AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Channe Gowda Death: ‘ತಿಥಿ’ ಸಿನಿಮಾ ಖ್ಯಾತಿಯ ಗಡ್ಡಪ್ಪ ನಿಧನ; 89ನೇ ವಯಸ್ಸಿಗೆ ಕೊನೆಯುಸಿರು

ಗಡ್ಡಪ್ಪ ಚನ್ನೇ ಗೌಡ ನಿಧನ: ಗಡ್ಡಪ್ಪ ಅವರಿಗೆ ಕೆಲ ವರ್ಷಗಳ ಹಿಂದೆ ಪಾರ್ಶ್ವ ವಾಯು ಆಗಿತ್ತು. ಇದರಿಂದ ಚೇತರಿಸಿಕೊಳ್ಳಲು ಅವರಿಗೆ ಸಾಧ್ಯವಾಗಿಲ್ಲ. ಚಿಕಿತ್ಸೆಗೂ ಅವರ ಬಳಿ ಹಣ ಇರಲಿಲ್ಲ. ಇದಲ್ಲದೆ ನಟನಿಗೆ ಹೃದಯ ಕಾಯಿಲೆ, ಕೆಮ್ಮು ಮತ್ತು ಉಬ್ಬಸ, ಶ್ರವಣದೋಷ ಮತ್ತು ಇತರ ವಯಸ್ಸಿಗೆ ಸಂಬಂಧಿಸಿದ ಸಮಸ್ಯೆಗಳು ಇದ್ದವು.

Channe Gowda Death: ‘ತಿಥಿ’ ಸಿನಿಮಾ ಖ್ಯಾತಿಯ ಗಡ್ಡಪ್ಪ ನಿಧನ; 89ನೇ ವಯಸ್ಸಿಗೆ ಕೊನೆಯುಸಿರು
ಗಡ್ಡಪ್ಪ
ರಾಜೇಶ್ ದುಗ್ಗುಮನೆ
|

Updated on: Nov 12, 2025 | 1:28 PM

Share

ಸರಿಯಾಗಿ 10 ವರ್ಷಗಳ ಹಿಂದೆ ತೆರೆಗೆ ಬಂದು ಸೂಪರ್ ಹಿಟ್ ಆಗಿದ್ದ ಸಿನಿಮಾ ಎಂದರೆ ಅದು ‘ತಿಥಿ’. 2015ರಲ್ಲಿ ತೆರೆಗೆ ಬಂದ ಈ ಚಿತ್ರ ಮೆಚ್ಚುಗೆ ಪಡೆಯಿತು. ಹಲವು ಪ್ರಶಸ್ತಿಗಳನ್ನು ಕೂಡ ಬಾಚಿಕೊಂಡಿತು. ಈ ಸಿನಿಮಾದಲ್ಲಿ ಗಡ್ಡಪ್ಪ ಹೆಸರಿನ ಪಾತ್ರ ಮಾಡಿದ್ದ ಚನ್ನೇಗೌಡ ಅವರು ನಿಧನ ಹೊಂದಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು. ‘ತಿಥಿ’ ಸಿನಿಮಾದಲ್ಲಿ ಅವರು ಮಾಡಿದ್ದ ಪಾತ್ರ ಸಾಕಷ್ಟು ಗಮನ ಸೆಳೆದಿತ್ತು.

ಗಡ್ಡಪ್ಪ ಅವರು ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು. ಇಂದು (ನವೆಂಬರ್ 12) ಚಿಕಿತ್ಸೆ ಫಲಿಸದೆ ಇಹಲೋಕದ ಪ್ರಯಾಣ ಮುಗಿಸಿದ್ದಾರೆ. ಗಡ್ಡಪ್ಪ ಅವರು ಮಂಡ್ಯ ತಾಲೂಕಿನ ನೊದೆ ಕೊಪ್ಪಲು ಗ್ರಾಮದವರು. ಬೆಂಗಳೂರು-ಮೈಸೂರು ಹೆದ್ದಾರಿಯಿಂದ ಪಾಂಡವಪುರಕ್ಕೆ ಹೋಗುವ ರಸ್ತೆಯಲ್ಲಿ ಈ ಊರು ಸಿಗುತ್ತದೆ. ಅವರು ‘ತಿಥಿ’ ಸಿನಿಮಾದಲ್ಲಿ ಗಡ್ಡಪ್ಪ ಹೆಸರಿನ ಪಾತ್ರ ಮಾಡಿ ಫೇಮಸ್ ಆದರು. ಎಲ್ಲರೂ ಅವರನ್ನು ಗಡ್ಡಪ್ಪ ಎಂದೇ ಗುರುತಿಸುತ್ತಿದ್ದರು.

ಗಡ್ಡಪ್ಪ ಅವರಿಗೆ ಕೆಲ ವರ್ಷಗಳ ಹಿಂದೆ ಪಾರ್ಶ್ವ ವಾಯು ಆಗಿತ್ತು. ಇದರಿಂದ ಚೇತರಿಸಿಕೊಳ್ಳಲು ಅವರಿಗೆ ಸಾಧ್ಯವಾಗಿಲ್ಲ. ಚಿಕಿತ್ಸೆಗೂ ಅವರ ಬಳಿ ಹಣ ಇರಲಿಲ್ಲ. ಇದಲ್ಲದೆ ನಟನಿಗೆ ಹೃದಯ ಕಾಯಿಲೆ, ಕೆಮ್ಮು ಮತ್ತು ಉಬ್ಬಸ, ಶ್ರವಣದೋಷ ಮತ್ತು ಇತರ ವಯಸ್ಸಿಗೆ ಸಂಬಂಧಿಸಿದ ಸಮಸ್ಯೆಗಳು ಇದ್ದವು.

ಇದನ್ನೂ ಓದಿ: ಬಾಲಿವುಡ್​ಗೆ ಮತ್ತೊಂದು ಶಾಕ್; ಕುಸಿದುಬಿದ್ದು ಆಸ್ಪತ್ರೆ ಸೇರಿದ ನಟ ಗೋವಿಂದ

‘ಗಡ್ಡಪ್ಪ’ ಪಾತ್ರವನ್ನು ನೋಡಿ ಅನೇಕರು ಮೂಕವಿಸ್ಮಿತರಾದರು. ಅವರು ತಮ್ಮ ಸಹಜ ನಟನಾ ಕೌಶಲ್ಯದಿಂದ ಜನಪ್ರಿಯರಾದರು. ಆ ಬಳಿಕ ಹಲವು ಸಿನಿಮಾಗಳಲ್ಲಿ ಚನ್ನೇಗೌಡ ಅವರು ನಟಿಸಿದ್ದರು. ಅವರು ಅನೇಕ ಸಿನಿಮಾಗಳಲ್ಲಿ ನಟಿಸಿದರೂ ಆರ್ಥಿಜವಾಗಿ ಸೃಧಡರಾಗಲು ಸಾಧ್ಯವಾಗಲೇ ಇಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?
ಬೆಂಗಳೂರಿನಲ್ಲಿ ಭಾರಿ ಮಳೆ, ಕೆಆರ್ ಮಾರುಕಟ್ಟೆಯಲ್ಲಿ ಭಾರಿ ಅವಾಂತರ
ಬೆಂಗಳೂರಿನಲ್ಲಿ ಭಾರಿ ಮಳೆ, ಕೆಆರ್ ಮಾರುಕಟ್ಟೆಯಲ್ಲಿ ಭಾರಿ ಅವಾಂತರ