‘ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ದರ್ಶನ್​ ಬಂಧನದಿಂದ ಚಿತ್ರರಂಗ ಮಂಕಾಗಿದೆ’: ಶ್ರುತಿ

‘ಫೇಕ್​ ಅಕೌಂಟ್​ಗಳಿಂದ ಬರುವ ಕೆಟ್ಟ ಕಮೆಂಟ್​ಗಳು ನಮಗೆ ತುಂಬ ನೋವು ನೀಡುತ್ತವೆ. ಅದನ್ನು ನಾನು ಕೂಡ ಅನುಭವಿಸಿದ್ದೇನೆ’ ಎಂದು ಹಿರಿಯ ನಟಿ ಶ್ರುತಿ ಹೇಳಿದ್ದಾರೆ. ರೇಣುಕಾ ಸ್ವಾಮಿಯ ಹತ್ಯೆ ನಡೆಯುವುದರ ಹಿಂದೆ ಇರುವುದು ಕೂಡ ಒಂದು ಕೆಟ್ಟ ಕಮೆಂಟ್​. ಆತನ ಕೊಲೆಯ ಕೇಸ್​​ನಲ್ಲಿ ದರ್ಶನ್​ ಆರೋಪಿಯಾಗಿ ಜೈಲುಪಾಲಾಗಿದ್ದಾರೆ. ಈ ಕುರಿತು ನಟಿ ಶ್ರುತಿ ಅವರು ತಮ್ಮ ಅನಿಸಿಕೆ ತಿಳಿಸಿದ್ದಾರೆ.

‘ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ದರ್ಶನ್​ ಬಂಧನದಿಂದ ಚಿತ್ರರಂಗ ಮಂಕಾಗಿದೆ’: ಶ್ರುತಿ
ದರ್ಶನ್​, ಶ್ರುತಿ
Follow us
ಮದನ್​ ಕುಮಾರ್​
|

Updated on: Jun 27, 2024 | 10:57 PM

ನಟ ದರ್ಶನ್​ (Darshan) ಅರೆಸ್ಟ್​ ಆದ ಬಳಿಕ ಚಿತ್ರರಂಗದಲ್ಲಿ ಕೆಲವು ಬದಲಾವಣೆಗಳು ಆಗುತ್ತಿವೆ. ಇಂಥ ಪ್ರಕರಣಗಳು ನಡೆದಾಗ ಚಿತ್ರರಂಗದ ಮೇಲೆ ಕಪ್ಪು ಚುಕ್ಕಿ ಆಗುತ್ತದೆ. ರೇಣುಕಾ ಸ್ವಾಮಿ (Renuka Swamy) ಎಂಬ ವ್ಯಕ್ತಿಯು ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳಿಸಿದ ಎಂಬ ಕಾರಣಕ್ಕೆ ಆತನನ್ನು ಹತ್ಯೆ ಮಾಡಿದ ಆರೋಪ ದರ್ಶನ್​ ಮೇಲಿದೆ. ನ್ಯಾಯಾಂಗ ಬಂಧನದಲ್ಲಿ ಇರುವ ದರ್ಶನ್​ ಈಗ ಪರಪ್ಪನ ಅಗ್ರಹಾರದಲ್ಲಿ ದಿನ ಕಳೆಯುತ್ತಿದ್ದಾರೆ. ಈ ಘಟನೆ ಕುರಿತಂತೆ ಚಿತ್ರರಂಗದ ಹಲವರು ಪ್ರತಿಕ್ರಿಯೆ ನೀಡುತ್ತಿದ್ದಾರೆ. ದರ್ಶನ್​ ಜೊತೆ ‘ಕಾಟೇರ’ ಸಿನಿಮಾದಲ್ಲಿ ನಟಿಸಿದ ಹಿರಿಯ ನಟಿ ಶ್ರುತಿ (Shruthi) ಕೂಡ ಈ ಬಗ್ಗೆ ಮಾತನಾಡಿದ್ದಾರೆ.

‘ಚಿತ್ರರಂಗ ಎಂದರೆ ಒಂದು ಕುಟುಂಬ ಇದ್ದಂತೆ. ಯಾವ ಕಲಾವಿದರನ್ನೂ ನಾವು ಪ್ರತ್ಯೇಕವಾಗಿ ನೋಡಿಲ್ಲ. ನಮ್ಮ ಕುಟುಂಬದಲ್ಲಿ ಯಾರಾದರೂ ಒಬ್ಬರಿಗೆ ತೊಂದರೆ ಆದರೆ ಆ ಛಾಯೆ ನಮ್ಮ ಚಿತ್ರರಂಗದ ಮೇಲೆ ಇದ್ದೇ ಇರುತ್ತದೆ. ಎಲ್ಲರೂ ಇದೇ ಮಾತಾಡುತ್ತಿದ್ದಾರೆ. ಎಲ್ಲ ನಿರ್ಮಾಪಕರು ಮಂಕಾಗಿದ್ದಾರೆ. ಮಾನಸಿಕವಾಗಿ ಎಲ್ಲರಿಗೂ ಪರಿಣಾಮ ಬೀರಿದೆ’ ಎಂದು ಶ್ರುತಿ ಹೇಳಿದ್ದಾರೆ.

ರೇಣುಕಾ ಸ್ವಾಮಿಯ ಕೊಲೆ ನಡೆಯಲು ಮುಖ್ಯ ಕಾರಣ ಆಗಿದ್ದೇ ಒಂದು ಅಶ್ಲೀಲ ಸಂದೇಶ. ಸೋಶಿಯಲ್​ ಮೀಡಿಯಾದಲ್ಲಿ ಫೇಕ್​ ಖಾತೆಗಳ ಮೂಲಕ ಕೆಟ್ಟ ಕಮೆಂಟ್​ ಮಾಡುವ ವ್ಯಕ್ತಿಗಳ ಬಗ್ಗೆ ಶ್ರುತಿ ಮಾತನಾಡಿದ್ದಾರೆ. ‘ತಿಳಿದವರು ಕಮೆಂಟ್​ ಮಾಡಿದರೆ ಅದನ್ನು ನಾವು ತಿದ್ದಿಕೊಂಡು ಮುಂದಕ್ಕೆ ಹೋಗಬಹುದು. ಆದರೆ ಫೇಕ್​ ಅಕೌಂಟ್​ಗಳಿಂದ ಹೆಣ್ಣು ಮಕ್ಕಳ ಬಗ್ಗೆ ಅಶ್ಲೀಲವಾದ ಕಮೆಂಟ್​ಗಳು ಬರುತ್ತಿವೆ. ಇದು ಒಳ್ಳೆಯ ಬೆಳವಣಿಗೆ ಅಲ್ಲ. ಅದನ್ನು ಸಹಿಸಿಕೊಂಡು ಯಾವ ಹೆಣ್ಣು ಮಗಳೂ ಇರಲ್ಲ’ ಎಂದಿದ್ದಾರೆ ಶ್ರುತಿ.

ಇದನ್ನೂ ಓದಿ: ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ವಿಕಿಪೀಡಿಯಾ ಪೇಜ್; ದರ್ಶನ್​ ಬಗ್ಗೆಯೂ ಮಾಹಿತಿ

‘ಈ ಬಗ್ಗೆ ನಾನು ಎಲ್ಲರ ಜೊತೆ ಸಹಜವಾಗಿ ಮಾತನಾಡುವಾಗ ಒಂದು ವಿಷಯ ಕೇಳುತ್ತೇನೆ. ಪ್ರತಿಯೊಂದು ಇನ್​ಸ್ಟಾಗ್ರಾಮ್​ ಅಥವಾ ಫೇಸ್​ಬುಕ್​ ಖಾತೆಗಳನ್ನು ಕ್ರಿಯೇಟ್​ ಮಾಡುವಾಗ ಯಾಕೆ ಕೆವೈಸಿ ಮಾಡಬಾರದು? ಅಕೌಂಟ್​ ಹೋಲ್ಡರ್​ಗಳಿಗೆ ವಾಕ್​ ಸ್ವಾತಂತ್ರ್ಯ ಇರುತ್ತದೆ. ಅದು ಅವರ ಹಕ್ಕು. ಅದನ್ನು ನಾವು ಕಿತ್ತುಕೊಳ್ಳೋಕೆ ಆಗಲ್ಲ. ಆದರೆ ಒಬ್ಬರ ಜೀವ ಹೋಗುವಷ್ಟರಮಟ್ಟಿಗೆ ಕೆಟ್ಟ ಕಮೆಂಟ್​ಗಳನ್ನು ಮಾಡಿದರೆ ಅದರ ಹಿಂದೆ ಯಾರು ಇದ್ದಾರೆ ಎಂಬುದನ್ನು ಕಂಡುಹಿಡಿಯಲು ಸಾಧ್ಯವಾಗುತ್ತದೆ’ ಎಂದು ಶ್ರುತಿ ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪ್ರವಾಹದ ನೀರಿಗಿಳಿದು 3 ಬೆಕ್ಕಿನ ಮರಿಗಳನ್ನು ರಕ್ಷಿಸಿದ ಪುಟ್ಟ ಬಾಲಕ
ಪ್ರವಾಹದ ನೀರಿಗಿಳಿದು 3 ಬೆಕ್ಕಿನ ಮರಿಗಳನ್ನು ರಕ್ಷಿಸಿದ ಪುಟ್ಟ ಬಾಲಕ
ಸಿಂಗಾಪುರ್ ವಿಮಾನ ನಿಲ್ದಾಣಕ್ಕೆ ನುಗ್ಗಿದ ಕೋತಿ; ಸಿಬ್ಬಂದಿ ಮಾಡಿದ್ದೇನು?
ಸಿಂಗಾಪುರ್ ವಿಮಾನ ನಿಲ್ದಾಣಕ್ಕೆ ನುಗ್ಗಿದ ಕೋತಿ; ಸಿಬ್ಬಂದಿ ಮಾಡಿದ್ದೇನು?
ಕ್ಲಿಯೋಪಾತ್ರ ಸ್ನಾನ ಮಾಡುತ್ತಿದ್ದ ಕತ್ತೆ ಹಾಲು ಕುಡಿದ ಬಾಬಾ ರಾಮದೇವ್
ಕ್ಲಿಯೋಪಾತ್ರ ಸ್ನಾನ ಮಾಡುತ್ತಿದ್ದ ಕತ್ತೆ ಹಾಲು ಕುಡಿದ ಬಾಬಾ ರಾಮದೇವ್
ಕಾರ್ಯಕರ್ತರಿಗೆ ಖುಷಿಯಾಗುವ ನಿರ್ಧಾರ: ನಡ್ಡಾ ಭೇಟಿ ಬಳಿಕ ಅಶೋಕ್ ಸಂತಸದ ಮಾತು
ಕಾರ್ಯಕರ್ತರಿಗೆ ಖುಷಿಯಾಗುವ ನಿರ್ಧಾರ: ನಡ್ಡಾ ಭೇಟಿ ಬಳಿಕ ಅಶೋಕ್ ಸಂತಸದ ಮಾತು
ಪಾರ್ಕ್​ನಲ್ಲಿ ಹಾಡಿನ ಶೂಟಿಂಗ್ ಮಾಡಿದ್ರೆ ನೋಡ್ತೀರಾ? ಉಪೇಂದ್ರ ಪ್ರಶ್ನೆ
ಪಾರ್ಕ್​ನಲ್ಲಿ ಹಾಡಿನ ಶೂಟಿಂಗ್ ಮಾಡಿದ್ರೆ ನೋಡ್ತೀರಾ? ಉಪೇಂದ್ರ ಪ್ರಶ್ನೆ
ಹಿಂದಿ ಹಾಡಿಗೆ ಸಖತ್ತಾಗಿ ಅಭಿನಯ ಮಾಡಿದ 5 ವರ್ಷದ ಪುಟ್ಟ ಬಾಲಕಿ
ಹಿಂದಿ ಹಾಡಿಗೆ ಸಖತ್ತಾಗಿ ಅಭಿನಯ ಮಾಡಿದ 5 ವರ್ಷದ ಪುಟ್ಟ ಬಾಲಕಿ
ಸುಳ್ಳು ಕೇಸಲ್ಲಿ ರೇವಣ್ಣನನ್ನು ಸಿಕ್ಕಿಸುವ ಪ್ರಯತ್ನ ಮಾಡಲಾಗಿತ್ತು:ಹೆಚ್ಡಿಕೆ
ಸುಳ್ಳು ಕೇಸಲ್ಲಿ ರೇವಣ್ಣನನ್ನು ಸಿಕ್ಕಿಸುವ ಪ್ರಯತ್ನ ಮಾಡಲಾಗಿತ್ತು:ಹೆಚ್ಡಿಕೆ
ವಕ್ಫ್ ಕಾಯ್ದೆಗೆ ತಿದ್ದುಪಡಿ ತರಲು ನಾವು ನೀಡಿದ ವರದಿ ನೆರವಾಗಲಿದೆ:ಬಂಗಾರಪ್ಪ
ವಕ್ಫ್ ಕಾಯ್ದೆಗೆ ತಿದ್ದುಪಡಿ ತರಲು ನಾವು ನೀಡಿದ ವರದಿ ನೆರವಾಗಲಿದೆ:ಬಂಗಾರಪ್ಪ
‘ಪುಷ್ಪ 2’ ಸಿನಿಮಾ ಮೊದಲ ದಿನ ಎಷ್ಟು ಗಳಿಸಲಿದೆ: ವಿತರಕರ ನಿರೀಕ್ಷೆ ಏನು?
‘ಪುಷ್ಪ 2’ ಸಿನಿಮಾ ಮೊದಲ ದಿನ ಎಷ್ಟು ಗಳಿಸಲಿದೆ: ವಿತರಕರ ನಿರೀಕ್ಷೆ ಏನು?
‘ಹೆಣ್ಮಕ್ಕಳ ಹಿಂದೆ ತಿರುಗುವ ಜೊಲ್ಲ’: ಶಿಶಿರ್ ಬಗ್ಗೆ ಚೈತ್ರಾ ಗಂಭೀರ ಆರೋಪ
‘ಹೆಣ್ಮಕ್ಕಳ ಹಿಂದೆ ತಿರುಗುವ ಜೊಲ್ಲ’: ಶಿಶಿರ್ ಬಗ್ಗೆ ಚೈತ್ರಾ ಗಂಭೀರ ಆರೋಪ