಕಾರದ ನಿರ್ಧಾರದಿಂದ ಯುವರತ್ನ ಚಿತ್ರಕ್ಕೆ ಸ್ವಲ್ಪ ಹಿನ್ನಡೆ ಆಗಿದೆ. ಸದ್ಯ ಚಿತ್ರಕ್ಕೆ ಉತ್ತಮ ರೆಸ್ಪಾನ್ಸ್ ಸಿಗುತ್ತಿದೆ ಎಂಬುದು ಖುಷಿಯ ವಿಚಾರ ಎಂದರು.
YouTube video player

ದುನಿಯಾ ವಿಜಯ್ ನಿರ್ದೇಶಿಸಿ ನಟಿಸಿರೋ ಈ ಸಿನಿಮಾದಲ್ಲಿ ಡಾಲಿ ಧನಂಜಯ, ಸಂಜನಾ ಆನಂದ್ ಪ್ರಮುಖ‌ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಟೀಸರ್ ಮತ್ತು ಹಾಡುಗಳಿಂದ ಗಮನ ಸೆಳೆದಿರುವ ಸಲಗ ಚಿತ್ರ ಪ್ರೇಕ್ಷಕರಲ್ಲಿ ಸಿಕ್ಕಾಪಟ್ಟೆ ಕುತೂಹಲ ಹುಟ್ಟಿಸಿದೆ.

ಇದನ್ನೂ ಓದಿ: ಫೇಮಸ್​ ಆಯ್ತು ಸಲಗ ಟ್ಯಾಟೂ..! ಅಭಿಮಾನಿಯ ಅಭಿಮಾನ ನೋಡಿ ಭಾವುಕರಾದ ನಟ ದುನಿಯಾ ವಿಜಯ್

ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us