
ಇನ್ನು ಎರಡು ವಾರ ಕಳೆದರೆ ನಟ ಯಶ್ ನಟನೆಯ ‘ಕೆಜಿಎಫ್ 2’ (KGF 2) ಸಿನಿಮಾ ತೆರೆಗೆ ಬಂದು ಬರೋಬ್ಬರಿ ಒಂದು ವರ್ಷ ಆಗಲಿದೆ. ಈ ಸಿನಿಮಾ ಮಾಡಿರುವ ದಾಖಲೆಗಳು ಒಂದೆರಡಲ್ಲ. ಒಂದು ವರ್ಷ ಕಳೆದರೂ ಈವರೆಗೆ ಯಶ್ 19ನೇ ಸಿನಿಮಾ ಯಾವುದು ಎನ್ನುವ ಬಗ್ಗೆ ಘೋಷಣೆ ಆಗಿಲ್ಲ. ಅಭಿಮಾನಿಗಳು ಕೂಡ ಕಾದು ಕಾದು ಸುಸ್ತಾಗಿದ್ದಾರೆ. ಈ ವಿಚಾರದಲ್ಲಿ ಅವರಿಗೆ ಬೇಸರ ಇದೆ. ಈ ಕಾರಣಕ್ಕೆ ರಾಧಿಕಾ ಪಂಡಿತ್ (Radhika Pandit) ಅವರ ಹಿಂದೆ ಬಿದ್ದಿದ್ದಾರೆ. ‘Yash19’ ಬಗ್ಗೆ ಅಪ್ಡೇಟ್ ನೀಡುವಂತೆ ಕೇಳುತ್ತಿದ್ದಾರೆ.
‘ಕೆಜಿಎಫ್ 2’ ಸಿನಿಮಾ ತೆರೆಗೆ ಬಂದಿದ್ದು ಏಪ್ರಿಲ್ 14ರಂದು. ಈ ಸಿನಿಮಾ ಸೂಪರ್ ಹಿಟ್ ಆಯಿತು. ವಿಶ್ವ ಬಾಕ್ಸ್ ಆಫೀಸ್ನಲ್ಲಿ 1200+ ಕೋಟಿ ರೂಪಾಯಿ ಗಳಿಕೆ ಮಾಡಿದ್ದು ಚಿತ್ರದ ಹೆಚ್ಚುಗಾರಿಕೆ. ಈ ಸಿನಿಮಾ ತೆರೆಗೆ ಬರುತ್ತಿದ್ದಂತೆ ಯಶ್ ಮುಂದಿನ ಸಿನಿಮಾ ಬಗ್ಗೆ ಕುತೂಹಲ ಹೆಚ್ಚಿತು. ಅವರು ಯಾವ ಪ್ರಾಜೆಕ್ಟ್ ಒಪ್ಪಿಕೊಳ್ಳುತ್ತಾರೆ ಎನ್ನುವ ಕುತೂಹಲ ಇದ್ದೇ ಇತ್ತು. ಆದರೆ, ಇದಕ್ಕೆ ಈವರೆಗೆ ಉತ್ತರ ಸಿಕ್ಕಿಲ್ಲ. ಅಭಿಮಾನಿಗಳು ಕೂಡ ಕಾದು ಕಾದು ಸುಸ್ತಾಗಿದ್ದಾರೆ. ಹೀಗಾಗಿ, ರಾಧಿಕಾ ಅವರನ್ನು ಈ ಬಗ್ಗೆ ಕೇಳಲಾಗುತ್ತಿದೆ.
ಇತ್ತೀಚೆಗೆ ರಾಧಿಕಾ ಪಂಡಿತ್ ಅವರು ಕೆಲ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಬರ್ತ್ಡೇ ಸಂದರ್ಭದಲ್ಲಿ ತೆಗೆದ ಫೋಟೋ ಇದು ಎನ್ನಲಾಗಿದೆ. ಈ ಫೋಟೋಗಳನ್ನು ಫ್ಯಾನ್ಸ್ ಲೈಕ್ಸ್ ಮಾಡಿದ್ದಾರೆ. ಈ ಫೋಟೋಗೆ ಕಮೆಂಟ್ ಮಾಡಿರುವ ಅನೇಕರು ಯಶ್ ಸಿನಿಮಾ ಬಗ್ಗೆ ಮಾಹಿತಿ ಕೇಳಿದ್ದಾರೆ. ಕೊಡದೇ ಇದ್ದರೆ ಪ್ರತಿಭಟನೆ ಮಾಡುವ ಎಚ್ಚರಿಕೆ ನೀಡಿದ್ದಾರೆ! ‘ಅತ್ತಿಗೆ.. ಯಶ್19ನೇ ಸಿನಿಮಾ ಬಗ್ಗೆ ಅಪ್ಡೇಟ್ ಕೊಡಿ. ಇಲ್ಲದಿದ್ದರೆ ಧರಣಿ ಕೂರ್ತ್ತೀವಿ’ ಎಂದು ಅಭಿಮಾನಿಯೋರ್ವ ಕಮೆಂಟ್ ಮಾಡಿದ್ದಾನೆ.
ಇದನ್ನೂ ಓದಿ: Ugadi 2023: ಯಶ್-ರಾಧಿಕಾ ಪಂಡಿತ್ ಮನೆಯಲ್ಲಿ ಯುಗಾದಿ ಸಂಭ್ರಮ; ಅಭಿಮಾನಿಗಳಿಗೆ ಪ್ರೀತಿಯ ಶುಭಾಶಯ
ಇನ್ನೂ ಕೆಲವರು ರಾಧಿಕಾ ಪಂಡಿತ್ ಬಳಿ ಸಿನಿಮಾ ಮಾಡುವಂತೆ ಕೋರಿದ್ದಾರೆ. ರಾಧಿಕಾ ಸದ್ಯ ಕುಟುಂಬದ ಕಡೆ ಗಮನ ನೀಡುತ್ತಿದ್ದಾರೆ. ನಟನೆಯಿಂದ ದೂರವೇ ಇದ್ದಾರೆ. ಇದು ಅವರ ಅಭಿಮಾನಿಗಳಿಗೆ ಬೇಸರ ಮೂಡಿಸಿದೆ. ಅವರು ನಟನೆಗೆ ಕಂಬ್ಯಾಕ್ ಮಾಡಲಿ ಅನ್ನೋದು ಅಭಿಮಾನಿಗಳ ಆಸೆ. ಇದು ಯಾವಾಗ ಈಡೇರುತ್ತದೆ ಎಂಬುದನ್ನು ಕಾದು ನೋಡಬೇಕಿದೆ.
ಇದನ್ನೂ ಓದಿ: Radhika Pandit: ಯಶ್ ಗಡ್ಡದಿಂದ ರಾಧಿಕಾ ಪಂಡಿತ್ಗೆ ಎಷ್ಟು ಸಮಸ್ಯೆ ಆಗ್ತಿದೆ? ಉತ್ತರಿಸಿದ ನಟಿ
ಯಶ್ ಅವರು ನರ್ತನ್ ಜೊತೆ ಸಿನಿಮಾ ಮಾಡಲಿದ್ದಾರೆ ಎನ್ನಲಾಗಿತ್ತು. ಆದರೆ, ಅದು ನಿಜವಾಗಿಲ್ಲ. ಬಳಿಕ ಶಂಕರ್ ಜೊತೆ ಸಿನಿಮಾ ಮಾಡುತ್ತಾರೆ ಎನ್ನುವ ಮಾತು ಕೇಳಿ ಬಂದವು. ಅದರ ಬಗ್ಗೆಯೂ ಯಾವುದೇ ಅಪ್ಡೇಟ್ ಇಲ್ಲ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 7:17 am, Sat, 1 April 23