AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕನ್ನಡದ ಶಿವಮಣಿ’ ಡ್ರಮ್ಮರ್ ದೇವ ವಿಧಿವಶ: ಅನಾರೋಗ್ಯದಿಂದ ನಿಧನ

300ಕ್ಕೂ ಹೆಚ್ಚು ಹಾಡುಗಳಿಗೆ ಡ್ರಮ್ಸ್ ಬಾರಿಸಿದ್ದ ಡ್ರಮ್ಮರ್ ದೇವ ಅವರು ನಿಧನರಾಗಿದ್ದಾರೆ. ಅವರ ಅಗಲಿಕೆಯ ಕುರಿತು ಮಗಳು ರಿಶೋನಾ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ದೇವ ಅವರಿಗೆ 64 ವರ್ಷ ವಯಸ್ಸಾಗಿತ್ತು. ಅನಾರೋಗ್ಯದಿಂದ ಅವರು ಬಳಲುತ್ತಿದ್ದರು. ಕ್ರೈಸ್ತ ಪದ್ಧತಿಯಂತೆ ಬೆಂಗಳೂರಿನಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

‘ಕನ್ನಡದ ಶಿವಮಣಿ’ ಡ್ರಮ್ಮರ್ ದೇವ ವಿಧಿವಶ: ಅನಾರೋಗ್ಯದಿಂದ ನಿಧನ
Drummer DevaImage Credit source: instagram/drummerdeva_deva
ಮಾಲತೇಶ ಜಗ್ಗೀನ್
| Edited By: |

Updated on: Sep 27, 2026 | 7:02 AM

Share

ಬೆಂಗಳೂರು: ‘ಕನ್ನಡದ ಶಿವಮಣಿ’ ಎಂದೇ ಖ್ಯಾತಿ ಪಡೆದಿದ್ದ ಹಿರಿಯ ಹಾಗೂ ಪ್ರಸಿದ್ಧ ಡ್ರಮ್ಮರ್ ದೇವ ಅವರು ತೀವ್ರ ಅನಾರೋಗ್ಯದಿಂದ ಭಾನುವಾರ (ಸೆಪ್ಟೆಂಬರ್ 27) ನಿಧನರಾಗಿದ್ದಾರೆ. ಅವರಿಗೆ 64 ವರ್ಷ ವಯಸ್ಸಾಗಿತ್ತು. ಕಳೆದ ಮೂರೂವರೆ ವರ್ಷಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಇತ್ತೀಚೆಗೆ ಗ್ಯಾಂಗ್ರಿನ್ ಸಮಸ್ಯೆಗೆ ತುತ್ತಾಗಿ ತಮ್ಮ ಒಂದು ಕಾಲನ್ನು ಕಳೆದುಕೊಂಡಿದ್ದರು. ಆದಾಗ್ಯೂ, ಧೃತಿಗೆಡದೆ ಕೃತಕ ಕಾಲನ್ನು ಬಳಸಿಕೊಂಡು ಡ್ರಮ್ಸ್ ಬಾರಿಸುವುದನ್ನು ಮುಂದುವರಿಸಿದ್ದರು.

ಕಳೆದ ಒಂದು ತಿಂಗಳಿನಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಡ್ರಮ್ಮರ್ ದೇವ ಅವರು ಮನೆಗೆ ಮರಳಿದ್ದರು. ಆದರೆ, ಕಳೆದ ಎರಡು ದಿನಗಳಿಂದ ಆರೋಗ್ಯದಲ್ಲಿ ಏರುಪೇರು ಉಂಟಾಗಿ ಇಂದು (ಸೆ.27) ಕೊನೆಯುಸಿರೆಳೆದಿದ್ದಾರೆ.

300ಕ್ಕೂ ಹೆಚ್ಚು ಹಾಡುಗಳಿಗೆ ಡ್ರಮ್ಸ್ ಬಾರಿಸಿದ್ದ ದೇವ:

ಕನ್ನಡ ಚಿತ್ರರಂಗದ ಸ್ಟಾರ್ ನಟರಾದ ಡಾ. ರಾಜ್‌ಕುಮಾರ್, ಪುನೀತ್ ರಾಜ್‌ಕುಮಾರ್ ಸೇರಿದಂತೆ ಅನೇಕ ಹೀರೋಗಳ 300ಕ್ಕೂ ಹೆಚ್ಚು ಹಾಡುಗಳಿಗೆ ದೇವ ಅವರು ಡ್ರಮ್ಸ್ ಬಾರಿಸಿದ್ದಾರೆ. ಸಾಧುಕೋಕಿಲ, ಗುರುಕಿರಣ್ ಸೇರಿದಂತೆ ಕನ್ನಡದ ಹಲವು ಸಂಗೀತ ನಿರ್ದೇಶಕರೊಂದಿಗೆ ಕೆಲಸ ಮಾಡಿದ್ದರು. ‘5 ಈಡಿಯಟ್ಸ್’ ಹಾಗೂ ‘ಪ್ರೀತಿ ನೀ ಹಿಂಗ್ಯಾಕೆ’ ಸಿನಿಮಾಗಳಿಗೆ ಸಂಗೀತ ನಿರ್ದೇಶನವನ್ನೂ ಮಾಡಿದ್ದರು.

ಕೊನೆಗಳಿಗೆಯಲ್ಲೂ ಡ್ರಮ್ಸ್ ಪ್ರೀತಿ:

ತಂದೆಯ ಅಗಲಿಕೆಯ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ದೇವ ಅವರ ಮಗಳು ರಿಶೋನಾ, ‘ನನ್ನ ತಂದೆಗೆ ಡ್ರಮ್ಸ್ ಎಂದರೆ ಪ್ರಾಣವಾಗಿತ್ತು. ಆಸ್ಪತ್ರೆಯಲ್ಲಿದ್ದಾಗಲೂ ಬೆಡ್ ಮೇಲೆಯೇ ಡ್ರಮ್ಸ್ ನುಡಿಸುತ್ತಿದ್ದರು. ಕೈಗೆ ಸ್ಟಿಕ್ಸ್ ಕೊಡಿ ಎಂದು ಕೇಳುತ್ತಿದ್ದರು. ಕಳೆದ ಎರಡು ದಿನಗಳಿಂದ ಅವರ ಆರೋಗ್ಯ ತೀರಾ ಕ್ಷೀಣಿಸಿ ಇಂದು ನಮ್ಮನ್ನು ಅಗಲಿದ್ದಾರೆ’ ಎಂದು ಕಣ್ಣೀರಿಟ್ಟಿದ್ದಾರೆ.

ಇದನ್ನೂ ಓದಿ: ಹಿರಿಯ ನಟಿ ಸಾಹುಕಾರ್ ಜಾನಕಿ ನಿಧನ: 94ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ ಕಲಾವಿದೆ

ಕ್ರೈಸ್ತ ಪದ್ಧತಿಯಂತೆ ಅಂತ್ಯಕ್ರಿಯೆ:

ಡ್ರಮ್ಮರ್ ದೇವ ಅವರ ಅಂತ್ಯಕ್ರಿಯೆಯನ್ನು ಭಾನುವಾರ (ಸೆಪ್ಟೆಂಬರ್ 27) ಮಧ್ಯಾಹ್ನ 3 ಗಂಟೆಗೆ ಕ್ರೈಸ್ತ ಪದ್ಧತಿಯಂತೆ ನೆರವೇರಿಸಲಾಗುವುದು. ಅಂತ್ಯಕ್ರಿಯೆ ನಡೆಯುವ ಸ್ಥಳವನ್ನು ಕುಟುಂಬಸ್ಥರು ನಿರ್ಧರಿಸಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮಾಲತೇಶ ಜಗ್ಗೀನ್
ಮಾಲತೇಶ ಜಗ್ಗೀನ್

ಮಾಲತೇಶ ಜಗ್ಗೀನ್. Tv9 ಕನ್ನಡ ವಾಹಿನಿ ಫಿಲಂ ಬ್ಯೂರೋ ಮುಖ್ಯಸ್ಥನಾಗಿ ಕೆಲಸ ಮಾಡ್ತಿದ್ದಾರೆ. ಮಾಲತೇಶ ವಿಜಯನಗರ ಜಿಲ್ಲೆ ಹೂವಿನ ಹಡಗಲಿ ತಾಲ್ಲೂಕು ಹೊಳಲು ಗ್ರಾಮದವರು. ಕಳೆದ 15 ವರ್ಷಗಳಲ್ಲಿ ಮಾಧ್ಯಮ ಲೋಕದ ವಿವಿಧ ವಿಭಾಗಗಳಲ್ಲಿ ವರದಿಗಾರಿಕೆ ಮಾಡಿದ ಅನುಭವ ಇದೆ. ಸಿನಿಮಾ ವಿಭಾಗದ ಜೊತೆ ರಾಜಕೀಯ, ಮೆಟ್ರೋ, ಕ್ರೈಂ ವಿಭಾಗದಲ್ಲೂ ಕೆಲವು ಸನ್ನಿವೇಶಗಳಲ್ಲಿ ವರದಿಗಾರಿಕೆ ಮಾಡಿದ್ದಾರೆ. ಹಾವೇರಿಯ ಕೆಎಫ್ ಚಾನಲ್ , ನಂತರ ಬೆಂಗಳೂರಿನ ಸಮಯ ನ್ಯೂಸ್, ಜನಶ್ರಿ ನ್ಯೂಸ್, ಪಬ್ಲಿಕ್ ಟಿವಿ ಸೇರಿದಂತೆ ವಿವಿಧ ವಾಹಿನಿಗಳಲ್ಲಿ ಕೆಲಸ ಮಾಡಿದ ಅನುಭವ ಇದೆ. Tv9kannada ನ್ಯೂಸ್ ಚಾನಲ್ ನಲ್ಲಿ ಕಳೆದ 10 ವರ್ಷಗಳಿಂದ ಇದ್ದಾರೆ. ಕಲೆ, ಸಾಹಿತ್ಯ, ಸಿನಿಮಾ, ಕ್ರಿಡೆ ಆಸಕ್ತಿ ವಿಷಯಗಳು.

Read More
ಬಿಗ್‌ ಬಾಸ್‌ ಮನೆಯಲ್ಲಿ ಈ ವಾರ ಪ್ರಶಾಂತ್ ಹಾಗೂ ಗಾನವಿಗೆ ತರಾಟೆ
ಬಿಗ್‌ ಬಾಸ್‌ ಮನೆಯಲ್ಲಿ ಈ ವಾರ ಪ್ರಶಾಂತ್ ಹಾಗೂ ಗಾನವಿಗೆ ತರಾಟೆ
ವಿಡಿಯೋ ಇಟ್ಟುಕೊಂಡು ಎಲ್ಲರನ್ನೂ ಕೈಗೊಂಬೆ ಮಾಡಿಕೊಂಡಿರಬೇಕು: ಹೆಚ್​ಡಿಕೆ
ವಿಡಿಯೋ ಇಟ್ಟುಕೊಂಡು ಎಲ್ಲರನ್ನೂ ಕೈಗೊಂಬೆ ಮಾಡಿಕೊಂಡಿರಬೇಕು: ಹೆಚ್​ಡಿಕೆ
ಕಬ್ಬು ಬೆಳೆಗೆ ಎಂಎಸ್​ಪಿ ನಿಗದಿ ಬಗ್ಗೆ ರೈತರಿಗೆ ಗುಡ್​ನ್ಯೂಸ್ ಕೊಟ್ಟ ಜೋಶಿ
ಕಬ್ಬು ಬೆಳೆಗೆ ಎಂಎಸ್​ಪಿ ನಿಗದಿ ಬಗ್ಗೆ ರೈತರಿಗೆ ಗುಡ್​ನ್ಯೂಸ್ ಕೊಟ್ಟ ಜೋಶಿ
ಮೋದಿ ಸರ್ಕಾರ ರೈತರ ಪರ, ಎಥೆನಾಲ್ ಖರೀದಿಯಲ್ಲಿ ಹೊಸ ದಾಖಲೆ: ಪ್ರಲ್ಹಾದ್ ಜೋಶಿ
ಮೋದಿ ಸರ್ಕಾರ ರೈತರ ಪರ, ಎಥೆನಾಲ್ ಖರೀದಿಯಲ್ಲಿ ಹೊಸ ದಾಖಲೆ: ಪ್ರಲ್ಹಾದ್ ಜೋಶಿ
ದಸರಾ, ದೀಪಾವಳಿ ಹಿನ್ನೆಲೆ: ಸ್ವೀಟ್ ಶಾಪ್‌ಗಳ ಮೇಲೆ ದಾಳಿ ಮುಂದುವರಿಕೆ
ದಸರಾ, ದೀಪಾವಳಿ ಹಿನ್ನೆಲೆ: ಸ್ವೀಟ್ ಶಾಪ್‌ಗಳ ಮೇಲೆ ದಾಳಿ ಮುಂದುವರಿಕೆ
ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಮಾಲಾ ವೇಷಧಾರಿಗಳಿಂದ 'ಹೈಟೆಕ್ ಭಿಕ್ಷಾಟನೆ'!
ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಮಾಲಾ ವೇಷಧಾರಿಗಳಿಂದ 'ಹೈಟೆಕ್ ಭಿಕ್ಷಾಟನೆ'!
ಭಾರತಕ್ಕೆ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಭೇಟಿ
ಭಾರತಕ್ಕೆ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಭೇಟಿ
ಪಾರಂಪರಿಕ ಟಾಂಗಾ ಸವಾರಿ:ದಸರಾ ಮಹೋತ್ಸವದಲ್ಲಿ ಇತಿಹಾಸದ ಅನಾವರಣ
ಪಾರಂಪರಿಕ ಟಾಂಗಾ ಸವಾರಿ:ದಸರಾ ಮಹೋತ್ಸವದಲ್ಲಿ ಇತಿಹಾಸದ ಅನಾವರಣ
ಬೆಂಗಳೂರಲ್ಲಿ ಆಟೋ ಚಾಲಕನ ರೌಡಿಸಂ! ಫಿಲ್ಮಿ ಸ್ಟೈಲ್‌ನಲ್ಲಿ ಕಾರು ಚೇಸ್
ಬೆಂಗಳೂರಲ್ಲಿ ಆಟೋ ಚಾಲಕನ ರೌಡಿಸಂ! ಫಿಲ್ಮಿ ಸ್ಟೈಲ್‌ನಲ್ಲಿ ಕಾರು ಚೇಸ್
ಆರು ಜನರ ಮೇಲೆ ಎಲಿಮಿನೇಷನ್ ತೂಗುಗತ್ತಿ; ಹೋಗೋದು ಯಾರು?
ಆರು ಜನರ ಮೇಲೆ ಎಲಿಮಿನೇಷನ್ ತೂಗುಗತ್ತಿ; ಹೋಗೋದು ಯಾರು?