‘ಗಂಧದ ಗುಡಿ’ಗೆ ಪ್ರೀ-ಬುಕಿಂಗ್ ಆರಂಭ; ಹಬ್ಬಕ್ಕೆ ಸಾಕ್ಷಿ ಆಗಲಿದೆ ಅಕ್ಟೋಬರ್ 28

ಅರಮನೆ ಮೈದಾನದಲ್ಲಿ ನಡೆದ ಇದರ ಪ್ರೀ-ರಿಲೀಸ್ ಇವೆಂಟ್​ಗೆ ದೊಡ್ಡ ಮಟ್ಟದಲ್ಲಿ ಅಭಿಮಾನಿಗಳು ಸೇರಿದ್ದರು. ಈ ಮೂಲಕ ಈ ಸಾಕ್ಷ್ಯಚಿತ್ರದ ಬಗ್ಗೆ ಎಷ್ಟು ನಿರೀಕ್ಷೆ ಇಟ್ಟುಕೊಳ್ಳಲಾಗಿದೆ ಎಂಬುದನ್ನು ಸಾಬೀತುಪಡಿಸಿದ್ದರು.

‘ಗಂಧದ ಗುಡಿ’ಗೆ ಪ್ರೀ-ಬುಕಿಂಗ್ ಆರಂಭ; ಹಬ್ಬಕ್ಕೆ ಸಾಕ್ಷಿ ಆಗಲಿದೆ ಅಕ್ಟೋಬರ್ 28
ಪುನೀತ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Oct 24, 2022 | 8:03 PM

‘ಗಂಧದ ಗುಡಿ’ (Gandhada Gudi) ಸಾಕ್ಷ್ಯಚಿತ್ರ ಅಪ್ಪು ಕಂಡ ದೊಡ್ಡ ಕನಸು. ಅವರನ ಪುಣ್ಯತಿಥಿಗೆ ಒಂದು ದಿನ ಮೊದಲು ಅಂದರೆ ಅಕ್ಟೋಬರ್ 28ರಂದು ಈ ಡಾಕ್ಯುಮೆಂಟರಿ ರಾಜ್ಯಾದ್ಯಂತ ದೊಡ್ಡ ಮಟ್ಟದಲ್ಲಿ ರಿಲೀಸ್ ಆಗುತ್ತಿದೆ. ಈ ಕ್ಷಣಕ್ಕಾಗಿ ಅಭಿಮಾನಿಗಳು ಹಲವು ತಿಂಗಳಿಂದ ಕಾದಿದ್ದರು. ಪುನೀತ್ (Puneeth) ಅವರನ್ನು ದೊಡ್ಡ ಪರದೆಮೇಲೆ ಕಣ್ತುಂಬಿಕೊಳ್ಳಲು ಅಭಿಮಾನಿಗಳಿಗೆ ಇದು ಕೊನೆಯ ಅವಕಾಶ. ಈ ಕಾರಣದಿಂದ ಫ್ಯಾನ್ಸ್ ಈ ಸಾಕ್ಷ್ಯಚಿತ್ರಕ್ಕಾಗಿ ಕಾದಿದ್ದಾರೆ. ಈಗ ‘ಗಂಧದ ಗುಡಿ’ಗೆ ಆನ್​​ಲೈನ್​ನಲ್ಲಿ ಪ್ರೀ ಬುಕಿಂಗ್ ಆರಂಭ ಆಗಿದೆ.

ಶುಕ್ರವಾರ ‘ಗಂಧದ ಗುಡಿ’ ರಿಲೀಸ್ ಆಗುತ್ತಿದೆ. ಈ ಸಾಕ್ಷ್ಯ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ. ಇತ್ತೀಚೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಇದರ ಪ್ರೀ-ರಿಲೀಸ್ ಇವೆಂಟ್​ಗೆ ದೊಡ್ಡ ಮಟ್ಟದಲ್ಲಿ ಅಭಿಮಾನಿಗಳು ಸೇರಿದ್ದರು. ಈ ಮೂಲಕ ಈ ಸಾಕ್ಷ್ಯಚಿತ್ರದ ಬಗ್ಗೆ ಎಷ್ಟು ನಿರೀಕ್ಷೆ ಇಟ್ಟುಕೊಳ್ಳಲಾಗಿದೆ ಎಂಬುದನ್ನು ಸಾಬೀತುಪಡಿಸಿದ್ದರು. ಈಗ ಪ್ರೀ-ಬುಕಿಂಗ್​ಗೂ ಉತ್ತಮ ಪ್ರತಿಕ್ರಿಯೆ ಬರುವ ನಿರೀಕ್ಷೆ ಇದೆ.

‘ಬುಕ್​ ಮೈ ಶೋ’ನಲ್ಲಿ ‘ಗಂಧದ ಗುಡಿ’ಗೆ ಟಿಕೆಟ್ ಬುಕಿಂಗ್ ಆರಂಭ ಆಗಿದೆ. ಈ ಸಾಕ್ಷ್ಯಚಿತ್ರದ ಅವಧಿ ಕೇವಲ 1 ಗಂಟೆ 37 ನಿಮಿಷ ಇದೆ. ಹೀಗಾಗಿ, ಹಲವು ಚಿತ್ರಮಂದಿರಗಳಲ್ಲಿ ಐದು ಶೋ ಇಡಲು ನಿರ್ಧರಿಸಲಾಗಿದೆ ಎನ್ನಲಾಗುತ್ತಿದೆ. ಈಗಾಗಲೇ ಸೆನ್ಸಾರ್ ಪ್ರಕ್ರಿಯೆ ಮುಗಿದಿದ್ದು, ಯು ಪ್ರಮಾಣಪತ್ರ ಸಿಕ್ಕಿದೆ.

ಇದನ್ನೂ ಓದಿ
Image
Gandhada Gudi Trailer: ಒಂದೇ ದಿನದಲ್ಲಿ 1 ಕೋಟಿ ಬಾರಿ ವೀಕ್ಷಣೆ ಕಂಡ ‘ಗಂಧದ ಗುಡಿ’ ಟ್ರೇಲರ್
Image
Gandhada Gudi: ರಮ್ಯಾ ಕೈ ಸೇರಿತು ‘ಗಂಧದ ಗುಡಿ’ ಪ್ರೀ-ರಿಲೀಸ್​ ಇವೆಂಟ್​ ಆಮಂತ್ರಣ ಪತ್ರಿಕೆ
Image
Gandhada Gudi: ‘ಗಂಧದ ಗುಡಿ’ ಟ್ರೇಲರ್ ರಿಲೀಸ್ ವೇಳೆ ಅಶ್ವಿನಿ ಪುನೀತ್​ ರಾಜ್​ಕುಮಾರ್ ಹೇಳಿದ್ದು ಒಂದೇ ಮಾತು..
Image
Gandhada Gudi: ಅ.21ರಂದು ‘ಗಂಧದ ಗುಡಿ’ ಪ್ರೀ-ರಿಲೀಸ್​ ಇವೆಂಟ್​; ವಿಶೇಷವಾಗಿ ಸಿದ್ಧವಾಗಿದೆ ಆಮಂತ್ರಣ ಪತ್ರಿಕೆ

ಇದನ್ನೂ ಓದಿ: Puneeth Rajkumar: ‘ಗಂಧದ ಗುಡಿ’ ರಿಲೀಸ್​ಗೆ ದಿನಗಣನೆ; ‘ನರ್ತಕಿ’ ಥಿಯೇಟರ್​ ಎದುರು ನಿಂತಿದೆ ಬೃಹತ್​ ಕಟೌಟ್​

ಕರ್ನಾಟಕಕ್ಕೆ ಗಂಧದ ಗುಡಿ ಎಂದು ಕರೆಯಲಾಗುತ್ತದೆ. ಇಲ್ಲಿ ಅಪಾರ ಸಸ್ಯ ಹಾಗೂ ಪ್ರಾಣಿ ಸಂಪತ್ತು ಇದೆ. ಅನೇಕ ಅಚ್ಚರಿಗಳು ಕಾಡಿನಲ್ಲಿ ಇವೆ. ಇದನ್ನು ಜನರ ಮುಂದಿಡುವ ಬಗ್ಗೆ ಪುನೀತ್ ಕನಸು ಕಂಡಿದ್ದರು. ಅದರ ಪ್ರತಿಫಲವೇ ‘ಗಂಧದ ಗುಡಿ’. ಇದರಲ್ಲಿ ಪುನೀತ್ ಅವರದ್ದೇ ಧ್ವನಿ ಇರಲಿದೆ ಎಂಬುದು ಟ್ರೇಲರ್ ಮೂಲಕ ಸಾಬೀತಾಗಿತ್ತು. ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರು ದೊಡ್ಡ ಮಟ್ಟದಲ್ಲಿ ಈ ಡಾಕ್ಯುಮೆಂಟರಿ ಅನ್ನು ರಿಲೀಸ್ ಮಾಡುತ್ತಿದ್ದಾರೆ. ‘ಗಂಧದ ಗುಡಿ’ಯನ್ನು ನೋಡಿ ಅಭಿಮಾನಿಗಳು ಚಿತ್ರಮಂದಿರದಲ್ಲಿ ಭಾವುಕರಾಗೋದು ಪಕ್ಕಾ.

Published On - 3:43 pm, Mon, 24 October 22

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ