AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಗೂಗ್ಲಿ’ಯಲ್ಲಿ ಯಶ್​​ಗೆ ಬರೆದ ಡೈಲಾಗ್ ನಿಜವಾಯ್ತು; ಜಾಗತಿಕ ಮಟ್ಟದಲ್ಲಿ ‘ಟಾಕ್ಸಿಕ್’ ಹವಾ

'ಕೆಜಿಎಫ್' ಯಶಸ್ಸಿನ ನಂತರ ಯಶ್ ಅಭಿನಯದ 'ಟಾಕ್ಸಿಕ್' ಸಿನಿಮಾ ಜಾಗತಿಕ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಇದನ್ನು ಕಂಡ 'ಗೂಗ್ಲಿ' ನಿರ್ದೇಶಕ ಪವನ್ ಒಡೆಯರ್, ಅಂದು ತಾವು ಸಿನಿಮಾದಲ್ಲಿ ಬರೆದಿದ್ದ ‘ಇಡೀ ಪ್ರಪಂಚವೇ ಕೊಂಡಾಡುವ ಹಾಗೆ ಆಗ್ತಾನೆ’ ಎಂಬ ಡೈಲಾಗ್ ಇಂದು ಅಕ್ಷರಶಃ ಸತ್ಯವಾಗಿದೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.

'ಗೂಗ್ಲಿ'ಯಲ್ಲಿ ಯಶ್​​ಗೆ ಬರೆದ ಡೈಲಾಗ್ ನಿಜವಾಯ್ತು; ಜಾಗತಿಕ ಮಟ್ಟದಲ್ಲಿ 'ಟಾಕ್ಸಿಕ್' ಹವಾ
ಯಶ್
ರಾಜೇಶ್ ದುಗ್ಗುಮನೆ
|

Updated on: Aug 04, 2026 | 9:04 AM

Share

ಮುಖ್ಯಾಂಶಗಳು

  • ಅಂದು ‘ಗೂಗ್ಲಿ’ಯಲ್ಲಿ ಬರೆದ ಡೈಲಾಗ್, ಇಂದು ‘ಟಾಕ್ಸಿಕ್’ ಮೂಲಕ ಸತ್ಯ
  • ಸ್ಯಾಂಡಲ್‌ವುಡ್ ಗಡಿ ದಾಟಿ ಹಾಲಿವುಡ್‌ಗೆ ಯಶ್: ವಿಶ್ವವೇ ಕೊಂಡಾಡುವಂತೆ ಕಂಬ್ಯಾಕ್
  • ಗ್ಲೋಬಲ್ ಸೂಪರ್‌ಸ್ಟಾರ್ ಆದ ರಾಕಿಂಗ್ ಸ್ಟಾರ್

ರಾಕಿಂಗ್ ಸ್ಟಾರ್ ಯಶ್ ಅವರ ‘ಕೆಜಿಎಫ್’ ಸರಣಿಯ ಯಶಸ್ಸಿನ ನಂತರ, ಅವರ ಪ್ರತಿಯೊಂದು ಸಿನಿಮಾ ಕೂಡ ಈಗ ಜಾಗತಿಕ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಈ ಸಾಲಿಗೆ ಬಹುನಿರೀಕ್ಷಿತ ‘ಟಾಕ್ಸಿಕ್: ಎ ಫೇರಿಟೇಲ್ ಫಾರ್ ಗ್ರೋನ್-ಅಪ್ಸ್’ (Toxic Movie) ಸೇರ್ಪಡೆಯಾಗಿದೆ . ಚಿತ್ರದ ಗ್ಲೋಬಲ್ ಮಟ್ಟದ ಕ್ರೇಜ್ ನೋಡಿದ ‘ಗೂಗ್ಲಿ’ ಚಿತ್ರದ ನಿರ್ದೇಶಕ ಪವನ್ ಒಡೆಯರ್, ಅಂದು ತಾವು ಸಿನಿಮಾಗಾಗಿ ಬರೆದಿದ್ದ ಡೈಲಾಗ್‌ ಒಂದನ್ನು ನೆನಪಿಸಿಕೊಂಡು ಹರ್ಷ ವ್ಯಕ್ತಪಡಿಸಿದ್ದಾರೆ.

‘ಗೂಗ್ಲಿ’ಯ ಆ ಒಂದು ಮಾತು ಇಂದು ಅಕ್ಷರಶಃ ಸತ್ಯ

ಸಂದರ್ಶನವೊಂದರಲ್ಲಿ ಮಾತನಾಡಿದ ನಿರ್ದೇಶಕ ಪವನ್ ಒಡೆಯರ್, ‘ಗೂಗ್ಲಿ ಸಿನಿಮಾ ನೋಡಿದವರಿಗೆ ಖಂಡಿತ ಆ ಡೈಲಾಗ್ ನೆನಪಿರುತ್ತದೆ. ಹಿರಿಯ ನಟ ಅನಂತ್ ನಾಗ್ ಅವರ ಪಾತ್ರದ ಮೂಲಕ, ‘ನಮ್ಮ ಭವಿಷ್ಯ ಬಿಡು, ನನ್ನ ಮಗನ ಭವಿಷ್ಯ ಸ್ಟಡಿ ಮಾಡಿಕೊಂಡು ಬಂದಿದ್ದೀನಿ, ಇಡೀ ಪ್ರಪಂಚವೇ ಕೊಂಡಾಡುವ ಹಾಗೆ ಆಗ್ತಾನೆ ಅವನು’ ಎಂದು ಹೇಳಿಸಿದ್ದೆವು’ ಎಂಬುದಾಗಿ ಹಳೆಯ ಘಟನೆ ನೆನಪಿಸಿಕೊಂಡಿದ್ದಾರೆ.

‘ಅದು ಯಾವ ಗಳಿಗೆಯಲ್ಲಿ ಬರೆದಿದ್ದೆವೋ ಗೊತ್ತಿಲ್ಲ, ಆದರೆ ಇಂದು ಯಶ್ ಬೆಳೆದಿರುವ ಎತ್ತರ ಮತ್ತು ಟಾಕ್ಸಿಕ್ ಸಿನಿಮಾ ಜಾಗತಿಕ ಮಟ್ಟಕ್ಕೆ ತಲುಪಿರುವುದನ್ನು ನೋಡಿದರೆ ಆ ಮಾತು ಅಕ್ಷರಶಃ ನಿಜವಾಗಿದೆ’ ಎಂದು ಮೆಲಕು ಹಾಕಿದ್ದಾರೆ.

ಪ್ರಪಂಚವೇ ಕೊಂಡಾಡುವಂತೆ ಕಂಬ್ಯಾಕ್ ಮಾಡುತ್ತಿದ್ದಾರೆ ಯಶ್

ಗೀತು ಮೋಹನ್‌ದಾಸ್ ನಿರ್ದೇಶನದ ‘ಟಾಕ್ಸಿಕ್’ ಚಿತ್ರವು ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಏಕಕಾಲಕ್ಕೆ ನಿರ್ಮಾಣಗೊಳ್ಳುತ್ತಿದ್ದು, ಹಾಲಿವುಡ್ ಮಾರುಕಟ್ಟೆಯನ್ನು ಗುರಿಯಾಗಿಸಿಕೊಂಡು ಅತ್ಯಂತ ಅದ್ದೂರಿಯಾಗಿ ತಯಾರಾಗುತ್ತಿದೆ. ಸ್ಯಾನ್ ಡಿಯಾಗೋ ಕಾಮಿಕ್-ಕಾನ್‌ನಂತಹ ಅಂತಾರಾಷ್ಟ್ರೀಯ ವೇದಿಕೆಗಳಲ್ಲೂ ಯಶ್ ‘ಟಾಕ್ಸಿಕ್’ ಪ್ರಚಾರ ನಡೆಸಿ ವಿಶ್ವಪ್ರೇಕ್ಷಕರ ಗಮನ ಸೆಳೆದಿದ್ದಾರೆ.

ಇದನ್ನೂ ಓದಿ: ‘ಟಾಕ್ಸಿಕ್’ಗಾಗಿ ರವಿ ಬಸ್ರೂರು ಪ್ಲ್ಯಾನ್; 100 ಮಂದಿಯ ಆರ್ಕೆಸ್ಟ್ರಾ ಕಣಕ್ಕಿಳಿಸಿದ ಸಂಗೀತ ನಿರ್ದೇಶಕ

ಅಂದು ‘ಗೂಗ್ಲಿ’ ಚಿತ್ರದ ಶರತ್ ಆಗಿ ತೆರೆಮೇಲೆ ಮೆರೆದಿದ್ದ ಯಶ್, ಇಂದು ನಿಜ ಜೀವನದಲ್ಲೂ ಭಾರತೀಯ ಚಿತ್ರರಂಗದ ಗಡಿಯನ್ನು ದಾಟಿ ಜಾಗತಿಕ ಮಟ್ಟದ ಸೂಪರ್‌ಸ್ಟಾರ್ ಆಗಿ ಹೊರಹೊಮ್ಮಿರುವುದು ಇಡೀ ಸ್ಯಾಂಡಲ್‌ವುಡ್ ಹೆಮ್ಮೆಪಡುವಂತೆ ಮಾಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಇಂದು ಮಾಸ ಶಿವರಾತ್ರಿ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಮಾಸ ಶಿವರಾತ್ರಿ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್‌ಒ ಸೇತುವೆ
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್‌ಒ ಸೇತುವೆ
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು
‘ಟಾಕ್ಸಿಕ್’ ನಿರ್ದೇಶಕಿ ಗೀತು ಮೋಹನ್​ದಾಸ್ ಹಿನ್ನೆಲೆ ಏನು? ಇಲ್ಲಿದೆ ವಿವರ
‘ಟಾಕ್ಸಿಕ್’ ನಿರ್ದೇಶಕಿ ಗೀತು ಮೋಹನ್​ದಾಸ್ ಹಿನ್ನೆಲೆ ಏನು? ಇಲ್ಲಿದೆ ವಿವರ
ಜಾರ್ಖಂಡ್​​ನಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಸರಿಯಲ್ಲ;ರಾಹುಲ್ ಗಾಂಧಿ
ಜಾರ್ಖಂಡ್​​ನಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಸರಿಯಲ್ಲ;ರಾಹುಲ್ ಗಾಂಧಿ
ಆಸ್ಪತ್ರೆಯಲ್ಲಿ ಚೆನ್ನಮ್ಮರ ಕೊನೆ ಕ್ಷಣಗಳನ್ನ ಹೇಳಿ ಗದ್ಗದಿತರಾದ ದೇವೇಗೌಡ್ರು
ಆಸ್ಪತ್ರೆಯಲ್ಲಿ ಚೆನ್ನಮ್ಮರ ಕೊನೆ ಕ್ಷಣಗಳನ್ನ ಹೇಳಿ ಗದ್ಗದಿತರಾದ ದೇವೇಗೌಡ್ರು
‘ಯಶ್ ಈಗ ರಾಜ್ಯ, ದೇಶ ಗೆದ್ದಾಗಿದೆ, ವಿಶ್ವವನ್ನೂ ಗೆಲ್ತಾರೆ’; ಅಜಯ್ ರಾವ್
‘ಯಶ್ ಈಗ ರಾಜ್ಯ, ದೇಶ ಗೆದ್ದಾಗಿದೆ, ವಿಶ್ವವನ್ನೂ ಗೆಲ್ತಾರೆ’; ಅಜಯ್ ರಾವ್
ರಾಸಾಯನಿಕ ತ್ಯಾಜ್ಯ: 3 ಕೈಗಾರಿಕೆ ಮುಚ್ಚಲು ಈಶ್ವರ ಖಂಡ್ರೆ ಸೂಚನೆ
ರಾಸಾಯನಿಕ ತ್ಯಾಜ್ಯ: 3 ಕೈಗಾರಿಕೆ ಮುಚ್ಚಲು ಈಶ್ವರ ಖಂಡ್ರೆ ಸೂಚನೆ
ಮಕ್ಕಳ ಪಿಕ್ಕಿ ಈಟಿಂಗ್ ಕಡಿಮೆ ಮಾಡೋದು ಹೇಗೆ?
ಮಕ್ಕಳ ಪಿಕ್ಕಿ ಈಟಿಂಗ್ ಕಡಿಮೆ ಮಾಡೋದು ಹೇಗೆ?
ಜೆಡಿಎಸ್ ಪಾದಯಾತ್ರೆ ಬಗ್ಗೆ ಪಿಸು ಮಾತು ವೈರಲ್: ಸ್ಪಷ್ಟನೆ ನೀಡಿದ ವಿಜಯೇಂದ್ರ
ಜೆಡಿಎಸ್ ಪಾದಯಾತ್ರೆ ಬಗ್ಗೆ ಪಿಸು ಮಾತು ವೈರಲ್: ಸ್ಪಷ್ಟನೆ ನೀಡಿದ ವಿಜಯೇಂದ್ರ