‘ಲವ್ ಯೂ ರಚ್ಚು’ ಫೈಟರ್ ಸಾವು ಪ್ರಕರಣ: ಇಂದು ಅಜಯ್​ ರಾವ್​ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ

ಫೈಟರ್​ ವಿವೇಕ್​ ಸಾವಿನ ಪ್ರಕರಣದಲ್ಲಿ ನಟ ಅಜಯ್​ ರಾವ್​, ನಿರ್ಮಾಪಕ ಗುರು ದೇಶಪಾಂಡೆ ಅವರು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಇಂದು (ಆ.26) ಅದರ ವಿಚಾರಣೆ ನಡೆಯಲಿದೆ.

‘ಲವ್ ಯೂ ರಚ್ಚು’ ಫೈಟರ್ ಸಾವು ಪ್ರಕರಣ: ಇಂದು ಅಜಯ್​ ರಾವ್​ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ
ಗುರು ದೇಶಪಾಂಡೆ, ವಿವೇಕ್​, ಅಜಯ್​ ರಾವ್​
Follow us
TV9 Web
| Updated By: ಮದನ್​ ಕುಮಾರ್​

Updated on: Aug 26, 2021 | 9:34 AM

ರಚಿತಾ ರಾಮ್​ ಮತ್ತು ಅಜಯ್​ ರಾವ್​ (Ajay Rao) ಮುಖ್ಯಭೂಮಿಕೆ ನಿಭಾಯಿಸುತ್ತಿರುವ ‘ಲವ್ ಯೂ ರಚ್ಚು’ (Love You Racchu) ಸಿನಿಮಾ ಚಿತ್ರೀಕರಣದ ವೇಳೆ ಫೈಟರ್ ವಿವೇಕ್​ ((Fighter Vivek)) ನಿಧನರಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆ ಮುಂದುವರಿದಿದೆ. ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ನಟ ಅಜಯ್​ ರಾವ್​ ಅವರು ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಇಂದು (ಆ.26) ರಾಮನಗರದ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು (Anticipatory Bail) ಅರ್ಜಿ ವಿಚಾರಣೆ ನಡೆಯಲಿದೆ.

ದುರ್ಘಟನೆ ನಡೆದ ಬಳಿಕ ಚಿತ್ರದ ನಿರ್ಮಾಪಕ ಗುರು ದೇಶಪಾಂಡೆ ಯಾರ ಕಣ್ಣಿಗೂ ಕಾಣಿಸಿಕೊಂಡಿಲ್ಲ. ಪ್ರಕರಣದಲ್ಲಿ ಅವರು ಕೂಡ ಪ್ರಮುಖ ಆರೋಪಿ ಆಗಿದ್ದಾರೆ. ಹಾಗಾಗಿ ಯಾವ ಸಮಯದಲ್ಲಿ ಬೇಕಿದ್ದರೂ ಅವರ ಬಂಧನ ಆಗಬಹುದು. ಅವರು ಕೂಡ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದು, ಅದರ ವಿಚಾರಣೆ ಸಹ ಇಂದು ಆಗಲಿದೆ. ನ್ಯಾಯಾಲಯದ ಆದೇಶಕ್ಕಾಗಿ ಎಲ್ಲರೂ ಕಾಯುತ್ತಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಮೂವರನ್ನು ಬಂಧಿಸಲಾಗಿದೆ. ‘ಲವ್ ಯೂ ರಚ್ಚು’ ಚಿತ್ರದ ನಿರ್ದೇಶಕ ಶಂಕರಯ್ಯ, ಕ್ರೇನ್ ಆಪರೇಟರ್ ಮಹದೇವ್, ಸಾಹಸ ನಿರ್ದೇಶಕ ವಿನೋದ್ ಕುಮಾರ್ ಅವರು ಈಗ ನ್ಯಾಯಾಂಗ ಬಂಧನದಲ್ಲಿದ್ದಾರೆ. ಜಾಮೀನಿಗಾಗಿ ಅವರು ಕೂಡ ಅರ್ಜಿ ಸಲ್ಲಿಸಿದ್ದಾರೆ. ಈ ಮೂವರ ಜಾಮೀನು ಅರ್ಜಿ ವಿಚಾರಣೆಯೂ ಇಂದು ನಡೆಯಲಿದೆ. ಅವರು ಜೈಲಿನಿಂದ ಹೊರಬರುತ್ತಾರಾ ಅಥವಾ ಜೈಲು ವಾಸ ಮುಂದುವರೆಯುತ್ತಾ ಎಂಬುದು ಇಂದು ತೀರ್ಮಾನ ಆಗಲಿದೆ.

ಘಟನೆಗೆ ಸಂಬಂಧಿಸಿದಂತೆ ಚಿತ್ರದ ನಾಯಕಿ ರಚಿತಾ ರಾಮ್​ ಅವರು ಪೊಲೀಸರಿಂದ ವಿಚಾರಣೆ ಎದುರಿಸಿದ್ದಾರೆ. ಮಂಗಳವಾರ (ಆ.24) ಬಿಡದಿ ಪೊಲೀಸ್​​ ಠಾಣೆಗೆ ರಚಿತಾ ರಾಮ್​ ಹಾಜರಾದರು. ಡಿವೈಎಸ್​ಪಿ ಮೋಹನ್ ಕುಮಾರ್ ಅವರು ರಚಿತಾ ಅವರನ್ನು 45 ನಿಮಿಷಗಳ ಕಾಲ ವಿಚಾರಣೆ ನಡೆಸಿದರು. ಪೊಲೀಸರು ಕೇಳಿದ ಪ್ರಶ್ನೆಗೆ ಅವರು ಉತ್ತರ ನೀಡಿದ್ದಾರೆ. ಪೊಲೀಸರ ವಿಚಾರಣೆ ಬಳಿಕ ಮಾತನಾಡಿದ ರಚಿತಾ, ‘ನನಗೆ ವಿಷಯ ಗೊತ್ತಾಗಿರಲಿಲ್ಲ. ಮಾಧ್ಯಮಗಳಿಂದ ಈ ವಿಚಾರ ಗೊತ್ತಾಯ್ತು. ಫೈಟರ್​​ ಮೃತಪಟ್ಟಿರುವುದು ಅಷ್ಟೇ ನನಗೆ ಗೊತ್ತು. ಘಟನೆ ನಡೆದಾಗ ನಾನು ಅಲ್ಲಿ ಇರಲಿಲ್ಲ. ಪ್ರಕರಣದ ತನಿಖೆ ನಡೆಯುತ್ತಿದೆ. ಏನಾಗುತ್ತದೆ ನೋಡೋಣ. ಇದು ಉದ್ದೇಶಪೂರ್ವಕವಾಗಿ ನಡೆದ ಘಟನೆ ಅಲ್ಲ. ಇಂತಹ ದುರಂತ ನಡೆದಿರುವುದಕ್ಕೆ ನನಗೂ ನೋವು ಇದೆ’ ಎಂದಿದ್ದರು.

ಇದನ್ನೂ ಓದಿ:

ರಚಿತಾ ರಾಮ್​ ಬಗ್ಗೆ ಕೆಟ್ಟ ಕಮೆಂಟ್​: ಫೈಟರ್​ ವಿವೇಕ್​ ಸಾವಿನ ಕುರಿತು ಮೌನ ಮುರಿದ ‘ಡಿಂಪಲ್​ ಕ್ವೀನ್​’

‘ಅಜಯ್​ ರಾವ್​ ಅಲ್ಲೇ ಇದ್ರೂ ಸಹಾಯಕ್ಕೆ ಬರಲಿಲ್ಲ’: ಗಾಯಾಳು ರಂಜಿತ್​ ಆರೋಪ; ಅಜಯ್​ ಪ್ರತಿಕ್ರಿಯೆ ಏನು?

ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ