AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಾಲಿವುಡ್​ಗೆ ಎಂಟ್ರಿ ನೀಡಿದ ದುನಿಯಾ ವಿಜಯ್​; ನಂದಮೂರಿ ಬಾಲಕೃಷ್ಣ ಚಿತ್ರದಲ್ಲಿ ಬಂಪರ್​ ಚಾನ್ಸ್​

Duniya Vijay | Nandamuri Balakrishna: ನಂದಮೂರಿ ಬಾಲಕೃಷ್ಣ ನಟಿಸಲಿರುವ 107ನೇ ಸಿನಿಮಾ ಇದಾಗಲಿದೆ. ದುನಿಯಾ ವಿಜಯ್​ ಎಂಟ್ರಿಯಿಂದಾಗಿ ಚಿತ್ರದ ಸ್ಟಾರ್​ ಮೆರುಗು ಹೆಚ್ಚಿದೆ.

ಟಾಲಿವುಡ್​ಗೆ ಎಂಟ್ರಿ ನೀಡಿದ ದುನಿಯಾ ವಿಜಯ್​; ನಂದಮೂರಿ ಬಾಲಕೃಷ್ಣ ಚಿತ್ರದಲ್ಲಿ ಬಂಪರ್​ ಚಾನ್ಸ್​
ದುನಿಯಾ ವಿಜಯ್​
Follow us
TV9 Web
| Updated By: ಮದನ್​ ಕುಮಾರ್​

Updated on:Jan 03, 2022 | 11:33 AM

ಕನ್ನಡದ ಖ್ಯಾತ ನಟ ದುನಿಯಾ ವಿಜಯ್​ (Duniya Vijay) ಅವರು ಟಾಲಿವುಡ್​ ಅಂಗಳಕ್ಕೆ ಕಾಲಿಡುತ್ತಿದ್ದಾರೆ. ‘ಸಲಗ’ (Salaga Movie) ಸಿನಿಮಾದ ಯಶಸ್ಸಿನ ಅಲೆಯಲ್ಲಿ ತೇಲುತ್ತಿರುವ ಅವರಿಗೆ ಈಗ ಬಂಪರ್​ ಚಾನ್ಸ್​ ಸಿಕ್ಕಿದೆ. ತೆಲುಗಿನ ಖ್ಯಾತ ನಟ ನಂದಮೂರಿ ಬಾಲಕೃಷ್ಣ (Nandamuri Balakrishna) ಅವರು ಅಭಿನಯಿಸಲಿರುವ ಹೊಸ ಸಿನಿಮಾದಲ್ಲಿ ದುನಿಯಾ ವಿಜಯ್​ ನಟಿಸಲಿದ್ದಾರೆ. ಈ ಬಗ್ಗೆ ಹಲವು ದಿನಗಳ ಹಿಂದೆಯೇ ಸುದ್ದಿ ಕೇಳಿಬಂದಿತ್ತು. ಆದರೆ ಚಿತ್ರತಂಡದಿಂದ ಅಧಿಕೃತ ಮಾಹಿತಿ ಹೊರಬಿದ್ದಿರಲಿಲ್ಲ. ಈಗ ದುನಿಯಾ ವಿಜಯ್​ಗೆ ಸ್ವಾಗತ ಕೋರಿ, ಪೋಸ್ಟರ್​ ಬಿಡುಗಡೆ ಮಾಡುವ ಮೂಲಕ ಅಧಿಕೃತವಾಗಿ ಅನೌನ್ಸ್​ ಮಾಡಲಾಗಿದೆ.

ಈ ಚಿತ್ರಕ್ಕೆ ಖ್ಯಾತ ನಿರ್ದೇಶಕ ಗೋಪಿಚಂದ್​ ಮಲಿನೇನಿ ಆ್ಯಕ್ಷನ್​-ಕಟ್​ ಹೇಳಲಿದ್ದಾರೆ. ಇದು ನಂದಮೂರಿ ಬಾಲಕೃಷ್ಣ ನಟಿಸಲಿರುವ 107ನೇ ಸಿನಿಮಾವಾಗಿದ್ದು, ಅವರಿಗೆ ನಾಯಕಿಯಾಗಿ ಶ್ರುತಿ ಹಾಸನ್​ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರಕ್ಕಿನ್ನೂ ಶೀರ್ಷಿಕೆ ಅಂತಿಮವಾಗಿಲ್ಲ. ರಾಯಲಸೀಮಾ ಹಿನ್ನೆಲೆಯಲ್ಲಿ ಸಿನಿಮಾ ಮೂಡಿಬರಲಿದೆ. ನೈಜ ಘಟನೆಗಳನ್ನು ಆಧರಿಸಿ ನಿರ್ದೇಶಕರು ಈ ಚಿತ್ರ ಮಾಡುತ್ತಿದ್ದಾರೆ. ಸದ್ಯ ಪಾತ್ರವರ್ಗದ ಆಯ್ಕೆ ನಡೆಯುತ್ತಿದೆ. ಖ್ಯಾತ ನಿರ್ಮಾಣ ಸಂಸ್ಥೆ ‘ಮೈತ್ರಿ ಮೂವೀ ಮೇಕರ್ಸ್​’ ಈ ಚಿತ್ರವನ್ನು ನಿರ್ಮಿಸುತ್ತಿದೆ.

‘ಸಲಗ’ ಸಿನಿಮಾದಿಂದ ದುನಿಯಾ ವಿಜಯ್​ ಅವರಿಗೆ ಚಿತ್ರರಂಗದಲ್ಲಿ ಸೆಕೆಂಡ್​ ಇನ್ನಿಂಗ್ಸ್​ ಆರಂಭ ಆಗಿದೆ ಎಂದರೂ ತಪ್ಪಿಲ್ಲ. ಮೊದಲ ಬಾರಿಗೆ ನಿರ್ದೇಶನ ಮಾಡಿರುವ ಅವರು ಭಾರಿ ಜನಮೆಚ್ಚುಗೆ ಪಡೆದುಕೊಂಡರು. ಎಲ್ಲ ಕಡೆಗಳಲ್ಲೂ ಈ ಸಿನಿಮಾ ಹೌಸ್​ಫುಲ್​ ಪ್ರದರ್ಶನ ಕಂಡು ಧೂಳೆಬ್ಬಿಸಿತು. ಹಾಗಾದ್ರೆ ವಿಜಯ್​ ಅವರ ಮುಂದಿನ ನಡೆ ಏನು ಎಂಬ ಬಗ್ಗೆ ಎಲ್ಲರಿಗೂ ಕುತೂಹಲ ಇತ್ತು. ಅದಕ್ಕೆ ಈಗ ಉತ್ತರ ಸಿಕ್ಕಿದೆ.

ಇದನ್ನೂ ಓದಿ:

ಅದಿತಿ ಪ್ರಭುದೇವ ನಮ್ ಇಂಡಸ್ಟ್ರಿಯ ಮಹಾಲಕ್ಷ್ಮೀ ಎಂದ ‘ದುನಿಯಾ’ ವಿಜಯ್​

ಮದುವೆಗೆ ದುನಿಯಾ ವಿಜಯ್​ ಬರದಿದ್ದರೆ ತಾಳಿ ಕಟ್ಟಿಸಿಕೊಳ್ಳಲ್ಲ ಎಂದು ಹಠ ಹಿಡಿದ ಯುವತಿ

Published On - 11:26 am, Mon, 3 January 22

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವ ಅಭಿನಂದನಾರ್ಹ: ಈಶ್ವರಪ್ಪ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವ ಅಭಿನಂದನಾರ್ಹ: ಈಶ್ವರಪ್ಪ
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಚಿನ್ನಸ್ವಾಮಿಯಲ್ಲಿ ಮೊದಲ ಗೆಲುವು; ಕುಣಿದು ಕುಪ್ಪಳಿಸಿದ ಕೊಹ್ಲಿ
ಚಿನ್ನಸ್ವಾಮಿಯಲ್ಲಿ ಮೊದಲ ಗೆಲುವು; ಕುಣಿದು ಕುಪ್ಪಳಿಸಿದ ಕೊಹ್ಲಿ
ಜನರಿಗೆ ಮೋಸ ಮಾಡುವ ಕೆಲಸಕ್ಕೆ ಯಾರೂ ಮುಂದಾಗಬಾರದು: ಕುಲಕರ್ಣಿ
ಜನರಿಗೆ ಮೋಸ ಮಾಡುವ ಕೆಲಸಕ್ಕೆ ಯಾರೂ ಮುಂದಾಗಬಾರದು: ಕುಲಕರ್ಣಿ
ಪಹಲ್ಗಾಮ್​ನಲ್ಲಿ ದಾಳಿಯ ನಡುವೆಯೇ ಉಗ್ರನ ಫೋಟೊ ಕ್ಲಿಕ್ಕಿಸಿದ ಮಹಿಳೆ
ಪಹಲ್ಗಾಮ್​ನಲ್ಲಿ ದಾಳಿಯ ನಡುವೆಯೇ ಉಗ್ರನ ಫೋಟೊ ಕ್ಲಿಕ್ಕಿಸಿದ ಮಹಿಳೆ
ಇದು ದೋಷಾರೋಪಣೆ ಮಾಡುವ ಸಮಯ ಅಲ್ಲ: ಶಿವಕುಮಾರ್
ಇದು ದೋಷಾರೋಪಣೆ ಮಾಡುವ ಸಮಯ ಅಲ್ಲ: ಶಿವಕುಮಾರ್
ಸುತ್ತೂರು ಮಠದಲ್ಲಿ ಮಗುವಿಗೆ ನಾಮಕರಣ ಮಾಡಿದ ಸಿದ್ದರಾಮಯ್ಯ
ಸುತ್ತೂರು ಮಠದಲ್ಲಿ ಮಗುವಿಗೆ ನಾಮಕರಣ ಮಾಡಿದ ಸಿದ್ದರಾಮಯ್ಯ
‘ಬಾಯ್ಸ್ vs ಗರ್ಲ್ಸ್’ ರಿಯಾಲಿಟಿ ಶೋ ಫಿನಾಲೆ; ಗೆಲ್ಲೋದು ಯಾರು?
‘ಬಾಯ್ಸ್ vs ಗರ್ಲ್ಸ್’ ರಿಯಾಲಿಟಿ ಶೋ ಫಿನಾಲೆ; ಗೆಲ್ಲೋದು ಯಾರು?
ಮೌಢ್ಯಗಳನ್ನು ಅನುಸರಿಸಲ್ಲ ಅಂತ ಮತ್ತೊಮ್ಮೆ ಸಾಬೀತು ಮಾಡಿದ ಸಿದ್ದರಾಮಯ್ಯ
ಮೌಢ್ಯಗಳನ್ನು ಅನುಸರಿಸಲ್ಲ ಅಂತ ಮತ್ತೊಮ್ಮೆ ಸಾಬೀತು ಮಾಡಿದ ಸಿದ್ದರಾಮಯ್ಯ
ಮಂತ್ರಾಲಯ ರಾಯರ ಮಠದ ಹುಂಡಿಯಲ್ಲಿ 4 ಕೋಟಿ ರೂಪಾಯಿಗೂ ಅಧಿಕ ಹಣ ಸಂಗ್ರಹ
ಮಂತ್ರಾಲಯ ರಾಯರ ಮಠದ ಹುಂಡಿಯಲ್ಲಿ 4 ಕೋಟಿ ರೂಪಾಯಿಗೂ ಅಧಿಕ ಹಣ ಸಂಗ್ರಹ