Sign In

By signing in or creating an account, you agree with Associated Broadcasting Company's Terms & Conditions and Privacy Policy.

Film City: ಮೈಸೂರಿನಲ್ಲಿ ಫಿಲ್ಮ್​ಸಿಟಿ ನಿರ್ಮಾಣದ ಘೋಷಣೆ ಮಾಡಿದ ಸಿಎಂ ಸಿದ್ದರಾಮಯ್ಯ

Karnataka Budget 2023: ಈ ಬಾರಿ ಬಜೆಟ್​ನಲ್ಲಿ ಮತ್ತೆ ಫಿಲ್ಮ್​ಸಿಟ ಬಗ್ಗೆ ಪ್ರಸ್ತಾಪ ಆಗಿದೆ. ಮೈಸೂರಿನಲ್ಲಿ ಫಿಲ್ಮ್​ ಸಿಟಿ ನಿರ್ಮಾಣ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಅವರು ಬಜೆಟ್​ನಲ್ಲಿ ಘೋಷಿಸಿದ್ದಾರೆ.

Film City: ಮೈಸೂರಿನಲ್ಲಿ ಫಿಲ್ಮ್​ಸಿಟಿ ನಿರ್ಮಾಣದ ಘೋಷಣೆ ಮಾಡಿದ ಸಿಎಂ ಸಿದ್ದರಾಮಯ್ಯ
ಸಿದ್ದರಾಮಯ್ಯ
Follow us
ರಾಜೇಶ್ ದುಗ್ಗುಮನೆ
|

Updated on:Jul 07, 2023 | 2:03 PM

ರಾಜ್ಯಕ್ಕೆ ಒಂದು ಫಿಲ್ಮ್​​ಸಿಟಿ ಬೇಕು ಎಂಬುದು ಚಿತ್ರರಂಗದವರ ಬಹುವರ್ಷಗಳ ಕೋರಿಕೆ. ಆದರೆ, ಅದು ಈವರೆಗೆ ಈಡೇರಿಲ್ಲ. ಸರ್ಕಾರಗಳು ಬದಲಾದಂತೆ ಇದನ್ನು ನಿರ್ಮಾಣ ಮಾಡಲು ನಿಗದಿಪಡಿಸಿದ ಜಾಗಗಳು ಕೂಡ ಬದಲಾಗುತ್ತಲೇ ಬಂದವು. ಈ ಬಾರಿ ಬಜೆಟ್​ನಲ್ಲಿ ಮತ್ತೆ ಇದರ ಪ್ರಸ್ತಾಪ ಆಗಿದೆ. ಮೈಸೂರಿನಲ್ಲಿ ಫಿಲ್ಮ್​ ಸಿಟಿ (Film City) ನಿರ್ಮಾಣ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಅವರು ಬಜೆಟ್​ನಲ್ಲಿ (Karnataka Budget 2023) ಘೋಷಿಸಿದ್ದಾರೆ. ಸರ್ಕಾರಿ-ಖಾಸಗಿ ಸಹಭಾಗಿತ್ವದಲ್ಲಿ ಚಿತ್ರನಗರಿಯನ್ನು ನಿರ್ಮಿಸಲು ಈ ಬಾರಿ ಸಿದ್ದರಾಮಯ್ಯ ಅವರು ಮುಂದಾಗಿದ್ದಾರೆ.

ಮಾಜಿ ಸಿಎಂ ಎಚ್​ಡಿ ಕುಮಾರಸ್ವಾಮಿ ಅವರು ಫಿಲ್ಮ್​ ಸಿಟಿಯನ್ನು ರಾಮನಗರದಲ್ಲಿ ಮಾಡುವ ಉದ್ದೇಶ ಹೊಂದಿದ್ದರು. ಬಿಜೆಪಿ ಸರ್ಕಾರವು ಬೆಂಗಳೂರಿನಲ್ಲಿಯೇ ಫಿಲ್ಮ್​ ಸಿಟಿ ನಿರ್ಮಿಸುತ್ತೇವೆ ಎಂದು ಹೇಳಿತ್ತು. ಆದರೆ, ಅದಾವುದೂ ಕೈಗೂಡಲಿಲ್ಲ. ಈಗ ಸಿದ್ದರಾಮಯ್ಯ ಅವರು ಮೈಸೂರಿನಲ್ಲಿ ಇದನ್ನು ನಿರ್ಮಿಸುವುದಾಗಿ ಘೋಷಿಸಿದ್ದಾರೆ. ಸರ್ಕಾರಿ ಹಾಗೂ ಖಾಸಗಿ ಸಹಭಾಗಿತ್ವ ಇದರಲ್ಲಿ ಇರಲಿದೆ.

ಸಿನಿಮಾ ಕೆಲಸಗಳಿಗೆ ಚಿತ್ರ ನಗರಿ ಅತ್ಯಗತ್ಯ. ಸದ್ಯ ಹೈದರಾಬಾದ್ ಮೊದಲಾದ ಕಡೆಗಳಿಗೆ ತೆರಳಿ ಸೆಟ್​ಗಳನ್ನು ನಿರ್ಮಿಸಿ ಶೂಟ್ ಮಾಡಲಾಗುತ್ತಿದೆ. ಕರ್ನಾಟಕದಲ್ಲೇ ಫಿಲ್ಮ್ ಸಿಟಿ ನಿರ್ಮಾಣ ಆದರೆ ಸಿನಿಮಾದವರು ಪರ ರಾಜ್ಯಕ್ಕೆ ತೆರಳುವುದು ತಪ್ಪಲಿದೆ. ಹೀಗಾಗಿ, ಅನೇಕ ವರ್ಷಗಳಿಂದ ಈ ಬೇಡಿಕೆ ಹಾಗೆಯೇ ಇದೆ.

ಇದನ್ನೂ ಓದಿ: ವಧು ವರರಿಗೆ ಗುಡ್ ನ್ಯೂಸ್: ವಿವಾಹ ನೋಂದಾಣಿ ಮತ್ತಷ್ಟು ಸರಳೀಕರಣಗೊಳಿಸಿದ ಸಿದ್ದರಾಮಯ್ಯ

ಇತ್ತೀಚೆಗೆ ಬೆಂಗಳೂರಿನಲ್ಲಿ ಸುಶಾಸನ್ ಗರೀಬ್ ಕಲ್ಯಾಣ್ ರಾಷ್ಟ್ರೀಯ ಸಮಾವೇಶ ನಡೆದಿತ್ತು. ಇದರಲ್ಲಿ ರಿಷಬ್ ಭಾಗಿ ಆಗಿದ್ದರು ‘ಈಗಿನ ಕಾಲದಲ್ಲಿ ಪ್ರೇಕ್ಷಕರನ್ನು ತಲುಪುವುದು ಒಂದು ಸವಾಲು. ಸರ್ಕಾರದಿಂದ ಸಿನಿಮಾದವರಿಗೆ ಸಾಕಷ್ಟು ಬೆಂಬಲ ಸಿಗುತ್ತಿದೆ. ಇದರ ಜೊತೆ ಬೆಂಗಳೂರಿನಲ್ಲಿ ಫಿಲ್ಮ್ ಸಿಟಿ ನಿರ್ಮಾಣ ಆಗಬೇಕು’ ಎಂದು ರಿಷಬ್ ಹೇಳಿದ್ದರು. ಸಿದ್ದರಾಮಯ್ಯ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಅವರು ಈ ಬೇಡಿಕೆ ಇಟ್ಟಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 1:30 pm, Fri, 7 July 23

ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್