ದುನಿಯಾ ವಿಜಯ್ ಸಹಾಯ ಪಡೆದು ಜೈಲಿಂದ ಹೊರಬಂದಿದ್ದವನಿಂದ ಜೋಡಿ ಕೊಲೆ

ಈ ಹಿಂದೆ ಡಬಲ್ ಮರ್ಡರ್ ಮತ್ತು ರೇಪ್ ಪ್ರಕರಣದಲ್ಲಿ ಜೈಲು ವಾಸ ಅನುಭವಿಸಿದ್ದ ಸುರೇಶ್ ಮತ್ತೆ ಎರಡು ಕೊಲೆಗಳನ್ನು ಮಾಡಿದ್ದಾನೆ. ನಟ ದುನಿಯಾ ವಿಜಯ್ ಅವರು ಜಾಮೀನು ಹಣ ನೀಡಿ ಸುರೇಶ್ ಅನ್ನು ಜೈಲಿನಿಂದ ಹೊರಗೆ ತಂದಿದ್ದರು. ಆದರೆ, ಸುರೇಶ್ ಮತ್ತೆ ಅಪರಾಧ ಮಾಡಿ ಜೈಲು ಸೇರಿದ್ದಾನೆ.

ದುನಿಯಾ ವಿಜಯ್ ಸಹಾಯ ಪಡೆದು ಜೈಲಿಂದ ಹೊರಬಂದಿದ್ದವನಿಂದ ಜೋಡಿ ಕೊಲೆ
ಸುರೇಶ್-ವಿಜಯ್
Follow us
ರಾಚಪ್ಪಾಜಿ ನಾಯ್ಕ್
| Updated By: ರಾಜೇಶ್ ದುಗ್ಗುಮನೆ

Updated on: Nov 11, 2024 | 12:58 PM

ಈ ಹಿಂದೆ ಡಬಲ್ ಮರ್ಡರ್ ಕೇಸ್ ಹಾಗು ರೇಪ್‌ ಕೇಸಲ್ಲಿ ಜೈಲು ಸೇರಿದ್ದ ಸುರೇಶ್​ ಈಗ ಎರಡು ಕೊಲೆ ಮಾಡಿದ್ದಾನೆ. ನಟ ದುನಿಯಾ ವಿಜಯ್ ಅವರೇ ಹಣ ಕೊಟ್ಟು ಸುರೇಶ್​ನ ಹೊರಕ್ಕೆ ಕರೆ ತಂದಿದ್ದರು ಎಂಬುದು ಇಲ್ಲಿ ಗಮನಿಸಬೇಕಾದ ವಿಚಾರ. ಆದರೆ, ಈಗ ದುನಿಯಾ ವಿಜಯ್ ಅವರ ಆಶಯವನ್ನು ಸುರೇಶ್ ವ್ಯರ್ಥ ಮಾಡಿದ್ದಾನೆ. ಸದ್ಯ ಈ ವಿಚಾರ ಸಾಕಷ್ಟು ಚರ್ಚೆ ಆಗುತ್ತಾ ಇದೆ.

ಸುರೇಶ್ ಕೊಲೆ ಹಾಗೂ ರೇಪ್ ಕೇಸ್​ನಲ್ಲಿ 10 ವರ್ಷ ಶಿಕ್ಷೆ ಅನುಭವಿಸಿದ್ದ. ಈತನಿಗೆ ಶ್ಯೂರಿಟಿ ಹಣ ನೀಡಿ ಹೊರಕ್ಕೆ ಕರೆತರಲು ಯಾರೂ ಇರಲಿಲ್ಲ. ಈ ಸಮಯದಲ್ಲಿ ಒಂದಷ್ಟು ಅಪರಾಧಿಗಳಿಗೆ ತಲಾ ಮೂರು ಲಕ್ಷದಂತೆ ದುನಿಯಾ ವಿಜಯ್ ಶ್ಯೂರಿಟಿ ಹಣ ಕೊಟ್ಟಿದ್ದರು. ಈ ವೇಳೆ ಸುರೇಶ್​ಗೂ ಕೂಡ ಮೂರು ಲಕ್ಷ ರೂಪಾಯಿ ಶ್ಯೂರಿಟಿ ಹಣ ನೀಡಿದ್ದರು ದುನಿಯಾ ವಿಜಿ. ಈ ಮೂಲಕ ಸುರೇಶ್​ನ ಹೊರ ತಂದಿದ್ದರು.

ಜೈಲಿಂದ ಬಿಡುಗಡೆ ಆದ ಬಳಿಕ ಸುರೇಶ್ ಬದಲಾಗಿದ್ದ. ಮಾರ್ಕೆಟ್​ನಲ್ಲಿ ಕೊತ್ತುಂಬರಿ ಸೊಪ್ಪು ಮಾರಾಟ ಮಾಡಿ ಜೀವನ ಸಾಗಿಸುತ್ತಾ ಇದ್ದ. ಸುರೇಶ್ ಸಂಬಂಧಿಯಿಂದ ಶೆಡ್​ನಲ್ಲಿ ಕೆಲಸ ಪಡೆದುಕೊಂಡಿದ್ದ. ಆದರೆ, ಈಗ ಆತ ಕೊಲೆ ಮಾಡಿ ಮತ್ತೆ ಜೈಲು ಸೇರುವಂತೆ ಆಗಿದೆ.

ಬೆಂಗಳೂರಿನ ಹೊರವಲಯ (ನವೆಂಬರ್ 8) ರಾತ್ರಿ ಜೋಡಿಕೊಲೆ ನಡೆದಿದೆ. ಎಸ್​ಆರ್ಎಸ್ ಟ್ರಾವೆಲ್ಸ್ ಬಸ್ ನಲ್ಲಿ ಕೆಲಸ ಮಾಡುತ್ತಿದ್ದ ನಾಗೇಶ್ (51) ಮತ್ತು ಮಂಜುನಾಥ್ (50) ಕೊಲೆಯಾದವರು. ಕೊಲೆಯಾದ ನಾಗೇಶ್ ಮತ್ತು ಮಂಜುನಾಥ್, ‘ನೀನು ಕಳ್ಳ, ಕೊಲೆಗಾರ’ ಎಂದು ಸುರೇಶ್​ಗೆ ಹೀಯಾಳಿಸಿದ್ದರು. ಇದರಿಂದ ಸಿಟ್ಟಾದ ಸುರೇಶ್ ಕೊಲೆಗೈದಿದ್ದಾನೆ.

ಇದನ್ನೂ ಓದಿ: ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್

ಸಿನಿಮಾ ವಿಚಾರಕ್ಕೆ ಬರುವುದಾದರೆ ದುನಿಯಾ ವಿಜಯ್ ಅವರು ಈ ವರ್ಷ ‘ಭೀಮ’ ಸಿನಿಮಾ ಮೂಲಕ ಗೆಲುವು ಕಂಡಿದ್ದಾರೆ. ಈ ಚಿತ್ರದಲ್ಲಿ ಡ್ರಗ್ಸ್ ವಿಚಾರದ ಬಗ್ಗೆ ಹೇಳಲಾಗಿತ್ತು. ಈ ಚಿತ್ರ ಯಶಸ್ಸು ಕಂಡಿದೆ. ಈ ಚಿತ್ರಕ್ಕೆ ಅವರದ್ದೇ ನಿರ್ದೇಶನ ಇತ್ತು. ‘ಸಲಗ’ ಬಳಿಕ ಅವರು ಮತ್ತೊಂದು ಗೆಲುವು ಕಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ