Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವದರ್ಜೆ ಫಿಲಂ ಸಿಟಿ ನಿರ್ಮಾಣ: ಸಿಎಂ ಸಿದ್ದರಾಮಯ್ಯ ಭರವಸೆ, ಬಜೆಟ್ ಎಷ್ಟು?

CM Siddaramaiah: 16ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋವ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿದ್ದರಾಮಯ್ಯ ಮೈಸೂರಿನಲ್ಲಿ ಫಿಲಂ ಸಿಟಿ ನಿರ್ಮಾಣದ ಬಗ್ಗೆ ಮತ್ತೊಮ್ಮೆ ಭರವಸೆ ನೀಡಿದರು. ಮಾತ್ರವಲ್ಲದೆ ಸಿನಿಮಾ ರಂಗದವರಿಗೆ ಕೆಲವು ಸಲಹೆಗಳನ್ನು ಸಹ ಸಿಎಂ ನೀಡಿದರು. ಡಿಸಿಎಂ ಡಿಕೆ ಶಿವಕುಮಾರ್ ಸಹ ಮೈಸೂರಿನಲ್ಲಿ ಫಿಲಂ ಸಿಟಿ ನಿರ್ಮಿಸುತ್ತೇವೆ ಎಂದು ಭರವಸೆ ನೀಡಿದರು.

ವಿಶ್ವದರ್ಜೆ ಫಿಲಂ ಸಿಟಿ ನಿರ್ಮಾಣ: ಸಿಎಂ ಸಿದ್ದರಾಮಯ್ಯ ಭರವಸೆ, ಬಜೆಟ್ ಎಷ್ಟು?
Cm Siddaramaiah
Follow us
ಮಂಜುನಾಥ ಸಿ.
|

Updated on: Mar 02, 2025 | 7:35 AM

16ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರ ಉತ್ಸವ ಉದ್ಘಾಟನೆಯನ್ನು ಸಿದ್ದರಾಮಯ್ಯ ನಿನ್ನೆ (ಮಾರ್ಚ್ 01) ಸಂಜೆ ನೆರವೇರಿಸಿದರು. ವಿಧಾನಸೌಧದ ಮುಂದೆ ನಡೆದ ಅದ್ಧೂರಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಫಿಲಂ ಸಿಟಿ ನಿರ್ಮಾಣ ಮಾಡಿಕೊಡುವ ಭರವಸೆಯನ್ನು ಮತ್ತೊಮ್ಮೆ ನೀಡಿದರು. ಅದು ಮಾತ್ರವೇ ಅಲ್ಲದೆ ಇನ್ನೂ ಹಲವು ವಿಷಯಗಳ ಬಗ್ಗೆ ಮಾತನಾಡಿದರು.

ಮೈಸೂರಿನಲ್ಲಿ ವಿಶ್ವದರ್ಜೆಯ ಫಿಲ್ಮ್ ಸಿಟಿಯನ್ನು ನಿರ್ಮಿಸುತ್ತೇವೆ. ಇದಕ್ಕಾಗಿ ಈಗಾಗಲೇ 150 ಎಕರೆ ಜಾಗವನ್ನು ಗುರುತಿಸಿ, ನಿಯೋಜಿಸಲಾಗಿದೆ. ಫಿಲಂ ಸಿಟಿ ನಿರ್ಮಾಣಕ್ಕೆ ದೊಡ್ಡ ಮೊತ್ತದ ಹಣವನ್ನೂ ಸಹ ಮೀಸಲಿಡಲಾಗಿದೆ’ ಎಂದರು ಸಿಎಂ ಸಿದ್ದರಾಮಯ್ಯ, ಬಳಿಕ ‘ಕರ್ನಾಟಕವೇ ಒಂದು ಜಗತ್ತು. ಇಲ್ಲಿ ಎಲ್ಲ ಅವಕಾಶಗಳನ್ನು ಸೃಷ್ಟಿಸಬಹುದು. ಇದಕ್ಕಾಗಿ ವಿಶ್ವ ದರ್ಜೆಯ ಅತ್ಯುನ್ನತ ಗುಣಮಟ್ಟದ ಫಿಲ್ಮ್ ಸಿಟಿಯನ್ನು ಮೈಸೂರಿನಲ್ಲಿ ನಿರ್ಮಿಸುತ್ತಿದ್ದೇವೆ. ತಂತ್ರಜ್ಞಾನದ ಜೊತೆಗೆ ಮಾನವೀಯ ಮೌಲ್ಯಗಳನ್ನು ಬೆಸೆಯುವ ಸಿನಿಮಾಗಳನ್ನು ವಿಶ್ವದರ್ಜೆಯ ಗುಣಮಟ್ಟದಲ್ಲಿ ಇಲ್ಲಿ ನಿರ್ಮಾಣ ಆಗಬೇಕು’ ಎಂದರು.

‘ಅಂತಾರಾಷ್ಟ್ರೀಯ ಚಿತ್ರೋತ್ಸವ ವಿಶ್ವ ಸಮುದಾಯದ ಸಂಸ್ಕೃತಿಯ ಪ್ರತಿಬಿಂಬ. ಇದನ್ನು ನೋಡುಗರು ಸದುಪಯೋಗಪಡಿಸಿಕೊಳ್ಳಬೇಕು. ನಮ್ಮಲ್ಲಿ ಅಸಹನೆ ಹೆಚ್ಚುತ್ತಿರುವುದರಿಂದ ಸಮಾಜದಲ್ಲಿ ಅಸಂತೋಷ ಹೆಚ್ಚುತ್ತಿದೆ. ಸಂಪತ್ತಿನ ಅಸಮಾನ ಹಂಚಿಕೆ ಈ ಅಸಂತೋಷಕ್ಕೆ ಕಾರಣ. ದೇಶದ 1% ಜನರ ಕೈಯಲ್ಲಿ ದೇಶದ 50% ಸಂಪತ್ತು ಸೇರಿಕೊಂಡಿದೆ. ಇದಕ್ಕೆ ಕಲಾ ಮಾಧ್ಯಮ ಆಗಿರುವ ಸಿನಿಮಾಗಳು ಪರಿಹಾರ ಹುಡುಕಬೇಕು. ಸಮಾಜವನ್ನು ಕಲಾ ಮಾಧ್ಯಮದ ಮೂಲಕ ಬೆಸೆಯಬೇಕು’ ಎಂದರು.

ಇದನ್ನೂ ಓದಿ:‘ನಿಮ್ಮ ನೆಟ್ಟು, ಬೋಲ್ಟ್ ಟೈಟ್ ಮಾಡುವೆ’: ನಟರಿಗೆ ನೇರ ಎಚ್ಚರಿಕೆ ಕೊಟ್ಟ ಡಿಕೆ ಶಿವಕುಮಾರ್

ಹಳೆಯ ಸಿನಿಮಾಗಳನ್ನು ನೆನಪು ಮಾಡಿಕೊಂಡ ಸಿದ್ದರಾಮಯ್ಯ, ‘ಡಾ.ರಾಜ್ ಕುಮಾರ್ ಅವರ ಸಿನಿಮಾಗಳಲ್ಲಿದ್ದ ಮೌಲ್ಯಗಳು ಮತ್ತು ಘನತೆ ಈಗಿನ ಸಿನಿಮಾಗಳಲ್ಲಿ ಕಾಣುತ್ತಿಲ್ಲ. ರಾಜ್ ಕುಮಾರ್ ಸಿನಿಮಾಗಳಲ್ಲಿ ಸೌಹಾರ್ದ ಮತ್ತು ಮಾನವೀಯ ಮೌಲ್ಯಗಳು ತುಂಬಿರುತ್ತಿದ್ದವು. ಹೀಗಾಗಿ ಸರ್ವರಿಗೂ ಅವರ ಸಿನಿಮಾಗಳು ಇಷ್ಟ ಆಗುತ್ತಿದ್ದವು, ಈಗ ಮತ್ತೊಮ್ಮೆ ಸಿನಿಮಾಗಳಲ್ಲಿ ಮೌಲ್ಯಗಳನ್ನು ತರಬೇಕಿದೆ’ ಎಂದರು.

‘ಮೌಡ್ಯಗಳನ್ನು ಬಿತ್ತುವ, ಸಂವಿಧಾನದ ಮೌಲ್ಯಗಳಿಗೆ ವಿರುದ್ಧವಾದ ಸಿನಿಮಾಗಳು ಸಮಾಜಕ್ಕೆ ಒಳ್ಳೆಯದಲ್ಲ. ಬಸವಣ್ಣನವರು ಕರ್ಮ ಸಿದ್ಧಾಂತವನ್ನು ತಿರಸ್ಕರಿಸಿದ್ದರು. ಸಿನಿಮಾಗಳು ಮತ್ತೆ ಮೌಡ್ಯಗಳನ್ನು ಬಿತ್ತುವುದಕ್ಕೆ ಹೋಗಬಾರದು. ಈಗ ತಂತ್ರಜ್ಞಾನ ಬೆಳೆದು ಕೃತಕ ಬುದ್ದಿಮತ್ತೆವರೆಗೂ ಬೆಳೆದು ಬಂದಿದೆ. ನಮ್ಮ ಬದುಕನ್ನು ಪ್ರತಿಬಿಂಬಿಸುವ, ನಮ್ಮ ತಳಮಳಗಳಿಗೆ ಪರಿಹಾರ ಹುಡುಕುವ ಸಿನಿಮಾಗಳು ಬಂದಾಗ ಅಂತಹ ಸಿನಿಮಾಗಳು ಶಾಶ್ವತವಾಗಿ ಸಮಾಜದಲ್ಲಿ ಉಳಿಯುತ್ತವೆ’ ಎಂದು ಸಲಹೆ ನೀಡಿದರು.

‘ಬೆಂಗಳೂರು, ಕರ್ನಾಟಕವೇ ಒಂದು ಜಗತ್ತು. ಇಲ್ಲಿ ಎಲ್ಲವೂ ಇದೆ. ತಂತ್ರಜ್ಞಾನದ ಅವಕಾಶಗಳನ್ನು ಬಳಸಿಕೊಂಡು ಉತ್ತಮ‌ ಸಿನಿಮಾಗಳನ್ನು ಮಾಡಿದರೆ ಸಮಾಜಕ್ಕೆ ಒಳ್ಳೆಯದಾಗುತ್ತದೆ. ಸಿನಿಮಾ ಕ್ಷೇತ್ರವೂ ಪ್ರಗತಿ ಕಾಣುತ್ತದೆ. ಈ ದಿಕ್ಕಿನಲ್ಲಿ ಸಿನಿಮಾ ಜಗತ್ತು ಮಾನವೀಯಗೊಳ್ಳಲಿ’ ಎಂದು ಸಿದ್ದರಾಮಯ್ಯ ಹಾರೈಸಿದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬಂಗಾಳದಲ್ಲಿ ವಕ್ಫ್ ವಿರೋಧಿ ಪ್ರತಿಭಟನೆ; ಪೊಲೀಸ್ ವಾಹನಗಳಿಗೆ ಬೆಂಕಿ
ಬಂಗಾಳದಲ್ಲಿ ವಕ್ಫ್ ವಿರೋಧಿ ಪ್ರತಿಭಟನೆ; ಪೊಲೀಸ್ ವಾಹನಗಳಿಗೆ ಬೆಂಕಿ
ದೇವರ ಮೊರೆ ಹೋದ ಸಿಎಸ್​ಕೆ ತಂಡ; ಗೈರಾದ ಧೋನಿ
ದೇವರ ಮೊರೆ ಹೋದ ಸಿಎಸ್​ಕೆ ತಂಡ; ಗೈರಾದ ಧೋನಿ
ಸನ್‌ರೈಸರ್ಸ್ ಹೈದರಾಬಾದ್ ತಂಡ ಉಳಿದುಕೊಂಡಿರುವ ಹೋಟೆಲ್‌ನಲ್ಲಿ ಬೆಂಕಿ ದುರಂತ
ಸನ್‌ರೈಸರ್ಸ್ ಹೈದರಾಬಾದ್ ತಂಡ ಉಳಿದುಕೊಂಡಿರುವ ಹೋಟೆಲ್‌ನಲ್ಲಿ ಬೆಂಕಿ ದುರಂತ
ಶಾಸಕರು ಬಯಸಿದರೆ ಶಿವಕುಮಾರ್ ಸಿಎಂ ಆಗುವುದನ್ನು ಯಾರು ತಡೆದಾರು? ರಾಯರೆಡ್ಡಿ
ಶಾಸಕರು ಬಯಸಿದರೆ ಶಿವಕುಮಾರ್ ಸಿಎಂ ಆಗುವುದನ್ನು ಯಾರು ತಡೆದಾರು? ರಾಯರೆಡ್ಡಿ
ವಿಧಾನಸೌಧ ಮುಂದೆ ಹಾಕಿದ್ದ ಪೆಂಡಾಲ್​​​ಗಳ ಕೆಳಗೆ ಆಶ್ರಯ ಪಡೆದ ಜನ
ವಿಧಾನಸೌಧ ಮುಂದೆ ಹಾಕಿದ್ದ ಪೆಂಡಾಲ್​​​ಗಳ ಕೆಳಗೆ ಆಶ್ರಯ ಪಡೆದ ಜನ
14 ವರ್ಷದ ಬಳಿಕ ರಾಮಪಾಲ್ ಕಶ್ಯಪ್ ಚಪ್ಪಲಿ ಧರಿಸುವಂತೆ ಮಾಡಿದ ಪಿಎಂ ಮೋದಿ
14 ವರ್ಷದ ಬಳಿಕ ರಾಮಪಾಲ್ ಕಶ್ಯಪ್ ಚಪ್ಪಲಿ ಧರಿಸುವಂತೆ ಮಾಡಿದ ಪಿಎಂ ಮೋದಿ
ಹೈದರಾಬಾದ್ ಆಟಗಾರರು ತಂಗಿದ್ದ ಹೋಟೆಲ್‌ನಲ್ಲಿ ಅಗ್ನಿ ಅವಘಡ
ಹೈದರಾಬಾದ್ ಆಟಗಾರರು ತಂಗಿದ್ದ ಹೋಟೆಲ್‌ನಲ್ಲಿ ಅಗ್ನಿ ಅವಘಡ
ಜಾತಿ ಗಣತಿ ಅವೈಜ್ಞಾನಿಕವಾಗಿದೆ, ಮತ್ತೊಮ್ಮೆ ಮಾಡಿಸಬೇಕು: ಸ್ವಾಮೀಜಿ
ಜಾತಿ ಗಣತಿ ಅವೈಜ್ಞಾನಿಕವಾಗಿದೆ, ಮತ್ತೊಮ್ಮೆ ಮಾಡಿಸಬೇಕು: ಸ್ವಾಮೀಜಿ
ಬೃಹತ್ ಜಾತಿ ಗಣತಿ ವರದಿಯನ್ನು ಯಾರೂ ಓದಿದಂತಿಲ್ಲ, ಓದಲು ಸಮಯ ಹಿಡಿಯಲಿದೆ
ಬೃಹತ್ ಜಾತಿ ಗಣತಿ ವರದಿಯನ್ನು ಯಾರೂ ಓದಿದಂತಿಲ್ಲ, ಓದಲು ಸಮಯ ಹಿಡಿಯಲಿದೆ
ಭಾರತದ ಲೇಸರ್ ವೆಪನ್ ಸಿಸ್ಟಂ ಪ್ರಯೋಗದ ವಿಡಿಯೋ
ಭಾರತದ ಲೇಸರ್ ವೆಪನ್ ಸಿಸ್ಟಂ ಪ್ರಯೋಗದ ವಿಡಿಯೋ