Gaalipata 2: ಅಕ್ಷಯ್​ ಕುಮಾರ್​ ಚಿತ್ರವನ್ನೇ ಮೀರಿಸಿದ ‘ಗಾಳಿಪಟ 2’; ಬುಕ್​ ಮೈ ಶೋನಲ್ಲಿ ಭರ್ಜರಿ ಹವಾ

‘ಗಾಳಿಪಟ 2’ ಚಿತ್ರ ದೊಡ್ಡ ಮಟ್ಟದಲ್ಲಿ ಓಪನಿಂಗ್​ ಪಡೆದುಕೊಳ್ಳುವ ಸೂಚನೆ ಸಿಕ್ಕಿದೆ. ಆಗಸ್ಟ್​ 12ರಂದು ಈ ಸಿನಿಮಾ ಅದ್ದೂರಿಯಾಗಿ ರಿಲೀಸ್​ ಆಗಲಿದೆ.

Gaalipata 2: ಅಕ್ಷಯ್​ ಕುಮಾರ್​ ಚಿತ್ರವನ್ನೇ ಮೀರಿಸಿದ ‘ಗಾಳಿಪಟ 2’; ಬುಕ್​ ಮೈ ಶೋನಲ್ಲಿ ಭರ್ಜರಿ ಹವಾ
ರಕ್ಷಾ ಬಂಧನ್, ಗಾಳಿಪಟ 2
Follow us
TV9 Web
| Updated By: ಮದನ್​ ಕುಮಾರ್​

Updated on: Aug 10, 2022 | 10:40 AM

ಕನ್ನಡದ ಸಿನಿಮಾಗಳು ರಾಷ್ಟ್ರಪಟ್ಟದಲ್ಲಿ ಸದ್ದು ಮಾಡುತ್ತಿವೆ. ಬಾಲಿವುಡ್​ ಚಿತ್ರಗಳಿಗೆ ಸೆಡ್ಡು ಹೊಡೆಯುವ ರೀತಿಯಲ್ಲಿ ಸ್ಯಾಂಡಲ್​ವುಡ್​ ಸಿನಿಮಾಗಳು ತಯಾರಾಗುತ್ತಿವೆ. ಈಗ ‘ಗಾಳಿಪಟ 2’ (Gaalipata 2) ಚಿತ್ರ ಭಾರಿ ನಿರೀಕ್ಷೆ ಮೂಡಿಸಿದೆ. ಆಗಸ್ಟ್​ 12ರಂದು ಈ ಸಿನಿಮಾ ಬಿಡುಗಡೆ ಆಗುತ್ತಿದೆ. ಈಗಾಗಲೇ ಬುಕಿಂಗ್​ ಆರಂಭ ಆಗಿದ್ದು ಜನರು ಮೊದಲ ದಿನವೇ ಸಿನಿಮಾ ನೋಡಲು ಆಸಕ್ತಿ ತೋರಿಸಿದ್ದಾರೆ. ಯೋಗರಾಜ್​ ಭಟ್​ ನಿರ್ದೇಶನದ ಈ ಚಿತ್ರದಲ್ಲಿ ‘ಗೋಲ್ಡನ್​ ಸ್ಟಾರ್​’ ಗಣೇಶ್​ (Golden Star Ganesh), ಪವನ್​ ಕುಮಾರ್​, ದಿಗಂತ್​ ನಟಿಸಿದ್ದಾರೆ. ಅಚ್ಚರಿ ಎಂದರೆ ಬುಕ್​ ಮೈ ಶೋನಲ್ಲಿ ಅಕ್ಷಯ್​ ಕುಮಾರ್​ ಅಭಿನಯದ ‘ರಕ್ಷಾ ಬಂಧನ್​’ (Raksha Bandhan) ಚಿತ್ರಕ್ಕಿಂತಲೂ ಹೆಚ್ಚಿನ ವೋಟ್ಸ್​ ಪಡೆಯುವ ಮೂಲಕ ‘ಗಾಳಿಪಟ 2’ ಸಿನಿಮಾ ಹವಾ ಮಾಡುತ್ತಿದೆ.

‘ಗಾಳಿಪಟ’ ಚಿತ್ರ ಸೂಪರ್​ ಹಿಟ್​ ಆಗಿತ್ತು. ಅದರ ಸೀಕ್ವೆಲ್​ ಬರುತ್ತದೆ ಎಂದು ಅನೌನ್ಸ್​ ಮಾಡಿದಾಗಲೇ ಅಭಿಮಾನಿಗಳಲ್ಲಿ ನಿರೀಕ್ಷೆ ಗರಿಗೆದರಿತ್ತು. ಪ್ರೇಕ್ಷಕರು ಕಾತರದಿಂದ ಕಾಯುತ್ತಿದ್ದ ಆ ದಿನ ಸಮೀಪಿಸಿದೆ. ಈಗಾಗಲೇ ಈ ಸಿನಿಮಾದ ಹಾಡುಗಳನ್ನು ಜನರು ಇಷ್ಟಪಟ್ಟಿದ್ದಾರೆ. ಗಣೇಶ್​, ದಿಗಂತ್​, ಪವನ್​ ಕಾಂಬಿನೇಷನ್​ ನೋಡಲು ಜನರು ತುದಿಗಾಲಿನಲ್ಲಿ ನಿಂತಿದ್ದಾರೆ. ಆಗಸ್ಟ್​ 11ರಂದು ಬಾಲಿವುಡ್​ನ​ ‘ರಕ್ಷಾ ಬಂಧನ್​’ ಹಾಗೂ ‘ಲಾಲ್​ ಸಿಂಗ್​ ಚಡ್ಡಾ’ ಸಿನಿಮಾಗಳು ರಿಲೀಸ್​ ಆಗುತ್ತಿವೆ. ಈ ಚಿತ್ರಗಳ ಮೇಲೂ ಭರ್ಜರಿ ನಿರೀಕ್ಷೆ ಇದೆ. ಅವುಗಳಿಗೆ ‘ಗಾಳಿಪಟ 2’ ಚಿತ್ರ ಫೈಟ್​ ನೀಡಲಿದೆ.

ಅಕ್ಷಯ್​ ಕುಮಾರ್​ ನಟನೆಯ ‘ರಕ್ಷಾ ಬಂಧನ್​’ ಚಿತ್ರಕ್ಕೆ ಬುಕ್​ ಮೈ ಶೋನಲ್ಲಿ ಆಗಸ್ಟ್​ 10ರ ಬೆಳಗ್ಗೆ 10 ಗಂಟೆವರೆಗೆ 39 ಸಾವಿರ ಜನರು ಲೈಕ್ಸ್​ ಮಾಡುವ ಮೂಲಕ ಇಂಟರೆಸ್ಟ್​ ತೋರಿಸಿದ್ದಾರೆ. ‘ಗಾಳಿಪಟ 2’ ಚಿತ್ರಕ್ಕೆ 63 ಸಾವಿರ ಲೈಕ್ಸ್​ ಬಂದಿವೆ. ಆ ಮೂಲಕ ಕನ್ನಡದ ಈ ಚಿತ್ರ ದೊಡ್ಡ ಮಟ್ಟದಲ್ಲಿ ಓಪನಿಂಗ್​ ಪಡೆದುಕೊಳ್ಳುವ ಸೂಚನೆ ಸಿಕ್ಕಿದೆ.

ಇದನ್ನೂ ಓದಿ
Image
Gaalipata 2: ‘ಗಾಳಿಪಟ 2’ ಅದ್ದೂರಿ ಪ್ರೀ-ರಿಲೀಸ್​ ಇವೆಂಟ್​; ಕಾರ್ಯಕ್ರಮದ ಲೈವ್​ ನೋಡಲು ಇಲ್ಲಿ ಕ್ಲಿಕ್​ ಮಾಡಿ
Image
Gaalipata 2: ಯೋಗರಾಜ್​ ಭಟ್​ ಲೇಖನಿಯಲ್ಲಿ ಮತ್ತೊಂದು ಎಣ್ಣೆ ಸಾಂಗ್​; ‘ಗಾಳಿಪಟ 2’ ಚಿತ್ರದಲ್ಲಿ ಹಿಟ್​ ಕಾಂಬಿನೇಷನ್​
Image
‘ಗಾಳಿಪಟ 2’ ಹುಡುಗರ ಎಲ್ಲ ಸಬ್ಜೆಕ್ಟ್​ ಫೇಲ್​; ಬಾಯಿ ಬಡಿದುಕೊಂಡ ಗಣೇಶ್​, ದಿಗಂತ್​, ಪವನ್​
Image
ಹೇಗಿತ್ತು ‘ಗಾಳಿಪಟ 2’ ಶೂಟಿಂಗ್​? ಇಲ್ಲಿದೆ ಮೇಕಿಂಗ್​ ವಿಡಿಯೋ

ರಮೇಶ್​ ರೆಡ್ಡಿ ಅವರು ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಶರ್ಮಿಳಾ ಮಾಂಡ್ರೆ, ವೈಭವಿ ಶಾಂಡಿಲ್ಯ ನಾಯಕಿಯಾಗಿ ನಟಿಸಿದ್ದಾರೆ. ಅರ್ಜುನ್​ ಜನ್ಯ ಸಂಗೀತ ನೀಡಿರುವ ಹಾಡುಗಳು ಸೂಪರ್​ ಹಿಟ್​ ಆಗಿವೆ. ‘ದೇವ್ಲೇ ದೇವ್ಲೆ..’, ‘ನೀನು ಬಗೆಹರಿಯದ ಹಾಡು..’, ‘ಎಕ್ಸಾಂ ಸಾಂಗ್​..’ ಗೀತೆಗಳು ಟ್ರೆಂಡ್​ ಸೆಟ್​ ಮಾಡಿವೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ