Ganesh Birthday: ಜನ್ಮದಿನದ ಸಲುವಾಗಿ ಅಭಿಮಾನಿಗಳಿಗೆ ಪತ್ರ ಬರೆದು ಮನವಿ ಮಾಡಿಕೊಂಡ ‘ಗೋಲ್ಡನ್​ ಸ್ಟಾರ್​’ ಗಣೇಶ್​

Golden Star Ganesh: ಈ ಬಾರಿ ಕೂಡ ಜನ್ಮದಿನ ಆಚರಿಸಿಕೊಳ್ಳೋದು ಬೇಡ ಎಂದು ನಟ ಗಣೇಶ್ ತೀರ್ಮಾನಿಸಿದ್ದಾರೆ. ಈ ಕುರಿತಾಗಿ ಅವರು ಅಭಿಮಾನಿಗಳಿಗೆ ಬಹಿರಂಗ ಪತ್ರ ಬರೆದಿದ್ದಾರೆ.

Ganesh Birthday: ಜನ್ಮದಿನದ ಸಲುವಾಗಿ ಅಭಿಮಾನಿಗಳಿಗೆ ಪತ್ರ ಬರೆದು ಮನವಿ ಮಾಡಿಕೊಂಡ ‘ಗೋಲ್ಡನ್​ ಸ್ಟಾರ್​’ ಗಣೇಶ್​
‘ಗೋಲ್ಡನ್ ಸ್ಟಾರ್’ ಗಣೇಶ್
Follow us
TV9 Web
| Updated By: ಮದನ್​ ಕುಮಾರ್​

Updated on: Jun 28, 2022 | 11:00 AM

ನಟ ‘ಗೋಲ್ಡನ್​ ಸ್ಟಾರ್​’ ಗಣೇಶ್​ (Golden Star Ganesh) ಅವರು ರಾಜ್ಯಾದ್ಯಂತ ಅಭಿಮಾನಿಗಳನ್ನು ಹೊಂದಿದ್ದಾರೆ. ಕನ್ನಡ ಚಿತ್ರರಂಗದಲ್ಲಿ (Sandalwood) ಅವರು ತಮ್ಮದೇ ಛಾಪು ಮೂಡಿಸಿದ್ದಾರೆ. ಅವರು ಬಣ್ಣದ ಲೋಕಕ್ಕೆ ಕಾಲಿಟ್ಟು ಹಲವು ವರ್ಷ ಕಳೆದಿದೆ. ಪ್ರತಿ ವರ್ಷ ಅವರ ಹುಟ್ಟುಹಬ್ಬವನ್ನು (ಜುಲೈ 2) ಜನರು ಸಖತ್​ ಅಭಿಮಾನದಿಂದ ಆಚರಿಸುತ್ತಾರೆ. ಆದರೆ ಇತ್ತೀಚಿನ ವರ್ಷಗಳಲ್ಲಿ ಕೊವಿಡ್​ ಕಾರಣದಿಂದ ಗಣೇಶ್​ ಜನ್ಮದಿನವನ್ನು(Ganesh Birthday) ಸೂಕ್ತ ರೀತಿಯಲ್ಲಿ ಆಚರಿಸಲು ಸಾಧ್ಯವಾಗುತ್ತಿಲ್ಲ. ಈ ಬಾರಿ ಕೊರೊನಾ ಹಾವಳಿ ತಗ್ಗಿದೆಯಾದರೂ ಅಭಿಮಾನಿಗಳ ಜೊತೆ ಸೇರಿ ತಮ್ಮ ಹುಟ್ಟುಹಬ್ಬವನ್ನು ಸಂಭ್ರಮಿಸಲು ಆಗುತ್ತಿಲ್ಲ ಎಂದು ಗಣೇಶ್​ ತಿಳಿಸಿದ್ದಾರೆ. ಈ ಸಲುವಾಗಿ ಅವರು ಪತ್ರ ಬರೆದಿದ್ದಾರೆ. ಆ ಮೂಲಕ ಅಭಿಮಾನಿಗಳಲ್ಲಿ ಅವರು ಮನವಿ ಮಾಡಿಕೊಂಡಿದ್ದಾರೆ.

‘ಅಕ್ಕರೆಯ ಅಭಿಮಾನಿ ಬಂಧುಗಳಿಗೆ… ಎಲ್ಲರೂ ಆರೋಗ್ಯವಾಗಿದ್ದೀರಿ ಎಂದು ಭಾವಿಸುತ್ತೇನೆ. ನನ್ನ ಕಲಾ ಬದುಕಿನ ಆರಂಭದ ದಿನಗಳಿಂದ ಶುರುವಾಗಿ ಇಲ್ಲಿಯ ತನಕ ನನ್ನಈ ಬಣ್ಣದ ಹಾದಿಯ ಪ್ರತಿ ಹೆಜ್ಜೆಯಲ್ಲೂ ನನ್ನೊಂದಿಗೆ ಹೆಜ್ಜೆ ಹಾಕಿ, ನನ್ನ ಯಶಸ್ಸನ್ನು ನಿಮ್ಮದೇ ಯಶಸ್ಸು ಎನ್ನುವಂತೆ ಸಂಭ್ರಮಿಸಿ ನೀವೆಲ್ಲರೂ ಖುಷಿಪಟ್ಟಿದ್ದೀರಿ. ಪ್ರತೀ ವರ್ಷವೂ ನನ್ನ ಹುಟ್ಟಿದ ದಿನದಂದು ರಾಜ್ಯದ ಮೂಲೆ ಮೂಲೆಗಳಿಂದ ನನ್ನ ಮನೆಯ ಬಳಿ ಬಂದು ಅತೀವ ಅಭಿಮಾನದಿಂದ ನನ್ನನ್ನು ಆಲಂಗಿಸಿ ಹರಸಿದ್ದೀರಿ. ನನ್ನೆಡೆಗಿನ ನಿಮ್ಮ ಈ ನಿಷ್ಕಲ್ಮಶ ಪ್ರೀತಿಭರಿತ ಅಭಿಮಾನಕ್ಕೆ ನಾನು ಸದಾ ಖುಣಿ’ ಎಂದು ಗಣೇಶ್​ ಪತ್ರ ಆರಂಭಿಸಿದ್ದಾರೆ.

ಇದನ್ನೂ ಓದಿ
Image
‘ಮುಂಗಾರು ಮಳೆ’ ತಂಡದಲ್ಲೂ ಮನಸ್ತಾಪ ಆಗಿತ್ತು; ಸ್ನೇಹದ ಅಸಲಿ ವಿಚಾರ ತೆರೆದಿಟ್ಟ ಗಣೇಶ್​
Image
‘ಸಖತ್’​ ವೇದಿಕೆಯಲ್ಲಿ ಗಣೇಶ್​ ಕೋರಿಕೆ ಮೇರೆಗೆ ‘ಎಕ್ಸ್​ಕ್ಯೂಸ್​ಮೀ’ ಹಾಡು ಹೇಳಿದ ಪ್ರೇಮ್
Image
‘ಚಿತ್ರರಂಗ ಇರುವವರೆಗೂ ಪವರ್​ ಸ್ಟಾರ್​ ಅವರೇ ನಂ.1’; ಅಪ್ಪು ಬಗ್ಗೆ ಗಣೇಶ್​ ಅಭಿಮಾನದ ಮಾತು
Image
‘ಲಕ್ಷಣ’ ಧಾರಾವಾಹಿಗೆ ಡಬಲ್​ ಸಂಭ್ರಮ; ನಟ ಗಣೇಶ್​ಗೆ ಧನ್ಯವಾದ ತಿಳಿಸಿದ ಜಗನ್​

‘ನನ್ನ ಹುಟ್ಟುಹಬ್ಬದ ನೆಪದಲ್ಲಾದರೂ ನಾನು ನಿಮ್ಮನ್ನೆಲ್ಲಾ ವೈಯಕ್ತಿಕವಾಗಿ ಭೇಟಿ ಮಾಡಿ, ನಿಮ್ಮೆಲ್ಲರ ಪ್ರೀತಿಯನ್ನು ಆಸ್ವಾದಿಸುತ್ತಾ ನಿಮ್ಮೊಡನೆಯೇ ಸಂಭ್ರಮಿಸಿ, ನಿಮ್ಮ ಅಭಿಮಾನದ ಸವಿಯನ್ನು ಇಡೀ ದಿನ ಖುಷಿಯಿಂದ ಸವಿಯುವ ಹಂಬಲ ನನಗೂ ಇದೆ. ಆದರೆ ಕಳೆದ ಬಾರಿಯಂತೆ ಈ ಬಾರಿಯೂ ಸಹ ಸಮಯ ಅದಕ್ಕೆ ಅವಕಾಶ ಮಾಡಿಕೊಡುತ್ತಿಲ್ಲ. ಕೆಲ ಅನಿವಾರ್ಯ ಕಾರಣಗಳಿಂದಾಗಿ ನಾನು ನನ್ನ ಹುಟ್ಟಿದ ದಿನದಂದು ಅಂದರೆ ಜುಲೈ 2ರಂದು ಮನೆಯಲ್ಲಿರಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ನಿಮ್ಮೆಲ್ಲರ ಕ್ಷಮೆ ಕೋರುತ್ತೇನೆ’ ಎಂದು ಗಣೇಶ್​ ಹೇಳಿದ್ದಾರೆ.

‘ನೀವೆಲ್ಲರೂ ಅಭಿಮಾನದಿಂದ ಪ್ರತೀ ಬಾರಿ ನನಗಾಗಿ ತರುವ ಹಾರ, ತುರಾಯಿ, ಕೇಕ್‌ ಇತ್ಯಾದಿಗಳ ಬದಲಿಗೆ ಅಗತ್ಯವಿರುವ ಕಡೆ ನಿಮ್ಮ ಕೈಲಾದಷ್ಟು ನೆರವು ನೀಡುವ ಮೂಲಕ ನಿಮ್ಮೆಲ್ಲರ ಅಕ್ಕರೆಯ ಹಾರೈಕೆಗಳನ್ನು ನನಗೆ ತಲುಪಿಸಿಬಿಡಿ’ ಎಂದು ಗಣೇಶ್​ ಮನವಿ ಮಾಡಿಕೊಂಡಿದ್ದಾರೆ. ಸದ್ಯ ಅವರು ‘ಗಾಳಿಪಟ 2’, ‘ತ್ರಿಬಲ್​ ರೈಡಿಂಗ್​’ ಮುಂತಾದ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ.

ಇದನ್ನೂ ಓದಿ: ಗಣೇಶ್​ ಪುತ್ರಿ ಚಾರಿತ್ರ್ಯ ಬರ್ತ್​ಡೇ ಪಾರ್ಟಿ ಫೋಟೋಗಳು; ಮುದ್ದು ಮಗಳಿಗೆ ‘ಗೋಲ್ಡನ್​ ಸ್ಟಾರ್​’ ವಿಶ್​

‘ಗಾಳಿಪಟ 2’ ಹುಡುಗರ ಎಲ್ಲ ಸಬ್ಜೆಕ್ಟ್​ ಫೇಲ್​; ಬಾಯಿ ಬಡಿದುಕೊಂಡ ಗಣೇಶ್​, ದಿಗಂತ್​, ಪವನ್​

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ