ಸುಶಾಂತ್ ಸಿಂಗ್ ರಜಪೂತ್ ಸಾವು: EDಯಿಂದ ಬಾಲಿವುಡ್ ನಟಿ ರಿಯಾ ವಿಚಾರಣೆ
ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿಗೆ ಸಂಬಂಧಿಸಿದಂತೆ ಅತ್ತ ಸಿಬಿಐ ವಿಚಾರಣೆ ಕೈಗೆತ್ತಿಕೊಂಡ ಬೆನ್ನಲ್ಲೇ ಜಾರಿ ನಿರ್ದೇಶನಾಲಯ ನಟಿ ರಿಯಾ ಚಕ್ರವರ್ತಿ ಮತ್ತು ಆಕೆಯ ಸಹೋದರ ಶೋವಿಕ್ ಚಕ್ರವರ್ತಿಯ ವಿಚಾರಣೆ ಮಾಡಿದೆ. ಈ ಮೊದಲು ಜಾರಿ ನಿರ್ದೇಶನಾಲಯ ಮನಿ ಲಾಂಡರಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ನಟಿ ರಿಯಾಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತ್ತು. ಆದ್ರೆ ಸುಪ್ರೀಮ್ ಕೋರ್ಟ್‌ನಲ್ಲಿ ಈ ಬಗ್ಗೆ ವಿಚಾರಣೆ ಇರುವದರಿಂದ ಅಲ್ಲಿಯವರೆಗೆ ವಿಚಾರಣೆ ಮುಂದಕ್ಕೆ ಹಾಕುವಂತೆ ರಿಯಾ ಜಾರಿ ನಿರ್ದೇಶನಾಲಯಕ್ಕೆ ಕೇಳಿಕೊಂಡಿದ್ದಳು. ಆದ್ರೆ ಆಕೆಯ […]
ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿಗೆ ಸಂಬಂಧಿಸಿದಂತೆ ಅತ್ತ ಸಿಬಿಐ ವಿಚಾರಣೆ ಕೈಗೆತ್ತಿಕೊಂಡ ಬೆನ್ನಲ್ಲೇ ಜಾರಿ ನಿರ್ದೇಶನಾಲಯ ನಟಿ ರಿಯಾ ಚಕ್ರವರ್ತಿ ಮತ್ತು ಆಕೆಯ ಸಹೋದರ ಶೋವಿಕ್ ಚಕ್ರವರ್ತಿಯ ವಿಚಾರಣೆ ಮಾಡಿದೆ. ಈ ಮೊದಲು ಜಾರಿ ನಿರ್ದೇಶನಾಲಯ ಮನಿ ಲಾಂಡರಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ನಟಿ ರಿಯಾಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತ್ತು. ಆದ್ರೆ ಸುಪ್ರೀಮ್ ಕೋರ್ಟ್‌ನಲ್ಲಿ ಈ ಬಗ್ಗೆ ವಿಚಾರಣೆ ಇರುವದರಿಂದ ಅಲ್ಲಿಯವರೆಗೆ ವಿಚಾರಣೆ ಮುಂದಕ್ಕೆ ಹಾಕುವಂತೆ ರಿಯಾ ಜಾರಿ ನಿರ್ದೇಶನಾಲಯಕ್ಕೆ ಕೇಳಿಕೊಂಡಿದ್ದಳು. ಆದ್ರೆ ಆಕೆಯ ಈ ಮನವಿಯನ್ನ ತಿರಸ್ಕರಿಸಿದ ಜಾರಿ ನಿರ್ದೇಶನಾಲಯ ಇಂದೇ ವಿಚಾರಣೆಗೆ ಹಾಜರಾಗಲು ಸೂಚಿಸಿತ್ತು.
ಬೇರೆ ದಾರಿಕಾಣದೆ ರಿಯಾ ಇವತ್ತು ಮುಂಬೈನ ಜಾರಿ ನಿರ್ದೇಶನಾಲಯದ ಕಚೇರಿಗೆ ವಿಚಾರಣೆಗಾಗಿ ಹಾಜರಾಗಿದ್ದಳು. ಕಡು ನೀಲಿ ಬಣ್ಣದ ಸಲ್ವಾರ್ ಕಮೀಜ್ ದರಿಸಿದ್ದ ರಿಯಾ ಸಹೋದನೊಂದಿಗೆ ವಿಚಾರಣೆಗೆ ಹಾಜರಾಗಿದ್ದಾಳೆ. ರಿಯಾ ಜೊತೆಗೆ ಅವಳ ಸಹೋದರ ಶೋವಿಕ್ ಚಕ್ರವರ್ತಿಯನ್ನು ಕೂಡಾ ಇಡಿ ವಿಚಾರಣೆ ಮಾಡಿದೆ.