AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gandhada Gudi: ರಿಲೀಸ್​ಗೂ ಮುನ್ನವೇ ದಾಖಲೆ ಬರೆದ ‘ಗಂಧದ ಗುಡಿ’: ಅಪ್ಪು ಕನಸನ್ನು ನನಸು ಮಾಡುತ್ತಿರುವ ಫ್ಯಾನ್ಸ್​

Puneeth Rajkumar: ಅಪ್ಪು ಕನಸಿನ ಪ್ರಾಜೆಕ್ಟ್​ ಅನ್ನು ಅಭಿಮಾನಿಗಳು ಹೆಮ್ಮೆಯಿಂದ ನೋಡಲು ಆಸಕ್ತಿ ತೋರಿಸುತ್ತಿದ್ದಾರೆ. ರಾಜ್ಯಾದ್ಯಂತ ‘ಗಂಧದ ಗುಡಿ’ ಗುಂಗು ಜೋರಾಗಿದೆ.

Gandhada Gudi: ರಿಲೀಸ್​ಗೂ ಮುನ್ನವೇ ದಾಖಲೆ ಬರೆದ ‘ಗಂಧದ ಗುಡಿ’: ಅಪ್ಪು ಕನಸನ್ನು ನನಸು ಮಾಡುತ್ತಿರುವ ಫ್ಯಾನ್ಸ್​
ಪುನೀತ್​ ರಾಜ್​ಕುಮಾರ್​
TV9 Web
| Edited By: |

Updated on: Oct 27, 2022 | 2:53 PM

Share

ನಟ ಪುನೀತ್​ ರಾಜ್​ಕುಮಾರ್​ (Puneeth Rajkumar) ಅವರು ‘ಗಂಧದ ಗುಡಿ’ ಪ್ರಾಜೆಕ್ಟ್​ ಬಗ್ಗೆ ಸಾಕಷ್ಟು ಕನಸು ಇಟ್ಟುಕೊಂಡಿದ್ದರು. ಆದರೆ ಅದು ನನಸಾಗುವುದಕ್ಕೂ ಮುನ್ನವೇ ಅವರು ನಿಧನರಾಗಿದ್ದು ತೀವ್ರ ನೋವಿನ ಸಂಗತಿ. ಭೌತಿಕವಾಗಿ ಅಪ್ಪು ಇಲ್ಲದಿದ್ದರೂ ಕೂಡ ಅವರು ಕಂಡ ಕನಸನ್ನು ನನಸಾಗಿಸಲಾಗುತ್ತಿದೆ. ‘ಗಂಧದ ಗುಡಿ’ (Gandhada Gudi) ಸಾಕ್ಷ್ಯಚಿತ್ರವನ್ನು ದೊಡ್ಡ ಮಟ್ಟದಲ್ಲಿ ರಿಲೀಸ್​ ಮಾಡಲಾಗುತ್ತಿದೆ. ಇದನ್ನು ಕಣ್ತುಂಬಿಕೊಳ್ಳಲು ಅಭಿಮಾನಿಗಳು ಸಜ್ಜಾಗಿದ್ದಾರೆ. ವಿಶೇಷ ಏನೆಂದರೆ, ರಿಲೀಸ್​ ಆಗುವುದಕ್ಕೂ ಮುನ್ನವೇ ಈ ಡಾಕ್ಯುಮೆಂಟರಿ ದಾಖಲೆ ಬರೆದಿದೆ. ಬೆಂಗಳೂರಿನ ಮಾಲ್​ಗಳಲ್ಲಿ ಮೊದಲ ಬಾರಿಗೆ ಏಕಕಾಲಕ್ಕೆ 50ಕ್ಕೂ ಹೆಚ್ಚು ಶೋಗಳಲ್ಲಿ ಪ್ರದರ್ಶನ ಕಾಣುವ ಮೂಲಕ ‘ಗಂಧದ ಗುಡಿ’ ದಾಖಲೆ ಬರೆಯುತ್ತಿದೆ.

ಈ ಶುಕ್ರವಾರ (ಅಕ್ಟೋಬರ್​ 28) ‘ಗಂಧದ ಗುಡಿ’ ಗ್ರ್ಯಾಂಡ್​ ರಿಲೀಸ್​ ಆಗುತ್ತಿದೆ. ಅದಕ್ಕೂ ಒಂದು ದಿನ ಮುನ್ನ ಅನೇಕ ಕಡೆಗಳಲ್ಲಿ ಪ್ರೀಮಿಯರ್​ ಪ್ರದರ್ಶನ ಆಯೋಜನೆಗೊಂಡಿದೆ. ಅದರ ಎಲ್ಲ ಟಿಕೆಟ್​ಗಳು ಸೋಲ್ಡ್​ ಔಟ್​ ಆಗಿವೆ. ಅಪ್ಪು ಕನಸಿನ ಪ್ರಾಜೆಕ್ಟ್​ ಅನ್ನು ಅಭಿಮಾನಿಗಳು ಹೆಮ್ಮೆಯಿಂದ ನೋಡಲು ಆಸಕ್ತಿ ತೋರಿಸುತ್ತಿದ್ದಾರೆ. ರಾಜ್ಯಾದ್ಯಂತ ‘ಗಂಧದ ಗುಡಿ’ ಗುಂಗು ಜೋರಾಗಿದೆ.

ಬೆಂಗಳೂರಿನ ಎಲ್ಲ ಪ್ರಮುಖ ಮಾಲ್​ಗಳಲ್ಲಿ ಅ.28ರ ಬೆಳಗ್ಗೆ 10 ಗಂಟೆಗೂ ಮುನ್ನ ಬರೋಬ್ಬರಿ 50 ಶೋಗಳಲ್ಲಿ ‘ಗಂಧದ ಗುಡಿ’ ಪ್ರದರ್ಶನ ಕಾಣುತ್ತಿದೆ. ಈ ಕುರಿತು ‘ಕೆಆರ್​ಜಿ ಸ್ಟುಡಿಯೋಸ್​’ನ ಕಾರ್ತಿಕ್​ ಗೌಡ ಅವರು ಟ್ವೀಟ್​ ಮಾಡಿದ್ದಾರೆ. ಈ ಸಾಕ್ಷ್ಯಚಿತ್ರ ನೋಡಲು ಜನರು ಸಖತ್​ ಆಸಕ್ತಿ ತೋರಿಸುತ್ತಿದ್ದಾರೆ. ಅದಕ್ಕೆ ಅನುಗುಣವಾಗಿ ಶೋ ಸಂಖ್ಯೆ ಹೆಚ್ಚುತ್ತಿದೆ.

ಇದನ್ನೂ ಓದಿ
Image
Gandhada Gudi Trailer: ಒಂದೇ ದಿನದಲ್ಲಿ 1 ಕೋಟಿ ಬಾರಿ ವೀಕ್ಷಣೆ ಕಂಡ ‘ಗಂಧದ ಗುಡಿ’ ಟ್ರೇಲರ್
Image
Gandhada Gudi: ರಮ್ಯಾ ಕೈ ಸೇರಿತು ‘ಗಂಧದ ಗುಡಿ’ ಪ್ರೀ-ರಿಲೀಸ್​ ಇವೆಂಟ್​ ಆಮಂತ್ರಣ ಪತ್ರಿಕೆ
Image
Gandhada Gudi: ‘ಗಂಧದ ಗುಡಿ’ ಟ್ರೇಲರ್ ರಿಲೀಸ್ ವೇಳೆ ಅಶ್ವಿನಿ ಪುನೀತ್​ ರಾಜ್​ಕುಮಾರ್ ಹೇಳಿದ್ದು ಒಂದೇ ಮಾತು..
Image
Gandhada Gudi: ಅ.21ರಂದು ‘ಗಂಧದ ಗುಡಿ’ ಪ್ರೀ-ರಿಲೀಸ್​ ಇವೆಂಟ್​; ವಿಶೇಷವಾಗಿ ಸಿದ್ಧವಾಗಿದೆ ಆಮಂತ್ರಣ ಪತ್ರಿಕೆ

‘ಗಂಧದ ಗುಡಿ’ ಬಗ್ಗೆ ಅಶ್ವಿನಿ ಪುನೀತ್​ ರಾಜ್​ಕುಮಾರ್​ ಮಾತು:

‘ಇದರಲ್ಲಿ ನಟನೆ ಇಲ್ಲ. ಅಪ್ಪು ಅವರ ಜರ್ನಿಯನ್ನೇ ನೇರವಾಗಿ ಸೆರೆ ಹಿಡಿಯಲಾಗಿದೆ. ನನಗೆ ಇದರ ಬಗ್ಗೆ ತುಂಬ ಹೆಮ್ಮೆ ಇದೆ. ಕನ್ನಡದ ಜನತೆಗೆ ಪುನೀತ್​ ಅವರ ಮೂಲಕ ಕರ್ನಾಟಕವನ್ನು ತೋರಿಸುವ ಕಾರ್ಯ ಆಗುತ್ತಿದೆ. ಶೂಟಿಂಗ್​ ವೇಳೆ ಅವರು ಅವರಾಗಿಯೇ ಇದ್ದರು. ಪ್ರತಿ ಹಂತದ ಶೂಟಿಂಗ್​ನಲ್ಲೂ ಅವರು ಖುಷಿಯಾಗಿದ್ದರು’ ಎಂದು ಅಶ್ವಿನಿ​ ಹೇಳಿದ್ದಾರೆ.

ಕೆಲವೇ ನಿಮಿಷಗಳಲ್ಲಿ ಪ್ರೀಮಿಯರ್​ ಶೋ ಟಿಕೆಟ್​ಗಳು ಸೋಲ್ಡ್​ ಔಟ್​ ಆಗಿರುವುದು ಅಶ್ವಿನಿ ಪುನೀತ್​ ರಾಜ್​ಕುಮಾರ್​ ಅವರಿಗೆ ಖುಷಿ ನೀಡಿದೆ. ‘ಇದು ನನಗೆ ಹೆಮ್ಮೆ ಕೊಟ್ಟಿರುವ ಪ್ರಾಜೆಕ್ಟ್​. ಒಂದು ಕಡೆ ಬೇಸರ, ಇನ್ನೊಂದು ಕಡೆ ಖುಷಿ ಇದೆ. ಎಲ್ಲರೂ ಗಂಧದ ಗುಡಿ ನೋಡಿ, ಆಶೀರ್ವದಿಸಿ’ ಎಂದು ಅವರು ಕೇಳಿಕೊಂಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?