ಗಣೇಶ ಚತುರ್ಥಿಗೆ ‘ಗಂಧದ ಗುಡಿ’ ಹೊಸ ಪೋಸ್ಟರ್ ರಿಲೀಸ್; ಆನೆಯ ಜತೆ ಬಂದ ಪುನೀತ್ ರಾಜ್​ಕುಮಾರ್

‘ಪಿಆರ್​ಕೆ ಪ್ರೊಡಕ್ಷನ್ಸ್​’ ಅಡಿಯಲ್ಲಿ ‘ಗಂಧದ ಗುಡಿ’ ಸಾಕ್ಷ್ಯ ಚಿತ್ರ ನಿರ್ಮಾಣ ಆಗುತ್ತಿತ್ತು. ಇದರ ಕೆಲಸಗಳು ಬಾಕಿ ಇರುವಾಗಲೇ ಅವರು ಇಹಲೋಕ ತ್ಯಜಿಸಿದರು. ಈಗ ಈ ಡಾಕ್ಯುಮೆಂಟರಿ ರಿಲೀಸ್​ಗೆ ರೆಡಿ ಇದೆ.

ಗಣೇಶ ಚತುರ್ಥಿಗೆ ‘ಗಂಧದ ಗುಡಿ’ ಹೊಸ ಪೋಸ್ಟರ್ ರಿಲೀಸ್; ಆನೆಯ ಜತೆ ಬಂದ ಪುನೀತ್ ರಾಜ್​ಕುಮಾರ್
ಪುನೀತ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Aug 31, 2022 | 2:50 PM

ಇಂದು (ಆಗಸ್ಟ್​ 31) ಎಲ್ಲೆಡೆ ಗಣೇಶ ಚತುರ್ಥಿ (Ganesh Chaturthi) ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಮನೆಗಳನ್ನು ವಿಶೇಷವಾಗಿ ಸಿಂಗರಿಸಲಾಗುತ್ತಿದೆ. ಹಬ್ಬಗಳು ಬಂತೆಂದರೆ ಸಿನಿಪ್ರಿಯರ ಪಾಲಿಗೆ ಖುಷಿಯೋ ಖುಷಿ. ಬಹುತೇಕ ಚಿತ್ರತಂಡಗಳು ಈ ವಿಶೇಷ ದಿನದಂದು ತಮ್ಮ ಚಿತ್ರಗಳ ಬಗ್ಗೆ ಹೊಸಹೊಸ ಅಪ್​ಡೇಟ್ ನೀಡುತ್ತವೆ. ಪೋಸ್ಟರ್ ರಿಲೀಸ್ ಮಾಡಿ ಹಬ್ಬಕ್ಕೆ ಶುಭ ಕೋರುತ್ತಾರೆ. ಗಣೇಶ ಚತುರ್ಥಿಯಂದು ಈ ಸಂಪ್ರದಾಯ ಮುಂದುವರಿದಿದೆ. ಅನೇಕ ಸಿನಿಮಾ ತಂಡಗಳು ಹೊಸ ಪೋಸ್ಟರ್ ರಿಲೀಸ್ ಮಾಡಿವೆ. ಪುನೀತ್ ರಾಜ್​ಕುಮಾರ್ (Puneeth Rajkumar) ನಟನೆಯ ‘ಗಂಧದ ಗುಡಿ’ ಸಾಕ್ಷ್ಯಚಿತ್ರದ ತಂಡದವರೂ ಹೊಸ ಪೋಸ್ಟರ್ ರಿಲೀಸ್ ಮಾಡಿದ್ದಾರೆ.

ಪುನೀತ್ ರಾಜ್​ಕುಮಾರ್ ಅವರು ಕನ್ನಡ ಚಿತ್ರರಂಗದ ಬಗ್ಗೆ ಸಾಕಷ್ಟು ಕನಸುಗಳನ್ನು ಕಂಡಿದ್ದರು. ಹೊಸ ಹೊಸ ಆಲೋಚನೆಗಳೊಂದಿಗೆ ಪ್ರೇಕ್ಷಕರ ಎದುರು ಬರುವ ಉದ್ದೇಶ ಇಟ್ಟುಕೊಂಡಿದ್ದರು. ‘ಪಿಆರ್​ಕೆ ಪ್ರೊಡಕ್ಷನ್ಸ್​’ ಸ್ಥಾಪಿಸಿ ಹೊಸಬರಿಗೆ ಅವಕಾಶ ನೀಡುವ ಕೆಲಸವೂ ನಡೆಯುತ್ತಿತ್ತು. ಇದೇ ನಿರ್ಮಾಣ ಸಂಸ್ಥೆ ಅಡಿಯಲ್ಲಿ ‘ಗಂಧದ ಗುಡಿ’ ಸಾಕ್ಷ್ಯ ಚಿತ್ರ ನಿರ್ಮಾಣ ಆಗುತ್ತಿತ್ತು. ಇದರ ಕೆಲಸಗಳು ಬಾಕಿ ಇರುವಾಗಲೇ ಅವರು ಇಹಲೋಕ ತ್ಯಜಿಸಿದರು. ಈಗ ಈ ಡಾಕ್ಯುಮೆಂಟರಿ ರಿಲೀಸ್​ಗೆ ರೆಡಿ ಇದೆ.

ಇದನ್ನೂ ಓದಿ
Image
‘ಕಿಶೋರ್ ಪತ್ತಿಕೊಂಡಗೆ ಮೆದುಳಿನ ಸರ್ಜರಿ ಆಗಿದೆ, ಅವರು ಔಟ್​ ಆಫ್​ ಡೇಂಜರ್​’; ಧೀರೇನ್ ರಾಮ್​ಕುಮಾರ್
Image
Kishore Pathikonda: ‘ಜೇಮ್ಸ್​’ ನಿರ್ಮಾಪಕ ಕಿಶೋರ್​ ಪತ್ತಿಕೊಂಡ ಆರೋಗ್ಯ ಸ್ಥಿತಿ ಗಂಭೀರ; ಆಸ್ಪತ್ರೆಗೆ ದಾಖಲು
Image
ಆತ್ಮೀಯತೆಯಿಂದ ಮಾತನಾಡಿದ ಶಿವರಾಜ್​ಕುಮಾರ್ ಹಾಗೂ ಅಶ್ವಿನಿ ಪುನೀತ್​ರಾಜ್​ಕುಮಾರ್; ಇಲ್ಲಿದೆ ವಿಡಿಯೋ
Image
ಪುನೀತ್​ ನಟನೆಯ ‘ಜೇಮ್ಸ್’ ಮೂರು ದಿನಕ್ಕೆ ಗಳಿಸಿದ್ದೆಷ್ಟು? ಇಲ್ಲಿದೆ ಸಂಪೂರ್ಣ ರಿಪೋರ್ಟ್​

ಗಣೇಶ ಚತುರ್ಥಿ ಅಂಗವಾಗಿ ‘ಗಂಧದ ಗುಡಿ’ಯ ಹೊಸ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ಪುನೀತ್ ಅವರು ಆನೆಯ ಜತೆ ನಿಂತಿದ್ದಾರೆ. ‘ಸರ್ವರಿಗೂ ಗೌರಿ ಗಣೇಶ ಹಬ್ಬದ ಶುಭಾಶಯಗಳು. ಈ ಹಬ್ಬದ ಸಂದರ್ಭದಲ್ಲಿ, ಭಗವಂತನು ನಿಮಗೆಲ್ಲರಿಗೂ ಸುಖ ಸಮೃದ್ಧಿ, ಉತ್ತಮ ಆರೋಗ್ಯ ಹಾಗೂ ಶಾಂತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇವೆ’ ಎಂದು ಈ ಪೋಸ್ಟರ್​ಗೆ ಕ್ಯಾಪ್ಶನ್ ನೀಡಲಾಗಿದೆ.

2021ರ ಅಕ್ಟೋಬರ್ 29ರಂದು ಅಪ್ಪು ನಿಧನ ಹೊಂದಿದರು. ಈ ಕಾರಣಕ್ಕೆ ಈ ವರ್ಷ ಅಕ್ಟೋಬರ್ 28ರಂದು ‘ಗಂಧದ ಗುಡಿ’ಯನ್ನು ರಿಲೀಸ್ ಮಾಡಲಾಗುತ್ತಿದೆ. ಸಾಮಾನ್ಯವಾಗಿ ಡಾಕ್ಯುಮೆಂಟರಿಗಳು ಒಟಿಟಿ ಹಾಗೂ ಯೂಟ್ಯೂಬ್​ಗೆ ಮಾತ್ರ ಸೀಮಿತವಾಗಿರುತ್ತದೆ. ಆದರೆ, ‘ಗಂಧದ ಗುಡಿ’ಯನ್ನು ಪುನೀತ್ ಅವರ ಆಸೆಯಂತೆ ಚಿತ್ರಮಂದಿರದಲ್ಲೇ ಬಿಡುಗಡೆ ಮಾಡಲಾಗುತ್ತಿದೆ. ಇದಕ್ಕೆ ಸ್ಯಾಂಡಲ್​ವುಡ್ ಸೆಲೆಬ್ರಿಟಿಗಳಿಂದ ಉತ್ತಮ ಬೆಂಬಲ ಸಿಗುವ ನಿರೀಕ್ಷೆ ಇದೆ.

ಇದನ್ನೂ ಓದಿ: ಪುನೀತ್ ರಾಜ್​ಕುಮಾರ್ ಹೆಗಲಮೇಲೆ ಕೈ ಹಾಕಿ ನಿಂತ ಗಣಪ; ಮಣ್ಣಿನಲ್ಲಿ ಅರಳಿದ ಅಪ್ಪುಗೆ ಭಾರೀ ಬೇಡಿಕೆ

ಪುನೀತ್ ರಾಜ್​ಕುಮಾರ್ ನಿಧನದ ನಂತರದಲ್ಲಿ ‘ಪಿಆರ್​ಕೆ ಪ್ರೊಡಕ್ಷನ್​’ ಜವಾಬ್ದಾರಿಯನ್ನು ಅಶ್ವಿನಿ ಪುನೀತ್ ರಾಜ್​ಕುಮಾರ್ ವಹಿಸಿಕೊಂಡಿದ್ದಾರೆ. ಹೊಸಬರ ಸಿನಿಮಾಗೆ ಬೆಂಬಲ ನೀಡುವ ಕೆಲಸ ಕೂಡ ಮುಂದುವರೆದಿದೆ.

Published On - 2:45 pm, Wed, 31 August 22

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ