Challenging Star ದರ್ಶನ್​: ತೆಲುಗಿನಲ್ಲಿ ಭರ್ಜರಿ ಓಟ ಆರಂಭಿಸಿದ ರಾಬರ್ಟ್​ ಸಿನಿಮಾ ಟೀಸರ್

Challenging Star Darshan ರಾಬರ್ಟ್​ ಸಿನಿಮಾದ ಟೀಸರ್ ಬಿಡುಗಡೆಯಾದ 40 ನಿಮಿಷಗಳಲ್ಲೇ 2 ಲಕ್ಷಕ್ಕೂ ಅಧಿಕ ವೀಕ್ಷಣೆ ಗಳಿಸಿ ಭರ್ಜರಿಯಾಗಿ ಮುನ್ನುಗ್ಗುತ್ತಿದೆ.

Challenging Star ದರ್ಶನ್​: ತೆಲುಗಿನಲ್ಲಿ ಭರ್ಜರಿ ಓಟ ಆರಂಭಿಸಿದ ರಾಬರ್ಟ್​ ಸಿನಿಮಾ ಟೀಸರ್
ರಾಬರ್ಟ್​ ಸಿನಿಮಾ ಟೀಸರ್​ನ ಒಂದು ದೃಶ್ಯ
Follow us
Skanda
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Feb 03, 2021 | 5:20 PM

ಚಾಲೆಂಜಿಂಗ್ ಸ್ಟಾರ್ ದರ್ಶನ್​ ಅಭಿನಯದ ಬಹುನಿರೀಕ್ಷಿತ ‘ರಾಬರ್ಟ್​’ ಸಿನಿಮಾದ ಟೀಸರ್ ತೆಲುಗಿನಲ್ಲಿ ಬಿಡುಗಡೆಯಾಗಿದೆ. ಆನಂದ್ ಆಡಿಯೋ ಸಂಸ್ಥೆಯ ಅಧಿಕೃತ ಯೂಟ್ಯೂಬ್ ಚಾನೆಲ್​ನಲ್ಲಿ ತೆರೆಕಂಡಿರುವ ಟೀಸರ್ ಬಿಡುಗಡೆಯಾದ 40 ನಿಮಿಷಗಳಲ್ಲೇ 2 ಲಕ್ಷಕ್ಕೂ ಅಧಿಕ ವೀಕ್ಷಣೆ ಗಳಿಸಿ ಭರ್ಜರಿಯಾಗಿ ಮುನ್ನುಗ್ಗುತ್ತಿದೆ.

ರಾಬರ್ಟ್​ ಸಿನಿಮಾದ ಟೀಸರ್ ಬಿಡುಗಡೆಯಾಗುತ್ತಿದ್ದಂತೆಯೇ ದರ್ಶನ್ ಅಭಿಮಾನಿಗಳ ಸಂತಸ ಮುಗಿಲುಮುಟ್ಟಿದ್ದು, ಡಿ ಬಾಸ್​ಗೆ ಜಯವಾಗಲಿ ಎಂದು ಸಾಲುಸಾಲು ಕಮೆಂಟ್​ ಮಾಡುತ್ತಿದ್ದಾರೆ. ಇನ್ನು ಕೆಲವರು ಯಾರ ಸಹಾಯವೂ ಇಲ್ಲದೇ ಸ್ವತಂತ್ರವಾಗಿ ಬೆಳೆದು ಇದೀಗ ತೆಲುಗು ಚಿತ್ರರಂಗವನ್ನೂ ಆಳಲು ಹೊರಟಿರುವ ಚಾಲೆಂಜಿಂಗ್ ಸ್ಟಾರ್​ ಉನ್ನತ ಮಟ್ಟಕ್ಕೇರಲಿ ಎಂದು ಹಾರೈಸಿದ್ದಾರೆ.

ದರ್ಶನ್​ ಮತ್ತು ವಿನೋದ್​ ಪ್ರಭಾಕರ್​ ಇಬ್ಬರೂ ಈ ಚಿತ್ರದಲ್ಲಿ ಕಾಣಿಸಿಕೊಂಡಿದ್ದು, ತರುಣ್​ ಕಿಶೋರ್ ಸುಧೀರ್ ಚಿತ್ರಕ್ಕೆ ಆ್ಯಕ್ಷನ್ ಕಟ್​ ಹೇಳಿದ್ದಾರೆ. ಉಮಾಪತಿ ಶ್ರೀನಿವಾಸ ಗೌಡ ಅವರ ನಿರ್ಮಾಣದಲ್ಲಿ ಮೂಡಿಬಂದಿರುವ ಚಿತ್ರದ ಬಗ್ಗೆ ಈಗಾಗಲೇ ಭಾರೀ ನಿರೀಕ್ಷೆ ವ್ಯಕ್ತವಾಗಿದ್ದು, ಮಾರ್ಚ್​ 11ರಂದು ತೆರೆಕಾಣಲಿರುವ ಪ್ರಯುಕ್ತ #RoberrtStormMarch11 ಹ್ಯಾಶ್​ಟ್ಯಾಗ್ ಟ್ವಿಟರ್​ನಲ್ಲಿ ಟ್ರೆಂಡ್ ಆಗಿದೆ.

ಮಹಾಶಿವರಾತ್ರಿಯ ದಿನವೇ ತೆರೆಕಾಣಲಿರುವ ರಾಬರ್ಟ್​ ಚಿತ್ರವನ್ನು ನೋಡಲು ಸಿನಿ ರಸಿಕರು ಕಾತರರಾಗಿದ್ದಾರೆ. ದರ್ಶನ್ ಅಭಿಮಾನಿಗಳಂತೂ ಅನೇಕ ದಿನಗಳ ನಂತರ ತಮ್ಮ ನೆಚ್ಚಿನ ಹೀರೊವನ್ನು ಚಿತ್ರಮಂದಿರಗಳಲ್ಲಿ ಕಾಣಲು ಉತ್ಸುಕರಾಗಿ ತುದಿಗಾಲಲ್ಲಿ ನಿಂತಿದ್ದು, ತೆಲುಗಿನಲ್ಲಿ 200ಕ್ಕೂ ಹೆಚ್ಚು ಚಿತ್ರಮಂದಿಗಳಲ್ಲಿ ರಾಬರ್ಟ ತೆರೆ ಕಾಣಲಿದೆ. ಸದ್ಯ ತೆಲುಗಿನಲ್ಲಿ ಬಿಡುಗಡೆಗೊಂಡಿರುವ ಟೀಸರ್​ ಸಾಮಾಜಿಕ ಜಾಲತಾಣಗಳಲ್ಲಿ ಸಖತ್​ ಸೌಂಡ್ ಮಾಡುತ್ತಿದೆ.

ಅಂತೂ ಸಿಕ್ತು ಗ್ರೀನ್​ ಸಿಗ್ನಲ್​: ಸ್ಯಾಂಡಲ್‌ವುಡ್‌, ಟಾಲಿವುಡ್‌ನಲ್ಲಿ ಒಂದೇ ದಿನ ‘ರಾಬರ್ಟ್‌’ ಸಿನಿಮಾ ರಿಲೀಸ್‌!

ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ