ಸುದೀಪ್ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಂದ ಭರ್ಜರಿ ಗಿಫ್ಟ್, ವಿಶೇಷ ಪೋಸ್ಟರ್ ಬಿಡುಗಡೆ ಮಾಡಿದ ಅನಿಲ್ ಕುಂಬ್ಳೆ; ಇಂಪ್ರೆಸ್ ಆದ ಕಿಚ್ಚ

Kichcha Sudeep: ಸ್ಯಾಂಡಲ್​ವುಡ್ ಸ್ಟಾರ್ ನಟ ಕಿಚ್ಚ ಸುದೀಪ್ ಸೆಪ್ಟೆಂಬರ್ 2ರಂದು ಜನ್ಮದಿನ ಆಚರಿಸಿಕೊಳ್ಳುತ್ತಿದ್ದಾರೆ. ಅದಕ್ಕೆ ಈಗಿನಿಂದಲೇ ಭರ್ಜರಿ ಸಿದ್ಧತೆ ಆರಂಭಿಸಿರುವ ಫ್ಯಾನ್ಸ್, ಹೊಸ ಚಿತ್ರವೊಂದನ್ನು ವಿನ್ಯಾಸಗೊಳಿಸಿದ್ದು, ಅನಿಲ್ ಕುಂಬ್ಳೆ ಕೈಯಿಂದ ಬಿಡುಗಡೆ ಮಾಡಿಸಿದ್ದಾರೆ.

ಸುದೀಪ್ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಂದ ಭರ್ಜರಿ ಗಿಫ್ಟ್, ವಿಶೇಷ ಪೋಸ್ಟರ್ ಬಿಡುಗಡೆ ಮಾಡಿದ ಅನಿಲ್ ಕುಂಬ್ಳೆ; ಇಂಪ್ರೆಸ್ ಆದ ಕಿಚ್ಚ
ಸುದೀಪ್
Follow us
TV9 Web
| Updated By: shivaprasad.hs

Updated on: Aug 22, 2021 | 5:05 PM

ಚಂದನವನದಲ್ಲಿ ತಮ್ಮ ನೆಚ್ಚಿನ ತಾರೆಯರ ಹುಟ್ಟುಹಬ್ಬಕ್ಕೆ ಅಭಿಮಾನಿಗಳು ನಾನಾವಿಧದಿಂದ ಸಂಭ್ರಮವನ್ನು ಆಚರಿಸುತ್ತಾರೆ. ನಟ ಕಿಚ್ಚ ಸುದೀಪ್ ಅವರು ಸೆಪ್ಟೆಂಬರ್ 2ರಂದು ಜನ್ಮದಿನವನ್ನು ಆಚರಿಸಿಕೊಳ್ಳುತ್ತಿದ್ದು, ಅದಕ್ಕಾಗಿ ಫ್ಯಾನ್ಸ್ ಈಗಿನಿಂದಲೇ ತಯಾರಿ ಆರಂಭಿಸಿದ್ದಾರೆ. ತಮ್ಮ ನೆಚ್ಚಿನ ಸುಂದರ ಚಿತ್ರವನ್ನು ವಿನ್ಯಾಸಗೊಳಿಸಿರುವ ಅವರು, ಅದನ್ನು ಖ್ಯಾತ ಕ್ರಿಕೆಟಿಗ, ಸುದೀಪ್ ಸ್ನೇಹಿತ ಅನಿಲ್ ಕುಂಬ್ಳೆಯವರ ಕೈಯಿಂದ ಬಿಡುಗಡೆಯನ್ನೂ ಮಾಡಿಸಿದ್ದಾರೆ. ಚಿತ್ರವನ್ನು ಸುದೀಪ್ ದೊಡ್ಡ ಮೈದಾನವೊಂದರಲ್ಲಿ ನಿಂತು ತನ್ನ ಅಭಿಮಾನಿಗಳನ್ನು ಮಾತನಾಡಿಸುತ್ತಿರುವ ಅಭೂತಪೂರ್ವ ಪರಿಕಲ್ಪನೆಯಲ್ಲಿ ರೂಪಿಸಲಾಗಿದ್ದು, ಅಭಿಮಾನಿಗಳು ಸಂತಸದಿಂದ ಹಂಚಿಕೊಳ್ಳುತ್ತಿದ್ದಾರೆ. ಈ ಮೂಲಕ ಸುದೀಪ್ ಜನ್ಮದಿನದ ಸಂಭ್ರಮದ ಕಾರ್ಯಕ್ರಮಗಳಿಗೆ ದೊಡ್ಡ ಮಟ್ಟದಲ್ಲಿಯೇ ಚಾಲನೆ ನೀಡಿದಂತಾಗಿದೆ.

ಸ್ನೇಹಿತ, ನಟ ಕಿಚ್ಚ ಸುದೀಪ್ ಅವರ ಹುಟ್ಟುಹಬ್ಬದ ಪ್ರಯುಕ್ತ ಸಿಡಿಪಿ ಬಿಡುಗಡೆ ಮಾಡುತ್ತಿರುವುದು ಸಂತಸದ ವಿಷಯ ಎಂದು ಬರೆದುಕೊಂಡು ಅನಿಲ್ ಕುಂಬ್ಳೆ ಚಿತ್ರವನ್ನು ಹಂಚಿಕೊಂಡಿದ್ದಾರೆ. ಸಿಡಿಪಿ ಎಂದರೆ ಕಾಮನ್ ಡಿಸ್ಪ್ಲೆ ಪ್ರೊಫೈಲ್. ವಿಶೇಷ ಸಂದರ್ಭಗಳಲ್ಲಿ ಶುಭಾಶಯ ಕೋರುವ ಸಲುವಾಗಿ ಎಲ್ಲರೂ ಹಾಕಿಕೊಳ್ಳಲು ರೂಪಿಸುವ ಚಿತ್ರವನ್ನು ಸಿಡಿಪಿ ಎನ್ನುತ್ತಾರೆ.

ಅನಿಲ್ ಕುಂಬ್ಳೆ ಬಿಡುಗಡೆ ಮಾಡಿರುವ ಸಿಡಿಪಿ:

ಅನಿಲ್ ಕುಂಬ್ಳೆ ಮತ್ತು ಅಭಿಮಾನಿಗಳು ನೀಡಿದ ಸರ್ಪ್ರೈಸ್ ಗಿಫ್ಟ್​ಗೆ ಕಿಚ್ಚ ಇಂಪ್ರೆಸ್ ಆಗಿದ್ದು, ಇದಕ್ಕಿಂತ ಉತ್ತಮವಾದ ಉಡುಗೊರೆ ಇನ್ನೇನಿದೆ ಎಂದು ಟ್ವೀಟ್ ಮಾಡಿದ್ದಾರೆ. ‘ಎಲ್ಲರೂ ಸೇರಿ ನೀಡಿರುವ ಈ ಚಿತ್ರಕ್ಕಿಂತ ಉತ್ತಮವಾದ ಉಡುಗೊರೆ ಮತ್ತೇನಿರಲು ಸಾಧ್ಯ. ನಿಮ್ಮ ಗೌರವಕ್ಕೆ ಕೃತಜ್ಞನಾಗಿದ್ದೇನೆ. ಎಲ್ಲರಿಗೂ ಧನ್ಯವಾದಗಳು’ ಎಂದು ಸುದೀಪ್ ಟ್ವೀಟ್ ಮಾಡಿದ್ದಾರೆ.

ಸುದೀಪ್ ಹಂಚಿಕೊಂಡ ಟ್ವೀಟ್ ಇಲ್ಲಿದೆ:

ಅನಿಲ್ ಕುಂಬ್ಳೆ ಹಾಗೂ ಸುದೀಪ್ ಉತ್ತಮ ಸ್ನೇಹಿತರಾಗಿದ್ದು, ಕ್ರಿಕೆಟ್ ಇಬ್ಬರಿಗೂ ಅತ್ಯಂತ ಪ್ರಿಯವಾದ ಸಾಮಾನ್ಯ ಹವ್ಯಾಸವಾಗಿದೆ. ಅನಿಲ್ ಕುಂಬ್ಳೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ಮುನ್ನಡೆಸಿದ, ವಿಶ್ವಶ್ರೇಷ್ಠ ಸ್ಪಿನ್ನರ್ ಆಗಿದ್ದರೆ, ಸುದೀಪ್, ಸೆಲೆಬ್ರಿಟಿ ಕ್ರಿಕೆಟ್ ಲೀಗ್​ನಲ್ಲಿ ಕರ್ನಾಟಕದ ಕಪ್ತಾನರಾಗಿದ್ಧಾರೆ. ಪ್ರಸ್ತುತ ಅನಿಲ್ ಕುಂಬ್ಳೆ ಪಂಜಾಬ್ ಕಿಂಗ್ಸ್​ನ ಮುಖ್ಯ ಕೋಚ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಇತ್ತ ಸುದೀಪ್ ನಟನೆಯ ‘ವಿಕ್ರಾಂತ್ ರೋಣ’ ಚಿತ್ರದ ಕೆಲಸಗಳು ಲಗುಬಗೆಯಿಂದ ಸಾಗುತ್ತಿವೆ. ಇತ್ತೀಚೆಗಷ್ಟೇ ಇದರ ಕುರಿತು ಅಪ್ಡೇಟ್ ನೀಡಿದ್ದ ಕಿಚ್ಚ, ಎಲ್ಲಾ ಸರಿಯಾಗಿದ್ದಿದ್ದರೆ ವರಮಹಾಲಕ್ಷ್ಮಿ ಹಬ್ಬದಂದು ಚಿತ್ರ ಬಿಡುಗಡೆಯಾಗಿರಬೇಕಿತ್ತು. ಆದರೆ ಕೊರೊನಾ ಕಾರಣದಿಂದ ಸಾಧ್ಯವಾಗಿಲ್ಲ. ಚಿತ್ರದ ಕೆಲಸಗಳು ವೇಗ ಪಡೆದುಕೊಂಡಿದ್ದು, ಮತ್ತೆ ಪ್ರಾರಂಭವಾಗಿವೆ ಎಂದು ಟ್ವೀಟ್ ಮಾಡಿದ್ದರು.

ಇದನ್ನೂ ಓದಿ:

‘ಕೆಬಿಸಿ’ಯಲ್ಲಿ 5 ಕೋಟಿ ರೂ ಗೆದ್ದ ನಂತರ ಪ್ರಪಾತಕ್ಕೆ ಬಿದ್ದ ಬದುಕು; ನಂತರ ಏನಾಯಿತು? ಸುಶೀಲ್ ತೆರೆದಿಟ್ಟ ಜೀವನ ಕತೆ ಇಲ್ಲಿದೆ

KGF 2 Release Date: 2022 ಏಪ್ರಿಲ್​ 14ಕ್ಕೆ ‘ಕೆಜಿಎಫ್: ಚಾಪ್ಟರ್​ 2’ ರಿಲೀಸ್​; ಬ್ರೇಕಿಂಗ್​ ನ್ಯೂಸ್​ ನೀಡಿದ ಯಶ್​-ಪ್ರಶಾಂತ್​ ನೀಲ್​​

(Fans designed a new CDP for Kichcha Sudeep birthday and it is released by Anil Kumble)

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ