AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Adipurush: ರಾಮ-ಸೀತೆ ಗೆಟಪ್​ನಲ್ಲಿ ಯಶ್​-ರಾಧಿಕಾ ಪಂಡಿತ್​; ವೈರಲ್​ ಆಗಿದೆ ಫೋಟೋ

Yash Radhika Pandit: ಯಶ್​ ಮತ್ತು ರಾಧಿಕಾ ಪಂಡಿತ್​ ಅವರು ರಾಮ-ಸೀತೆಯ ಪಾತ್ರ ಮಾಡಿದರೆ ಹೇಗಿರುತ್ತದೆ? ಇಂಥದ್ದೊಂದು ಕಲ್ಪನೆಯಲ್ಲಿ ಈ ಫೋಟೊವನ್ನು ಎಡಿಟ್​ ಮಾಡಿ ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದೆ.

Adipurush: ರಾಮ-ಸೀತೆ ಗೆಟಪ್​ನಲ್ಲಿ ಯಶ್​-ರಾಧಿಕಾ ಪಂಡಿತ್​; ವೈರಲ್​ ಆಗಿದೆ ಫೋಟೋ
ಯಶ್​, ರಾಧಿಕಾ ಪಂಡಿತ್
ಮದನ್​ ಕುಮಾರ್​
|

Updated on: Jun 22, 2023 | 11:51 AM

Share

ಈಗ ಎಲ್ಲೆಲ್ಲೂ ‘ಆದಿಪುರುಷ್​’ ಸಿನಿಮಾ (Adipurush Movie) ಬಗ್ಗೆ ಚರ್ಚೆ ಆಗುತ್ತಿದೆ. ಓಂ ರಾವತ್​ ನಿರ್ದೇಶನದಲ್ಲಿ ಮೂಡಿಬಂದಿರುವ ಈ ಸಿನಿಮಾಗೆ ಎಲ್ಲ ಕಡೆಗಳಿಂದ ನೆಗೆಟಿವ್​ ವಿಮರ್ಶೆ ಸಿಕ್ಕಿದೆ. ರಾಮಾಯಣದ ಪಾತ್ರಗಳನ್ನು ಮನಸ್ಸಿಗೆ ಬಂದಂತೆ ತೋರಿಸಲಾಗಿದೆ ಎಂದು ಅನೇಕರು ಆರೋಪಿಸಿದ್ದಾರೆ. ‘ಆದಿಪುರುಷ್​’ ಚಿತ್ರದಲ್ಲಿ ಪ್ರಭಾಸ್​ ಅವರು ರಾಮನಾಗಿ ನಟಿಸಿದ್ದಾರೆ. ಕೃತಿ ಸನೋನ್​ ಅವರು ಸೀತೆಯ ಪಾತ್ರ ಮಾಡಿದ್ದಾರೆ. ಈ ಹಿಂದೆ ರಾಮಾಯಣ’ (Ramayana) ಧಾರಾವಾಹಿಯಲ್ಲಿ ಅದೇ ಪಾತ್ರವನ್ನು ಅರುಣ್​ ಗೋವಿಲ್​ ಮತ್ತು ದೀಪಿಕಾ ಚಿಖ್ಲಿಯಾ ಅವರು ನಿಭಾಯಿಸಿದ್ದರು. ಆ ಕಲಾವಿದರ ಫೋಟೋವನ್ನು ಈಗ ಎಡಿಟ್​ ಮಾಡಲಾಗಿದೆ. ಯಶ್​ (Yash) ಮತ್ತು ರಾಧಿಕಾ ಪಂಡಿತ್​ (Radhika Pandit) ಅವರು ರಾಮ ಮತ್ತು ಸೀತೆಯ ಪಾತ್ರ ಮಾಡಿದರೆ ಹೇಗಿರುತ್ತದೆ ಎಂಬ ಕಲ್ಪನೆಯಲ್ಲಿ ಈ ಫೋಟೊವನ್ನು ಎಡಿಟ್​ ಮಾಡಿ ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದೆ.

ಎಲ್ಲ ಪಾತ್ರಗಳಿಗೂ ಸೈ ಎಂಬಂತಿರುವ ನಟ ಯಶ್​ ಅವರ ಮುಂದಿನ ಸಿನಿಮಾ ಯಾವುದು ಎಂಬುದನ್ನು ತಿಳಿಯಲು ಫ್ಯಾನ್ಸ್​ ಕಾದಿದ್ದಾರೆ. ಅದೇ ರೀತಿ ರಾಧಿಕಾ ಪಂಡಿತ್​ ಅವರು ನಟನೆಗೆ ಕಮ್​ಬ್ಯಾಕ್​ ಮಾಡಲಿ ಎಂದು ಅಭಿಮಾನಿಗಳು ನಿರೀಕ್ಷಿಸಿದ್ದಾರೆ. ಈ ಸಂದರ್ಭದಲ್ಲಿ ಅವರಿಬ್ಬರನ್ನು ರಾಮ-ಸೀತೆಯ ಪಾತ್ರದಲ್ಲಿ ಕಲ್ಪಿಸಿಕೊಳ್ಳಲಾಗಿದೆ. ಈ ಫೋಟೋ ನೋಡಿದ ಅಭಿಮಾನಿಗಳು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ಸೂಪರ್​ ಹಿಟ್​ ಆದ ಬಳಿಕ ಯಶ್​ ಅವರ ಡಿಮ್ಯಾಂಡ್​ ಹೆಚ್ಚಾಗಿದೆ. ಜಾಗತಿಕ ಮಟ್ಟದಲ್ಲಿ ಅವರು ಖ್ಯಾತಿ ಗಳಿಸಿದ್ದಾರೆ. ಕೆಲವೇ ದಿನಗಳ ಹಿಂದೆ ಅವರ ಬಗ್ಗೆ ಒಂದು ಗಾಸಿಪ್​ ಕೇಳಿಬಂದಿತ್ತು. ಬಾಲಿವುಡ್​ನಲ್ಲಿ ನಿರ್ದೇಶಕ ನಿತೇಶ್​ ತಿವಾರಿ ಅವರು ರಾಮಾಯಣದ ಕಥೆಯನ್ನು ಇಟ್ಟುಕೊಂಡು ಸಿನಿಮಾ ಮಾಡುತ್ತಿದ್ದಾರೆ. ಆ ಸಿನಿಮಾದಲ್ಲಿ ರಾವಣನ ಪಾತ್ರ ಮಾಡುವಂತೆ ಯಶ್​ಗೆ ಆಫರ್​ ನೀಡಲಾಗಿತ್ತು ಎಂದು ಸುದ್ದಿ ಹಬ್ಬಿತ್ತು. ಆದರೆ ಆ ಪಾತ್ರವನ್ನು ಯಶ್​ ಒಪ್ಪಿಕೊಳ್ಳಲಿಲ್ಲ ಎನ್ನಲಾಗಿದೆ. ಯಶ್​ ರಾವಣನ ಪಾತ್ರ ನೀಡುವುದು ಸರಿಯಲ್ಲ ಎಂದು ಕಂಗನಾ ರಣಾವತ್​ ಅವರು ಪರೋಕ್ಷವಾಗಿ ಕಿಡಿಕಾರಿದ್ದರು.

Deepika Chikhalia: ‘ಆದಿಪುರುಷ್​’ ನೋಡದೇ ಕಾಂಟ್ರವರ್ಸಿ ಬಗ್ಗೆ ಅಭಿಪ್ರಾಯ ತಿಳಿಸಿದ ರಾಮಾಯಣ ಧಾರಾವಾಹಿಯ ಸೀತೆ ದೀಪಿಕಾ ಚಿಖ್ಲಿಯಾ

‘ಆದಿಪುರುಷ್​’ ಸಿನಿಮಾದಲ್ಲಿ ರಾಮಾಯಣದ ಪಾತ್ರಗಳು ಮೂಡಿಬಂದ ರೀತಿಗೆ ಜನರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಈ ಸಿನಿಮಾಗಿಂತ ರಮಾನಂದ್​ ಸಾಗರ್​ ನಿರ್ದೇಶಿಸಿದ ‘ರಾಮಾಯಣ’ ಸೀರಿಯಲ್​ನ ಪಾತ್ರಗಳೇ ಚೆನ್ನಾಗಿ ಇದ್ದವು ಎಂಬುದು ಪ್ರೇಕ್ಷಕರ ಅಭಿಪ್ರಾಯ. ದೀಪಿಕಾ ಚಿಖ್ಲಿಯಾ ಅವರು ಮಾಡಿದ ಸೀತೆಯ ಪಾತ್ರವನ್ನು ಜನರು ಈಗಲೂ ನೆನಪು ಮಾಡಿಕೊಳ್ಳುತ್ತಾರೆ. ‘ರಾಮಾಯಣದ ಕಥೆ ಇರುವುದು ಮನರಂಜನೆಗಾಗಿ ಅಲ್ಲ’ ಎಂದು ದೀಪಿಕಾ ಚಿಖ್ಲಿಯಾ ಅವರು ಇತ್ತೀಚೆಗೆ ಹೇಳಿಕೆ ನೀಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?