AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಧಿಕಾ ಜೊತೆ ಮುಂಬೈನಲ್ಲಿ ಯಶ್ ಸುತ್ತಾಟ; ಕಾಲಿಗೆ ಬಿದ್ದ ಅಭಿಮಾನಿ

ಯಶ್ ಅವರು ‘ಟಾಕ್ಸಿಕ್’ ಚಿತ್ರದ ಶೂಟಿಂಗ್​ನಲ್ಲಿ ಬ್ಯುಸಿ ಇದ್ದಾರೆ. ಅವರು ರಾಧಿಕಾ ಪಂಡಿತ್ ಮತ್ತು ಮಕ್ಕಳೊಂದಿಗೆ ಸಮಯ ಕಳೆಯುತ್ತಿದ್ದಾರೆ. ಮುಂಬೈನಲ್ಲಿ ಅವರಿಗೆ ಅಭಿಮಾನಿಗಳು ಎದುರಾಗುತ್ತಿದ್ದಾರೆ. 'ರಾಮಾಯಣ' ಚಿತ್ರದಲ್ಲಿಯೂ ಅವರು ನಟಿಸಲಿದ್ದಾರೆ ಎಂದು ತಿಳಿದುಬಂದಿದೆ.

ರಾಧಿಕಾ ಜೊತೆ ಮುಂಬೈನಲ್ಲಿ ಯಶ್ ಸುತ್ತಾಟ; ಕಾಲಿಗೆ ಬಿದ್ದ ಅಭಿಮಾನಿ
ಯಶ್
ರಾಜೇಶ್ ಹೆಗಡೆ ದುಗ್ಗುಮನೆ
|

Updated on: Nov 26, 2024 | 9:00 AM

Share

ಯಶ್ ಅವರು ‘ಕೆಜಿಎಫ್ ಚಾಪ್ಟರ್ 2’ ಬಳಿಕ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಹೆಸರು ಮಾಡಿದ್ದಾರೆ. ಅವರ ಖ್ಯಾತಿ ದಿನ ಕಳೆದಂತೆ ಹೆಚ್ಚುತ್ತಲೇ ಇದೆ. ಅವರು ಸದ್ಯ ‘ಟಾಕ್ಸಿಕ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರಕ್ಕಾಗಿ ಅವರು ಮುಂಬೈನಲ್ಲಿದ್ದಾರೆ. ಹೌದು, ‘ಟಾಕ್ಸಿಕ್’ ಸಿನಿಮಾದ ಶೂಟಿಂಗ್ ಮುಂಬೈನ ಸ್ಟುಡಿಯೋಗಳಲ್ಲಿ ನಡೆಯುತ್ತಿದೆ. ಇದಕ್ಕಾಗಿ ಯಶ್ ಮುಂಬೈನಲ್ಲಿ ಉಳಿದುಕೊಂಡಿದ್ದಾರೆ. ರಾಧಿಕಾ ಜೊತೆ ಅವರು ಸುತ್ತಾಟ ನಡೆಸುತ್ತಿದ್ದಾರೆ.

ಯಶ್ ಅವರು ಮುಂಬೈನಲ್ಲಿ ರಾಧಿಕಾ ಪಂಡಿತ್ ಹಾಗೂ ಯಥರ್ವ್​, ಆಯ್ರಾ ಜೊತೆ ಸುತ್ತಾಡಿದ್ದಾರೆ. ಈ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಮುಂಬೈನಲ್ಲಿರೋ ಬಾಲಿವುಡ್ ಪಾಪರಾಜಿಗಳು ಯಶ್ ಅವರು ಸುತ್ತಾಡುತ್ತಿರುವ ವಿಡಿಯೋಗಳನ್ನು ಸೆರೆಹಿಡಿದು ಹಂಚಿಕೊಂಡಿದ್ದಾರೆ.

ಯಶ್ ಅವರಿಗೆ ಕರ್ನಾಟಕ ಮಾತ್ರವಲ್ಲ ಮುಂಬೈನಲ್ಲೂ ಫ್ಯಾನ್ಸ್ ಇದ್ದಾರೆ. ಅವರು ನಡೆದು ಬರುವಾಗ ಓರ್ವ ಅಭಿಮಾನಿ ಕಾಲಿಗೆ ಬಿದ್ದಿದ್ದಾನೆ. ಆದರೆ, ಇದಕ್ಕೆ ಯಶ್ ಅವಕಾಶ ನೀಡಲಿಲ್ಲ. ಅವರು ಕಾಲಿಗೆ ಬೀಳೋದು ಬೇಡ ಎಂದು ಕೈ ಸನ್ನೆ ಮೂಲಕ ತೋರಿಸಿದ್ದಾರೆ. ಪುಟ್ಟ ಮಗುವೊಂದು ಯಶ್ ಎದುರು ನಿಂತಿತ್ತು. ಆಗ ಅವರು ಖುಷಿಯಿಂದ ಪೋಸ್ ಕೊಟ್ಟಿದ್ದಾರೆ.

ಯಶ್ ಅವರು ‘ಟಾಕ್ಸಿಕ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಮಲಯಾಳಂ ನಿರ್ದೇಶಕಿ ಗೀತು ಮೋಹನ್​ದಾಸ್ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ. ಬೆಂಗಳೂರಲ್ಲಿ ಈ ಚಿತ್ರದ ಶೂಟಿಂಗ್ ನಡೆದಿತ್ತು. ಆ ಬಳಿಕ ಇಡೀ ತಂಡ ಮುಂಬೈಗೆ ಶಿಫ್ಟ್ ಆಗಿದೆ. ಈ ಕಾರಣದಿಂದಲೇ ಯಶ್ ಅವರು ಕುಟುಂಬದ ಜೊತೆ ಮುಂಬೈನಲ್ಲಿ ಸಮಯ ಕಳೆಯುತ್ತಿದ್ದಾರೆ.

ಇದನ್ನೂ ಓದಿ: ಬಿಗ್ ಬಾಸ್ ಮನೆಯಲ್ಲಿ ಬೆಳಿಗ್ಗೆ ಯಶ್ ಸಿನಿಮಾ ಹಾಡು; ಇದಕ್ಕಿದೆ ವಿಶೇಷ ಕಾರಣ

ಬಾಲಿವುಡ್​ನಲ್ಲಿ ಪಾಪರಾಜಿ ಸಂಸ್ಕೃತಿ ಬಹುವಾಗಿ ಬೆಳೆದಿದೆ. ಯಾವುದೇ ಸೆಲೆಬ್ರಿಟಿಗಳು ಸಾರ್ವಜನಿಕವಾಗಿ ಕಾಣಿಸಿಕೊಂಡರೆ ಪಾಪರಾಜಿಗಳು ಮುತ್ತಿಕೊಳ್ಳುತ್ತಾರೆ. ಕೆಲವರು ಇದಕ್ಕೆ ಬೆಲೆ ಕೊಟ್ಟರೆ ಇನ್ನೂ ಕೆಲವರು ಇದನ್ನು ಗೌರವಿಸೋದಿಲ್ಲ. ಸದ್ಯ ಯಶ್ ಅವರು ‘ಟಾಕ್ಸಿಕ್’ ಶೂಟ್​ಗಾಗಿ ಮುಂಬೈನಲ್ಲಿದ್ದು, ಅಲ್ಲಿನ ರೀತಿ ರಿವಾಜುಗಳನ್ನು ನಿಧಾನವಾಗಿ ಅರ್ಥ ಮಾಡಿಕೊಳ್ಳುತ್ತಿದ್ದಾರೆ. ಅವರು ‘ರಾಮಾಯಣ’ ಸಿನಿಮಾದ ಶೂಟ್​ನಲ್ಲೂ ಭಾಗಿ ಆಗಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ಹೆಗಡೆ ದುಗ್ಗುಮನೆ
ರಾಜೇಶ್ ಹೆಗಡೆ ದುಗ್ಗುಮನೆ

ರಾಜೇಶ್ ಹೆಗಡೆ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ