AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅತ್ತಿಗೆ.. Yash19 ಅಪ್​ಡೇಟ್ ಕೊಡಿ, ಇಲ್ದಿದ್ರೆ ಧರಣಿ ಕೂರ್ತಿವಿ’; ರಾಧಿಕಾ ಪಂಡಿತ್​ಗೆ ನೇರವಾಗಿ ಹೇಳಿದ ಫ್ಯಾನ್ಸ್​

Radhika Pandit: ‘ಕೆಜಿಎಫ್ 2’ ಸಿನಿಮಾ ತೆರೆಗೆ ಬರುತ್ತಿದ್ದಂತೆ ಯಶ್ ಮುಂದಿನ ಸಿನಿಮಾ ಬಗ್ಗೆ ಕುತೂಹಲ ಹೆಚ್ಚಿತು. ಅವರು ಯಾವ ಪ್ರಾಜೆಕ್ಟ್​ ಒಪ್ಪಿಕೊಳ್ಳುತ್ತಾರೆ ಎನ್ನುವ ಕುತೂಹಲ ಇದ್ದೇ ಇತ್ತು. ಆದರೆ, ಇದಕ್ಕೆ ಈವರೆಗೆ ಉತ್ತರ ಸಿಕ್ಕಿಲ್ಲ.

‘ಅತ್ತಿಗೆ.. Yash19 ಅಪ್​ಡೇಟ್ ಕೊಡಿ, ಇಲ್ದಿದ್ರೆ ಧರಣಿ ಕೂರ್ತಿವಿ’; ರಾಧಿಕಾ ಪಂಡಿತ್​ಗೆ ನೇರವಾಗಿ ಹೇಳಿದ ಫ್ಯಾನ್ಸ್​
ಯಶ್- ರಾಧಿಕಾ ಪಂಡಿತ್
ರಾಜೇಶ್ ದುಗ್ಗುಮನೆ
|

Updated on:Apr 01, 2023 | 7:47 AM

Share

ಇನ್ನು ಎರಡು ವಾರ ಕಳೆದರೆ ನಟ ಯಶ್ ನಟನೆಯ ‘ಕೆಜಿಎಫ್ 2’ (KGF 2) ಸಿನಿಮಾ ತೆರೆಗೆ ಬಂದು ಬರೋಬ್ಬರಿ ಒಂದು ವರ್ಷ ಆಗಲಿದೆ. ಈ ಸಿನಿಮಾ ಮಾಡಿರುವ ದಾಖಲೆಗಳು ಒಂದೆರಡಲ್ಲ. ಒಂದು ವರ್ಷ ಕಳೆದರೂ ಈವರೆಗೆ ಯಶ್ 19ನೇ ಸಿನಿಮಾ ಯಾವುದು ಎನ್ನುವ ಬಗ್ಗೆ ಘೋಷಣೆ ಆಗಿಲ್ಲ. ಅಭಿಮಾನಿಗಳು ಕೂಡ ಕಾದು ಕಾದು ಸುಸ್ತಾಗಿದ್ದಾರೆ. ಈ ವಿಚಾರದಲ್ಲಿ ಅವರಿಗೆ ಬೇಸರ ಇದೆ. ಈ ಕಾರಣಕ್ಕೆ ರಾಧಿಕಾ ಪಂಡಿತ್ (Radhika Pandit) ಅವರ ಹಿಂದೆ ಬಿದ್ದಿದ್ದಾರೆ. ‘Yash19’ ಬಗ್ಗೆ ಅಪ್​ಡೇಟ್ ನೀಡುವಂತೆ ಕೇಳುತ್ತಿದ್ದಾರೆ.

‘ಕೆಜಿಎಫ್ 2’ ಸಿನಿಮಾ ತೆರೆಗೆ ಬಂದಿದ್ದು ಏಪ್ರಿಲ್ 14ರಂದು. ಈ ಸಿನಿಮಾ ಸೂಪರ್ ಹಿಟ್ ಆಯಿತು. ವಿಶ್ವ ಬಾಕ್ಸ್ ಆಫೀಸ್​ನಲ್ಲಿ 1200+ ಕೋಟಿ ರೂಪಾಯಿ ಗಳಿಕೆ ಮಾಡಿದ್ದು ಚಿತ್ರದ ಹೆಚ್ಚುಗಾರಿಕೆ. ಈ ಸಿನಿಮಾ ತೆರೆಗೆ ಬರುತ್ತಿದ್ದಂತೆ ಯಶ್ ಮುಂದಿನ ಸಿನಿಮಾ ಬಗ್ಗೆ ಕುತೂಹಲ ಹೆಚ್ಚಿತು. ಅವರು ಯಾವ ಪ್ರಾಜೆಕ್ಟ್​ ಒಪ್ಪಿಕೊಳ್ಳುತ್ತಾರೆ ಎನ್ನುವ ಕುತೂಹಲ ಇದ್ದೇ ಇತ್ತು. ಆದರೆ, ಇದಕ್ಕೆ ಈವರೆಗೆ ಉತ್ತರ ಸಿಕ್ಕಿಲ್ಲ. ಅಭಿಮಾನಿಗಳು ಕೂಡ ಕಾದು ಕಾದು ಸುಸ್ತಾಗಿದ್ದಾರೆ. ಹೀಗಾಗಿ, ರಾಧಿಕಾ ಅವರನ್ನು ಈ ಬಗ್ಗೆ ಕೇಳಲಾಗುತ್ತಿದೆ.

ಇತ್ತೀಚೆಗೆ ರಾಧಿಕಾ ಪಂಡಿತ್ ಅವರು ಕೆಲ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಬರ್ತ್​ಡೇ ಸಂದರ್ಭದಲ್ಲಿ ತೆಗೆದ ಫೋಟೋ ಇದು ಎನ್ನಲಾಗಿದೆ. ಈ ಫೋಟೋಗಳನ್ನು ಫ್ಯಾನ್ಸ್ ಲೈಕ್ಸ್ ಮಾಡಿದ್ದಾರೆ. ಈ ಫೋಟೋಗೆ ಕಮೆಂಟ್ ಮಾಡಿರುವ ಅನೇಕರು ಯಶ್ ಸಿನಿಮಾ ಬಗ್ಗೆ ಮಾಹಿತಿ ಕೇಳಿದ್ದಾರೆ. ಕೊಡದೇ ಇದ್ದರೆ ಪ್ರತಿಭಟನೆ ಮಾಡುವ ಎಚ್ಚರಿಕೆ ನೀಡಿದ್ದಾರೆ! ‘ಅತ್ತಿಗೆ.. ಯಶ್19ನೇ ಸಿನಿಮಾ ಬಗ್ಗೆ ಅಪ್​ಡೇಟ್ ಕೊಡಿ. ಇಲ್ಲದಿದ್ದರೆ ಧರಣಿ ಕೂರ್ತ್ತೀವಿ’ ಎಂದು ಅಭಿಮಾನಿಯೋರ್ವ ಕಮೆಂಟ್ ಮಾಡಿದ್ದಾನೆ.

ಇದನ್ನೂ ಓದಿ: Ugadi 2023: ಯಶ್​-ರಾಧಿಕಾ ಪಂಡಿತ್​ ಮನೆಯಲ್ಲಿ ಯುಗಾದಿ ಸಂಭ್ರಮ; ಅಭಿಮಾನಿಗಳಿಗೆ ಪ್ರೀತಿಯ ಶುಭಾಶಯ

ಇನ್ನೂ ಕೆಲವರು ರಾಧಿಕಾ ಪಂಡಿತ್​ ಬಳಿ ಸಿನಿಮಾ ಮಾಡುವಂತೆ ಕೋರಿದ್ದಾರೆ. ರಾಧಿಕಾ ಸದ್ಯ ಕುಟುಂಬದ ಕಡೆ ಗಮನ ನೀಡುತ್ತಿದ್ದಾರೆ. ನಟನೆಯಿಂದ ದೂರವೇ ಇದ್ದಾರೆ. ಇದು ಅವರ ಅಭಿಮಾನಿಗಳಿಗೆ ಬೇಸರ ಮೂಡಿಸಿದೆ. ಅವರು ನಟನೆಗೆ ಕಂಬ್ಯಾಕ್ ಮಾಡಲಿ ಅನ್ನೋದು ಅಭಿಮಾನಿಗಳ ಆಸೆ. ಇದು ಯಾವಾಗ ಈಡೇರುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ: Radhika Pandit: ಯಶ್ ಗಡ್ಡದಿಂದ ರಾಧಿಕಾ ಪಂಡಿತ್​ಗೆ ಎಷ್ಟು ಸಮಸ್ಯೆ ಆಗ್ತಿದೆ? ಉತ್ತರಿಸಿದ ನಟಿ

ಯಶ್ ಅವರು ನರ್ತನ್ ಜೊತೆ ಸಿನಿಮಾ ಮಾಡಲಿದ್ದಾರೆ ಎನ್ನಲಾಗಿತ್ತು. ಆದರೆ, ಅದು ನಿಜವಾಗಿಲ್ಲ. ಬಳಿಕ ಶಂಕರ್ ಜೊತೆ ಸಿನಿಮಾ ಮಾಡುತ್ತಾರೆ ಎನ್ನುವ ಮಾತು ಕೇಳಿ ಬಂದವು. ಅದರ ಬಗ್ಗೆಯೂ ಯಾವುದೇ ಅಪ್​ಡೇಟ್ ಇಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:17 am, Sat, 1 April 23

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ