ದೊಡ್ಡ ಗೌಡರ ಕುಟುಂಬದಲ್ಲಿ ಸಂಭ್ರಮ; ನಿಖಿಲ್ ಪುತ್ರನನ್ನು ನೋಡಲು ಆಸ್ಪತ್ರೆಗೆ ಬಂದ ಎಚ್.ಡಿ ದೇವೇಗೌಡ- ಚಿನ್ನಮ್ಮ ದಂಪತಿ

ನಟ, ರಾಜಕಾರಣಿ ನಿಖಿಲ್ ಕುಮಾರಸ್ವಾಮಿ ಹಾಗೂ ರೇವತಿಗೆ ಪುತ್ರನ ಜನನವಾಗಿರುವುದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕುಟುಂಬದಲ್ಲಿ ಸಂಭ್ರಮ ಹೆಚ್ಚಿಸಿದೆ. ಆಸ್ಪತ್ರೆಗೆ ಭೇಟಿ ನೀಡಿದ ದೇವೇಗೌಡ ದಂಪತಿ, ಸಂತಸದ ಕ್ಷಣಗಳಿಗೆ ಸಾಕ್ಷಿಯಾಗಿದ್ದಾರೆ.

ದೊಡ್ಡ ಗೌಡರ ಕುಟುಂಬದಲ್ಲಿ ಸಂಭ್ರಮ; ನಿಖಿಲ್ ಪುತ್ರನನ್ನು ನೋಡಲು ಆಸ್ಪತ್ರೆಗೆ ಬಂದ ಎಚ್.ಡಿ ದೇವೇಗೌಡ- ಚಿನ್ನಮ್ಮ ದಂಪತಿ
ಮಗುವನ್ನು ಮುದ್ದಾಡುತ್ತಿರುವ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ
Follow us
TV9 Web
| Updated By: shivaprasad.hs

Updated on:Sep 24, 2021 | 4:52 PM

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮೊಮ್ಮಗ ನಿಖಿಲ್ ಕುಮಾರಸ್ವಾಮಿ ಗಂಡು ಮಗುವಿನ ತಂದೆಯಾಗಿದ್ದಾರೆ. ಕುಟುಂಬಕ್ಕೆ ಪುತ್ರನ ಆಗಮನವಾಗಿರುವುದು ದೇವೇಗೌಡರ ಕುಟುಂಬದಲ್ಲಿ ಸಂಭ್ರಮ ಹೆಚ್ಚಿಸಿದೆ. ಈ ಹಿನ್ನೆಲೆಯಲ್ಲಿ ದೇವೇಗೌಡ ಹಾಗೂ ಚಿನ್ನಮ್ಮ ದಂಪತಿ ಆಸ್ಪತ್ರೆಗೆ ಭೇಟಿ ನೀಡಿ ಮಗು ಹಾಗೂ ತಾಯಿಯ ಆರೋಗ್ಯ ವಿಚಾರಿಸಿದ್ದಾರೆ. ಜೊತೆಗೆ ನಿಖಿಲ್ ಸಂಭ್ರಮದಲ್ಲೂ ಜೊತೆಯಾಗಿದ್ದಾರೆ. ಇದೀಗ ಅವರೀರ್ವರು ಆಸ್ಪತ್ರೆಗೆ ಭೇಟಿ ನೀಡಿರುವ ಚಿತ್ರಗಳು ಎಲ್ಲರ ಗಮನ ಸೆಳೆದಿವೆ.

HD Devegowda and Chinnamma

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ಅವರ ಪತ್ನಿ ಚಿನ್ನಮ್ಮ ಆಸ್ಪತ್ರೆಗೆ ಆಗಮಿಸುತ್ತಿರುವುದು

ನಿಖಿಲ್ ತಂದೆಯಾಗಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕೂಡ ಸಂತಸ ವ್ಯಕ್ತಪಡಿಸಿದ್ದಾರೆ. ಟ್ವೀಟ್ ಮೂಲಕ ಖುಷಿ ಹಂಚಿಕೊಂಡಿರುವ ಅವರು, ತನ್ನ ಜೀವನದಲ್ಲಿ ಇನ್ನೊಂದು ಶುಭ ಘಳಿಗೆ ಬಂದಿದೆ ಎಂದಿದ್ಧಾರೆ. ‘‘ನನ್ನ ಜೀವನದಲ್ಲಿ ಇನ್ನೊಂದು ಶುಭ ಘಳಿಗೆ ಬಂದಿದೆ. ನಮ್ಮ ಪರಿವಾರಕ್ಕೆ ಹೊಸ ಸದಸ್ಯನ ಆಗಮನವಾಗಿದೆ. ತಾತನಾದೆ ಎಂದು ಹೇಳಲು ಅತೀವ ಸಂತಸವಾಗುತ್ತಿದೆ. ಕಂದನಿಗೆ ನಿಮ್ಮೆಲ್ಲರ ಹಾರೈಕೆ ಮತ್ತು ಆಶೀರ್ವಾದ ಇರಲಿ ಎಂದು ಪ್ರಾರ್ಥನೆ ಮಾಡುತ್ತೇನೆ’’ ಎಂದು ಅವರು ಟ್ವೀಟ್ ಮಾಡಿದ್ದಾರೆ.

ಕುಮಾರಸ್ವಾಮಿ ಹಂಚಿಕೊಂಡ ಟ್ವೀಟ್:

2020ರ ಏಪ್ರಿಲ್​ನಲ್ಲಿ ನಿಖಿಲ್ ಹಾಗೂ ರೇವತಿ ವಿವಾಹವಾಗಿದ್ದರು. ಪ್ರಸ್ತುತ ನಿಖಿಲ್ ಕುಮಾರಸ್ವಾಮಿ ರಾಜಕೀಯ ಹಾಗೂ ಸಿನಿಮಾ ರಂಗ ಎರಡಲ್ಲೂ ಸಕ್ರಿಯರಾಗಿದ್ದಾರೆ.

ಇದನ್ನೂ ಓದಿ:

Nikhil Kumaraswamy: ಮಗುವನ್ನು ಎತ್ತಿ ಮುದ್ದಾಡಿದ ನಿಖಿಲ್; ಪುತ್ರ ಹೇಗಿದ್ದಾನೆ?

ಮುದ್ದಾದ ಮಗುವಿನ ಜತೆ ಪೋಸ್​​ ಕೊಟ್ಟ ನಿಖಿಲ್​ ಕುಮಾರಸ್ವಾಮಿ; ಇಲ್ಲಿವೆ ಫೋಟೋಗಳು

ವಿಜಯ್​ ದೇವರಕೊಂಡ ಆರಂಭಿಸಿದ್ರು ಮಲ್ಟಿಪ್ಲೆಕ್ಸ್​​; ಬೆಂಗಳೂರಲ್ಲಿ ಓಪನ್​ ಆಗೋದು ಯಾವಾಗ?

(Former Prime Minister HD Devegowda and his wife Chinnamma visits to Hospital to see Nikhil and Revathi s baby boy)

Published On - 3:26 pm, Fri, 24 September 21

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ