AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸು ಫ್ರಮ್ ಸೋ’ ಬಳಿಕ ಮತ್ತೊಂದು ಹಿಟ್ ಚಿತ್ರ; ‘ಏಳುಮಲೆ’ ಸಿನಿಮಾ ಕಲೆಕ್ಷನ್ ಎಷ್ಟು?

ರಾಣಾ ಮತ್ತು ಪ್ರಿಯಾಂಕಾ ಆಚಾರ್ ಅಭಿನಯದ ‘ಏಳುಮಲೆ’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಯಶಸ್ಸು ಕಂಡಿದೆ. 10 ದಿನಗಳಲ್ಲಿ ಸಿನಿಮಾ ಕೋಟಿ ಕೋಟಿ ಕಲೆಕ್ಷನ್ ಮಾಡಿದೆ. ಪುನೀತ್ ರಂಗಸ್ವಾಮಿ ನಿರ್ದೇಶನದ ಈ ಥ್ರಿಲ್ಲರ್ ಚಿತ್ರ ನೈಜ ಘಟನೆಯನ್ನು ಆಧರಿಸಿದೆ. ತರುಣ್ ಸುಧೀರ್ ನಿರ್ಮಾಣದ ಈ ಚಿತ್ರದ ಯಶಸ್ಸು ಉತ್ತಮ ಲಾಭ ತಂದುಕೊಟ್ಟಿದೆ.

‘ಸು ಫ್ರಮ್ ಸೋ’ ಬಳಿಕ ಮತ್ತೊಂದು ಹಿಟ್ ಚಿತ್ರ; ‘ಏಳುಮಲೆ’ ಸಿನಿಮಾ ಕಲೆಕ್ಷನ್ ಎಷ್ಟು?
ಏಳು ಮಲೆ
ರಾಜೇಶ್ ದುಗ್ಗುಮನೆ
|

Updated on: Sep 16, 2025 | 6:48 AM

Share

‘ಸು ಫ್ರಮ್ ಸೋ’ ಸಿನಿಮಾ ಸೂಪರ್ ಹಿಟ್ ಆಗಿದೆ. ಈ ಚಿತ್ರದ ಯಶಸ್ಸಿನ ನಂತರದಲ್ಲಿ ‘ಏಳುಮಲೆ’ ಸಿನಿಮಾ (Elu Male Movie) ರಿಲೀಸ್ ಆಗಿದೆ. ಈ ಚಿತ್ರವನ್ನು ಜನರು ಮೆಚ್ಚಿಕೊಂಡಿದ್ದಾರೆ. ರಾಣಾ ನಟನೆಯ ಈ ಚಿತ್ರ ಥ್ರಿಲ್ಲರ್ ಅಂಶಗಳನ್ನು ಹೊಂದಿದೆ. ನೈಜ ಘಟನೆ ಆಧಾರಿತ ಸಿನಿಮಾ ಇದು ಅನ್ನೋದು ವಿಶೇಷ. ಈ ಸಿನಿಮಾ ರಿಲೀಸ್ ಆಗಿ 10 ದಿನಗಳು ಕಳೆದಿದ್ದು, ಉತ್ತಮ ಗಳಿಕೆ ಮಾಡಿದೆ. ಹಾಗಾದರೆ ಈ ಚಿತ್ರ ಮಾಡಿದ ಒಟ್ಟಾರೆ ಕಲೆಕ್ಷನ್ ಎಷ್ಟು? ಆ ಬಗ್ಗೆ ಇಲ್ಲಿದೆ ವಿವರ.

ತರುಣ್ ಸುಧೀರ್ ಅವರು ನಿರ್ದೇಶಕನಾಗಿ ಜನಪ್ರಿಯತೆ ಪಡೆದವರು. ಅವರು ಸಿನಿಮಾ ನಿರ್ಮಾಣಕ್ಕೆ ಇಳಿದಿದ್ದಾರೆ. ಒಳ್ಳೊಳ್ಳೆಯ ಚಿತ್ರಗಳನ್ನು ಅವರು ಪ್ರೇಕ್ಷಕರ ಮುಂದಿಡೋ ಪ್ರಯತ್ನ ಮಾಡುತ್ತಿದ್ದಾರೆ. ಹೊಸ ಪ್ರತಿಭೆಗಳಿಗೆ ಅವಕಾಶ ಕೊಡೋದು ಅವರ ಮುಖ್ಯ ಉದ್ದೇಶ. ಈಗ ‘ಏಳುಮಲೆ’ ಚಿತ್ರದಲ್ಲಿ ರಾಣಾ, ಪ್ರಿಯಾಂಕಾ ಆಚಾರ್​ಗೆ ಅವಕಾಶ ನೀಡಿದ್ದಾರೆ. ಇವರ ಜೊತೆ ಹಿರಿಯ ಕಲಾವಿದರಾದ ಜಗಪತಿ ಬಾಬು, ಕಿಶೋರ್ ಕುಮಾರ್, ಟಿಎಸ್ ನಾಗಾಭರಣ ನಟಿಸಿದ್ದಾರೆ. ಪುನಿತ್ ರಂಗಸ್ವಾಮಿ ಈ ಚಿತ್ರ ನಿರ್ದೇಶನ ಮಾಡಿದ್ದಾರೆ.

‘ಏಳುಮಲೆ’ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಸುಮಾರು ಮೂರುವರೆ ಕೋಟಿ ರೂಪಾಯಿಯಷ್ಟು ಗಳಿಕೆ ಮಾಡಿದೆ. ಈ ಚಿತ್ರ ನಿತ್ಯವೂ ಲಕ್ಷಗಳಲ್ಲಿ ಕಲೆಕ್ಷನ್ ಮಾಡುತ್ತಿದೆ. ಭಾನುವಾರ (ಸೆಪ್ಟೆಂಬರ್ 14) 40 ಲಕ್ಷ ರೂಪಾಯಿ ಹಣವನ್ನು ಚಿತ್ರ ಬಾಚಿಕೊಂಡಿದೆ ಎಂದು ಬಾಕ್ಸ್ ಆಫೀಸ್ ಟ್ರ್ಯಾಕರ್ sacnilk ವರದಿ ಮಾಡಿದೆ. ಸೋಮವಾರ ಸಿನಿಮಾದ ಗಳಿಕೆ 11 ಲಕ್ಷ ರೂಪಾಯಿ. ಇನ್ನೂ ಕೆಲವು ದಿನಗಳು ಸಿನಿಮಾ ಒಳ್ಳೆಯ ಕಲೆಕ್ಷನ್ ಮಾಡುವ ಸಾಧ್ಯತೆ ಇದೆ.

ಇದನ್ನೂ ಓದಿ
Image
ರೇಣುಕಾಸ್ವಾಮಿ ಪತ್ನಿ ಸಹನಾಗೆ ಸಿಗಲಿದೆ ಸರ್ಕಾರಿ ಕೆಲಸ; ಶಾಸಕನ ಭರವಸೆ
Image
ಕಿರುತೆರೆ ನಟಿಯ ಪತಿ​ಗೆ ಕಾರು ಅಪಘಾತ; ಪ್ರಾಣಾಪಾಯದಿಂದ ಜಸ್ಟ್ ಮಿಸ್
Image
ಶರಣ್-ತರುಣ್ ಸುಧೀರ್ ಗೆಳೆತನ ಎಂಥದ್ದು? ಯಾರೂ ಊಹಿಸಲೂ ಸಾಧ್ಯವಿಲ್ಲ
Image
ರಿಯಾಲಿಟಿ ಶೋಗೆ ಬರಲ್ಲ, ಬರಲ್ಲ ಅಂತ ಬಂದೇ ಬಿಟ್ರು ನಟಿ ಸುಧಾರಾಣಿ

ಇದನ್ನೂ ಓದಿ:  ಲವ್ ಸ್ಟೋರಿ, ಥ್ರಿಲ್ ಬಯಸುವ ಪ್ರೇಕ್ಷಕರಿಗೆ ಉತ್ತಮ ಆಯ್ಕೆ ‘ಏಳುಮಲೆ’

ಈ ಚಿತ್ರದ ಬಜೆಟ್ ಎಷ್ಟು ಎಂಬುದನ್ನು ತರುಣ್ ಸುಧೀರ್ ಅವರು ಬಿಟ್ಟುಕೊಟ್ಟಿಲ್ಲ. ಈಗ ಬಾಕ್ಸ್ ಆಫೀಸ್​ನಲ್ಲಿ ಸಿನಿಮಾ ಉತ್ತಮ ಗಳಿಕೆ ಮಾಡಿದೆ. ಅದೇ ರೀತಿ ಒಟಿಟಿ ಹಾಗೂ ಟಿವಿ ಹಕ್ಕುಗಳ ಮಾರಾಟದಿಂದ ನಿರ್ಮಾಪಕರಿಗೆ ಒಂದಷ್ಟು ಹಣ ಬರಲಿದೆ. ಈ ಚಿತ್ರದಿಂದ ತರುಣ್ ಸೇಫ್ ಆಗಿದ್ದಾರೆ ಎಂದು ಹೇಳಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು