Darshan: ಹುಲಿ ಉಗುರು ಧರಿಸಿದ ಆರೋಪ; ನಟ ದರ್ಶನ್​ ಮನೆಯಲ್ಲಿ ಅಧಿಕಾರಿಗಳ ಪರಿಶೀಲನೆ

Tiger Claw Locket Row: ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಇರುವ ದರ್ಶನ್​ ಅವರ ನಿವಾಸದಲ್ಲಿ ಅರಣ್ಯಾಧಿಕಾರಿಗಳು ತಪಾಸಣೆ ನಡೆಸುತ್ತಿದ್ದಾರೆ. ದರ್ಶನ್​ ಬಳಿ ಇರುವುದು ನಿಜವಾದ ಹುಲಿ ಉಗುರು ಹೌದೋ ಅಥವಾ ಅಲ್ಲವೋ ಎಂಬುದು ಗೊತ್ತಾಗಬೇಕಿದೆ. ದರ್ಶನ್​ ಹುಲಿ ಉಗುರು ಧರಿಸಿದ್ದ ಫೋಟೋ ವೈರಲ್​ ಆದ ಬೆನ್ನಲ್ಲೇ ಅವರ ವಿರುದ್ಧ ದೂರು ನೀಡಲಾಗಿತ್ತು.

Darshan: ಹುಲಿ ಉಗುರು ಧರಿಸಿದ ಆರೋಪ; ನಟ ದರ್ಶನ್​ ಮನೆಯಲ್ಲಿ ಅಧಿಕಾರಿಗಳ ಪರಿಶೀಲನೆ
ದರ್ಶನ್​ ಮನೆಯಲ್ಲಿ ಅಧಿಕಾರಿಗಳ ಪರಿಶೀಲನೆ
Follow us
ಮದನ್​ ಕುಮಾರ್​
| Updated By: Digi Tech Desk

Updated on:Oct 26, 2023 | 12:36 PM

ವರ್ತೂರು ಸಂತೋಷ್​ (Varthur Santhosh) ಅವರ ಬಂಧನದ ಬಳಿಕ ಹುಲಿ ಉಗುರು ಧರಿಸಿದ ಹಲವು ಸೆಲೆಬ್ರಿಟಿಗಳಿಗೆ ಸಂಕಷ್ಟ ಎದುರಾಗಿದೆ. ನಟ ದರ್ಶನ್​ ಅವರು ಹುಲಿ ಉಗುರು ಧರಿಸಿದ್ದ ಫೋಟೋ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದೆ. ಅದರ ಬೆನ್ನಲ್ಲೇ ದೂರು ಕೂಡ ದಾಖಲಾಗಿತ್ತು. ಇಂದು (ಅಕ್ಟೋಬರ್​ 25) ಅರಣ್ಯಾಧಿಕಾರಿಗಳು ದರ್ಶನ್​ ಮನೆಗೆ ಬಂದಿದ್ದಾರೆ. ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಇರುವ ದರ್ಶನ್​ (Darshan) ಅವರ ನಿವಾಸದಲ್ಲಿ ಅರಣ್ಯಾಧಿಕಾರಿಗಳು ತಪಾಸಣೆ ನಡೆಸುತ್ತಿದ್ದಾರೆ. ದರ್ಶನ್​ ಬಳಿ ಇರುವುದು ನಿಜವಾದ ಹುಲಿ ಉಗುರು (Tiger Claw Pendant) ಹೌದೋ ಅಥವಾ ಅಲ್ಲವೋ ಎಂಬುದು ಗೊತ್ತಾಗಬೇಕಿದೆ. ಒಂದು ವೇಳೆ ಹುಲಿ ಉಗುರು ಇರುವುದು ಖಚಿತವಾದರೆ ಅವರನ್ನು ವಶಕ್ಕೆ ಪಡೆಯುವ ಸಾಧ್ಯತೆ ಇದೆ.

ಸೋಶಿಯಲ್​ ಮೀಡಿಯಾದಲ್ಲಿ ದರ್ಶನ್​, ರಾಕ್​ಲೈನ್​ ವೆಂಕಟೇಶ್​, ಜಗ್ಗೇಶ್​, ನಿಖಿಲ್​ ಕುಮಾರಸ್ವಾಮಿ ಅವರ ಫೋಟೋಗಳು ವೈರಲ್​ ಆಗಿವೆ. ಈ ಸೆಲೆಬ್ರಿಟಿಗಳು ಹುಲಿ ಉಗುರು ಧರಿಸಿದ್ದಾರೆ ಎಂಬ ಆರೋಪ ಎದುರಾಗಿದೆ. ವೈರಲ್​ ಆಗಿರುವ ಫೋಟೋದ ಆಧಾರದ ಮೇಲೆ ದೂರು ನೀಡಲಾಗಿತ್ತು. ಅದರ ಅನ್ವಯ ಅರಣ್ಯಾಧಿಕಾರಿಗಳು ಕ್ರಮಕ್ಕೆ ಮುಂದಾಗಿದ್ದಾರೆ. ಆರೋಪ ಎದುರಿಸುತ್ತಿರುವ ಎಲ್ಲರಿಗೂ ನೋಟೀಸ್​ ನೀಡಲಾಗುತ್ತಿದೆ. ಅಲ್ಲದೇ ತಪಾಸಣೆ ಕೂಡ ಮಾಡಲಾಗುತ್ತಿದೆ.

ಇದನ್ನೂ ಓದಿ: ಹುಲಿ ಉಗುರು ಲಾಕೆಟ್: ಜಗ್ಗೇಶ್​ ವಿರುದ್ಧ ದೂರು ದಾಖಲು, ಅರಣ್ಯಾಧಿಕಾರಿ ಹೇಳಿದ್ದೇನು?

ನಟ ಜಗ್ಗೇಶ್​ ಅವರು ಈ ಹಿಂದೆ ಖಾಸಗಿ ಸುದ್ದಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ತಮ್ಮ ಬಳಿ ಇರುವ ಹುಲಿ ಉಗುರಿನ ಬಗ್ಗೆ ಮಾತನಾಡಿದ್ದರು. ಅದು ನಿಜವಾದ ಹುಲಿ ಉಗುರು ಎಂದು ಕೂಡ ಅವರು ಹೇಳಿದ್ದರು. ಆ ವಿಡಿಯೋ ಈಗ ವೈರಲ್​ ಆಗಿದೆ. ಆ ಹಿನ್ನೆಲೆಯಲ್ಲಿ ಅವರ ಮನೆಯಲ್ಲೂ ಅರಣ್ಯಾಧಿಕಾರಿಗಳು ತಪಾಸಣೆ ನಡೆಸುವ ಸಾಧ್ಯತೆ ದಟ್ಟವಾಗಿದೆ. ಸಿನಿಮಾ ನಟರು ಮಾತ್ರವಲ್ಲದೇ ಕೆಲವು ರಾಜಕಾರಣಿಗಳು ಕೂಡ ಹುಲಿ ಉಗುರು ಧರಿಸಿದ ಪ್ರಕರಣ ಬೆಳಕಿಗೆ ಬರುತ್ತಿದೆ.

ನಿಖಿಲ್​ ಕುಮಾರ್​ ಅವರ ಫೋಟೋ ಕೂಡ ವೈರಲ್​ ಆಗಿದೆ. ಆದರೆ ತಮ್ಮ ಬಳಿ ಇರುವುದು ನಿಜವಾದ ಹುಲಿ ಉಗುರು ಅಲ್ಲ ಎಂದು ಅವರು ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ. ‘ನಾನು ಧರಿಸಿದ್ದ ಹುಲಿ ಉಗುರು ಮಾದರಿಯ ಪೆಂಡೆಂಟ್ ಕೃತಕವಾದದ್ದೇ ಹೊರತು ನೈಜವಾದುದ್ದಲ್ಲ. ಅದನ್ನು ನನ್ನ ಮದುವೆ ಸಮಯದಲ್ಲಿ ಉಡುಗೊರೆ ನೀಡಿದ್ದು. ಅದು ಈಗಲೂ ನನ್ನ ಬಳಿ ಇದೆ. ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲಿಸಬಹುದು’ ಎಂದು ಪೋಸ್ಟ್​ ಮಾಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 4:15 pm, Wed, 25 October 23

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ