Sign In

By signing in or creating an account, you agree with Associated Broadcasting Company's Terms & Conditions and Privacy Policy.

Fact Check: ‘ಕೆಜಿಎಫ್ 2’ ಬಗ್ಗೆ ಸುದೀಪ್​ ರಿಯಾಕ್ಷನ್ ನೀಡಿದ್ದಾರೆ ಎಂಬ ವಿಡಿಯೋದ ಅಸಲಿಯತ್ತೇನು?

ಕಿಚ್ಚ ಸುದೀಪ್ ಸ್ಯಾಂಡಲ್​ವುಡ್​ ಮಾತ್ರವಲ್ಲದೆ ಪರಭಾಷೆಯಲ್ಲೂ ಬೇಡಿಕೆ ಹೊಂದಿದ್ದಾರೆ. ಅವರು ಅನೇಕ ಸಿನಿಮಾಗಳಿಗೆ ಬೆಂಬಲ ನೀಡಿದ್ದಿದೆ. 2018ರಲ್ಲಿ ‘ಕೆಜಿಎಫ್’ ಸಿನಿಮಾ ಟ್ರೇಲರ್ ನೋಡಿದ್ದ ಸುದೀಪ್ ಇಡೀ ತಂಡಕ್ಕೆ ವಿಶ್ ಮಾಡಿದ್ದರು.

Fact Check: ‘ಕೆಜಿಎಫ್ 2’ ಬಗ್ಗೆ ಸುದೀಪ್​ ರಿಯಾಕ್ಷನ್ ನೀಡಿದ್ದಾರೆ ಎಂಬ ವಿಡಿಯೋದ ಅಸಲಿಯತ್ತೇನು?
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Apr 19, 2022 | 7:56 PM

‘ಕೆಜಿಎಫ್ ಚಾಪ್ಟರ್​ 2’ ಸಿನಿಮಾ (KGF Chapter 2) ದೊಡ್ಡ ಮಟ್ಟದಲ್ಲಿ ಯಶಸ್ಸು ಕಂಡಿದೆ. ಪರಭಾಷೆಯವರೂ ಈ ಚಿತ್ರವನ್ನು ಕೊಂಡಾಡುತ್ತಿದ್ದಾರೆ. ಈ ಸಿನಿಮಾಗೆ ಬಾಲಿವುಡ್​ನಲ್ಲಿ ಸೃಷ್ಟಿ ಆದ ಬೇಡಿಕೆ ನೋಡಿ ಅಲ್ಲಿನ ಸೆಲೆಬ್ರಿಟಿಗಳು ಕಣ್ಣರಳಿಸಿದ್ದಾರೆ. ಬಾಲಿವುಡ್ನಲ್ಲಿ (Bollywood) ಈ ಸಿನಿಮಾ ಐದು ದಿನಕ್ಕೆ 200+ ಕೋಟಿ ಗಳಿಸಿದೆ. ಇದು ಸಣ್ಣ ಸಾಧನೆಯಲ್ಲ. ಆದರೆ, ದೊಡ್ಡದೊಡ್ಡ ಸ್ಟಾರ್​​ಗಳು ಸಿನಿಮಾ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಇದು ಕೆಲವರ ಅಸಮಾಧಾನಕ್ಕೆ ಕಾರಣವಾಗಿದೆ. ಹೀಗಿರುವಾಗಲೇ ಕೆಲ ಹಳೆಯ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ. ಇದರ ಅಸಲಿಯತ್ತೇನು ಎನ್ನುವ ಪ್ರಶ್ನೆಗೆ ಇಲ್ಲಿದೆ ಉತ್ತರ.

ಕಿಚ್ಚ ಸುದೀಪ್ ಸ್ಯಾಂಡಲ್​ವುಡ್​ ಮಾತ್ರವಲ್ಲದೆ ಪರಭಾಷೆಯಲ್ಲೂ ಬೇಡಿಕೆ ಹೊಂದಿದ್ದಾರೆ. ಅವರು ಅನೇಕ ಸಿನಿಮಾಗಳಿಗೆ ಬೆಂಬಲ ನೀಡಿದ್ದಿದೆ. 2018ರಲ್ಲಿ ‘ಕೆಜಿಎಫ್’ ಸಿನಿಮಾ ಟ್ರೇಲರ್ ನೋಡಿದ್ದ ಸುದೀಪ್ ಇಡೀ ತಂಡಕ್ಕೆ ವಿಶ್ ಮಾಡಿದ್ದರು. ‘ಜ್ವಾಲಾಮುಖಿ ಸ್ಫೋಟಗೊಳ್ಳುತ್ತಿರುವಂತೆ ತೋರುತ್ತಿದೆ. #KGF ತಂಡಕ್ಕೆ ನನ್ನ ಶುಭಾಶಯಗಳು. ಪ್ರಶಾಂತ್ ಅವರ ವಿಷನ್​ಗೆ ನನ್ನ ಹ್ಯಾಟ್ಸ್​ ಆಫ್’ ಎಂದಿದ್ದ ಸುದೀಪ್, ಯಶ್​ ಬಗ್ಗೆಯೂ ಮೆಚ್ಚುಗೆಯ ಮಾತುಗಳನ್ನು ಆಡಿದ್ದರು.

ಆದರೆ, ‘ಕೆಜಿಎಫ್ 2’ ಬಗ್ಗೆ ಸುದೀಪ್ ಯಾವುದೇ ಟ್ವೀಟ್ ಮಾಡಿಲ್ಲ. ಹೀಗೇಕೆ ಎನ್ನುವ ಪ್ರಶ್ನೆ ಮೂಡಿರುವಾಗಲೇ ವಿಡಿಯೋ ಒಂದು ವೈರಲ್ ಆಗಿದೆ. ‘ಕೆಜಿಎಫ್ 2 ಬಗ್ಗೆ ಸುದೀಪ್ ಅವರ ಮೊದಲ ಪ್ರತಿಕ್ರಿಯೆ’ ಎನ್ನುವ ಅಡಿಬರಹದೊಂದಿಗೆ ವಿಡಿಯೋ ವೈರಲ್ ಮಾಡಲಾಗುತ್ತಿದೆ. ಈ ವಿಡಿಯೋದಲ್ಲಿ ‘ಕೆಜಿಎಫ್ ಬಗ್ಗೆ ನಿಮ್ಮ ಪ್ರತಿಕ್ರಿಯೆ ಏನು’ ಎಂದು ಕೇಳಲಾಗಿತ್ತು. ಇದಕ್ಕೆ ಸುದೀಪ್, ‘ನಾನು ಆ ಸಿನಿಮಾದಲ್ಲಿ ನಟಿಸಿಲ್ಲ’ ಎಂದಷ್ಟೇ ಹೇಳಿರುವುದನ್ನು ಕಟ್ ಮಾಡಿ ಹಾಕಲಾಗಿದೆ.

ಸುದೀಪ್ ಅವರು ಈಗ ಕೊಂಚ ಉದ್ದನೆಯ ಕೂದಲು ಬಿಟ್ಟಿದ್ದಾರೆ. ಈಗ ವೈರಲ್ ಆಗುತ್ತಿರುವ ವಿಡಿಯೋದಲ್ಲಿ ಅವರ ಹೇರ್​ಸ್ಟೈಲ್ ಬೇರೆಯದೇ ರೀತಿಯಲ್ಲಿದೆ. ಅಲ್ಲದೆ, ಸುದೀಪ್ ಅವರು ಈ ವಿಡಿಯೋದಲ್ಲಿ ಕಾಣಿಸಿಕೊಂಡ ಗೆಟಪ್​ನಲ್ಲಿ ಇತ್ತೀಚೆಗೆ ಯಾವುದೇ ಸಾರ್ವಜನಿಕವಾಗಿ ಕಾಣಿಸಿಕೊಂಡಿಲ್ಲ. ಹೀಗಿರುವಾಗ ಅವರು ‘ಕೆಜಿಎಫ್ 2’ ಬಗ್ಗೆ ಪ್ರತಿಕ್ರಿಯಿಸಿದ್ದು ಹೇಗೆ ಎನ್ನುವ ಪ್ರಶ್ನೆ ಮೂಡಿದೆ.

ಸುದೀಪ್ ಅವರ ಇತ್ತೀಚಿನ​ ಫೋಟೋ

ಪ್ರಶ್ನೆ ಕೇಳುವ ವ್ಯಕ್ತಿ ‘ಕೆಜಿಎಫ್​’ ಬಗ್ಗೆ ಹೇಳಿ ಎಂದು ಕೇಳಿದ್ದಾನೆಯೇ ಹೊರತೂ, ‘ಕೆಜಿಎಫ್ 2’ ಬಗ್ಗೆ ಹೇಳಿ ಎಂದು ಹೇಳಿಲ್ಲ. ಅವರು ಈ ಮಾತನ್ನು ‘ಕೆಜಿಎಫ್’ ಬಗ್ಗೆಯೇ ಹೇಳಿದ್ದೇ ಆಗಿದ್ದರೂ, ವಿಡಿಯೋದಲ್ಲಿ ಮುಂದುವರಿದು ಏನು ಹೇಳಿದ್ದಾರೆ ಎಂಬುದೂ ಮುಖ್ಯವಾಗುತ್ತದೆ. ಆದರೆ, ಸದ್ಯ ವಿಡಿಯೋ ವೈರಲ್ ಮಾಡುತ್ತಿರುವವರು ಅರ್ಧ ವಿಡಿಯೋವನ್ನು ಮಾತ್ರ ಹಂಚಿಕೊಂಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಈ ವಿಡಿಯೋ ಸಖತ್ ವೈರಲ್ ಆಗುತ್ತಿದೆ. ಈ ಬಗ್ಗೆ ಕಿಚ್ಚ ಸುದೀಪ್ ಅವರ ಕಡೆಯಿಂದ ಇನ್ನಷ್ಟೇ ಸ್ಪಷ್ಟನೆ ಸಿಗಬೇಕಿದೆ.

ಇದನ್ನೂ ಓದಿ:  ತಮಿಳುನಾಡಿನಲ್ಲಿ ‘ಕೆಜಿಎಫ್ 2’ ಎದುರು ಮಕಾಡೆ ಮಲಗಿದ ‘ಬೀಸ್ಟ್​’; ಕಲೆಕ್ಷನ್ ಅಂತರ ಎಷ್ಟು?

‘ಕೆಜಿಎಫ್ 2’ ಚಿತ್ರಕ್ಕೆ ಹೆದರಿದ ಟಾಲಿವುಡ್​; ಎರಡು ಸಿನಿಮಾಗಳ ರಿಲೀಸ್ ಡೇಟ್ ಮುಂದಕ್ಕೆ

ಸಣ್ಣ ವಯಸ್ಸಲ್ಲಿ ಮಾಡಿದ್ದ ಆಣೆ: ಕೊಟ್ಟ ಮಾತು ನಡೆಸಿಕೊಟ್ಟ ಧ್ರುವ ಸರ್ಜಾ
ಸಣ್ಣ ವಯಸ್ಸಲ್ಲಿ ಮಾಡಿದ್ದ ಆಣೆ: ಕೊಟ್ಟ ಮಾತು ನಡೆಸಿಕೊಟ್ಟ ಧ್ರುವ ಸರ್ಜಾ
ಹೋಳಿ ಹಬ್ಬದಂದೇ ಹರಿಯಾಣದ ಬಿಜೆಪಿ ನಾಯಕನ ಹತ್ಯೆ; ಸಿಸಿಟಿವಿ ವಿಡಿಯೋ ವೈರಲ್
ಹೋಳಿ ಹಬ್ಬದಂದೇ ಹರಿಯಾಣದ ಬಿಜೆಪಿ ನಾಯಕನ ಹತ್ಯೆ; ಸಿಸಿಟಿವಿ ವಿಡಿಯೋ ವೈರಲ್
ಅಮೃತಸರ ದೇವಾಲಯದ ಮೇಲಿನ ಗ್ರೆನೇಡ್ ದಾಳಿ ಸಿಸಿಟಿವಿಯಲ್ಲಿ ಸೆರೆ
ಅಮೃತಸರ ದೇವಾಲಯದ ಮೇಲಿನ ಗ್ರೆನೇಡ್ ದಾಳಿ ಸಿಸಿಟಿವಿಯಲ್ಲಿ ಸೆರೆ
ರಸ್ತೆಯಲ್ಲಿ ಮಹಿಳೆ, ಮಗುವಿನ ಮೇಲೆ ಬೀದಿ ಹಸು ಅಟ್ಯಾಕ್; ವಿಡಿಯೋ ಇಲ್ಲಿದೆ
ರಸ್ತೆಯಲ್ಲಿ ಮಹಿಳೆ, ಮಗುವಿನ ಮೇಲೆ ಬೀದಿ ಹಸು ಅಟ್ಯಾಕ್; ವಿಡಿಯೋ ಇಲ್ಲಿದೆ
ಯುವತಿಯರೊಂದಿಗೆ ಮಕ್ಕಳನ್ನು ಹೆಗಲ ಮೇಲೆ ಹೊತ್ತು ಕುಣಿದ ಗೃಹಿಣಿಯರು
ಯುವತಿಯರೊಂದಿಗೆ ಮಕ್ಕಳನ್ನು ಹೆಗಲ ಮೇಲೆ ಹೊತ್ತು ಕುಣಿದ ಗೃಹಿಣಿಯರು
ಕುಂಭಮೇಳ ಎಫೆಕ್ಟ್: ನಾಗಾಸಾಧು ವೇಷ ಹಾಕಿಕೊಂಡು ಹೋಳಿ ಆಚರಣೆ
ಕುಂಭಮೇಳ ಎಫೆಕ್ಟ್: ನಾಗಾಸಾಧು ವೇಷ ಹಾಕಿಕೊಂಡು ಹೋಳಿ ಆಚರಣೆ
ಸಾಯುವ ಮುನ್ನ ದಿವ್ಯಾ ಕುಮಾರ್ 4 ಬಾಲ್​ನಲ್ಲಿ 20 ರನ್ ಬಾರಿಸಿದ ವಿಡಿಯೋ
ಸಾಯುವ ಮುನ್ನ ದಿವ್ಯಾ ಕುಮಾರ್ 4 ಬಾಲ್​ನಲ್ಲಿ 20 ರನ್ ಬಾರಿಸಿದ ವಿಡಿಯೋ
ಮಾರ್ಚ್ 8ರಂದು ನಾನು ಮತ್ತು ಸಿಎಂ ಇಬ್ಬರೂ ಲಭ್ಯರಿರಲಿಲ್ಲ: ಶಿವಕುಮಾರ್
ಮಾರ್ಚ್ 8ರಂದು ನಾನು ಮತ್ತು ಸಿಎಂ ಇಬ್ಬರೂ ಲಭ್ಯರಿರಲಿಲ್ಲ: ಶಿವಕುಮಾರ್
ಬೆಂಗಳೂರಿನಲ್ಲಿ ಕಸ ವಿಲೇವಾರಿ ಸಮಸ್ಯೆ ಒಪ್ಪಿಕೊಂಡ ಬಿಬಿಎಂಪಿ ಕಮಿಷನರ್
ಬೆಂಗಳೂರಿನಲ್ಲಿ ಕಸ ವಿಲೇವಾರಿ ಸಮಸ್ಯೆ ಒಪ್ಪಿಕೊಂಡ ಬಿಬಿಎಂಪಿ ಕಮಿಷನರ್
ಹೋಳಿ ವೇಳೆ ಪೊಲೀಸ್ ಅಧಿಕಾರಿಗೆ ಡ್ಯಾನ್ಸ್ ಮಾಡಲು ತೇಜ್ ಪ್ರತಾಪ್ ಒತ್ತಾಯ
ಹೋಳಿ ವೇಳೆ ಪೊಲೀಸ್ ಅಧಿಕಾರಿಗೆ ಡ್ಯಾನ್ಸ್ ಮಾಡಲು ತೇಜ್ ಪ್ರತಾಪ್ ಒತ್ತಾಯ