Gagana Nee: ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾದ ಹೊಸ ಹಾಡು ‘ಗಗನ ನೀ..’ ರಿಲೀಸ್​

KGF Chapter 2 songs: ‘ಕೆಜಿಎಫ್​: ಚಾಪ್ಟರ್​ 2’ ಚಿತ್ರದ ತಾಯಿ ಸೆಂಟಿಮೆಂಟ್​ ಸಾಂಗ್​ ಬಿಡುಗಡೆ ಆಗಿದೆ. ಆ ಮೂಲಕ ಸಿನಿಮಾ ಮೇಲೆ ಇರುವ ನಿರೀಕ್ಷೆಯನ್ನು ಇನ್ನಷ್ಟು ಹೆಚ್ಚಿಸಲಾಗಿದೆ.

Gagana Nee: ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾದ ಹೊಸ ಹಾಡು ‘ಗಗನ ನೀ..’ ರಿಲೀಸ್​
ಕೆಜಿಎಫ್: ಚಾಪ್ಟರ್ 2
Follow us
TV9 Web
| Updated By: ಮದನ್​ ಕುಮಾರ್​

Updated on:Apr 06, 2022 | 1:35 PM

ಪ್ರಶಾಂತ್​ ನೀಲ್​ ನಿರ್ದೇಶನದ ‘ಕೆಜಿಎಫ್​: ಚಾಪ್ಟರ್​ 2’ (KGF Chapter 2) ಚಿತ್ರದ ಬಿಡುಗಡೆಗೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿವೆ. ಏ.14ರಂದು ಈ ಸಿನಿಮಾ ವಿಶ್ವಾದ್ಯಂತ ಬಿಡುಗಡೆ ಆಗಲಿದೆ. ಈಗಾಗಲೇ ಟ್ರೇಲರ್​ ಮೂಲಕ ‘ಕೆಜಿಎಫ್​ 2’ ಚಿತ್ರ ಸಖತ್​ ಹೈಪ್​ ಸೃಷ್ಟಿ ಮಾಡಿದೆ. ಯಶ್​ (Yash) ಅಭಿಮಾನಿಗಳು ಮೊದಲ ದಿನ ಮೊದಲ ಶೋ ನೋಡಲು ತುದಿಗಾಲಿನಲ್ಲಿ ನಿಂತು ಕಾಯುತ್ತಿದ್ದಾರೆ. ಈ ಚಿತ್ರದಲ್ಲಿ ಭರ್ಜರಿ ಆ್ಯಕ್ಷನ್​ ಜೊತೆಗೆ ಹಾಡುಗಳಿಗೂ ಹೆಚ್ಚು ಮಹತ್ವ ನೀಡಲಾಗಿದೆ. ಸಂಗೀತ ನಿರ್ದೇಶಕ ರವಿ ಬಸ್ರೂರು ಅವರು ಸಂಗೀತ ನೀಡಿದ ‘ತೂಫಾನ್​..’ ಹಾಡು ಈಗಾಗಲೇ ಸೂಪರ್​ ಹಿಟ್​ ಆಗಿದೆ. ಈಗ ಮತ್ತೊಂದು ಹಾಡಿನ ಮೂಲಕ ಜನಮನ ಸೆಳೆಯುತ್ತಿದೆ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ತಂಡ. ‘ಕೆಜಿಎಫ್​: ಚಾಪ್ಟರ್​ 1’ ಚಿತ್ರದಲ್ಲಿ ಗೊತ್ತಾಗಿರುವಂತೆ ಈ ಕಥೆಯಲ್ಲಿ ಮದರ್​ ಸೆಂಟಿಮೆಂಟ್​ ಕೂಡ ಇದೆ. ‘ಗರ್ಭದಿ ನನ್ನಿರಿಸಿ..’ ಹಾಡು ಮಾಡಿದ ಮೋಡಿ ಅಷ್ಟಿಷ್ಟಲ್ಲ. ಈಗ ‘ಗಗನ ನೀ..’ (Gagana Nee Song) ಗೀತೆಯನ್ನು ರಿಲೀಸ್​ ಮಾಡಲಾಗಿದೆ. ಈ ಹಾಡಿನ ಲಿರಿಕಲ್​ ವಿಡಿಯೋ ಗಮನ ಸೆಳೆಯುತ್ತಿದೆ.

ನಟಿ ಅರ್ಚನಾ ಜೋಯಿಸ್​ ಅವರು ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾದಲ್ಲಿ ಕಥಾನಾಯಕನ ತಾಯಿಯ ಪಾತ್ರದಲ್ಲಿ ನಟಿಸಿದ್ದಾರೆ. ಟ್ರೇಲರ್​ನ ಕೊನೆಯಲ್ಲಿ ಅಮ್ಮ-ಮಗನ ನಡುವೆ ನಡೆಯುವ ಸಂಭಾಷಣೆ ಕೂಡ ಹೈಲೈಟ್​ ಆಗಿದೆ. ಈಗ ತಾಯಿ ಸೆಂಟಿಮೆಂಟ್​ ಸಾಂಗ್​ ಬಿಡುಗಡೆ ಮಾಡುವ ಮೂಲಕ ಸಿನಿಮಾ ಬಗ್ಗೆ ಇರುವ ನಿರೀಕ್ಷೆಯನ್ನು ಇನ್ನಷ್ಟು ಹೆಚ್ಚಿಸಲಾಗಿದೆ.

ಈ ಸಿನಿಮಾದಲ್ಲಿ ಯಶ್​, ಶ್ರೀನಿಧಿ ಶೆಟ್ಟಿ, ಸಂಜಯ್​ ದತ್​, ರವೀನಾ ಟಂಡನ್​, ವಸಿಷ್ಠ ಸಿಂಹ, ಪ್ರಕಾಶ್​ ರಾಜ್​, ರಾವ್​ ರಮೇಶ್​ ಸೇರಿದಂತೆ ಹಲವಾರು ಕಲಾವಿದರು ಅಭಿನಯಿಸಿದ್ದಾರೆ. ಇಡೀ ತಂಡ ಈಗ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಕರ್ನಾಟಕ ಮಾತ್ರವಲ್ಲದೇ ಹಿಂದಿ ಭಾಷಿಕ ರಾಜ್ಯಗಳಲ್ಲಿ ಈ ಸಿನಿಮಾ ಮೇಲೆ ಭಾರೀ ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. ಆ ಕಾರಣಕ್ಕಾಗಿ ಬೇರೆ ಬೇರೆ ರಾಜ್ಯಗಳಿಗೆ ತೆರಳಿ ಚಿತ್ರತಂಡದವರು ಪ್ರಚಾರ ಮಾಡುತ್ತಿದ್ದಾರೆ.

‘ಗಗನ ನೀ..’ ಹಾಡಿಗೆ ಕಿನ್ನಲ್​ ರಾಜ್​ ಸಾಹಿತ್ಯ ಬರೆದಿದ್ದಾರೆ. ಸುಚೇತಾ ಬಸ್ರೂರು ಅವರ ಕಂಠದಲ್ಲಿ ಈ ಎಮೋಷನಲ್​ ಗೀತೆ ಮೂಡಿಬಂದಿದೆ. ಕನ್ನಡ ಮಾತ್ರವಲ್ಲದೇ, ತಮಿಳು, ತೆಲುಗು, ಹಿಂದಿ ಮತ್ತು ಮಲಯಾಳಂ ವರ್ಷನ್​ಗಳಲ್ಲಿ ಸಾಂಗ್​ ರಿಲೀಸ್​ ಆಗಿದೆ. ತಮಿಳಿನಲ್ಲಿ ಅನನ್ಯಾ ಭಟ್​ ಧ್ವನಿ ನೀಡಿದ್ದಾರೆ. ಹಿಂದಿ ಮತ್ತು ತೆಲುಗು ವರ್ಷನ್​​ ಕೂಡ ಸುಚೇತಾ ಬಸ್ರೂರು ಹಾಡಿದ್ದಾರೆ. ಬಿಡುಗಡೆಯಾದ ಕೆಲವೇ ನಿಮಿಷಗಳಲ್ಲಿ ಈ ಸಾಂಗ್​ ಲಕ್ಷಾಂತರ ಬಾರಿ ವೀಕ್ಷಣೆ ಕಂಡಿದೆ.

ಇದನ್ನೂ ಓದಿ:

ಫ್ಯಾನ್ಸ್​ ಪ್ರತಿಭೆಗೆ ಎಷ್ಟೊಂದು ಗೌರವ ಕೊಟ್ಟ ‘ಕೆಜಿಎಫ್​: ಚಾಪ್ಟರ್​ 2’ ತಂಡ; ರಾರಾಜಿಸುತ್ತಿವೆ ಪೋಸ್ಟರ್​ಗಳು

ಅಬ್ಬಬ್ಬಾ.. ಎಷ್ಟೊಂದು ಭಯಾನಕ ಅಧೀರನ ಲುಕ್; ಇಲ್ಲಿವೆ​‘ಕೆಜಿಎಫ್​ 2’ ನಟ ಸಂಜಯ್ ದತ್​ ಫೋಟೋಗಳು

Published On - 1:04 pm, Wed, 6 April 22

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ