ಪುನೀತ್ ನಟಿಸುತ್ತಿದ್ದ ಈ ಸಿನಿಮಾ ಕೆಲಸಗಳು ಕೊನೆಗೂ ಪೂರ್ಣಗೊಳ್ಳಲೇ ಇಲ್ಲ
ಪುನೀತ್ ಅಪಾರ ಅಭಿಮಾನಿಗಳನ್ನು ಬಿಟ್ಟು ಹೋಗಿದ್ದಾರೆ. ಅವರು ಮೃತಪಟ್ಟಿದ್ದರಿಂದ ಅನೇಕ ಸಿನಿಮಾ ಕೆಲಸಗಳು ಹಾಗೆಯೇ ಉಳಿದುಕೊಂಡಿವೆ. ಯಾವುದು ಆ ಸಿನಿಮಾಗಳು? ಆ ಪ್ರಶ್ನೆಗೆ ಇಲ್ಲಿದೆ ಉತ್ತರ.
ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಇಹಲೋಕ ತ್ಯಜಿಸಿದ್ದಾರೆ. ಕೇವಲ 46ನೇ ವಯಸ್ಸಿಗೆ ಅವರು ಹೃದಯಾಘಾತಕ್ಕೆ ಒಳಗಾಗುತ್ತಾರೆ ಎಂಬುದನ್ನು ಯಾರಿಯೂ ಊಹಿಸಿರಲಿಲ್ಲ. ಪುನೀತ್ ಅಪಾರ ಅಭಿಮಾನಿಗಳನ್ನು ಬಿಟ್ಟು ಹೋಗಿದ್ದಾರೆ. ಅವರು ಮೃತಪಟ್ಟಿದ್ದರಿಂದ ಅನೇಕ ಸಿನಿಮಾ ಕೆಲಸಗಳು ಹಾಗೆಯೇ ಉಳಿದುಕೊಂಡಿವೆ. ಯಾವುದು ಆ ಸಿನಿಮಾಗಳು? ಆ ಪ್ರಶ್ನೆಗೆ ಇಲ್ಲಿದೆ ಉತ್ತರ.
ದ್ವಿತ್ವ:
ಪುನೀತ್ ರಾಜ್ಕುಮಾರ್ ಮತ್ತು ನಿರ್ದೇಶಕ ಪವನ್ ಕುಮಾರ್ ಜೊತೆಯಾಗಿ ‘ದ್ವಿತ್ವ’ ಸಿನಿಮಾ ಮಾಡಬೆಕಿತ್ತು. ಸೈಕಲಾಜಿಕಲ್ ಕಥಾಹಂದರ ಹೊಂದಿದ್ದ ‘ಲೂಸಿಯಾ’ ಚಿತ್ರಕ್ಕೆ ನಿರ್ದೇಶನ ಮಾಡುವ ಮೂಲಕ ಪವನ್ ಕುಮಾರ್ ಭಾರಿ ಜನಪ್ರಿಯತೆ ಪಡೆದುಕೊಂಡಿದ್ದರು. ಈಗ ಅವರು ‘ದ್ವಿತ್ವ’ ಸಿನಿಮಾದಲ್ಲಿ ಮತ್ತೆ ಸೈಕಲಾಜಿಕಲ್ ಕಥೆಯನ್ನೇ ಆಯ್ಕೆ ಮಾಡಿಕೊಂಡಿದ್ದರು. 2014ರಲ್ಲಿ ತೆರೆಗೆ ಬಂದ ಪುನೀತ್ ನಟನೆಯ ‘ಪವರ್***’ ಚಿತ್ರದಲ್ಲಿ ತ್ರಿಷಾ ನಾಯಕಿಯಾಗಿ ಕಾಣಿಸಿಕೊಂಡಿದ್ದರು. ಇದು ಅವರ ಮೊದಲ ಹಾಗೂ ಕೊನೆಯ ಕನ್ನಡ ಚಿತ್ರ. ದ್ವಿತ್ವ ಚಿತ್ರದ ಮೂಲಕ ತ್ರಿಷಾ ಮತ್ತೆ ಕನ್ನಡಕ್ಕೆ ಬರಬೇಕಿತ್ತು.
ಜೇಮ್ಸ್
‘ಬಹದ್ದೂರ್’, ‘ಭರ್ಜರಿ’, ‘ಭರಾಟೆ’ ಸಿನಿಮಾ ನಿರ್ದೇಶನ ಮಾಡುವ ಮೂಲಕ ಸಾಕಷ್ಟು ಹೆಸರು ಮಾಡಿರುವ ಚೇತನ್ ಕುಮಾರ್ ಅವರು ಪುನೀತ್ ರಾಜ್ಕುಮಾರ್ ನಟನೆಯ ‘ಜೇಮ್ಸ್’ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದರು. ಕ್ರಿಸ್ಮಸ್ಗೆ ಸಿನಿಮಾದ ಟೀಸರ್ ರಿಲೀಸ್ ಆಗಬೇಕಿತ್ತು.
ಪಿಆರ್ಕೆ ಬ್ಯಾನರ್ ಅಡಿಯ ಸಿನಿಮಾ
ಪಿಆರ್ಕೆ ಪ್ರೊಡಕ್ಷನ್ ಹೌಸ್ ಅಡಿಯಲ್ಲಿ ಮೂಡಿ ಬರುವ ಚಿತ್ರದಲ್ಲಿ ಪುನೀತ್ ನಟಿಸಬೇಕು ಎಂಬುದು ಅಭಿಮಾನಿಗಳ ಕನಸಾಗಿತ್ತು. ಅಷ್ಟೇ ಅಲ್ಲ, ಪುನೀತ್ ಕೂಡ ಈ ಬಗ್ಗೆ ಇಂಗಿತ ವ್ಯಕ್ತಪಡಿಸಿದ್ದರು. ಆದರೆ, ಅದು ಈವರೆಗೆ ಸಾಧ್ಯವಾಗಿರಲಿಲ್ಲ. ಈಗ ಈ ಕನಸು ನನಸಾಗುವ ಕಾಲ ಸನಿಹವಾಗಿದೆ ಎನ್ನುವ ಮಾತು ಕೇಳಿ ಬಂದಿತ್ತು. ‘ಪೃಥ್ವಿ’ ಸಿನಿಮಾದಲ್ಲಿ ಪುನೀತ್ ಹಾಗೂ ಜೇಕಬ್ ಒಟ್ಟಾಗಿ ಕೆಲಸ ಮಾಡಿದ್ದರು. ಈ ಸಿನಿಮಾದಲ್ಲಿ ಐಎಎಸ್ ಅಧಿಕಾರಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಈಗ ಇದೇ ರೀತಿಯ ಕಥೆಯನ್ನು ಜೇಕಬ್ ಹೆಣೆದಿದ್ದರು. ಪುನೀತ್ ಚಿತ್ರಕ್ಕೆ ಹೀರೋ ಆಗಿದ್ದರು. ಪಿಎಆರ್ಕೆ ಬ್ಯಾನರ್ ಅಡಿಯಲ್ಲಿ ಸಿನಿಮಾ ಮೂಡಿ ಬರಬೇಕಿತ್ತು.
ಪುನೀತ್ ರಾಜ್ಕುಮಾರ್ ನಿಧನ: ಕ್ಷಣಕ್ಷಣದ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ
Puneeth Rajkumar: ‘ದೇವರು ಇವರೆಲ್ಲರಿಗೂ ಒಳ್ಳೆಯದು ಮಾಡಲಿ’; ಇದು ವೇದಿಕೆ ಮೇಲೆ ಪುನೀತ್ ಕೊನೆಯ ಮಾತು