ವಿಚ್ಛೇದನ ದೃಢಪಡಿಸಿದ ಚಂದನ್ ಶೆಟ್ಟಿ, ನಿವೇದಿತಾ ಗೌಡ, ಕಾರಣ ಕೊಟ್ಟಿದ್ದೇನು ಗೊತ್ತಾ?
Niveditha Gowda-Chandan Shetty divorce: ಕನ್ನಡದ ರ್ಯಾಪರ್ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಅವರ ಡಿವೋರ್ಸ್ ಅರ್ಜಿಗೆ ಫ್ಯಾಮಿಲಿ ಕೋರ್ಟ್ ಅನುಮತಿ ನೀಡಿದೆ. ಕೋರ್ಟ್ ವಿಚ್ಛೇದನ ಮಂಜೂರು ಮಾಡಿ ಆದೇಶ ಹೊರಡಿಸಿದ ಬೆನ್ನಲ್ಲೇ ಇದೀಗ ಸ್ವತಃ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಅವರು ತಮ್ಮ ಡಿವೋರ್ಸ್ ಬಗ್ಗೆ ಮೊದಲ ಬಾರಿಗೆ ಬಹಿರಂಗಪಡಿಸಿದ್ದಾರೆ.
ಕನ್ನಡ ಬಿಗ್ಬಾಸ್ನ ಮಾಜಿ ಸ್ಪರ್ಧಿಗಳಾದ ಚಂದನ್ ಶೆಟ್ಟಿ (Chandan Shetty) ಮತ್ತು ನಿವೇದಿತಾ (Niveditha Gowda) ದಾಂಪತ್ಯ ಅಂತ್ಯವಾಗಿದೆ. 2ನೇ ಹೆಚ್ಚುವರಿ ನ್ಯಾಯಾಲಯವು ವಿಚ್ಛೇದನ (Divorce) ಮಂಜೂರು ಮಾಡಿದೆ. ಈ ಮೂಲಕ ಚಂದನ್ ಶೆಟ್ಟಿ ಮತ್ತು ನಿವೇದಿತಾರ 4 ವರ್ಷಗಳ ದಾಂಪತ್ಯಕ್ಕೆ ಬ್ರೇಕ್ ಬಿದ್ದಿದೆ. ಇದೀಗ ಸ್ವತಃ ಚಂದನ್ ಶೆಟ್ಟಿ ಮತ್ತು ನಿವೇದಿತಾ ತಮ್ಮ ಡಿವೋರ್ಸ್ ವಿಷಯವನ್ನು ಮೊದಲ ಬಾರಿಗೆ ಬಹಿರಂಗಪಡಿಸಿದ್ದು, ಪರಸ್ಪರ ಒಪ್ಪಿಗೆ ಮೇರೆಗೆ ತಮ್ನ ದಾಂಪತ್ಯ ಜೀವನ ಅಂತ್ಯಗೊಳಿಸಿದ ಬಗ್ಗೆ ದೃಢಪಡಿಸಿದ್ದಾರೆ.
ಒಂದೇ ದಿನದಲ್ಲಿ ವಿಚ್ಛೇದನ ಹೇಗೆ ಸಾಧ್ಯ ಎನ್ನುವ ಪ್ರಶ್ನೆಗಳ ನಡುವೆ ಮಾಜಿ ದಂಪತಿಗಳು ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಇದನ್ನು ಖಚಿತಪಡಿಸಿದ್ದಾರೆ. ನಿವೇದಿತಾ ಗೌಡ ಹಾಗೂ ಚಂದನ್ ಶೆಟ್ಟಿ ಇಬ್ಬರೂ ತಮ್ಮ ಸೋಶಿಯಲ್ ಮೀಡಿಯಾ ಖಾತೆಗಳಲ್ಲಿ ತಮ್ಮ ನಾಲ್ಕು ವರ್ಷದ ದಾಂಪತ್ಯ ಪರಸ್ಪರ ಒಪ್ಪಿಗೆಯ ಮೇರೆಗೆ ಅಂತ್ಯವಾಗಿದೆ. ಎಲ್ಲರಿಗೂ ಥ್ಯಾಂಕ್ಸ್ ಎಂದು ಬರೆದುಕೊಂಡಿದ್ದಾರೆ.
ಇದನ್ನೂ ಓದಿ: ಮಗು ಬೇಡ ಎಂದ ನಿವೇದಿತಾ: ಇದೇ ಕಾರಣಕ್ಕೆ ವಿಚ್ಛೇದನ ಪಡೆದ ಚಂದನ್ ಶೆಟ್ಟಿ?
ವಿಚ್ಛೇದನ ದೃಢಪಡಿಸಿದ ನಿವೇದಿತಾ ಗೌಡ
‘ಈ ದಿನ, ಚಂದನ್ ಶೆಟ್ಟಿ ಮತ್ತು ನಾನು, ನಮ್ಮ ದಾಂಪತ್ಯ ಜೀವನವನ್ನು ಕಾನೂನುಬದ್ಧವಾಗಿ ಪರಸ್ಪರ ಒಪ್ಪಿಗೆಯಿಂದ ಕೊನೆಗೊಳಿಸಿದ್ದೇವೆ. ನಮ್ಮ ನಿರ್ಧಾರವನ್ನು ಮತ್ತು ನಮ್ಮ ಜೀವನದ ಖಾಸಗಿತನವನ್ನ ಗೌರವಿಸಲು ಕೋರುತ್ತೇವೆ. ಪ್ರತಿ ಸಂದರ್ಭದಲ್ಲೂ ನಮ್ಮೊಂದಿಗೆ ನಿಂತ ಮಾಧ್ಯಮ ಮಿತ್ರರು, ನಮ್ಮ ಸ್ನೇಹಿತರು ಮತ್ತು ಅಭಿಮಾನಿಗಳಿಂದ ನಾವು ಎಂದಿನಂತೆ ಬೆಂಬಲವನ್ನು ಕೋರುತ್ತೇವೆ. ನಾವು ನಮ್ಮ ಪ್ರತ್ಯೇಕ ಮಾರ್ಗ ಅನುಸರಿಸಿದರೂ,ಪರಸ್ಪರ ಒಬ್ಬರನೊಬ್ಬರು ಗೌರವಿಸುತ್ತೆವೆ. ಸೂಕ್ಷ್ಮ ಪರಿಗಣನೆಗಾಗಿ ಎಲ್ಲರಿಗೂ ಧನ್ಯವಾದಗಳು’ ಎಂದು ನಿವೇದಿತಾ ಗೌಡ ಇನ್ಸ್‌ಟಾಗ್ರಾಮ್‌ನಲ್ಲಿ ಬರೆದುಕೊಂಡಿದ್ದಾರೆ.
View this post on Instagram
ಡಿವೋರ್ಸ್ ಬಗ್ಗೆ ಚೆಂದನ್ ಶೆಟ್ಟಿ ಹೇಳಿದ್ದಿಷ್ಟು
ಇನ್ನು ನಿವೇದಿತಾ ಗೌಡ ಅವರು ಪೋಸ್ಟ್ ಮಾಡಿದ ರೀತಿಯಲ್ಲೇ ಚಂದನ್ ಶೆಟ್ಟಿ ಸಹ ಪೋಸ್ಟ್ ಮಾಡಿದ್ದಾರೆ. ಆ ಮೂಲಕ ತಮ್ಮ ವಿಚ್ಛೇದನದ ಬಗ್ಗೆ ಅಧಿಕೃತವಾಗಿ ಇಬ್ಬರೂ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ತಮ್ಮ ದಾಂಪತ್ಯ ಜೀವನವನ್ನು ಕಾನೂನು ಬದ್ಧವಾಗಿ ಒಪ್ಪಿ ಕೊನೆಗೊಳಿಸಿಕೊಂಡಿರುವುದಾಗಿ ಅವರು ಪೋಸ್ಟ್ ಹಾಕಿದ್ದಾರೆ. ಇನ್ಸ್‌ಟಾಗ್ರಾಮ್‌ನಲ್ಲಿ ತಮ್ಮ ಅಧಿಕೃತ ಖಾತೆಗಳಲ್ಲಿ ನಿವೇದಿತಾ ಗೌಡ ಹಾಗೂ ಚಂದನ್ ಈ ಪೋಸ್ಟ್ ಮಾಡಿದ್ದಾರೆ. ವಿಚ್ಛೇದನ ಪಡೆದಿದ್ದರು ನಾವು ಒಬ್ಬರನೊಬ್ಬರು ಗೌರವಿಸೋದಾಗಿ ಹೇಳಿದ್ದಾರೆ.
View this post on Instagram
ಕನ್ನಡ ಬಿಗ್ಬಾಸ್ನ ಸ್ಪರ್ಧಿಗಳಾಗಿದ್ದ ನಿವೇದಿತಾ ಮತ್ತು ಚಂದನ್ ಶೆಟ್ಟಿ ನಡುವೆ ಪ್ರೇಮಾಂಕುರವಾಗಿತ್ತು. ಶೋನಿಂದ ಆಚೆ ಬಂದ ಬಳಿಕ ಪರಸ್ಪರ ಕುಟುಂಬದ ಮಾತುಕತೆಯೊಂದಿಗೆ ವಿವಾಹವಾಗಿದ್ದರು, ನಾಲ್ಕು ವರ್ಷಗಳ ಹಿಂದೆ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಇಬ್ಬರು ಪರಸ್ಪರ ಒಪ್ಪಿಗೆ ಮೇರೆಗೆ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರು. ಇವರ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಡಿವೋರ್ಸ್‌ಗೆ ಅರ್ಜಿ ಪುರಸ್ಕರಿಸಿ ಅನುಮತಿ ನೀಡಿದೆ. ಈ ಮೂಲಕ ನಾಲ್ಕು ವರ್ಷದ ದಾಂಪತ್ಯಕ್ಕೆ ಅಂತ್ಯ ಹಾಡಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published On - 8:36 pm, Fri, 7 June 24