ಸೆಲೆಬ್ರಿಟಿಗಳ ಹೆಸರನ್ನು ಬಳಕೆ ಮಾಡಿಕೊಂಡು ಸಾಕಷ್ಟು ಜನರು ಮೋಸ ಮಾಡೋಕೆ ಕಾಯುತ್ತಿರುತ್ತಾರೆ. ಈ ಮೊದಲು ಈ ರೀತಿಯ ಸಾಕಷ್ಟು ಘಟನೆಗಳು ನಡೆದಿವೆ. ಈಗ ನಟ ದರ್ಶನ್ ವಿಚಾರದಲ್ಲೂ ಅದೇ ರೀತಿ ಆಗಿದೆ. ನಿಮ್ಮ ಗೆಳೆಯರು 25 ಕೋಟಿ ಸಾಲಕ್ಕೆ ಅರ್ಜಿ ಹಾಕಿದ್ದು, ಶ್ಯೂರಿಟಿಯಲ್ಲಿ ನಿಮ್ಮ ಹೆಸರಿದೆ ಎಂದು ನಕಲಿ ಬ್ಯಾಂಕ್ ಸಿಬ್ಬಂದಿ ದರ್ಶನ್ ಬಳಿ ತೆರಳಿದ್ದರು. ಈಗ ಅವರನ್ನು ಬಂಧಿಸಲಾಗಿದೆ.
ನಕಲಿ ಬ್ಯಾಂಕ್ ಸಿಬ್ಬಂದಿ ಅರುಣಾ ಎನ್ನುವವರು ದರ್ಶನ್ ಬಳಿ ತೆರಳಿದ್ದರು. ನಿಮ್ಮ ಹೆಸರಿನಲ್ಲಿ ಲೋನ್ಗೆ ಸ್ನೇಹಿತರು ಅರ್ಜಿ ಹಾಕಿದ್ದಾರೆ ಎಂದು ಮಹಿಳೆ ಹೇಳಿದ್ದರು. ನಾನು ಬ್ಯಾಂಕ್ ಮ್ಯಾನೇಜರ್ ಎಂದೇ ಆಕೆ ಪರಿಚಯಿಸಿಕೊಂಡಿದ್ದರು. ‘ನಿಮ್ಮ ಸ್ನೇಹಿತರಿಂದ ನಿಮ್ಮ ಶ್ಯೂರಿಟಿಯಲ್ಲಿ ಸಾಲಕ್ಕೆ ಅರ್ಜಿ ಹಾಕಿದ್ದಾರೆ. ₹25 ಕೋಟಿ ಲೋನ್ಗೆ ಬೇಡಿಕೆ ಇಟ್ಟಿದ್ದಾರೆ’ ಎಂದು ಅರುಣಾ ಹೆಳಿದ್ದರು. ಈ ಬಗ್ಗೆ ಪರಿಶೀಲಿಸಿದಾಗ ಲೋನ್ಗೆ ಯಾರು ಅರ್ಜಿ ಸಲ್ಲಿಸಿಲ್ಲ ಎಂಬುದು ಗೊತ್ತಾಗಿದೆ.
ಎರಡು ದಿನದ ಹಿಂದೆ ನಟ ದರ್ಶನ್ ಸ್ನೇಹಿತರು ಈ ಬಗ್ಗೆ ಮೈಸೂರಿನ ಹೆಬ್ಬಾಳ ಠಾಣೆಗೆ ದೂರು ನೀಡಿದ್ದಾರೆ. ನಟ ದರ್ಶನ್ ಸ್ನೇಹಿತರ ದೂರನ್ನು ಆಧರಿಸಿ ಮಹಿಳೆ ವಶಕ್ಕೆ ಪಡೆಯಲಾಗಿದೆ.
ಸದ್ಯ ಮೈಸೂರಿನ ಎನ್ಆರ್ ಎಸಿಪಿ ಕಚೇರಿಗೆ ನಟ ದರ್ಶನ್ ಹಾಗೂ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡರನ್ನು ಪೊಲೀಸರು ಕರೆಸಿದ್ದಾರೆ. ಸದ್ಯ, ಇಬ್ಬರಿಂದ ಹೇಳಿಕೆ ಪಡೆಯಲಾಗುತ್ತಿದೆ.
ಇದನ್ನೂ ಓದಿ: Darshan: ಸಿನಿಮಾ ಥಿಯೇಟರ್ಗೆ ಭವಿಷ್ಯ ಇಲ್ಲವೇ?; ಉದಾಹರಣೆ ಸಹಿತ ವಿವರಿಸಿದ ದರ್ಶನ್
‘ದರ್ಶನ್ ಮತ್ತು ನಾನು ಬಾಲ್ಯದ ಸ್ನೇಹಿತರು. ಅವರು ಕನ್ನಡ ಚಿತ್ರರಂಗದ ಹೆಮ್ಮೆ’
Published On - 4:41 pm, Sun, 11 July 21