ಕನ್ನಡದ ಖ್ಯಾತ ನಟ ದುನಿಯಾ ವಿಜಯ್ (Duniya Vijay) ಅವರು ಟಾಲಿವುಡ್ ಅಂಗಳಕ್ಕೆ ಕಾಲಿಡುತ್ತಿದ್ದಾರೆ. ‘ಸಲಗ’ (Salaga Movie) ಸಿನಿಮಾದ ಯಶಸ್ಸಿನ ಅಲೆಯಲ್ಲಿ ತೇಲುತ್ತಿರುವ ಅವರಿಗೆ ಈಗ ಬಂಪರ್ ಚಾನ್ಸ್ ಸಿಕ್ಕಿದೆ. ತೆಲುಗಿನ ಖ್ಯಾತ ನಟ ನಂದಮೂರಿ ಬಾಲಕೃಷ್ಣ (Nandamuri Balakrishna) ಅವರು ಅಭಿನಯಿಸಲಿರುವ ಹೊಸ ಸಿನಿಮಾದಲ್ಲಿ ದುನಿಯಾ ವಿಜಯ್ ನಟಿಸಲಿದ್ದಾರೆ. ಈ ಬಗ್ಗೆ ಹಲವು ದಿನಗಳ ಹಿಂದೆಯೇ ಸುದ್ದಿ ಕೇಳಿಬಂದಿತ್ತು. ಆದರೆ ಚಿತ್ರತಂಡದಿಂದ ಅಧಿಕೃತ ಮಾಹಿತಿ ಹೊರಬಿದ್ದಿರಲಿಲ್ಲ. ಈಗ ದುನಿಯಾ ವಿಜಯ್ಗೆ ಸ್ವಾಗತ ಕೋರಿ, ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಅಧಿಕೃತವಾಗಿ ಅನೌನ್ಸ್ ಮಾಡಲಾಗಿದೆ.
ಈ ಚಿತ್ರಕ್ಕೆ ಖ್ಯಾತ ನಿರ್ದೇಶಕ ಗೋಪಿಚಂದ್ ಮಲಿನೇನಿ ಆ್ಯಕ್ಷನ್-ಕಟ್ ಹೇಳಲಿದ್ದಾರೆ. ಇದು ನಂದಮೂರಿ ಬಾಲಕೃಷ್ಣ ನಟಿಸಲಿರುವ 107ನೇ ಸಿನಿಮಾವಾಗಿದ್ದು, ಅವರಿಗೆ ನಾಯಕಿಯಾಗಿ ಶ್ರುತಿ ಹಾಸನ್ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರಕ್ಕಿನ್ನೂ ಶೀರ್ಷಿಕೆ ಅಂತಿಮವಾಗಿಲ್ಲ. ರಾಯಲಸೀಮಾ ಹಿನ್ನೆಲೆಯಲ್ಲಿ ಸಿನಿಮಾ ಮೂಡಿಬರಲಿದೆ. ನೈಜ ಘಟನೆಗಳನ್ನು ಆಧರಿಸಿ ನಿರ್ದೇಶಕರು ಈ ಚಿತ್ರ ಮಾಡುತ್ತಿದ್ದಾರೆ. ಸದ್ಯ ಪಾತ್ರವರ್ಗದ ಆಯ್ಕೆ ನಡೆಯುತ್ತಿದೆ. ಖ್ಯಾತ ನಿರ್ಮಾಣ ಸಂಸ್ಥೆ ‘ಮೈತ್ರಿ ಮೂವೀ ಮೇಕರ್ಸ್’ ಈ ಚಿತ್ರವನ್ನು ನಿರ್ಮಿಸುತ್ತಿದೆ.
Very happy to welcome the Sandalwood Sensation #DuniyaVijay on board to #NBK107 ??
Redefines the Villainism with #NBK107 ??
NataSimham #NandamuriBalakrishna @shrutihaasan @officialviji @MusicThaman @MythriOfficial pic.twitter.com/x6mYe37rzu
— Gopichandh Malineni (@megopichand) January 3, 2022
‘ಸಲಗ’ ಸಿನಿಮಾದಿಂದ ದುನಿಯಾ ವಿಜಯ್ ಅವರಿಗೆ ಚಿತ್ರರಂಗದಲ್ಲಿ ಸೆಕೆಂಡ್ ಇನ್ನಿಂಗ್ಸ್ ಆರಂಭ ಆಗಿದೆ ಎಂದರೂ ತಪ್ಪಿಲ್ಲ. ಮೊದಲ ಬಾರಿಗೆ ನಿರ್ದೇಶನ ಮಾಡಿರುವ ಅವರು ಭಾರಿ ಜನಮೆಚ್ಚುಗೆ ಪಡೆದುಕೊಂಡರು. ಎಲ್ಲ ಕಡೆಗಳಲ್ಲೂ ಈ ಸಿನಿಮಾ ಹೌಸ್ಫುಲ್ ಪ್ರದರ್ಶನ ಕಂಡು ಧೂಳೆಬ್ಬಿಸಿತು. ಹಾಗಾದ್ರೆ ವಿಜಯ್ ಅವರ ಮುಂದಿನ ನಡೆ ಏನು ಎಂಬ ಬಗ್ಗೆ ಎಲ್ಲರಿಗೂ ಕುತೂಹಲ ಇತ್ತು. ಅದಕ್ಕೆ ಈಗ ಉತ್ತರ ಸಿಕ್ಕಿದೆ.
ಇದನ್ನೂ ಓದಿ:
ಅದಿತಿ ಪ್ರಭುದೇವ ನಮ್ ಇಂಡಸ್ಟ್ರಿಯ ಮಹಾಲಕ್ಷ್ಮೀ ಎಂದ ‘ದುನಿಯಾ’ ವಿಜಯ್
ಮದುವೆಗೆ ದುನಿಯಾ ವಿಜಯ್ ಬರದಿದ್ದರೆ ತಾಳಿ ಕಟ್ಟಿಸಿಕೊಳ್ಳಲ್ಲ ಎಂದು ಹಠ ಹಿಡಿದ ಯುವತಿ
Published On - 11:26 am, Mon, 3 January 22