AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sanjjanaa Galrani: ಸಂಜನಾ ಗಲ್ರಾನಿಗೆ ಮತ್ತೆ ಸಂಕಷ್ಟ; ಡ್ರಗ್​ ಕೇಸ್​ನಲ್ಲಿ ಹೊರಬಂದ ನಟಿ ಮೇಲೆ ಮತ್ತೊಂದು ಎಫ್​ಐಆರ್​

Sanjjanaa Galrani News: ಸಂಜನಾ ಡ್ರಗ್​ ಕೇಸ್​ನಲ್ಲಿ ಬೇಲ್​ ಪಡೆದು ಹೊರ ಬಂದಿದ್ದಾರೆ. ಹೀಗಿರುವಾಗಲೇ ಹಳೆಯ ಕೇಸ್​ ಒಂದಕ್ಕೆ ಈಗ ಹೊಸ ಟ್ವಿಸ್ಟ್ ಸಿಕ್ಕಿದೆ. ಮಾಡೆಲ್ ವಂದನಾ ಜೈನ್ ನೀಡಿದ ದೂರಿನ್ವಯ ಕಬ್ಬನ್ ಪಾರ್ಕ್ ಪೊಲೀಸರು ಎಫ್ಐಆರ್ ದಾಖಲು ಮಾಡಿಕೊಂಡಿದ್ದಾರೆ.

Sanjjanaa Galrani: ಸಂಜನಾ ಗಲ್ರಾನಿಗೆ ಮತ್ತೆ ಸಂಕಷ್ಟ; ಡ್ರಗ್​ ಕೇಸ್​ನಲ್ಲಿ ಹೊರಬಂದ ನಟಿ ಮೇಲೆ ಮತ್ತೊಂದು ಎಫ್​ಐಆರ್​
ಸಂಜನಾ
ರಾಜೇಶ್ ದುಗ್ಗುಮನೆ
|

Updated on:May 13, 2021 | 8:49 PM

Share

ಸ್ಯಾಂಡಲ್​ವುಡ್​ ಡ್ರಗ್​ ಕೇಸ್​ನಲ್ಲಿ ನಟಿ ಸಂಜನಾ ಗಲ್ರಾನಿ ಜೈಲು ಸೇರಿದ್ದರು. ಕೆಲ ತಿಂಗಳ ಹಿಂದೆ ಜಾಮೀನಿನ ಮೇಲೆ ಅವರು ಜೈಲಿನಿಂದ ಹೊರ ಬಂದಿದ್ದರು. ಕೊವಿಡ್​ ಸಂದರ್ಭದಲ್ಲಿ ಅವರು ಸಾಮಾನ್ಯರ ಸಹಾಯಕ್ಕೆ ನಿಂತಿದ್ದಾರೆ. ಈ ಮಧ್ಯೆ, ಸಂಜನಾ ವಿರುದ್ಧ ಮತ್ತೊಂದು ಎಫ್​ಐಆರ್​ ದಾಖಲಾಗಿದೆ. ಇದರಿಂದ ಅವರು ಮತ್ತೆ ಸಂಕಷ್ಟಕ್ಕೆ ತುತ್ತಾಗುವ ಸಾಧ್ಯತೆ ಇದೆ.

ಸಂಜನಾ ಡ್ರಗ್​ ಕೇಸ್​ನಲ್ಲಿ ಬೇಲ್​ ಪಡೆದು ಹೊರ ಬಂದಿದ್ದಾರೆ. ಹೀಗಿರುವಾಗಲೇ ಹಳೆಯ ಕೇಸ್​ ಒಂದಕ್ಕೆ ಈಗ ಹೊಸ ಟ್ವಿಸ್ಟ್ ಸಿಕ್ಕಿದೆ. ಮಾಡೆಲ್ ವಂದನಾ ಜೈನ್ ನೀಡಿದ ದೂರಿನ್ವಯ ಕಬ್ಬನ್ ಪಾರ್ಕ್ ಪೊಲೀಸರು ಎಫ್ಐಆರ್ ದಾಖಲು ಮಾಡಿಕೊಂಡಿದ್ದಾರೆ. ಅಷ್ಟಕ್ಕೂ ಏನಿದು ಪ್ರಕರಣ ಎನ್ನುವ ಬಗ್ಗೆ ಇಲ್ಲಿದೆ ಮಾಹಿತಿ.

2019ರಲ್ಲಿ ಲಾವೆಲಿ ರಸ್ತೆಯ ಕ್ಲಬ್​ಒಂದಕ್ಕೆ ವಂದನಾ ತೆರಳಿದ್ದರು. ಅದೇ ಕ್ಲಬ್​ನಲ್ಲಿ ನಟಿ ಸಂಜನಾ ಗಲ್ರಾನಿ ಕೂಡ ಇದ್ದರು. ಆಗ ಸಂಜನಾ ಅವರು ವಂದನಾ ಜೈನ್ ವಿರುದ್ಧ ಅವಹೇಳನಕಾರಿ ಹೇಳಿಕೆ ಕೊಟ್ಟಿದ್ದರು ಎನ್ನಲಾಗಿದೆ.

ಅವಾಚ್ಯ ಶಬ್ದಗಳನ್ನು ಬಳಸದಂತೆ ವಂದನಾ ಜೈನ್ ಸೂಚನೆ ನೀಡಿದ್ದರು. ಈ ವೇಳೆ ವಂದನಾ ಮುಖಕ್ಕೆ ವಿಸ್ಕಿ ಎರಚಿದ ಸಂಜನಾ ಹಲ್ಲೆ ನಡೆಸಿದ್ದಾರೆ ಎನ್ನುವ ಆರೋಪ ಇದೆ. ಈ ಘಟನೆ ವೇಳೆ ವಂದನಾ ಕಣ್ಣಿಗೆ ಗಾಯ ಆಗಿತ್ತು. ಘಟನೆ ಬಳಿಕ ವಂದನಾಗೆ ಸಂಜನಾ ಬೆದರಿಕೆ ಹಾಕಿದ್ದರಂತೆ.

ಈ ಪ್ರಕರಣದ ಬಗ್ಗೆ ವಂದನಾ ಕೋರ್ಟ್​ನಲ್ಲಿ  ಖಾಸಗಿ ದೂರು ದಾಖಲಿಸಿದ್ದರು. ಕೋರ್ಟ್​ ನಿರ್ದೇಶನದಂತೆ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೊರೊನಾ ವೈರಸ್​ ಎರಡನೇ ಅಲೆ ದೊಡ್ಡ ಪ್ರಮಾಣದಲ್ಲಿ ಹರಡುತ್ತಿದೆ. ಸಾಮಾನ್ಯರಿಂದ ಹಿಡಿದು ಸೆಲೆಬ್ರಿಟಿಗಳವರೆಗೆ ಕೊರೊನಾ ಬಿಟ್ಟು ಬಿಡದೆ ಕಾಡುತ್ತಿದೆ. ಕಳೆದ ತಿಂಗಳು ನಟಿ ಸಂಜನಾ ಗಲ್ರಾನಿ ಅವರಿಗೂ ಕೊರೊನಾ ಪಾಸಿಟಿವ್​ ಕಾಣಿಸಿಕೊಂಡಿತ್ತು. ಈ ಬಗ್ಗೆ ಅವರು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದರು. ‘ನಮ್ಮ ಕುಟುಂಬದಲ್ಲಿ ಓರ್ವ ಡಾಕ್ಟರ್​ ಇದ್ದಾರೆ. ಅವರು ಕೊರೊನಾ ವಾರಿಯರ್​. ಹೀಗಾಗಿ ಅವರು ಸಮಾಜಕ್ಕೆ ಸರ್ವ್​ ಮಾಡಲೇಬೇಕು. ಹೀಗಾಗಿ, ನನಗೆ ಕೊರೊನಾ ಬಂದಿದೆ. ಆದರೆ, ನನಗೆ ಭಯ ಇಲ್ಲ. ಅವರು ಹೇಳಿದ ಟ್ಯಾಬ್ಲೆಟ್​ ತೆಗೆದುಕೊಂಡೆ. ವಿಟಾಮಿನ್​ ಮಾತ್ರೆಗಳನ್ನು ತೆಗೆದುಕೊಂಡೆ. ಈ ಮೂಲಕ ಇಮ್ಯುನಿಟಿ ಬೆಳೆಸಿಕೊಂಡೆ ಎಂದಿದ್ದರು.

ಇದನ್ನೂ ಓದಿ: Sanjana Galrani : ಬೆಂಗಳೂರಿನಲ್ಲಿ ಸಂಕಷ್ಟದಲ್ಲಿರೋ ಜನ್ರ ಸಹಾಯಕ್ಕೆ ಮುಂದಾಗ್ತಿರೋ ನಟಿ ಸಂಜನಾ ಗರ್ಲಾನಿ

Published On - 8:29 pm, Thu, 13 May 21

Follow Us
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು