‘ಟಾಕ್ಸಿಕ್’ ಸಿನಿಮಾ ನಿರ್ಮಾಪಕರ ವಿರುದ್ಧ ಎಫ್​ಐಆರ್ ದಾಖಲು

ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾದ ಸೆಟ್ ನಿರ್ಮಾಣ ಮಾಡಲು ಮರಗಳನ್ನು ಕಡಿದ ಆರೋಪದಲ್ಲಿ ನ್ಯಾಯಾಲಯದ ಆದೇಶದ ಮೇರೆಗೆ ಸಿನಿಮಾದ ನಿರ್ಮಾಣ ಸಂಸ್ಥೆಗಳ ವಿರುದ್ಧ ಎಫ್​ಐಆರ್ ದಾಖಲಾಗಿದೆ. ನೊಟೀಸ್ ನೀಡಿ ವಿಚಾರಣೆಗೆ ಕರೆಯುವ ಸಾಧ್ಯತೆ ಇದೆ.

‘ಟಾಕ್ಸಿಕ್’ ಸಿನಿಮಾ ನಿರ್ಮಾಪಕರ ವಿರುದ್ಧ ಎಫ್​ಐಆರ್ ದಾಖಲು
Follow us
ಮಂಜುನಾಥ ಸಿ.
|

Updated on: Nov 12, 2024 | 1:06 PM

ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾಕೆ ಕಾನೂನು ತೊಡಕು ಎದುರಾಗಿದೆ. ಬೆಂಗಳೂರಿನ ಎಚ್​ಎಂಟಿ ಕಾರ್ಖಾನೆ ಬಳಿ ಬೃಹತ್ ಸೆಟ್ ನಿರ್ಮಾಣ ಮಾಡಿ ತಿಂಗಳುಗಳ ಕಾಲ ಸಿನಿಮಾದ ಶೂಟಿಂಗ್ ಮಾಡಲಾಗಿತ್ತು. ಆದರೆ ಇತ್ತೀಚೆಗೆ ‘ಟಾಕ್ಸಿಕ್’ ಸಿನಿಮಾ ತಂಡ, ಸೆಟ್ ನಿರ್ಮಾಣ ಮಾಡಲು ಮರಗಳನ್ನು ಕಡಿದು ನಾಶ ಮಾಡಿದೆ ಎಂಬ ಆರೋಪ ಕೇಳಿ ಬಂದಿತ್ತು. ವಕೀಲರೊಬ್ಬರು ಮೊದಲಿಗೆ ಈ ಬಗ್ಗೆ ದೂರು ಸಲ್ಲಿಸಿದ್ದರು. ಇತ್ತೀಚೆಗೆ, ಅರಣ್ಯ ಸಚಿವ ಈಶ್ವರ್ ಖಂಡ್ರೆ ಸಹ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರಲ್ಲದೆ, ಎಚ್​ಎಂಟಿ ಕೆಲ ನಿಯಮಗಳನ್ನು ಮುರಿದಿದೆ ಎಂಬ ಆರೋಪವೂ ಕೇಳಿ ಬಂದಿತ್ತು. ಇದೀಗ ‘ಟಾಕ್ಸಿಕ್’ ಸಿನಿಮಾ ನಿರ್ಮಾಪಕರ ವಿರುದ್ಧ ಎಫ್​ಐಆರ್ ದಾಖಲಾಗಿದೆ.

ಮರಗಳನ್ನು ಕಡಿದ ಆರೋಪದಲ್ಲಿ ನ್ಯಾಯಾಲಯದ ಸೂಚನೆಯಂತೆ ‘ಟಾಕ್ಸಿಕ್’ ಸಿನಿಮಾದ ನಿರ್ಮಾಣ ಸಂಸ್ಥೆಗಳಾದ ಕೆವಿಎನ್ ಹಾಗೂ ಯಶ್​ರ ಮಾನ್ಸ್ಟರ್ ಮೈಂಡ್ ಕ್ರಿಯೇಷನ್ಸ್​​ ವಿರುದ್ಧ ಎಫ್​ಐಆರ್ ದಾಖಲಿಸಲಾಗಿದೆ. ಕೆನರಾ ಬ್ಯಾಂಕ್ ಜನರಲ್ ಮ್ಯಾನೇಜರ್ ಹಾಗೂ ಹೆಚ್​ಎಂಟಿ ಲಿಮಿಟೆಡ್ ವಿರುದ್ಧವೂ ಸಹ ಎಫ್​ಐಆರ್ ದಾಖಲಾಗಿದೆ. ಅರಣ್ಯ ಕಾಯ್ದೆಯ ಅಡಿಯಲ್ಲಿ ಎಫ್​ಐಆರ್ ದಾಖಲಾಗಿದ್ದು, ಆರೋಪಿಗಳಿಗೆ ನೊಟೀಸ್ ನೀಡಿ ವಿಚಾರಣೆಗೆ ಕರೆಯುವ ಸಾಧ್ಯತೆ ಇದೆ.

ಇದನ್ನೂ ಓದಿ:ಕೋರ್ಟ್​ ಕಟಕಟೆಯಲ್ಲಿ ರಾಧಿಕಾ ಪಂಡಿತ್; ಅಬ್ಬರಿಸುತ್ತಾ ವಾದ ಮಾಡಿದ ಯಶ್

ಕಳೆದ ಕೆಲ ತಿಂಗಳಿಂದಲೂ ‘ಟಾಕ್ಸಿಕ್’ ಸಿನಿಮಾದ ಸೆಟ್ ನಿರ್ಮಾಣವಾಗಿರುವ ಜಾಗ ಮತ್ತು ಮರ ಕಡಿದಿರುವ ಕುರಿತು ವಿವಾದಗಳು ಚಾಲ್ತಿಯಲ್ಲಿವೆ. ಅರಣ್ಯ ಸಚಿವ ಈಶ್ವರ ಖಂಡ್ರೆಯವರು, ಎಚ್​ಎಂಟಿ ತನಗೆ ನೀಡಲಾಗಿದ್ದ ಜಾಗವನ್ನು ಸಿನಿಮಾಗಳಿಗೆ ಬಾಡಿಗೆ ನೀಡಿ ಹಣ ಮಾಡುತ್ತಿದೆ ಎಂದು ಆರೋಪಿಸಿತ್ತು. ‘ಟಾಕ್ಸಿಕ್’ ಸಿನಿಮಾದ ಸೆಟ್ ನಿರ್ಮಾಣ ಮಾಡಿದ ಜಾಗದಲ್ಲಿ ಮುಂಚೆ ಇದ್ದ ಮರಗಳು ಆ ನಂತರ ನಾಶವಾದ ಮರಗಳ ಮಾಹಿತಿ ಒದಗಿಸುವ ಸ್ಯಾಟಲೈಟ್ ಚಿತ್ರವನ್ನು ಸಹ ಬಿಡುಗಡೆ ಮಾಡಲಾಗಿತ್ತು.

ಬಳಿಕ ಈ ಆರೋಪಗಳಿಗೆ ಸ್ಪಂದಿಸಿದ್ದ ಎಚ್​ಎಂಟಿ, ‘ಟಾಕ್ಸಿಕ್’ ಸಿನಿಮಾದ ಸೆಟ್ ನಿರ್ಮಾಣ ಆಗಿರುವ ಸ್ಥಳ ನಮ್ಮದಲ್ಲ, ಅದು ಕೆನರಾ ಬ್ಯಾಂಕ್​ಗೆ ಸೇರಿದ್ದು, ಕೆನರಾ ಬ್ಯಾಂಕ್​ಗೆ ಸೇರಿದ ಸ್ಥಳವನ್ನು ನಾವು ಬಾಡಿಗೆಗೆ ಕೊಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ’ ಎಂದಿತ್ತು. ಚಿತ್ರತಂಡ ಸಹ ಈ ಬಗ್ಗೆ ಪ್ರತಿಕ್ರಿಯಿಸಿ, ಮರ ಕಡಿದಿರುವ ಆರೋಪಗಳನ್ನು ತಳ್ಳಿ ಹಾಕಿತ್ತು. ಈ ಎಲ್ಲ ಘಟನೆ ತುಸು ರಾಜಕೀಯ ಕೋನವನ್ನು ಸಹ ಪಡೆದುಕೊಂಡಿವೆ. ಈಗ ಎಫ್​ಐಆರ್ ಸಹ ದಾಖಲಾಗಿದ್ದು, ಚಿತ್ರದ ನಿರ್ಮಾಣ ಸಂಸ್ಥೆ ಏನು ಪ್ರತಿಕ್ರಿಯೆ ನೀಡಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

4 ವರ್ಷಗಳ ಬಳಿಕ ವೈಟ್​ಹೌಸ್​ನಲ್ಲಿ ಡೊನಾಲ್ಡ್ ಟ್ರಂಪ್-ಜೋ ಬೈಡೆನ್ ಭೇಟಿ
4 ವರ್ಷಗಳ ಬಳಿಕ ವೈಟ್​ಹೌಸ್​ನಲ್ಲಿ ಡೊನಾಲ್ಡ್ ಟ್ರಂಪ್-ಜೋ ಬೈಡೆನ್ ಭೇಟಿ
ರಿಲ್ಯಾಕ್ಸ್ ಮೂಡ್​ನಲ್ಲಿರುವ ಕಾಡಾನೆ ಹಿಂಡಿನ ದೃಶ್ಯ ಡ್ರೋನ್​ನಲ್ಲಿ ಸೆರೆ​
ರಿಲ್ಯಾಕ್ಸ್ ಮೂಡ್​ನಲ್ಲಿರುವ ಕಾಡಾನೆ ಹಿಂಡಿನ ದೃಶ್ಯ ಡ್ರೋನ್​ನಲ್ಲಿ ಸೆರೆ​
ನನ್ನನ್ನು ಕೆಳಗಿಳಿಸುವ ಪ್ರಯತ್ನಗಳಿಗೆ ಜನರೇ ಉತ್ತರ ನೀಡಬೇಕು: ಸಿದ್ದರಾಮಯ್ಯ
ನನ್ನನ್ನು ಕೆಳಗಿಳಿಸುವ ಪ್ರಯತ್ನಗಳಿಗೆ ಜನರೇ ಉತ್ತರ ನೀಡಬೇಕು: ಸಿದ್ದರಾಮಯ್ಯ
ಕಾಮಗಾರಿಗಳಲ್ಲಿ ಮೀಸಲಾತಿಯ ಬಗ್ಗೆ ಸಿಎಂ ಸ್ಪಷ್ಟನೆ ನೀಡಿದ್ದಾರೆ: ಖರ್ಗೆ
ಕಾಮಗಾರಿಗಳಲ್ಲಿ ಮೀಸಲಾತಿಯ ಬಗ್ಗೆ ಸಿಎಂ ಸ್ಪಷ್ಟನೆ ನೀಡಿದ್ದಾರೆ: ಖರ್ಗೆ
ದೇವಸ್ಥಾನದಲ್ಲಿ ಪ್ರದಕ್ಷಿಣೆ ಹಾಕುವಾಗಲೇ ಹೃದಯಾಘಾತದಿಂದ ಸಾವು!
ದೇವಸ್ಥಾನದಲ್ಲಿ ಪ್ರದಕ್ಷಿಣೆ ಹಾಕುವಾಗಲೇ ಹೃದಯಾಘಾತದಿಂದ ಸಾವು!
ಮೈಸೂರಿನ ಎಲ್ಲ ಕಾರ್ಯಕ್ರಮಗಳಲ್ಲಿ ತಂದೆಯನ್ನು ಹಿಂಬಾಲಿಸುತ್ತಿರುವ ಯತೀಂದ್ರ
ಮೈಸೂರಿನ ಎಲ್ಲ ಕಾರ್ಯಕ್ರಮಗಳಲ್ಲಿ ತಂದೆಯನ್ನು ಹಿಂಬಾಲಿಸುತ್ತಿರುವ ಯತೀಂದ್ರ
ಮುಳ್ಳಯ್ಯನಗಿರಿಯಲ್ಲಿ ಎಣ್ಣೆ ಪಾರ್ಟಿ ಮಾಡಿ ಪ್ರವಾಸಿಗರ ಹುಚ್ಚಾಟ
ಮುಳ್ಳಯ್ಯನಗಿರಿಯಲ್ಲಿ ಎಣ್ಣೆ ಪಾರ್ಟಿ ಮಾಡಿ ಪ್ರವಾಸಿಗರ ಹುಚ್ಚಾಟ
ಎಂಟನೇ ತರಗತಿವರೆಗೆ ಓದಿರುವ ಮಗ ಗ್ಯಾರೇಜಲ್ಲಿ ಕೆಲಸ ಮಾಡುತ್ತಾನೆ: ತಾಯಿ
ಎಂಟನೇ ತರಗತಿವರೆಗೆ ಓದಿರುವ ಮಗ ಗ್ಯಾರೇಜಲ್ಲಿ ಕೆಲಸ ಮಾಡುತ್ತಾನೆ: ತಾಯಿ
ಸಂಡೂರಿನ ಸಿದ್ದಾಪುರದಲ್ಲಿ ಪ್ರಜಾಪ್ರಭುತ್ವದ ಹಬ್ಬ, ಊರಹಬ್ಬ ಒಟ್ಟಿಗೆ ಬಂದಿವೆ
ಸಂಡೂರಿನ ಸಿದ್ದಾಪುರದಲ್ಲಿ ಪ್ರಜಾಪ್ರಭುತ್ವದ ಹಬ್ಬ, ಊರಹಬ್ಬ ಒಟ್ಟಿಗೆ ಬಂದಿವೆ
ಪಾರ್ಟನ್ ಚೈತ್ರಾ ವಿರುದ್ಧ ಉರಿದು ಬಿದ್ದ ತ್ರಿವಿಕ್ರಮ್, ಮಾಡಿದ್ದಾರೂ ಏನು?
ಪಾರ್ಟನ್ ಚೈತ್ರಾ ವಿರುದ್ಧ ಉರಿದು ಬಿದ್ದ ತ್ರಿವಿಕ್ರಮ್, ಮಾಡಿದ್ದಾರೂ ಏನು?