ನಟ ದುನಿಯಾ ವಿಜಯ್​ಗೆ ಸಿಕ್ಕಿಲ್ಲ ವಿಚ್ಛೇದನ; ಅರ್ಜಿ ವಜಾಗೊಳಿಸಿದ ಫ್ಯಾಮಿಲಿ ಕೋರ್ಟ್

ಸ್ಯಾಂಡಲ್​ವುಡ್​ ನಟ ದುನಿಯಾ ವಿಜಯ್​ ಹಾಗು ನಾಗರತ್ನ ಅವರ ಸಂಸಾರದ ಗಲಾಟೆ ಇಂದು-ನಿನ್ನೆಯದಲ್ಲ. ಕ್ರೌರ್ಯದ ಆಧಾರದಲ್ಲಿ ವಿಜಿ ಅವರು ಡಿವೋರ್ಸ್​ಗೆ ಕೋರಿದ್ದರು. ಆದರೆ ಪತ್ನಿಯ ಮೇಲಿನ ಆರೋಪಗಳನ್ನು ಸಾಬೀತು ಮಾಡಲು ಸಾಧ್ಯವಾಗದ ಕಾರಣದಿಂದ ದುನಿಯಾ ವಿಜಿ ಅವರ ಅರ್ಜಿಯನ್ನು ಕೋರ್ಟ್​ ವಜಾ ಮಾಡಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ...

ನಟ ದುನಿಯಾ ವಿಜಯ್​ಗೆ ಸಿಕ್ಕಿಲ್ಲ ವಿಚ್ಛೇದನ; ಅರ್ಜಿ ವಜಾಗೊಳಿಸಿದ ಫ್ಯಾಮಿಲಿ ಕೋರ್ಟ್
ದುನಿಯಾ ವಿಜಯ್​, ನಾಗರತ್ನ
Follow us
| Updated By: ಮದನ್​ ಕುಮಾರ್​

Updated on: Jun 13, 2024 | 4:05 PM

ಕನ್ನಡದ ಖ್ಯಾತ ನಟ ದುನಿಯಾ ವಿಜಯ್​ ಅವರು ಪತ್ನಿ ನಾಗರತ್ನ (Nagarathna) ಅವರಿಂದ ವಿಚ್ಛೇದನ ಬೇಕು ಎಂದು ಸಲ್ಲಿಸಿದ್ದ ಅರ್ಜಿ ವಜಾ ಆಗಿದೆ. ಬೆಂಗಳೂರಿನ ಶಾಂತಿನಗರದ ಫ್ಯಾಮಿಲಿ ಕೋರ್ಟ್​ನಲ್ಲಿ ದುನಿಯಾ ವಿಜಯ್​ ಅವರು ಅರ್ಜಿ ಸಲ್ಲಿಸಿದ್ದರು. ಕ್ರೌರ್ಯದ ಆಧಾರದಲ್ಲಿ ಅವರು ವಿಚ್ಛೇದನ (Duniya Vijay Divorce) ಕೋರಿದ್ದರು. ಆದರೆ ಪತ್ನಿ ನಾಗರತ್ನ ಮೇಲಿನ ಆರೋಪಗಳನ್ನು ಸಾಬೀತುಪಡಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ದುನಿಯಾ ವಿಜಿ (Duniya Vijay) ಅವರ ಅರ್ಜಿಯನ್ನು ವಜಾಗೊಳಿಸಿ ಫ್ಯಾಮಿಲಿ ಕೋರ್ಟ್ ಆದೇಶ ಹೊರಡಿಸಿದೆ.

ನಾಗರತ್ನ ಮತ್ತು ದುನಿಯಾ ವಿಜಯ್ ಅವರ ಸಂಸಾರದಲ್ಲಿ ಹಲವು ವರ್ಷಗಳ ಹಿಂದೆಯೇ ಬಿರುಕು ಮೂಡಿತ್ತು. ಆದ್ದರಿಂದ 2018ರಲ್ಲಿ ವಿಜಯ್ ಅವರು ಡಿವೋರ್ಸ್​ ಸಲುವಾಗಿ ಅರ್ಜಿ ಸಲ್ಲಿಸಿದ್ದರು. ಮಕ್ಕಳ ಜವಾಬ್ದಾರಿಯನ್ನು ತೆಗೆದುಕೊಳ್ಳಲು ಅವರು ಸಿದ್ಧರಿದ್ದಾರೆ. ಅಲ್ಲದೇ, ಪತ್ನಿಗೆ ಜೀವನಾಂಶ ನೀಡಲು ಕೂಡ ಅವರು ಒಪ್ಪಿದ್ದಾರೆ. ಆದರೆ, ಪ್ರತಿ ಬಾರಿ ಕೋರ್ಟ್​ನಲ್ಲಿ ವಿಚಾರಣೆ ನಡೆದಾಗ ನಾಗರತ್ನ ಅವರು ಪತಿಯನ್ನು ಬಿಡಲು ಒಪ್ಪಿಕೊಳ್ಳಲಿಲ್ಲ. ಆದ್ದರಿಂದ ಪ್ರಕರಣ ಈತನ ಮುಂದೂಡಿಕೊಂಡು ಬಂದಿತ್ತು.

ಇಂದು (ಜೂನ್​ 13) ದುನಿಯಾ ವಿಜಯ್​ ಮತ್ತು ನಾಗರತ್ನ ಅವರು ವಿಚ್ಛೇನದ ಅಂತಿಮ ತೀರ್ಪು ಹೊರಬರಲಿದೆ ಎಂಬ ಕಾರಣಕ್ಕೆ ಎಲ್ಲರಲ್ಲೂ ಕುತೂಹಲ ಮೂಡಿತ್ತು. ಕೌಟುಂಬಿಕ ನ್ಯಾಯಾಲಯವು ವಿಜಯ್​ಗೆ ವಿಚ್ಛೇನದ ನೀಡಿಲ್ಲ. ನಟನಾಗಿ, ನಿರ್ದೇಶಕನಾಗಿ ದುನಿಯಾ ವಿಜಯ್​ ಅವರು ಕನ್ನಡ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಟಾಲಿವುಡ್​ನಲ್ಲೂ ಅವರಿಗೆ ಬೇಡಿಕೆ ಇದೆ.

ಇದನ್ನೂ ಓದಿ: ಯುವ ರಾಜ್​ಕುಮಾರ್​ ವಿಚ್ಛೇದನದ ಬಗ್ಗೆ ಸಂಪೂರ್ಣ ವಿವರ ನೀಡಿದ ಶ್ರೀದೇವಿ ತಂದೆ ಭೈರಪ್ಪ

ಕನ್ನಡ ಚಿತ್ರರಂಗದಲ್ಲಿ ವಿಚ್ಛೇದನ ಸುದ್ದಿಗಳು ಹೆಚ್ಚು ಸದ್ದು ಮಾಡುತ್ತಿವೆ. ಪ್ರೀತಿಸಿ ಮದುವೆ ಆದ ನಿವೇದಿತಾ ಗೌಡ ಮತ್ತು ಚಂದನ್​ ಶೆಟ್ಟಿ ಅವರು ಇತ್ತೀಚೆಗೆ ಡಿವೋರ್ಸ್​ ಪಡೆದಿದ್ದು ಎಲ್ಲರಿಗೂ ಅಚ್ಚರಿ ಮೂಡಿಸಿತು. ಅದೇ ರೀತಿ, ಯುವ ರಾಜ್​ಕುಮಾರ್​ ಹಾಗೂ ಶ್ರೀದೇವಿ ಭೈರಪ್ಪ ಕೂಡ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಇದು ಡಾ. ರಾಜ್​ಕುಮಾರ್​ ಕುಟುಂಬದಲ್ಲಿ ಕೇಳಿಬಂದ ಮೊದಲ ಡಿವೋರ್ಸ್​ ಪ್ರಕರಣ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ