ಫೈಟರ್​​ ಸಾವು ಪ್ರಕರಣ: ನಿರ್ಮಾಪಕ ಗುರು ದೇಶಪಾಂಡೆ ಪರಾರಿ; ಐವರ ವಿರುದ್ಧ ಎಫ್​ಐಆರ್​

| Updated By: ಮದನ್​ ಕುಮಾರ್​

Updated on: Aug 10, 2021 | 8:45 AM

Fighter Vivek Death: ರಾಮನಗರ ತಾಲೂಕಿನ ಜೋಗನಪಾಳ್ಯದ ಬಳಿ ಸೋಮವಾರ (ಆ.9) ಈ ಅವಘಡ ಸಂಭವಿಸಿತ್ತು. ಘಟನೆ ಬಳಿಕ ನಿರ್ಮಾಪಕ ಗುರು ದೇಶಪಾಂಡೆ ಮತ್ತು ಪ್ರೊಡಕ್ಷನ್ ಮ್ಯಾನೇಜರ್ ಫರ್ನಾಂಡಿಸ್ ಪರಾರಿ ಆಗಿದ್ದಾರೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಫೈಟರ್​​ ಸಾವು ಪ್ರಕರಣ: ನಿರ್ಮಾಪಕ ಗುರು ದೇಶಪಾಂಡೆ ಪರಾರಿ; ಐವರ ವಿರುದ್ಧ ಎಫ್​ಐಆರ್​
ನಿರ್ಮಾಪಕ ಗುರು ದೇಶಪಾಂಡೆ, ಮೃತ ಫೈಟರ್​ ವಿವೇಕ್​
Follow us on

ರಚಿತಾ ರಾಮ್​ (Rachita Ram) ಮತ್ತು ಅಜಯ್​ ರಾವ್​ (Ajay Rao) ಅಭಿನಯಿಸುತ್ತಿದ್ದ ‘ಲವ್​ ಯೂ ರಚ್ಚು’ (Love You Racchu) ಸಿನಿಮಾದ ಶೂಟಿಂಗ್ ಸಂದರ್ಭದಲ್ಲಿ ವಿದ್ಯುತ್​ ತಗುಲಿ ಫೈಟರ್​ ವಿವೇಕ್​ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಬಿಡದಿ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ. ಐವರ ವಿರುದ್ಧ ಎಫ್​ಐಆರ್​ ದಾಖಲಾಗಿದೆ. ನಿರ್ದೇಶಕ ಶಂಕರ್​ ರಾಜ್​ ಎ1, ನಿರ್ಮಾಪಕ ಗುರು ದೇಶಪಾಂಡೆ (Guru Deshpande) ಎ2, ಚಿತ್ರದ ಸಾಹಸ ನಿರ್ದೇಶಕ ವಿನೋದ್ ಕುಮಾರ್ ಎ3, ಸಿನಿಮಾ ಪ್ರೊಡಕ್ಷನ್ ಮ್ಯಾನೇಜರ್ ಫರ್ನಾಂಡಿಸ್ ಎ4 ಹಾಗೂ ಕ್ರೇನ್ ಆಪರೇಟರ್ ಮಹದೇವ್ ಎ5 ಎಂದು ಬಿಡದಿ ಪೊಲೀಸ್ ಠಾಣೆಯಲ್ಲಿ ಐವರ ವಿರುದ್ಧ ಎಫ್​ಐಆರ್​ ದಾಖಲು ಮಾಡಲಾಗಿದೆ. ಆದರೆ ಘಟನೆ ಬಳಿಕ ಗುರು ದೇಶಪಾಂಡೆ ಮತ್ತು ಪ್ರೊಡಕ್ಷನ್ ಮ್ಯಾನೇಜರ್ ಫರ್ನಾಂಡಿಸ್ ಪರಾರಿ ಆಗಿದ್ದಾರೆ. ಅವರನ್ನು ಬಿಡದಿ ಪೊಲೀಸರು ಹುಡುಕುತ್ತಿದ್ದಾರೆ.

ರಾಮನಗರ ತಾಲೂಕಿನ ಜೋಗನಪಾಳ್ಯದ ಬಳಿ ಸೋಮವಾರ (ಆ.9) ಈ ಅವಘಡ ಸಂಭವಿಸಿತ್ತು. ಸಾಹಸ ದೃಶ್ಯದಲ್ಲಿ ನಟಿಸುತ್ತಿರುವಾಗ ಹೈ ಟೆನ್ಷನ್​ ವಿದ್ಯುತ್​ ತಂತಿ ತಗುಲಿದ್ದರಿಂದ ಫೈಟರ್​ ವಿವೇಕ್​ ಸ್ಥಳದಲ್ಲೇ ಮೃತಪಟ್ಟರು ಎನ್ನಲಾಗಿದೆ. ಈ ಸಂಬಂಧ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ದುರ್ಘಟನೆಯಲ್ಲಿ ರಂಜಿತ್​ ಎಂಬ ವ್ಯಕ್ತಿಗೂ ಗಂಭೀರ ಗಾಯಗಳಾಗಿವೆ. ಅವರನ್ನು​ ರಾಜರಾಜೇಶ್ವರಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇಂದು ಬೆಳಗ್ಗೆ 10 ಗಂಟೆ ಬಳಿಕ ವಿವೇಕ್ ಮರಣೋತ್ತರ ಪರೀಕ್ಷೆ ನಡೆಯಲಿದೆ. ಸದ್ಯ ರಾಜರಾಜೇಶ್ವರಿ ಆಸ್ಪತ್ರೆಯಲ್ಲಿ ಫೈಟರ್​ ವಿವೇಕ್​ ಶವ ಇರಿಸಲಾಗಿದೆ. ಮರಣೋತ್ತರ ಪರೀಕ್ಷೆ ಬಳಿಕ ಕುಟುಂಬಸ್ಥರಿಗೆ ಶವ ಹಸ್ತಾಂತರ ಮಾಡಲಾಗುವುದು.

‘ಲವ್​​ ಯೂ ರಚ್ಚು’ ಚಿತ್ರದ ಶೂಟಿಂಗ್​ಗೆ ಯಾವುದೇ ಅನುಮತಿ ಪಡೆದುಕೊಂಡಿರಲಿಲ್ಲ ಎನ್ನಲಾಗಿದೆ. ಚಿತ್ರೀಕರಣ ವೇಳೆ ರೋಪ್​ ಎಳೆಯುವಾಗ ದುರಂತ ನಡೆದಿದೆ. ಮುಂಜಾಗ್ರತಾ ಕ್ರಮ ಕೈಗೊಳ್ಳದಿರುವುದೇ ದುರ್ಘಟನೆಗೆ ಕಾರಣ ಎಂಬ ಆರೋಪ ಎದುರಾಗಿದೆ. ಹಾಗಾಗಿ ವಿವೇಕ್​ ಸಾವಿಗೆ ನ್ಯಾಯ ಸಿಗುವವರೆಗೂ ಶೂಟಿಂಗ್​ ಸೆಟ್​ಗೆ ಬರುವುದಿಲ್ಲ ಎಂದು ಅಜಯ್​ ರಾವ್​ ಸೋಮವಾರ ಪ್ರತಿಕ್ರಿಯೆ ನೀಡಿದ್ದರು.

ಇದನ್ನೂ ಓದಿ:

Fighter Vivek Death: ಶೂಟಿಂಗ್ ವೇಳೆ ಫೈಟರ್​​ ಸಾವು; ಗಂಟೆಗಳೇ ಕಳೆದ್ರೂ ಆಸ್ಪತ್ರೆ ಬಳಿ ಬಾರದ ಚಿತ್ರತಂಡ

ಮುಂಜಾಗ್ರತ ಕ್ರಮ ಕೈಗೊಂಡಿರಲಿಲ್ಲ, ವಿವೇಕ್​ಗೆ ನ್ಯಾಯ ಸಿಗುವವರೆಗೆ ಶೂಟಿಂಗ್​ಗೆ​ ಬರಲ್ಲ’; ಅಜಯ್​ ರಾವ್

(Fighter Vivek Death: Love You Racchu producer Guru Deshpande abscond after the incident)