AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುನಿಯಾ ವಿಜಯ್ ನಟನೆಯ ‘ಲ್ಯಾಂಡ್ ಲಾರ್ಡ್’ ಸಿನಿಮಾದಲ್ಲಿ ರೆಟ್ರೋ ಕಹಾನಿ

‘ಸಾರಥಿ ಫಿಲ್ಮ್ಸ್​’ ಮೂಲಕ ಸತ್ಯಪ್ರಕಾಶ್ ಹಾಗೂ ಸೂರಜ್ ಗೌಡ ಅವರು ‘ಲ್ಯಾಂಡ್​ ಲಾರ್ಡ್​’ ಸಿನಿಮಾ ನಿರ್ಮಿಸುತ್ತಿದ್ದಾರೆ. ‘ಜಂಟಲ್ ಮ್ಯಾನ್’, ‘ಗುರು ಶಿಷ್ಯರು’ ಚಿತ್ರಗಳ ಖ್ಯಾತಿಯ ಡೈರೆಕ್ಟರ್ ಜಡೇಶ್ ಕೆ. ಹಂಪಿ ಅವರು ನಿರ್ದೇಶನ ಮಾಡುತ್ತಿದ್ದಾರೆ. ದುನಿಯಾ ವಿಜಯ್, ರಚಿತಾ ರಾಮ್, ರಿತನ್ಯ ಮುಂತಾದವರು ಈ ಸಿನಿಮಾದ ಪಾತ್ರವರ್ಗದಲ್ಲಿ ಇದ್ದಾರೆ.

ದುನಿಯಾ ವಿಜಯ್ ನಟನೆಯ ‘ಲ್ಯಾಂಡ್ ಲಾರ್ಡ್’ ಸಿನಿಮಾದಲ್ಲಿ ರೆಟ್ರೋ ಕಹಾನಿ
Jadesh Kumar Hampi, Duniya Vijay
ಮದನ್​ ಕುಮಾರ್​
|

Updated on: Jan 21, 2025 | 9:16 PM

Share

ನಟ ದುನಿಯಾ ವಿಜಯ್ ಅವರು ‘ಲ್ಯಾಂಡ್​ ಲಾರ್ಡ್​’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾಗೆ ಕೆ‌.ವಿ. ಸತ್ಯಪ್ರಕಾಶ್ ಬಂಡವಾಳ ಹೂಡುತ್ತಿದ್ದಾರೆ. ಅವರಿಗೆ ಪುತ್ರ ಸೂರಜ್ ಗೌಡ ಕೂಡ ಸಾಥ್ ನೀಡಿದ್ದಾರೆ. ಜಡೇಶ ಕೆ. ಹಂಪಿ ಅವರ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿಬರುತ್ತಿದೆ. ಇತ್ತೀಚೆಗೆ ಸಿನಿಮಾದ ಸುದ್ದಿಗೋಷ್ಠಿ ನಡೆಯಿತು. ಈ ವೇಳೆ ಚಿತ್ರತಂಡದವರು ಒಂದಷ್ಟು ಇಂಟರೆಸ್ಟಿಂಗ್ ಮಾಹಿತಿ ಹಂಚಿಕೊಂಡರು. ಈ ಸಿನಿಮಾದಲ್ಲಿ ರೆಟ್ರೋ ಕಾಲದ ಕಥೆ ಇರಲಿದೆ ಎಂಬುದು ವಿಶೇಷ. ದುನಿಯಾ ವಿಜಯ್ ಅವರ ಗೆಟಪ್ ಸಹ ಭಿನ್ನವಾಗಿದೆ.

ನಿರ್ದೇಶಕ ಜಡೇಶ್​ ಕೆ. ಹಂಪಿ ಮಾತನಾಡಿ ‘ಇದೊಂದು ಗ್ರಾಮೀಣ ಸೊಗಡಿನ ಕಥೆ ಇರುವ ಸಿನಿಮಾ. 1980ರ ಕಾಲಘಟ್ಟದಲ್ಲಿ ನಡೆಯುವ‌ ಕಥೆ. ಆಳಿದವರ ಕಥೆಯಲ್ಲ, ಅಳಿದು ಉಳಿದವರ ಕಥೆ ಎನ್ನುವ ಟ್ಯಾಗ್​ ಲೈನ್ ಇದೆ. ಈ ಕಥೆಗೆ ವಿಜಯ್ ಅವರೇ ಸೂಕ್ತ ಆಯ್ಕೆ. ರಚಿತಾ ರಾಮ್ ಅವರು ನಾಯಕಿಯಾಗಿ ನಟಿಸುತ್ತಿದ್ದಾರೆ‌‌. ವಿಜಯ್ ಅವರ ಪುತ್ರಿ ರಿತನ್ಯ ಕೂಡ ಈ ಸಿನಿಮಾದ ಪ್ರಮುಖ ಪಾತ್ರದಲ್ಲಿ ಇರಲಿದ್ದಾರೆ’ ಎಂದರು.

ಸ್ವಾಮಿ ಗೌಡ ಅವರು ಛಾಯಾಗ್ರಹಣ ಮಾಡುತ್ತಿದ್ದಾರೆ. ಅಜನೀಶ್ ಲೋಕನಾಥ್ ಅವರು ಸಂಗೀತ ನೀಡುತ್ತಿದ್ದಾರೆ. ಕೆ.ಎಂ. ಪ್ರಕಾಶ್ ಅವರು ಸಂಕಲನದ ಜವಾಬ್ದಾರಿ ನಿಭಾಯಿಸುತ್ತಿದ್ದಾರೆ. ಮಾಸ್ತಿ ಮತ್ತು ಶ್ರೀಕಾಂತ್ ಅವರು ಸಂಭಾಷಣೆ ಬರೆದಿದ್ದಾರೆ. ‘ಸತ್ಯಪ್ರಕಾಶ್ ಮತ್ತು ಸೂರಜ್ ಗೌಡ ಅವರು ಯಾವುದೇ ಕೊರತೆ ಇಲ್ಲದಂತೆ ನಿರ್ಮಾಣ ಮಾಡುತ್ತಿದ್ದಾರೆ. ಉತ್ತಮವಾದ ತಂಡದ ಜತೆಗೆ ಕೆಲಸ ಮಾಡುತ್ತಿರುವುದಕ್ಕೆ ಖುಷಿ ಇದೆ’ ಎಂದು ದುನಿಯಾ ವಿಜಯ್ ಹೇಳಿದ್ದಾರೆ.

Landlord Movie Team

Landlord Movie Team

‘ಜಡೇಶ್ ಅವರು ಗ್ರಾಮೀಣ ಸೊಗಡಿನ ಒಳ್ಳೆಯ ಕಥೆ ಮಾಡಿಕೊಂಡಿದ್ದಾರೆ‌. ನಾವು ಚಿಕ್ಕವರಿದ್ದಾಗ ನಮ್ಮ ಹಳ್ಳಿಯಲ್ಲಿ ವಿದ್ಯುತ್ ದೀಪಗಳು ಹೆಚ್ಚು ಇರಲಿಲ್ಲ. ನಾನು ಈ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ಗೆಟಪ್ ರೀತಿ ನಮ್ಮ ಹಳ್ಳಿಯ ಹಿರಿಯರು ಇರುತ್ತಿದ್ದರು. ಜಾತಿ, ಮತ ಎಂಬ ಭೇದಭಾವ ಇರಲಿಲ್ಲ. ಇದ್ದದ್ದು ಎರಡೇ. ಒಂದು ಬಡವ. ಮತ್ತೊಂದು ಶ್ರೀಮಂತ. ಈ ಸಿನಿಮಾದಲ್ಲಿ ನಾನು ಬಡವರ ಪ್ರತಿನಿಧಿಯಾಗಿ ನಟಿಸುತ್ತಿದ್ದೇನೆ’ ಎಂದಿದ್ದಾರೆ ದುನಿಯಾ ವಿಜಯ್.

ಇದನ್ನೂ ಓದಿ: ಅಮೆರಿಕದಲ್ಲಿನ ಅಭಿಮಾನಿಗಳ ಎದುರು ಹಾಡು ಹೇಳಿ ರಂಜಿಸಿದ ಶಿವರಾಜ್​ಕುಮಾರ್

‘ಜಡೇಶ್ ಅವರ ಕಥೆ ನನಗೆ ಇಷ್ಟ ಆಯಿತು. ಕಥೆ ಕೇಳಿದ ಕೆಲವೇ ದಿನಗಳಲ್ಲಿ ಈ ಸಿನಿಮಾ ಆರಂಭವಾಯಿತು’ ಎಂದರು ನಿರ್ಮಾಪಕ ಸತ್ಯಪ್ರಕಾಶ್. ‘ಈಗಾಗಲೇ 2 ಹಂತಗಳ ಶೂಟಿಂಗ್ ಮುಕ್ತಾಯ ಆಗಿದೆ. ಈಗ 3ನೇ ಹಂತದ ಶೂಟಿಂಗ್ ನಡೆಯುತ್ತಿದೆ‌. ಮಾರ್ಚ್ ವೇಳೆಗೆ ಚಿತ್ರೀಕರಣ ಪೂರ್ಣಗೊಳಿಸುವ ಪ್ಲ್ಯಾನ್ ಇದೆ’ ಎಂದು ಸಹ ನಿರ್ಮಾಪಕ ಸೂರಜ್ ಗೌಡ ಹೇಳಿದ್ದಾರೆ. ನೆಲಮಂಗಲದ ಬಳಿ ಅದ್ದೂರಿ ಸೆಟ್ ಹಾಕಿ ಚಿತ್ರೀಕರಣ ಮಾಡಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ