AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟಿ ಸಂಜನಾಗೆ ವಂಚನೆ ಪ್ರಕರಣ; ರಾಹುಲ್ ಥೋನ್ಸೆ ಸೇರಿ ಮೂವರ ವಿರುದ್ಧ ಎಫ್​ಐಆರ್​ ದಾಖಲು

Sanjjana Galrani: ಸ್ಯಾಂಡಲ್​ವುಡ್ ನಟಿ ಸಂಜನಾ ಗಲ್ರಾನಿಗೆ ವಂಚನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಹುಲ್ ತೋನ್ಸೆ ಸೇರಿ ಮೂವರ ವಿರುದ್ಧ ಎಫ್​ಐಆರ್​ ದಾಖಲಾಗಿದೆ. ಪೊಲೀಸರು ಪ್ರಕರಣದ ತನಿಖೆ ಆರಂಭಿಸಿದ್ದಾರೆ.

ನಟಿ ಸಂಜನಾಗೆ ವಂಚನೆ ಪ್ರಕರಣ; ರಾಹುಲ್ ಥೋನ್ಸೆ ಸೇರಿ ಮೂವರ ವಿರುದ್ಧ ಎಫ್​ಐಆರ್​ ದಾಖಲು
ಸಂಜನಾ ಗಲ್ರಾನಿ, ರಾಹುಲ್ ಥೋನ್ಸೆ
TV9 Web
| Edited By: |

Updated on:Oct 20, 2021 | 9:21 AM

Share

ಬೆಂಗಳೂರು: ಸ್ಯಾಂಡಲ್‌ವುಡ್ ನಟಿ ಸಂಜನಾ ಗಲ್ರಾನಿಗೆ ವಂಚನೆ ಎಸಗಿದ್ದಾರೆ ಎಂಬ ಆರೋಪಕ್ಕೆ ಸಂಬಂಧಪಟ್ಟಂತೆ ರಾಹುಲ್ ಥೋನ್ಸೆ ಸೇರಿದಂತೆ ಮೂವರ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಸಂಜನಾ ಈ ಕುರಿತು ನ್ಯಾಯಾಲಯದಲ್ಲಿ ಪಿಸಿಆರ್ ದಾಖಲಿಸಿದ್ದರು. ಅದರಲ್ಲಿ ಅವರು ‘ತಾವು ಕೊಟ್ಟ ಹಣ ಬಳಸಿಕೊಂಡು ಲಾಭ ಗಳಿಸಿದ್ದಾರೆ ಹಾಗೂ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಹಣ ತೊಡಗಿಸಿದ್ದಾರೆ. ಇದರಿಂದ ತನ್ನ ಘನತೆಗೆ ಧಕ್ಕೆ ಬರುವಂತಾಗಿದೆ. ಇದಲ್ಲದೇ ರಾಹುಲ್ ಥೋನ್ಸೆ ಸುಳ್ಳು ಆರೋಪ ಮಾಡಿದ್ದಾರೆ. ಆದ್ದರಿಂದ ರಾಹುಲ್ ವಿರುದ್ಧ ದೂರು ದಾಖಲಿಸಬೇಕು’ ಎಂದು ಸಂಜನಾ ಮನವಿ ಮಾಡಿದ್ದರು.

ಸಂಜನಾ ದಾಖಲಿಸಿದ್ದ ಪಿಸಿಆರ್ ಅನ್ನು ವಿಚಾರಣೆ ನಡೆಸಿದ್ದ 4ನೇ ಎಸಿಎಂಎಂ ನ್ಯಾಯಾಲಯ ತನಿಖೆಗೆ ಆದೇಶ ನೀಡಿತ್ತು. ಕೋರ್ಟ್ ಆದೇಶದಂತೆ ಇಂದಿರಾನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದರು. ಪ್ರಸ್ತುತ ರಾಹುಲ್ ಥೋನ್ಸೆ ಸೇರಿ ಮೂವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಸಂಜನಾ ಮಾಡಿದ ಆರೋಪಕ್ಕೆ ಸಂಬಂಧಪಟ್ಟಂತೆ, ರಾಹುಲ್ ಥೋನ್ಸೆ ಸೇರಿ ಮೂವರ ವಿರುದ್ಧ ಐಪಿಸಿ ಸೆಕ್ಷನ್ 120ಬಿ, 107, 354, 406, 420, 506, ಕಲಂ 34ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಪೊಲೀಸರು ತನಿಖೆ  ಆರಂಭಿಸಿದ್ದಾರೆ.

ಸಂಜನಾ ಆರೋಪವೇನು? ಗೋವಾ ಮತ್ತು ಕೊಲಂಬೊದಲ್ಲಿ ತಾನು ಕ್ಯಾಸಿನೊಗಳ ಮ್ಯಾನೇಜಿಂಗ್ ಡೈರೆಕ್ಟರ್. ಅವುಗಳಲ್ಲಿ ಹಣ ವಿನಿಯೋಗಿಸಿದರೆ ಹೆಚ್ಚಿನ ಲಾಭಗಳಿಸಬಹುದು ಎಂದು ರಾಹುಲ್ ಥೋನ್ಸೆ ಸಂಜನಾಗೆ ಆಮಿಷ ಒಡ್ಡಿದ್ದರಂತೆ. ಇದರಂತೆ ಕಳೆದ ಮೂರು ವರ್ಷಗಳಿಂದ ಥೋನ್ಸೆ ಸೇರಿದಂತೆ ಮೂವರ ಬ್ಯಾಂಕ್ ಖಾತೆಗಳಿಗೆ ನಟಿ ಸಂಜನಾ ಹಣ ಹಾಕಿದ್ದರು. ಬಳಿಕ ಯಾವುದೇ ಲಾಭಾಂಶ ನೀಡದೆ, ಹಣ ವಾಪಸ್ ಕೇಳಿದರೂ ಹಿಂದಿರುಗಿಸಿಲ್ಲ. ಜೊತೆಗೆ ತಾವು ಕೊಟ್ಟ ಹಣವನ್ನು ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿಸಿ ಲಾಭ ಗಳಿಸಿರುವುದಲ್ಲದೇ, ತಮ್ಮ ಘನತೆಗೆ ಧಕ್ಕೆ ತರುವಂತೆ ಸುಳ್ಳು ಆರೋಪಗಳನ್ನ ಮಾಡಿದ್ದಾರೆ ಎಂದು ಸಂಜನಾ ನ್ಯಾಯಾಲಯದಲ್ಲಿ ಪಿಸಿಆರ್ ದಾಖಲಿಸಿದ್ದರು.

ಇದನ್ನೂ ಓದಿ:

‘ಟಿಕ್​ಟಾಕ್ ಬ್ಯಾನ್ ಆದಾಗ ಇದ್ದ ಒಂದು ಕೆಲಸವೂ ಹೋಯ್ತು’- ಕಷ್ಟದ ಕತೆ ತೆರೆದಿಟ್ಟ ಖ್ಯಾತ ನಟ; ಮುಂದೇನಾಯ್ತು? 

ದುರ್ಗಾ ಮಾತೆ ವೇಷದಲ್ಲಿ ಸಂಜನಾ ಗಲ್ರಾನಿ; ನವರಾತ್ರಿ ಪ್ರಯುಕ್ತ ವಿಶೇಷ ಫೋಟೋಶೂಟ್​

Published On - 8:58 am, Wed, 20 October 21

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ