AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಗಂಧದಗುಡಿ’ ಟ್ರೇಲರ್ ರಿಲೀಸ್ ದಿನಾಂಕ ಘೋಷಿಸಿದ ಅಶ್ವಿನಿ ಪುನೀತ್​ ರಾಜ್​ಕುಮಾರ್; ಇಲ್ಲಿದೆ ಪೂರ್ತಿ ವಿವರ

ಟ್ರೇಲರ್ ಬಿಡುಗಡೆಗೆ ದಿನಾಂಕ ಅನೌನ್ಸ್ ಮಾಡಲಾಗಿದೆ. ಅಕ್ಟೋಬರ್ 9ರಂದು ಬೆಳಗ್ಗೆ 10:19ಕ್ಕೆ ಪಿಆರ್​ಕೆ ಆಡಿಯೋ ಯೂಟ್ಯೂಬ್​ ಚಾನೆಲ್​ನಲ್ಲಿ ‘ಗಂಧದಗುಡಿ’ಯ ಟ್ರೇಲರ್ ರಿಲೀಸ್ ಆಗಲಿದೆ.

‘ಗಂಧದಗುಡಿ’ ಟ್ರೇಲರ್ ರಿಲೀಸ್ ದಿನಾಂಕ ಘೋಷಿಸಿದ ಅಶ್ವಿನಿ ಪುನೀತ್​ ರಾಜ್​ಕುಮಾರ್; ಇಲ್ಲಿದೆ ಪೂರ್ತಿ ವಿವರ
ಪುನೀತ್ ರಾಜ್​ಕುಮಾರ್
TV9 Web
| Edited By: |

Updated on: Oct 06, 2022 | 8:26 PM

Share

‘ಗಂಧದಗುಡಿ’ ಸಾಕ್ಷ್ಯ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ದೊಡ್ಡ ಮಟ್ಟದ ನಿರೀಕ್ಷೆ ಇದೆ. ಇದು ಪುನೀತ್​ ರಾಜ್​ಕುಮಾರ್ ಅವರ ಕನಸಿನ ಪ್ರಾಜೆಕ್ಟ್ ಆಗಿತ್ತು. ಇದನ್ನು ಜನರ ಮುಂದಿಡುವ ಮೊದಲೇ ಪುನೀತ್ (Puneeth Rajkumar) ಅವರು ಇಹಲೋಕ ತ್ಯಜಿಸಿದರು. ಈಗ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರು ಈ ಸಾಕ್ಷ್ಯಚಿತ್ರವನ್ನು ಜನರ ಮುಂದೆ ಇಡುತ್ತಿದ್ದಾರೆ. ಅಕ್ಟೋಬರ್ 29ರಂದು ಪುನೀತ್ ನಿಧನ ಹೊಂದಿ ಒಂದು ವರ್ಷ ಆಗಲಿದೆ. ಅದಕ್ಕೂ ಒಂದು ದಿನ ಮೊದಲು ಅಂದರೆ ಅಕ್ಟೋಬರ್ 28ರಂದು ಈ ಡಾಕ್ಯುಮೆಂಟರಿ ಥಿಯೇಟರ್​​ನಲ್ಲೇ ರಿಲೀಸ್ ಆಗಲಿದೆ. ಸದ್ಯ ಟ್ರೇಲರ್ ಬಿಡುಗಡೆಗೆ ದಿನಾಂಕ ಅನೌನ್ಸ್ ಮಾಡಲಾಗಿದೆ. ಅಕ್ಟೋಬರ್ 9ರಂದು ಬೆಳಗ್ಗೆ 10:19ಕ್ಕೆ ಪಿಆರ್​ಕೆ ಆಡಿಯೋ ಯೂಟ್ಯೂಬ್​ ಚಾನೆಲ್​ನಲ್ಲಿ ‘ಗಂಧದಗುಡಿ’ಯ ಟ್ರೇಲರ್ ರಿಲೀಸ್ ಆಗಲಿದೆ.

ಪುನೀತ್ ರಾಜ್​ಕುಮಾರ್ ಅವರು ಕನ್ನಡ ಚಿತ್ರರಂಗದ ಬಗ್ಗೆ ಸಾಕಷ್ಟು ಕನಸುಗಳನ್ನು ಕಂಡಿದ್ದರು. ಹೊಸ ಹೊಸ ಆಲೋಚನೆಗಳೊಂದಿಗೆ ಪ್ರೇಕ್ಷಕರ ಎದುರು ಬರುವ ಉದ್ದೇಶ ಇಟ್ಟುಕೊಂಡಿದ್ದರು. ‘ಪಿಆರ್​ಕೆ ಪ್ರೊಡಕ್ಷನ್ಸ್​’ ಸ್ಥಾಪಿಸಿ ಹೊಸಬರಿಗೆ ಅವಕಾಶ ನೀಡುವ ಕೆಲಸವೂ ನಡೆಯುತ್ತಿತ್ತು. ಇದೇ ನಿರ್ಮಾಣ ಸಂಸ್ಥೆ ಅಡಿಯಲ್ಲಿ ‘ಗಂಧದ ಗುಡಿ’ ಸಾಕ್ಷ್ಯ ಚಿತ್ರ ನಿರ್ಮಾಣ ಆಗುತ್ತಿತ್ತು. ಇದರ ಕೆಲಸಗಳು ಬಾಕಿ ಇರುವಾಗಲೇ ಅವರು ಇಹಲೋಕ ತ್ಯಜಿಸಿದರು. ಈಗ ಈ ಡಾಕ್ಯುಮೆಂಟರಿ ರಿಲೀಸ್​ಗೆ ರೆಡಿ ಇದೆ.

ಇದನ್ನೂ ಓದಿ
Image
‘ಕಿಶೋರ್ ಪತ್ತಿಕೊಂಡಗೆ ಮೆದುಳಿನ ಸರ್ಜರಿ ಆಗಿದೆ, ಅವರು ಔಟ್​ ಆಫ್​ ಡೇಂಜರ್​’; ಧೀರೇನ್ ರಾಮ್​ಕುಮಾರ್
Image
Kishore Pathikonda: ‘ಜೇಮ್ಸ್​’ ನಿರ್ಮಾಪಕ ಕಿಶೋರ್​ ಪತ್ತಿಕೊಂಡ ಆರೋಗ್ಯ ಸ್ಥಿತಿ ಗಂಭೀರ; ಆಸ್ಪತ್ರೆಗೆ ದಾಖಲು
Image
ಆತ್ಮೀಯತೆಯಿಂದ ಮಾತನಾಡಿದ ಶಿವರಾಜ್​ಕುಮಾರ್ ಹಾಗೂ ಅಶ್ವಿನಿ ಪುನೀತ್​ರಾಜ್​ಕುಮಾರ್; ಇಲ್ಲಿದೆ ವಿಡಿಯೋ
Image
ಪುನೀತ್​ ನಟನೆಯ ‘ಜೇಮ್ಸ್’ ಮೂರು ದಿನಕ್ಕೆ ಗಳಿಸಿದ್ದೆಷ್ಟು? ಇಲ್ಲಿದೆ ಸಂಪೂರ್ಣ ರಿಪೋರ್ಟ್​

ಗಣೇಶ ಚತುರ್ಥಿ ಅಂಗವಾಗಿ ‘ಗಂಧದ ಗುಡಿ’ಯ ಹೊಸ ಪೋಸ್ಟರ್ ಬಿಡುಗಡೆ ಮಾಡಲಾಗಿತ್ತು. ಪುನೀತ್ ಅವರು ಆನೆಯ ಜತೆ ನಿಂತಿದ್ದರು. ‘ಸರ್ವರಿಗೂ ಗೌರಿ ಗಣೇಶ ಹಬ್ಬದ ಶುಭಾಶಯಗಳು. ಈ ಹಬ್ಬದ ಸಂದರ್ಭದಲ್ಲಿ, ಭಗವಂತನು ನಿಮಗೆಲ್ಲರಿಗೂ ಸುಖ ಸಮೃದ್ಧಿ, ಉತ್ತಮ ಆರೋಗ್ಯ ಹಾಗೂ ಶಾಂತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇವೆ’ ಎಂದು ಈ ಪೋಸ್ಟರ್​ಗೆ ಕ್ಯಾಪ್ಶನ್ ನೀಡಲಾಗಿತ್ತು.

ಇದನ್ನೂ ಓದಿ: ಹೊಸ ಪೋಸ್ಟರ್ ಮೂಲಕ ‘ಗಂಧದ ಗುಡಿ’ ರಿಲೀಸ್ ದಿನಾಂಕ ಘೋಷಿಸಿದ ಅಶ್ವಿನಿ ಪುನೀತ್ ರಾಜ್​ಕುಮಾರ್

2021ರ ಅಕ್ಟೋಬರ್ 29ರಂದು ಅಪ್ಪು ನಿಧನ ಹೊಂದಿದರು. ಈ ಕಾರಣಕ್ಕೆ ಈ ವರ್ಷ ಅಕ್ಟೋಬರ್ 28ರಂದು ‘ಗಂಧದ ಗುಡಿ’ಯನ್ನು ರಿಲೀಸ್ ಮಾಡಲಾಗುತ್ತಿದೆ. ಸಾಮಾನ್ಯವಾಗಿ ಡಾಕ್ಯುಮೆಂಟರಿಗಳು ಒಟಿಟಿ ಹಾಗೂ ಯೂಟ್ಯೂಬ್​ಗೆ ಮಾತ್ರ ಸೀಮಿತವಾಗಿರುತ್ತದೆ. ಆದರೆ, ‘ಗಂಧದ ಗುಡಿ’ಯನ್ನು ಪುನೀತ್ ಅವರ ಆಸೆಯಂತೆ ಚಿತ್ರಮಂದಿರದಲ್ಲೇ ಬಿಡುಗಡೆ ಮಾಡಲಾಗುತ್ತಿದೆ. ಇದಕ್ಕೆ ಸ್ಯಾಂಡಲ್​ವುಡ್ ಸೆಲೆಬ್ರಿಟಿಗಳಿಂದ ಉತ್ತಮ ಬೆಂಬಲ ಸಿಗುವ ನಿರೀಕ್ಷೆ ಇದೆ.

Follow Us
TV9 Web
TV9 Web

TV9 Kannada

Read More
17 ವರ್ಷ ಸೇವೆ ಸಲ್ಲಿಸಿ ಹುಟ್ಟೂರಿಗೆ ಮರಳಿದ ಯೋಧನಿಗೆ ಅದ್ಧೂರಿ ಸ್ವಾಗತ!
17 ವರ್ಷ ಸೇವೆ ಸಲ್ಲಿಸಿ ಹುಟ್ಟೂರಿಗೆ ಮರಳಿದ ಯೋಧನಿಗೆ ಅದ್ಧೂರಿ ಸ್ವಾಗತ!
ಕೆಪಿಎಸ್‌ಸಿ ಅಕ್ರಮ: 70 ಆರ್‌ಟಿಓ ಇನ್ಸ್‌ಪೆಕ್ಟರ್‌ ಹೆಚ್ಚುವರಿ ಆಯ್ಕೆಗೆ ತಡೆ
ಕೆಪಿಎಸ್‌ಸಿ ಅಕ್ರಮ: 70 ಆರ್‌ಟಿಓ ಇನ್ಸ್‌ಪೆಕ್ಟರ್‌ ಹೆಚ್ಚುವರಿ ಆಯ್ಕೆಗೆ ತಡೆ
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್