ಅಮೆರಿಕದಲ್ಲಿ ಸಂಚಾರಿ ವಿಜಯ್​ಗೆ ಗೌರವ; ಪ್ರತಿಷ್ಠಿತ ಫ್ರಾಂಕ್ಲಿನ್​ ಥಿಯೇಟರ್​ನಿಂದ ನಮನ

‘Always in our Heart, Sanchari Vijay, Gone Yet Not Forgotten’ ಎಂಬ ಸಾಲನ್ನು ಅಮೆರಿಕದ ಫ್ರಾಂಕ್ಲಿನ್​ ಥಿಯೇಟರ್ ಮುಂಭಾಗದಲ್ಲಿ 24 ಗಂಟೆಗಳ ಕಾಲ ಬಿತ್ತರಿಸಲಾಯಿತು. ಆ ಮೂಲಕ ಗೌರವ ಸಲ್ಲಿಸಲಾಯಿತು.

ಅಮೆರಿಕದಲ್ಲಿ ಸಂಚಾರಿ ವಿಜಯ್​ಗೆ ಗೌರವ; ಪ್ರತಿಷ್ಠಿತ ಫ್ರಾಂಕ್ಲಿನ್​ ಥಿಯೇಟರ್​ನಿಂದ ನಮನ
ಫ್ರಾಂಕ್ಲಿನ್​ ಥಿಯೇಟರ್​ನಿಂದ ಸಂಚಾರಿ ವಿಜಯ್​ಗೆ ನಮನ
Follow us
ಮದನ್​ ಕುಮಾರ್​
|

Updated on: Jun 29, 2021 | 6:04 PM

ನಟ ಸಂಚಾರಿ ವಿಜಯ್​ ನಿಧನದಿಂದ ಬರೀ ಕನ್ನಡ ಚಿತ್ರರಂಗಕ್ಕೆ ಮಾತ್ರ ನಷ್ಟವಾಗಿದ್ದಲ್ಲ. ಇಡೀ ಭಾರತೀಯ ಚಿತ್ರರಂಗವೇ ಒಬ್ಬ ಪ್ರತಿಭಾವಂತ ಕಲಾವಿದನನ್ನು ಕಳೆದುಕೊಂಡಂತೆ ಆಗಿದೆ. ರಾಷ್ಟ್ರ ಪ್ರಶಸ್ತಿ ಪಡೆದ ಸಂಚಾರಿ ವಿಜಯ್​ ಅವರ ಅಗಲಿಕೆಗೆ ಎಲ್ಲರೂ ನಮನ ಸಲ್ಲಿಸಿದ್ದರು. ಈಗ ಅಮೆರಿಕದ ಪ್ರತಿಷ್ಠಿತ ಫ್ರಾಂಕ್ಲಿನ್​ ಥಿಯೇಟರ್​ ಕೂಡ ಅವರಿಗೆ ಗೌರವ ಸೂಚಿಸಿದೆ. ಫ್ರಾಂಕ್ಲಿನ್​ ಥಿಯೇಟರ್ ಮುಂದೆ ವಿಜಯ್​ ಅವರನ್ನು ಸ್ಮರಿಸುವ ಬರಹವನ್ನು ಬಿತ್ತರಿಸಲಾಗಿದೆ.

ಈ ಸುದ್ದಿಯನ್ನು ‘ನಾನು ಅವನಲ್ಲ ಅವಳು’ ಚಿತ್ರದ ನಿರ್ದೇಶಕ ಬಿ.ಎಸ್​. ಲಿಂಗದೇವರು ಅವರು ಹಂಚಿಕೊಂಡಿದ್ದಾರೆ. ‘Always in our Heart, Sanchari Vijay, Gone Yet Not Forgotten’ ಎಂಬ ಸಾಲನ್ನು ಫ್ರಾಂಕ್ಲಿನ್​ ಥಿಯೇಟರ್ ಮುಂಭಾಗದಲ್ಲಿ 24 ಗಂಟೆಗಳ ಕಾಲ ಬಿತ್ತರಿಸಲಾಯಿತು. ಇದು ಇಡೀ ಕನ್ನಡಿಗರಿಗೆ ಹೆಮ್ಮೆ ತರುವಂತಹ ವಿಚಾರ. ಆದರೆ ಇಂದು ಸಂಚಾರಿ ವಿಜಯ್​ ಅವರು ನಮ್ಮ ಜೊತೆ ಇಲ್ಲ ಎಂಬುದು ನೋವಿನ ಸಂಗತಿ.

‘ಈ ಮೆಸೇಜ್​ ಪ್ರದರ್ಶನ ಮಾಡುವ ಮೂಲಕ ಸಂಚಾರಿ ವಿಜಯ್​ ಅವರಿಗೆ ಅಮೆರಿಕದ ಫ್ರಾಂಕ್ಲಿನ್​ ಥಿಯೇಟರ್​ನವರು ಗೌರವ ಸೂಚಿಸಿದ್ದಾರೆ. ಅಗಲಿದ ಕನ್ನಡದ ಕಲಾವಿದನನ್ನು ಗುರುತಿಸಿದ ಫ್ರಾಂಕ್ಲಿನ್ ಥಿಯೇಟರ್ ಮತ್ತು ಅದಕ್ಕೆ ಕಾರಣಕರ್ತರಾದ ರವಿ ಕಶ್ಯಪ್ ಅವರಿಗೆ ವಂದನೆಗಳು’ ಎಂದು ಲಿಂಗದೇವರು ಹೇಳಿದ್ದಾರೆ.

ಜೂ.12ರ ರಾತ್ರಿ ಬನ್ನೇರುಘಟ್ಟ ರಸ್ತೆಯಲ್ಲಿ ಸಂಚಾರಿ ವಿಜಯ್​ ಅವರಿಗೆ ಆಕ್ಸಿಡೆಂಟ್​ ಆಗಿತ್ತು. ಸ್ನೇಹಿತ ನವೀನ್​ ಅವರ ಬೈಕ್​ನಲ್ಲಿ ಹಿಂಬದಿ ಕುಳಿತು ವಿಜಯ್​ ಪ್ರಯಾಣ ಮಾಡುತ್ತಿದ್ದರು. ಅಪಘಾತದ ತೀವ್ರತೆಗೆ ಅವರು ತಲೆ ಮತ್ತು ತೊಡೆ ಭಾಗಕ್ಕೆ ಗಂಭೀರ ಗಾಯಗಳಾಗಿದ್ದವು. ಕೂಡಲೇ ಅವರನ್ನು ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಯಿತು. ಮೆದುಳಿನಲ್ಲಿ ತೀವ್ರ ರಕ್ತಸ್ರಾವ ಆದ ಪರಿಣಾಮ ಅವರು ಪ್ರಜ್ಞಾಹೀನ ಸ್ಥಿತಿಯಲ್ಲಿ ಇದ್ದರು. ಕಡೆಗೂ ಚಿಕಿತ್ಸೆಗೆ ಸ್ಪಂದಿಸದೇ ಅವರು ನಿಧನರಾದರು.

ಇದನ್ನೂ ಓದಿ:

ಸಂಚಾರಿ ವಿಜಯ್​ ಬಳಿಕ ಮತ್ತೋರ್ವ ನಟನಿಗೆ ರಸ್ತೆ ಅಪಘಾತ; ಆಸ್ಪತ್ರೆಗೆ ದಾಖಲು, ಐಸಿಯುನಲ್ಲಿ ಚಿಕಿತ್ಸೆ

ನಟ ಸಂಚಾರಿ ವಿಜಯ್​ಗೆ ಜಾತಿ ಭೇದ ಮಾಡಲಾಗಿತ್ತು ಎಂಬ ಆರೋಪ ಸುಳ್ಳು; ಸಹೋದರ ವಿರೂಪಾಕ್ಷ ಸ್ಪಷ್ಟನೆ

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್