ಸಿನಿಮಾ ಶೂಟಿಂಗ್ ವೇಳೆ ಸಾಕಷ್ಟು ಮುಂಜಾಗೃತ ಕ್ರಮ ಕೈಗೊಂಡರೂ ಕೆಲವೊಮ್ಮೆ ಅವಘಡಗಳು ಸಂಭವಿಸುತ್ತವೆ. ಈ ರೀತಿ ಸಾಕಷ್ಟು ದುರಂತಗಳು ಈ ಮೊದಲು ನಡೆದಿವೆ. ಈಗ ಸ್ಯಾಂಡಲ್ವುಡ್ ಫೈಟರ್ ಕೂಡ ಇದೇ ರೀತಿಯ ಅವಘಡಕ್ಕೆ ಬಲಿಯಾಗಿದ್ದಾರೆ. ‘ಲವ್ ಯೂ ರಚ್ಚು’ ಚಿತ್ರದ ಶೂಟಿಂಗ್ ವೇಳೆ ದುರಂತ ನಡೆದಿದೆ. ಫೈಟರ್ ವಿವೇಕ್ ಎಂಬುವವರು ವಿದ್ಯುತ್ ತಂತಿ ಸ್ಪರ್ಶಿಸಿ ಮೃತಪಟ್ಟಿದ್ದಾರೆ.
ರಾಮನಗರ ತಾಲೂಕಿನ ಜೋಗನದೊಡ್ಡಿ ಬಳಿ ‘ಲವ್ ಯೂ ರಚ್ಚು’ ಚಿತ್ರದ ಶೂಟಿಂಗ್ ನಡೆಯುತ್ತಿತ್ತು. ಈ ವೇಳೆ ರೋಪ್ ಎಳೆಯುವಾಗ ಫೈಟರ್ ವಿವೇಕ್ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ವಿದ್ಯುತ್ ತಂತಿಗೆ ರೋಪ್ ಸ್ಪಷಿಟಿಸಿದ್ದುಇದಕ್ಕೆ ಕಾರಣ ಎನ್ನಲಾಗಿದೆ.
ಘಟನೆ ಬಗ್ಗೆ ಮಾಹಿತಿ ನೀಡಿರುವ ಅಜಯ್ ರಾವ್, ಮೆಟಲ್ ರೋಪ್ ಬಳಸಿದ್ದರಿಂದ ದುರಂತ ಸಂಭವಿಸಿದೆ. ಈ ದೃಶ್ಯದ ಚಿತ್ರೀಕರಣದ ವೇಳೆ ನಾನು ಇರಲಿಲ್ಲ. ಜಾಕೇಟ್ ಹಾಕಿದ್ದವನಿಗೂ ಶಾಕ್ ಹೊಡೆದಿದೆ’ ಎಂದಿದ್ದಾರೆ.
‘ಲವ್ ಯೂ ರಚ್ಚು’ ಸಿನಿಮಾದಲ್ಲಿ ಅಜಯ್ ರಾವ್ ಮುಖ್ಯಭೂಮಿಕೆ ನಿರ್ವಹಿಸುತ್ತಿದ್ದಾರೆ. ರಚಿತಾ ರಾಮ್ ಚಿತ್ರದ ನಾಯಕಿ. ಶಂಕರ್ ರಾಜ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಗುರು ದೇಶಪಾಂಡೆ ಚಿತ್ರದ ನಿರ್ಮಾಪಕ. ಮಣಿಕಾಂತ್ ಕದ್ರಿ ಅವರು ಸಿನಿಮಾಗೆ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ನವೆಂಬರ್ ತಿಂಗಳಲ್ಲಿ ಸಿನಿಮಾ ತೆರೆಗೆ ಬರುವ ನಿರೀಕ್ಷೆ ಇದೆ.
ಇದನ್ನೂ ಓದಿ: ‘ಲವ್ ಯೂ ರಚ್ಚು’ ಸಿನಿಮಾ ಶೂಟಿಂಗ್ ಸಕಲೇಶಪುರದಲ್ಲಿ ಪ್ರಾರಂಭ; ಫುಲ್ ಹ್ಯಾಪಿ ಮೂಡ್ನಲ್ಲಿದ್ದಾರೆ ಅಜಯ್ ರಾವ್, ರಚಿತಾ ರಾಮ್
ಕಮರ್ಷಿಯಲ್ ಸ್ಟ್ರೀಟ್ನಲ್ಲಿ ಮಾರುವೇಷದಲ್ಲಿ ಸುತ್ತಾಡಿ, ಅಂಗಡಿಗಳಿಗೆ ಭೇಟಿ ನೀಡಿದ ನಟಿ ರಚಿತಾ ರಾಮ್..
Published On - 2:52 pm, Mon, 9 August 21