AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿನಿಮಾ ಆಗುತ್ತಾ ದರ್ಶನ್ ತೂಗುದೀಪ ‘ಖೈದಿ ನಂಬರ್​ 6106’? ಶೀರ್ಷಿಕೆಗೆ ನಿರ್ಮಾಪಕರಿಂದ ಬೇಡಿಕೆ

ರೇಣುಕಾ ಸ್ವಾಮಿ ಕೊಲೆ ಆರೋಪದಲ್ಲಿ ದರ್ಶನ್​, ಪವಿತ್ರಾ ಹಾಗೂ ಅವರ ಸಹಚರರು ಪೊಲೀಸರ ಬಲೆಗೆ ಬಿದ್ದಿದ್ದಾರೆ. ವಿಚಾರಣಾಧೀನ ಖೈದಿ ಆಗಿರುವ ದರ್ಶನ್​ ಅವರಿಗೆ 6106 ನಂಬರ್​ ಕೊಡಲಾಗಿದೆ. ಇದನ್ನೇ ಹೊಸ ಸಿನಿಮಾಗೆ ಶೀರ್ಷಿಕೆಯಾಗಿಸಲು ‘ಭದ್ರಾವತಿ ಮೂವೀ ಮೇಕರ್ಸ್’ ನಿರ್ಮಾಪಕರು ಬೇಡಿಕೆ ಇಟ್ಟಿದ್ದಾರೆ. ಆದರೆ ಈ ಕೇಸ್​ ಈಗ ತನಿಖೆ ಹಂತದಲ್ಲಿ ಇರುವುದರಿಂದ ಅದಕ್ಕೆ ಸಂಬಂಧಿಸಿದ ಟೈಟಲ್​ಗಳನ್ನು ನೀಡದಿರಲು ವಾಣಿಜ್ಯ ಮಂಡಳಿ ತೀರ್ಮಾನಿಸಿದೆ.

ಸಿನಿಮಾ ಆಗುತ್ತಾ ದರ್ಶನ್ ತೂಗುದೀಪ ‘ಖೈದಿ ನಂಬರ್​ 6106’? ಶೀರ್ಷಿಕೆಗೆ ನಿರ್ಮಾಪಕರಿಂದ ಬೇಡಿಕೆ
ದರ್ಶನ್​
Mangala RR
| Updated By: Digi Tech Desk|

Updated on:Jun 27, 2024 | 10:57 AM

Share

ನಟ ದರ್ಶನ್​ (Darshan) ಬಗ್ಗೆ ಎಲ್ಲೆಲ್ಲೂ ಚರ್ಚೆ ಆಗುತ್ತಿದೆ. ಸದ್ಯ ದರ್ಶನ್ ತೂಗುದೀಪ ಗೆ ಕಷ್ಟ ಕಾಲ ಎದುರಾಗಿದೆ. ಕೊಲೆ ಕೇಸ್​ನಲ್ಲಿ ಆರೋಪಿ ಆಗಿರುವ ಅವರು ಪರಪ್ಪನ ಅಗ್ರಹಾರ ಸೇರಿಕೊಂಡಿದ್ದಾರೆ. ಜೈಲು ವಾಸದಲ್ಲಿ ಇರುವ ಅವರನ್ನು ನೋಡಲು ಆಪ್ತರು ಆಗಮಿಸುತ್ತಿದ್ದಾರೆ. ಹೀಗಿರುವಾಗ, ದರ್ಶನ್​ ಕೇಸ್​ಗೆ ಸಂಬಂಧಿಸಿದ ವಿಷಯಗಳನ್ನೇ ಇಟ್ಟುಕೊಂಡು ಸಿನಿಮಾ (Kannada Cinema) ಟೈಟಲ್​ ನೋಂದಣಿ ಮಾಡಿಸಲು ಕೆಲವರು ಆಸಕ್ತಿ ತೋರಿಸುತ್ತಿದ್ದಾರೆ. ಕೆಲವೇ ದಿನಗಳ ಹಿಂದೆ ‘ಡಿ ಗ್ಯಾಂಗ್​’ ಎಂಬ ಶೀರ್ಷಿಕೆಗೆ ಬೇಡಿಕೆ ಬಂದಿತ್ತು. ಈಗ ದರ್ಶನ್​ ಅವರಿಗೆ ನೀಡಿದ ಖೈದಿ ನಂಬರ್​ (Darshan Jail Number) ಕೂಡ ಬೇಡಿಕೆಯಲ್ಲಿದೆ.

ಪರಪ್ಪನ ಅಗ್ರಹಾರದಲ್ಲಿ ವಿಚಾರಣಾಧೀನ ಖೈದಿ ಆಗಿರುವ ದರ್ಶನ್​ಗೆ 6106 ನಂಬರ್​ ನೀಡಲಾಗಿದೆ. ಇದೇ ನಂಬರ್​ನಲ್ಲಿ ಶೀರ್ಷಿಕೆ ಇಟ್ಟುಕೊಂಡು ಸಿನಿಮಾ ಮಾಡಲು ಕೆಲವರು ಮುಂದಾಗಿದ್ದಾರೆ. ಯಾವುದೇ ಸಿನಿಮಾ ಆಗಬೇಕು ಎಂದರೆ ಅದರ ಶೀರ್ಷಿಕೆಯನ್ನು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ನೋಂದಣಿ ಮಾಡಿಸಿಕೊಳ್ಳಬೇಕು. ಈಗ ‘ಖೈದಿ ನಂಬರ್​ 6106’ ಟೈಟಲ್​ಗೆ ಬೇಡಿಕೆ ಬಂದಿದೆ.

ಚಿತ್ರತಂಡಕ್ಕೆ ಶೀರ್ಷಿಕೆ ಬಳಸಲು ಅನುಮತಿ ನೀಡುವುದಕ್ಕೂ ಮುನ್ನ ವಾಣಿಜ್ಯ ಮಂಡಳಿಯವರು ಕೆಲವು ಮಾನದಂಡಗಳನ್ನು ಪಾಲಿಸುತ್ತಾರೆ. ಹಾಗಾಗಿ ‘ಖೈದಿ ನಂಬರ್​ 6106’ ಟೈಟಲ್​ಗೆ ಅನುಮತಿ ನೀಡಿಲ್ಲ. ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ದರ್ಶನ್​, ಪವಿತ್ರಾ ಗೌಡ ಪ್ರಮುಖ ಆರೋಪಿ ಆಗಿದ್ದಾರೆ. ಈ ಪ್ರಕರಣದ ವಿಚಾರಣೆ ನಡೆಯುತ್ತಿರುವುದರಿಂದ, ಈ ಹಂತದಲ್ಲಿ ಈ ಟೈಟಲ್​ ನೀಡಲು ಸಾಧ್ಯವಿಲ್ಲ ಎಂದು ವಾಣಿಜ್ಯ ಮಂಡಳಿ ಹೇಳಿದೆ.

‘ಖೈದಿ ನಂಬರ್​ 6106’ ಶೀರ್ಷಿಕೆ ಬೇಕು ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ‘ಭದ್ರಾವತಿ ಮೂವೀ ಮೇಕರ್ಸ್​’ ಸಂಸ್ಥೆಯು ಅರ್ಜಿ ಸಲ್ಲಿಸಿರುವ ಫೋಟೋ ಲಭ್ಯವಾಗಿದೆ. ನಿರ್ಮಾಪಕರ ಬೇಡಿಕೆಯನ್ನು ‘ಶೀರ್ಷಿಕೆ ಸಮಿತಿ’ಯಲ್ಲಿ ಪರಿಶೀಲಿಸಲಾಗಿದೆ. ಲಭ್ಯವಾಗಿರುವ ಫೋಟೋದಲ್ಲಿ ‘ಸದ್ಯಕ್ಕೆ ಪೆಂಡಿಂಗ್​ ಇಡಲಾಗಿದೆ’ ಎಂದು ನಮೂದಿಸಲಾಗಿದೆ.

ಇದನ್ನೂ ಓದಿ: ಬಲವಾದ ಕಾರಣ ನೀಡಿ ದರ್ಶನ್​ ಭೇಟಿಗೆ ಬಂದ ಫ್ಯಾನ್ಸ್; ಆದರೆ ಸಿಗಲಿಲ್ಲ ಅವಕಾಶ

ಇತ್ತೀಚೆಗೆ ಕೆಲವು ಅಭಿಮಾನಿಗಳ ತಮ್ಮ ವಾಹನ ಮೇಲೆ ‘ಖೈದಿ ನಂಬರ್​ 6106’ ಎಂದು ಸ್ಟಿಕ್ಕರ್ ಅಂಟಿಸಿಕೊಂಡಿರುವ ವಿಡಿಯೋ ವೈರಲ್​ ಆಗಿದೆ. ಇನ್ಮುಂದೆ ಇದು ತಮ್ಮ ಲಕ್ಕಿ ನಂಬರ್​ ಎಂದು ಕೂಡ ಅಂಥವರು ಹೇಳುತ್ತಿದ್ದಾರೆ. ಹೊಸ ವಾಹನಗಳ ನೋಂದಣಿಗೆ ಈ ನಂಬರ್​ ಬೇಕು ಎಂದು ದರ್ಶನ್​ ಅಭಿಮಾನಿಗಳು ಬೇಡಿಕೆ ಇಡುತ್ತಿದ್ದಾರೆ ಎಂಬ ಮಾಹಿತಿ ಕೂಡ ಕೇಳಿಬಂದಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 4:15 pm, Wed, 26 June 24

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ