Ramya Divya Spandana: ರಕ್ಷಿತ್​ ಶೆಟ್ಟಿ ಜೊತೆ ರಮ್ಯಾ ಮದುವೆ ಆಗ್ಬೇಕು; ಫ್ಯಾನ್ಸ್​ ಬಯಕೆಗೆ ಉತ್ತರ ಕೊಟ್ಟ ಸ್ಯಾಂಡಲ್​ವುಡ್​ ಕ್ವೀನ್​

Rakshit Shetty: ರಮ್ಯಾ ಮತ್ತು ರಕ್ಷಿತ್​ ಶೆಟ್ಟಿಯನ್ನು ಜೋಡಿಯಾಗಿಸಬೇಕು ಎಂದು ಅಭಿಮಾನಿಗಳು ಕನಸು ಕಂಡಿದ್ದಾರೆ. ಈ ಬಗ್ಗೆ ರಮ್ಯಾಗೆ ಪ್ರಶ್ನೆಯೊಂದನ್ನು ಕೇಳಲಾಗಿದೆ.

Ramya Divya Spandana: ರಕ್ಷಿತ್​ ಶೆಟ್ಟಿ ಜೊತೆ ರಮ್ಯಾ ಮದುವೆ ಆಗ್ಬೇಕು; ಫ್ಯಾನ್ಸ್​ ಬಯಕೆಗೆ ಉತ್ತರ ಕೊಟ್ಟ ಸ್ಯಾಂಡಲ್​ವುಡ್​ ಕ್ವೀನ್​
ರಮ್ಯಾ - ರಕ್ಷಿತ್​ ಶೆಟ್ಟಿ
Follow us
ಮದನ್​ ಕುಮಾರ್​
| Updated By: Digi Tech Desk

Updated on:Apr 25, 2021 | 12:16 PM

ನಟಿ ರಮ್ಯಾ ಅವರು ಸಿನಿಮಾಗಳಿಂದ ದೂರು ಉಳಿದು ಹಲವು ವರ್ಷಗಳಾಗಿವೆ. ಒಂದು ಕಾಲದಲ್ಲಿ ಬಹುಬೇಡಿಕೆಯ ನಟಿಯಾಗಿದ್ದ ಅವರು ಈಗ ಸಿನಿಮಾರಂಗದಿಂದ ಸಂಪೂರ್ಣ ದೂರ ಸರಿದಿದ್ದಾರೆ. ನಟನೆ ಮಾತ್ರವಲ್ಲದೇ ಚಿತ್ರರಂಗದ ಎಲ್ಲ ಬಗೆಯ ಚಟುವಟಿಕೆಗಳಿಂದಲೂ ಅವರು ಅಂತರ ಕಾಪಾಡಿಕೊಂಡಿದ್ದಾರೆ. ಒಂದಷ್ಟು ಸಮಯ ರಾಜಕೀಯದಲ್ಲಿ ಅದೃಷ್ಟ ಪರೀಕ್ಷೆಗೆ ಇಳಿದಿದ್ದರು. ಈಗ ಅದರಿಂದಲೂ ಹೊರಬಂದಿದ್ದಾರೆ. ಸದ್ಯ ರಮ್ಯಾ ಮದುವೆ ಯಾವಾಗ ಮಾಡಿಕೊಳ್ಳುತ್ತಾರೆ ಎಂಬ ಪ್ರಶ್ನೆಯನ್ನು ಅಭಿಮಾನಿಗಳು ಕೇಳುತ್ತಿದ್ದಾರೆ.

ಸೋಶಿಯಲ್​ ಮೀಡಿಯಾದ ಮೂಲಕ ಫ್ಯಾನ್ಸ್​ ಜೊತೆ ರಮ್ಯಾ ಸಂಪರ್ಕದಲ್ಲಿ ಇದ್ದಾರೆ. ಭಾನುವಾರ (ಏ.25) ಅವರು ಇನ್​ಸ್ಟಾಗ್ರಾಮ್​ನಲ್ಲಿ ಅಭಿಮಾನಿಗಳ ಪ್ರಶ್ನೆ ಉತ್ತರಿಸಿದರು. ನೆಟ್ಟಿಗರಿಂದ ಅವರಿಗೆ ಹಲವು ಬಗೆಯ ಪ್ರಶ್ನೆಗಳು ಎದುರಾದವು. ಅದರಲ್ಲಿ ಹೆಚ್ಚು ಹೈಲೈಟ್​ ಆಗಿದ್ದು ಮದುವೆ ವಿಚಾರ. ಒಬ್ಬ ಅಭಿಮಾನಿಯಂತೂ ‘ನಿಮ್ಮ ಮದುವೆ ಯಾವಾಗ? ನೀವು ರಕ್ಷಿತ್​ ಶೆಟ್ಟಿ ಜೊತೆ ಮದುವೆ ಆಗಿ’ ಎಂದು ಬೇಡಿಕೆ ಇಟ್ಟಿದ್ದಾರೆ!

ಈ ಪ್ರಶ್ನೆ ನೋಡಿ ಎಲ್ಲರಿಗೂ ಅಚ್ಚರಿ ಆಗಿದೆ. ರಮ್ಯಾ ಮತ್ತು ರಕ್ಷಿತ್​ ಶೆಟ್ಟಿಯನ್ನು ಜೋಡಿಯಾಗಿಸಬೇಕು ಎಂದು ಕನಸು ಕಂಡ ಆ ಅಭಿಮಾನಿ ಯಾರು ಎಂಬುದು ಸದ್ಯಕ್ಕೆ ಬಹಿರಂಗ ಆಗಿಲ್ಲ. ಆದರೆ ಆ ಪ್ರಶ್ನೆಗೆ ರಮ್ಯಾ ತುಂಬ ಕೂಲ್​ ಆಗಿ ಉತ್ತರ ನೀಡಿದ್ದಾರೆ. ಸಿಂಪಲ್​ ಆಗಿ ರಕ್ಷಿತ್​ ಶೆಟ್ಟಿ ಅವರ ಹೆಸರನ್ನು ಟ್ಯಾಗ್​ ಮಾಡುವ ಮೂಲಕ ಜೋರಾಗಿ ನಗುತ್ತಿರುವ ಎಮೋಜಿಗಳನ್ನು ರಮ್ಯಾ ಹಂಚಿಕೊಂಡಿದ್ದಾರೆ. ಮದುವೆ ಆಗುತ್ತೇನೆ ಅಥವಾ ಆಗಲ್ಲ ಎಂದು ನೇರವಾಗಿ ಅವರು ಏನನ್ನೂ ಹೇಳಿಲ್ಲ.

ಮದುವೆಗೆ ಸಂಬಂಧಿಸಿದಂತೆ ಇನ್ನೂ ಅನೇಕ ಪ್ರಶ್ನೆಗಳು ಬಂದಿವೆ. ಅದನ್ನು ಕೇಳಿ ಕೇಳಿ ರಮ್ಯಾಗೆ ಸುಸ್ತಾಗಿದೆ. ‘ಮದುವೆ ಮದುವೆ ಮದುವೆ. ಮಾಡೋಕೆ ಇದೊಂದೇ ಕೆಲಸ ಇರುವುದು ಅನ್ನೋ ಹಾಗೆ! ಮದುವೆಯಾಗಿ ಖುಷಿಯಿಂದ ಇರೋಕೆ ಆಗಲ್ಲ ಗೊತ್ತಾ?’ ಎಂದಿದ್ದಾರೆ ರಮ್ಯಾ.

ಮದುವೆ ಆಗುವುದಾದರೆ ಯಾವ ರೀತಿಯ ಹುಡುಗನನ್ನು ಬಯಸುತ್ತೀರಿ ಎಂಬ ಪ್ರಶ್ನೆಗೆ, ‘ಫನ್ನಿ ಪ್ರಶ್ನೆ, ಆದರೆ ಸಹಾನುಭೂತಿ, ಕರುಣೆ ಮತ್ತು ಮುಕ್ತ ಮನಸ್ಸು ಇರುವ ವ್ಯಕ್ತಿ ಬೇಕು’ ಎಂದು ರಮ್ಯಾ ಉತ್ತರಿಸಿದ್ದಾರೆ. ಸದ್ಯಕ್ಕೆ ತಾವು ಯಾರ ಜೊತೆಗೂ ಡೇಟಿಂಗ್​ ಮಾಡುತ್ತಿಲ್ಲ ಎಂಬುದನ್ನು ಅವರು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ರಮ್ಯಾ-ರಕ್ಷಿತಾ ನಡುವೆ ಈಗ ಎಂತಹ ಸಂಬಂಧ ಉಳಿದಿದೆ? ಇಲ್ಲಿದೆ ಉತ್ತರ

Ramya: ಇನ್​ಸ್ಟಾಗ್ರಾಮ್​, ಟ್ವಿಟರ್​ನಲ್ಲಿ ಅಭಿಮಾನಿಗಳಿಗೆ ಸಡನ್​ ಶಾಕ್​ ನೀಡಿದ ರಮ್ಯಾ! ಕಾರಣ ಏನು?

(Fans want Ramya and Rakshit Shetty to get married)

Published On - 12:09 pm, Sun, 25 April 21

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ