‘ಮತ್ತೆ ಮೊದಲಿಂದ’ ಆಲ್ಬಂ ಹಾಡುಗಳಿಗೆ ಯೋಗರಾಜ್ ಭಟ್ ಸಾಹಿತ್ಯ; ಮೊದಲ ಸಾಂಗ್ ರಿಲೀಸ್

‘ಮತ್ತೆ ಮೊದಲಿಂದ’ ಆಲ್ಬಂ ಹಾಡುಗಳನ್ನು ಒಂದೊಂದಾಗಿಯೇ ಬಿಡುಗಡೆ ಮಾಡಲಾಗುತ್ತಿದೆ. ಈ ಆಲ್ಬಂನಿಂದ ನಟ ಸಂಜನ್‌ ಕಜೆ ಅವರು ಪರಿಚಯಗೊಳ್ಳುತ್ತಿದ್ದಾರೆ. ‘ಮತ್ತೆ ಮೊದಲಿಂದ’ ಹಾಡುಗಳಿಗೆ ಯೋಗರಾಜ್ ಭಟ್ ಸಾಹಿತ್ಯ ಬರೆದಿದ್ದಾರೆ. ‘ಪಂಚರಂಗಿ ಆಡಿಯೋ’ ಯೂಟ್ಯೂಬ್‌ ಚಾನಲ್‌ನಲ್ಲಿ ಮೂಲಕ ಮೊದಲ ಹಾಡು ಬಿಡುಗಡೆ ಮಾಡಲಾಗಿದೆ.

‘ಮತ್ತೆ ಮೊದಲಿಂದ’ ಆಲ್ಬಂ ಹಾಡುಗಳಿಗೆ ಯೋಗರಾಜ್ ಭಟ್ ಸಾಹಿತ್ಯ; ಮೊದಲ ಸಾಂಗ್ ರಿಲೀಸ್
Matte Modalinda Music Album

Updated on: Jun 19, 2025 | 8:44 PM

‘ಮತ್ತೆ ಮೊದಲಿಂದ’ ಆಲ್ಬಂ ಅನ್ನು ನಿರ್ದೇಶಕ ಯೋಗರಾಜ್ ಭಟ್ (Yogaraj Bhat), ಶ್ರೀನಿಧಿ ಮತ್ತು ಪ್ರಸನ್ನ ಅವರು ನಿರ್ಮಿಸಿದ್ದಾರೆ. ಯೋಗರಾಜ್ ಭಟ್ ನಿರ್ದೇಶನ ಮಾಡಿದ್ದಾರೆ. ಕರಾವಳಿ ಮೂಲದ ಹೊಸ ಪ್ರತಿಭೆ ಸಂಜನ್ ಕಜೆ ಅವರು ನಾಯಕನಾಗಿ ನಟಿಸಿದ್ದಾರೆ. ನಿಧಿ ಸುಬ್ಬಯ್ಯ, ಅಮೀತಾ ಎಸ್. ಕುಲಾಲ್, ದೇವಿಕಾ ಶಿಂಧೆ ಹಾಗೂ ಅಂಜಲಿ ಗೌಡ ಅವರು ನಾಯಕಿಯರಾಗಿ ಕಾಣಿಸಿಕೊಂಡಿದ್ದಾರೆ. ‘ಮತ್ತೆ ಮೊದಲಿಂದ’ (Matte Modalinda) ಆಲ್ಬಂನಲ್ಲಿ 4 ಹಾಡುಗಳಿವೆ. ಖ್ಯಾತ ಗಾಯಕ, ಗಾಯಕಿಯರು ಈ ಹಾಡುಗಳಿಗೆ ಧ್ವನಿ ನೀಡಿದ್ದಾರೆ. ನಾಲ್ಕು ಬಣ್ಣಗಳ ಥೀಮ್​ನಲ್ಲಿ ಅಚ್ಚ ಕನ್ನಡದ ಹಾಡುಗಳು ಮೂಡಿಬಂದಿವೆ. ಮೊದಲ ಹಾಡು ‘ಮೋಹದ ಬಣ್ಣ ನೀಲಿ’ ಇತ್ತೀಚಿನ ಬಿಡುಗಡೆ ಆಗಿದೆ.

ಯೋಗರಾಜ್ ಭಟ್ ಅವರು ಬರೆದಿರುವ ‘ಮೋಹದ ಬಣ್ಣ ನೀಲಿ’ ಹಾಡನ್ನು ಖ್ಯಾತ ಗಾಯಕ ವಿಜಯ್ ಪ್ರಕಾಶ್ ಹಾಡಿದ್ದಾರೆ. ಅನಿರುದ್ಧ್ ಶಾಸ್ತ್ರಿ ಅವರು ಸಂಗೀತ ನೀಡಿದ್ದಾರೆ. ಟೈಟಲ್ ಪರಿಚಯಿಸಿದ ಯೋಗರಾಜ್‌ ಭಟ್‌ ಅವರು ಇನ್ನಷ್ಟು ವಿವರ ನೀಡಿದರು. ‘ಈ ಆಲ್ಬಂನಲ್ಲಿ 4 ಹಾಡುಗಳಿದ್ದು, ನಾಲ್ಕು ಸಂಗೀತ ನಿರ್ದೇಶಕರು, ನಾಲ್ಕು ಗಾಯಕರು, ನಾಲ್ಕು ನಾಯಕಿಯರು ಇರುವುದು ವಿಶೇಷ. ಕರಾವಳಿ ಮೂಲದ ಯುವ ನಟ ಸಂಜನ್‌ ಕಜೆ ಅವರನ್ನು ಈ ಮೂಲಕ ಪರಿಚಯಿಸುತ್ತಿದ್ದೇನೆ’ ಎಂದು ಅವರು ಹೇಳಿದರು.

ಈ ಆಲ್ಬಂನಲ್ಲಿ ಇರುವ ನಾಲ್ಕೂ ಹಾಡುಗಳಿಗೆ ಯೋಗರಾಜ್ ಭಟ್ ಅವರು ಸಾಹಿತ್ಯ ಬರೆದಿದ್ದಾರೆ. ಸಂಗೀತ ನಿರ್ದೇಶಕರಾಗಿ ಮನೋಮೂರ್ತಿ, ವಿ. ಹರಿಕೃಷ್ಣ, ಚೇತನ್‌-ಡ್ಯಾವಿ, ಅನಿರುದ್ಧ ಶಾಸ್ತ್ರಿ ಕೆಲಸ ಮಾಡಿದ್ದಾರೆ. ವಿಜಯ್ ಪ್ರಕಾಶ್‌, ವಾಸುಕಿ ವೈಭವ್‌, ಚೇತನ್‌ ಸೋಸ್ಕ, ಅದಿತಿ ಖಂಡೇಗಲ ಅವರ ಗಾಯನದಲ್ಲಿ ಹಾಡುಗಳು ಮೂಡಿಬಂದಿವೆ.

ಇದನ್ನೂ ಓದಿ
‘ಸ್ಯಾಂಡಲ್​​ವುಡ್ ಸಣ್ಣ ಇಂಡಸ್ಟ್ರಿ ಆಗಿತ್ತು, ಈಗ ಹೇಗೆ ಬೆಳೆದಿದೆ ನೋಡಿ’
ಸಿನಿಮಾ ರಂಗದವರಿಗೆ ಡಿಕೆ ಶಿವಕುಮಾರ್ ಎಚ್ಚರಿಕೆ ಉಮಾಪತಿ ಹೇಳಿದ್ದೇನು?
4 ಚಿತ್ರಮಂದಿರ, 23 ಸಿನಿಮಾ ಸ್ಕ್ರೀನ್​, ಡಿಸಿಎಂ ಡಿಕೆಶಿಯ ಸಿನಿಮಾ ನಂಟು
‘ನೆಟ್ಟು, ಬೋಲ್ಟ್ ಟೈಟ್ ಮಾಡುವೆ’: ನಟರಿಗೆ ನೇರ ಎಚ್ಚರಿಕೆ ಕೊಟ್ಟ ಡಿಕೆಶಿ

ಇತಿಹಾಸ ತಜ್ಞ ಧರ್ಮೇಂದ್ರ ಕುಮಾರ್‌ ಆರೇನಹಳ್ಳಿ ಅವರು ಮೊದಲ ಗೀತೆ ಬಿಡುಗಡೆ ಮಾಡಿದರು. ‘ಪಂಚರಂಗಿ ಆಡಿಯೋ’ ಯೂಟ್ಯೂಬ್‌ ಚಾನಲ್‌ನಲ್ಲಿ ಬಿಡುಗಡೆ ಮಾಡಿಲಾಗಿದೆ. ‘ಸುಗಮ ಸಂಗೀತ, ಭಾವಗೀತೆಗಳು ವಿರಳವಾಗಿರುವ ಈ ಸಂದರ್ಭದಲ್ಲಿ ಇದೊಂದು ಶ್ಲಾಘನೀಯ ಪ್ರಯತ್ನ. ಭಾವಗೀತೆಗಳು ಕನ್ನಡ ನೆಲದ ಸೊಗಡು. ಅದನ್ನು ಉಳಿಸಿ ಬೆಳಸುವುದು ಸಾಹಿತಿಗಳ ಕರ್ತವ್ಯ. ಬಹಳ ವರ್ಷಗಳ ನಂತರ ಅದೇ ರೀತಿಯ ಗೀತೆಯನ್ನು ಕೇಳಿ ಬಹಳ ಖುಷಿ ಆಯಿತು’ ಎಂದು ಧರ್ಮೇಂದ್ರ ಹೇಳಿದರು.

ಇದನ್ನೂ ಓದಿ: ‘ನಿಮಗಿಂತ ಮೂಗೇ ಮೊದಲು ಬರುತ್ತೆ’; ಪೂಜಾ ಗಾಂಧಿಗೆ ನೇರವಾಗಿ ಹೇಳಿದ್ದ ಯೋಗರಾಜ್ ಭಟ್

ಸಿನಿಮಾ ಹಾಡುಗಳಿಗಿಂತಲೂ ಹೆಚ್ಚು ಮುತುವರ್ಜಿ ವಹಿಸಿ ಈ ಗೀತೆಗಳನ್ನು ಹಾಡಿರುವುದಾಗಿ ವಿಜಯ್ ಪ್ರಕಾಶ್ ಹೇಳಿದ್ದಾರೆ. ಸಂಗೀತ ನಿರ್ದೇಶಕ ಅನಿರುದ್ಧ ಶಾಸ್ತ್ರಿ ಮಾತನಾಡಿ, ‘ಯೋಗರಾಜ್‌ ಭಟ್ ಜೊತೆಗಿನ ಸಾಂಗತ್ಯದಲ್ಲಿ ಇದು ನನ್ನ ಚೊಚ್ಚಲ ಸಂಗೀತ ಸಂಯೋಜನೆ. ಇದು ನನಗೆ ತುಂಬಾ ಖುಷಿಕೊಟ್ಟಿದೆ. ಹಿರಿಯ ಮತ್ತು ಖ್ಯಾತ ಸಂಗೀತ ನಿರ್ದೇಶಕರುಗಳ ಸಂಗೀತ ಸಂಯೋಜನೆ ಈ ಆಲ್ಬಂನಲ್ಲಿದ್ದದ್ದು ನನಗೆ ಸವಾಲಿನ ವಿಷಯವಾಗಿತ್ತು. ಅದನ್ನು ಸಮರ್ಪಕವಾಗಿ ನಿಭಾಹಿಸಲು ಅವರ ಮತ್ತು ಯೋಗರಾಜ್‌ ಅವರ ಸಹಕಾರ ಕಾರಣ’ ಎಂದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Loading...
Unable to load recommendations.
Follow Us