ಬೆಂಗಳೂರಲ್ಲಿ ಸ್ಯಾಂಡಲ್​ವುಡ್​ ನಟ ರಕ್ಷಿತ್ ಶೆಟ್ಟಿ ವಿರುದ್ಧ ಕೇಸ್ ದಾಖಲು

| Updated By: ರಾಜೇಶ್ ದುಗ್ಗುಮನೆ

Updated on: Jul 15, 2024 | 10:13 AM

ರಕ್ಷಿತ್ ಶೆಟ್ಟಿ ಅವರ ವಿರುದ್ಧ ಕೇಸ್ ದಾಖಲಾಗಿದೆ. ಹಕ್ಕುಸ್ವಾಮ್ಯ, ಪ್ರಸಾರದ ಹಕ್ಕನ್ನು ಖರೀದಿಸದೆ ಹಾಡುಗಳ ಬಳಕೆ ಮಾಡಿದ್ದಾಗಿ ನವೀನ್ ಆರೋಪಿಸಿದ್ದಾರೆ. ಎರಡು ಹಾಡುಗಳನ್ನು ರಕ್ಷಿತ್ ಶೆಟ್ಟಿ ನಿರ್ಮಾಣದ ‘ಬ್ಯಾಚುಲರ್ ಪಾರ್ಟಿ’ಯಲ್ಲಿ ಅಕ್ರಮವಾಗಿ ಬಳಕೆ ಮಾಡಿಕೊಂಡಿದ್ದಾರೆ ಎಂದು ಹೇಳಿದ್ದಾರೆ.

ಬೆಂಗಳೂರಲ್ಲಿ ಸ್ಯಾಂಡಲ್​ವುಡ್​ ನಟ ರಕ್ಷಿತ್ ಶೆಟ್ಟಿ ವಿರುದ್ಧ ಕೇಸ್ ದಾಖಲು
ರಕ್ಷಿತ್
Follow us on

ಕಾಪಿರೈಟ್​​ ಉಲ್ಲಂಘನೆ ಆರೋಪದಡಿ ನಟ ರಕ್ಷಿತ್​ಶೆಟ್ಟಿ ವಿರುದ್ಧ ಬೆಂಗಳೂರಿನ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ. ಎರಡು ಚಿತ್ರದ ಹಾಡುಗಳನ್ನು ಅನುಮತಿ ಇಲ್ಲದೆ ಬಳಕೆ ಆರೋಪದಡಿಯಲ್ಲಿ ರಕ್ಷಿತ್ ಶೆಟ್ಟಿ ಅವರಿಗೆ ಸಂಕಷ್ಟ ಎದುರಾಗಿದೆ. ಈಗಾಗಲೇ ದೂರವಾಣಿ ಕರೆ ಮಾಡಿ ಪೊಲೀಸರು ರಕ್ಷಿತ್ ಶೆಟ್ಟಿ ಬಳಿ ಮಾತನಾಡಿದ್ದಾರೆ. ವಿಚಾರಣೆಗೆ ಹಾಜರಾಗುವಂತೆ ಅವರಿಗೆ ಸೂಚನೆ ನೀಡಲಾಗಿದೆ.

ನವೀನ್ ಕುಮಾರ್ ಎಂಬುವವರು ರಕ್ಷಿತ್ ಶೆಟ್ಟಿ ದೂರು ದಾಖಲು ಮಾಡಿದ್ದಾರೆ. ನವೀನ್ ಕುಮಾರ್ ಅವರು ಎಂಆರ್​​ಟಿ ಮ್ಯೂಸಿಕ್​ನ ಪಾಲುದಾರಿಕೆ ಹೊಂದಿದ್ದಾರೆ. ‘ಬ್ಯಾಚುಲರ್ ಪಾರ್ಟಿ’ ಸಿನಿಮಾದಲ್ಲಿ ಬಳಕೆ ಆದ ‘ನ್ಯಾಯ ಎಲ್ಲಿದೆ..’ ಹಾಗೂ ‘ಗಾಳಿಮಾತು..’ ಚಿತ್ರದ ಹಾಡುಗಳನ್ನು ರಕ್ಷಿತ್ ಶೆಟ್ಟಿ ನಿರ್ಮಾಣದ ‘ಬ್ಯಾಚುಲರ್ ಪಾರ್ಟಿ’ಯಲ್ಲಿ ಅಕ್ರಮವಾಗಿ ಬಳಕೆ ಮಾಡಿಕೊಂಡಿದ್ದಾರೆ ಎಂದು ಹೇಳಿದ್ದಾರೆ.

2024ರ ಜನವರಿಯಲ್ಲಿ ಚಿತ್ರದ ಹಾಡು ಬಳಕೆ ಬಗ್ಗೆ ರಕ್ಷಿತ್ ಶೆಟ್ಟಿ ಅವರ ಜೊತೆ ಮಾತುಕತೆ ಆಗಿತ್ತಂತೆ. ಆದರೆ, ಚಿತ್ರದ ಹಾಡು ಬಳಕೆ ಬಗ್ಗೆ ಮಾತುಕತೆ ಸರಿ ಹೊಂದಿರಲಿಲ್ಲ. ಹೀಗಾಗಿ, ಮಾತುಕತೆ ಮುಂದುವರಿಯಲಿಲ್ಲ. 2024ರ ಮಾರ್ಚ್​ನಲ್ಲಿ ಬ್ಯಾಚುಲರ್ ಪಾರ್ಟಿ ಚಿತ್ರ ರಿಲೀಸ್ ಆಗಿತ್ತು. ‘ಬ್ಯಾಚುಲರ್ ಪಾರ್ಟಿ’ ಸಿನಿಮಾ ಗಮನಿಸಿದಾಗ 2 ಚಿತ್ರಗಳ ಹಾಡು ಬಳಕೆ ಆಗಿತ್ತು.

ಇದನ್ನೂ ಓದಿ: ಕೊರಗಜ್ಜ ಸನ್ನಿಧಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ ರಕ್ಷಿತ್ ಶೆಟ್ಟಿ

ಹಕ್ಕುಸ್ವಾಮ್ಯ, ಪ್ರಸಾರದ ಹಕ್ಕನ್ನು ಖರೀದಿಸದೆ ಹಾಡುಗಳ ಬಳಕೆ ಮಾಡಿದ್ದಾಗಿ ನವೀನ್ ಆರೋಪಿಸಿದ್ದಾರೆ. ಪರಮ್ವಾ ಸ್ಟುಡಿಯೋಸ್ ಹಾಗೂ ನಟ ರಕ್ಷಿತ್ ಶೆಟ್ಟಿ ವಿರುದ್ಧ ಕೇಸ್​​ ದಾಖಲು ಮಾಡಲಾಗಿದೆ. ಪೊಲೀಸರು ಎಫ್ಐಆರ್ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. ನಟ ರಕ್ಷಿತ್ ಶೆಟ್ಟಿಗೆ ಯಶವಂತಪುರ ಪೊಲೀಸರಿಂದ ನೋಟಿಸ್ ನೀಡಲಾಗಿದೆ. ಮೌಖಿಕವಾಗಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

 

Published On - 10:11 am, Mon, 15 July 24