Fighter Vivek Death: ರಚಿತಾ ರಾಮ್​ ಸಿನಿಮಾ ಶೂಟಿಂಗ್ ವೇಳೆ ಫೈಟರ್ ವಿವೇಕ್ ಸಾವು; ವಿದ್ಯುತ್ ತಂತಿ ಸ್ಪರ್ಶಿಸಿ ಅವಘಡ

ರಾಮನಗರ ತಾಲೂಕಿನ ಜೋಗನದೊಡ್ಡಿ ಬಳಿ ‘ಲವ್​​ ಯೂ ರಚ್ಚು’ ಚಿತ್ರದ ಶೂಟಿಂಗ್​ ನಡೆಯುತ್ತಿತ್ತು. ಈ ವೇಳೆ ರೋಪ್​ ಎಳೆಯುವಾಗ ಫೈಟರ್​ ವಿವೇಕ್​ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

Fighter Vivek Death: ರಚಿತಾ ರಾಮ್​ ಸಿನಿಮಾ ಶೂಟಿಂಗ್ ವೇಳೆ ಫೈಟರ್ ವಿವೇಕ್ ಸಾವು;  ವಿದ್ಯುತ್ ತಂತಿ ಸ್ಪರ್ಶಿಸಿ ಅವಘಡ
ರಚಿತಾ ರಾಮ್​ ಸಿನಿಮಾ ಶೂಟಿಂಗ್ ವೇಳೆ ಫೈಟರ್ ವಿವೇಕ್ ಸಾವು; ವಿದ್ಯುತ್ ತಂತಿ ಸ್ಪರ್ಶಿಸಿ ಅವಘಡ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Aug 09, 2021 | 3:57 PM

ಸಿನಿಮಾ ಶೂಟಿಂಗ್​ ವೇಳೆ ಸಾಕಷ್ಟು ಮುಂಜಾಗೃತ ಕ್ರಮ ಕೈಗೊಂಡರೂ ಕೆಲವೊಮ್ಮೆ ಅವಘಡಗಳು ಸಂಭವಿಸುತ್ತವೆ. ಈ ರೀತಿ ಸಾಕಷ್ಟು ದುರಂತಗಳು ಈ ಮೊದಲು ನಡೆದಿವೆ. ಈಗ ಸ್ಯಾಂಡಲ್​ವುಡ್​ ಫೈಟರ್​ ಕೂಡ ಇದೇ ರೀತಿಯ ಅವಘಡಕ್ಕೆ ಬಲಿಯಾಗಿದ್ದಾರೆ. ‘ಲವ್​​ ಯೂ ರಚ್ಚು’ ಚಿತ್ರದ ಶೂಟಿಂಗ್ ವೇಳೆ ದುರಂತ ನಡೆದಿದೆ. ಫೈಟರ್​ ವಿವೇಕ್​ ಎಂಬುವವರು ವಿದ್ಯುತ್​ ತಂತಿ ಸ್ಪರ್ಶಿಸಿ ಮೃತಪಟ್ಟಿದ್ದಾರೆ.

ರಾಮನಗರ ತಾಲೂಕಿನ ಜೋಗನದೊಡ್ಡಿ ಬಳಿ ‘ಲವ್​​ ಯೂ ರಚ್ಚು’ ಚಿತ್ರದ ಶೂಟಿಂಗ್​ ನಡೆಯುತ್ತಿತ್ತು. ಈ ವೇಳೆ ರೋಪ್​ ಎಳೆಯುವಾಗ ಫೈಟರ್​ ವಿವೇಕ್​ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.​ ವಿದ್ಯುತ್​ ತಂತಿಗೆ ರೋಪ್ ಸ್ಪಷಿಟಿಸಿದ್ದುಇದಕ್ಕೆ ಕಾರಣ ಎನ್ನಲಾಗಿದೆ.

ಘಟನೆ ಬಗ್ಗೆ ಮಾಹಿತಿ ನೀಡಿರುವ ಅಜಯ್​ ರಾವ್​, ಮೆಟಲ್​ ರೋಪ್​ ಬಳಸಿದ್ದರಿಂದ ದುರಂತ ಸಂಭವಿಸಿದೆ. ಈ ದೃಶ್ಯದ ಚಿತ್ರೀಕರಣದ ವೇಳೆ ನಾನು ಇರಲಿಲ್ಲ. ಜಾಕೇಟ್​ ಹಾಕಿದ್ದವನಿಗೂ ಶಾಕ್​ ಹೊಡೆದಿದೆ’ ಎಂದಿದ್ದಾರೆ.

‘ಲವ್​ ಯೂ ರಚ್ಚು’ ಸಿನಿಮಾದಲ್ಲಿ ಅಜಯ್​ ರಾವ್​ ಮುಖ್ಯಭೂಮಿಕೆ ನಿರ್ವಹಿಸುತ್ತಿದ್ದಾರೆ. ರಚಿತಾ ರಾಮ್ ಚಿತ್ರದ ನಾಯಕಿ. ಶಂಕರ್​ ರಾಜ್​ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಗುರು ದೇಶಪಾಂಡೆ ಚಿತ್ರದ ನಿರ್ಮಾಪಕ. ಮಣಿಕಾಂತ್​ ಕದ್ರಿ ಅವರು ಸಿನಿಮಾಗೆ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ನವೆಂಬರ್​ ತಿಂಗಳಲ್ಲಿ ಸಿನಿಮಾ ತೆರೆಗೆ ಬರುವ ನಿರೀಕ್ಷೆ ಇದೆ.

ಇದನ್ನೂ ಓದಿ: ‘ಲವ್​ ಯೂ ರಚ್ಚು’ ಸಿನಿಮಾ ಶೂಟಿಂಗ್​ ಸಕಲೇಶಪುರದಲ್ಲಿ ಪ್ರಾರಂಭ; ಫುಲ್​ ಹ್ಯಾಪಿ ಮೂಡ್​ನಲ್ಲಿದ್ದಾರೆ ಅಜಯ್​ ರಾವ್, ರಚಿತಾ ರಾಮ್​

 ಕಮರ್ಷಿಯಲ್​ ಸ್ಟ್ರೀಟ್​ನಲ್ಲಿ ಮಾರುವೇಷದಲ್ಲಿ ಸುತ್ತಾಡಿ, ಅಂಗಡಿಗಳಿಗೆ ಭೇಟಿ ನೀಡಿದ ನಟಿ ರಚಿತಾ ರಾಮ್​..

Published On - 2:52 pm, Mon, 9 August 21

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ