AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುನೀತ್ ಕನಸಿನ ಪ್ರಾಜೆಕ್ಟ್ ‘ಗಂಧದಗುಡಿ’ ಸಾಕ್ಷ್ಯಚಿತ್ರದ ರಿಲೀಸ್ ಡೇಟ್ ಬಗ್ಗೆ ಹೊಸ ಅಪ್​ಡೇಟ್

‘ಗಂಧದಗುಡಿ’ ಥಿಯೇಟರ್​ನಲ್ಲೇ ರಿಲೀಸ್ ಆಗಲಿದೆ ಎನ್ನುವ ಘೋಷಣೆ ಪಿಆರ್​ಕೆ ಕಡೆಯಿಂದ ಆಯಿದೆ. ಈಗ ‘ಗಂಧದಗುಡಿ’ ರಿಲೀಸ್ ಬಗ್ಗೆ ಹೊಸ ಅಪ್​ಡೇಟ್ ಕೇಳಿ ಫ್ಯಾನ್ಸ್ ಖುಷಿಯಾಗಿದ್ದಾರೆ.

ಪುನೀತ್ ಕನಸಿನ ಪ್ರಾಜೆಕ್ಟ್ ‘ಗಂಧದಗುಡಿ’ ಸಾಕ್ಷ್ಯಚಿತ್ರದ ರಿಲೀಸ್ ಡೇಟ್ ಬಗ್ಗೆ ಹೊಸ ಅಪ್​ಡೇಟ್
ಪುನೀತ್
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Jul 05, 2022 | 7:43 PM

Share

ಪುನೀತ್​ ರಾಜ್​ಕುಮಾರ್ (Puneeth Rajkumar)​ ಅವರು ಕರ್ನಾಟಕದ ಬಗ್ಗೆ ಅಪಾರ ಪ್ರೀತಿ ಹೊಂದಿದ್ದರು. ಕರುನಾಡಿನ ಪ್ರಕೃತಿ ಸೌಂದರ್ಯ ಮತ್ತು ವನ್ಯಜೀವಿಗಳ ಕುರಿತ ಸಾಕ್ಷ್ಯಚಿತ್ರದ ನಿರ್ಮಾಣದಲ್ಲಿ ಅಪಾರ ಆಸಕ್ತಿ ತೋರಿದ್ದರು. ‘ಗಂಧದಗುಡಿ’ (Gandhadagudi) ಹೆಸರಿನ ಡಾಕ್ಯುಮೆಂಟರಿಯನ್ನು ನಿರ್ಮಾಣ ಮಾಡಿ ಅದನ್ನು ಅಭಿಮಾನಿಗಳ ಮುಂದಿಡುವ ಮುನ್ನವೇ ಅವರು ಇಹಲೋಕ ತ್ಯಜಿಸಿದ್ದು ನೋವಿನ ಸಂಗತಿ. ಸದ್ಯ ಈ ಡಾಕ್ಯುಮೆಂಟರಿಯ ಪೋಸ್ಟ್ ಪ್ರೊಡಕ್ಷನ್ ನಡೆಯುತ್ತಿದೆ. ಮೂಲಗಳ ಪ್ರಕಾರ ಅಕ್ಟೋಬರ್ ಅಥವಾ ನವೆಂಬರ್ ವೇಳೆಗೆ ಪುನೀತ್ ಅವರ ಈ ಕನಸಿನ ಪ್ರಾಜೆಕ್ಟ್ ರಿಲೀಸ್ ಆಗಲಿದೆ ಎನ್ನಲಾಗುತ್ತಿದೆ.

ಪುನೀತ್​ ರಾಜ್​ಕುಮಾರ್​ ಅವರ ‘ಪಿಆರ್​ಕೆ ಸ್ಟುಡಿಯೋಸ್​’ ಮೂಲಕ ‘ಗಂಧದಗುಡಿ’ ನಿರ್ಮಾಣ ಆಗಿದೆ. ಈ ಡಾಕ್ಯುಮೆಂಟರಿಯ ಟೈಟಲ್​ಅನ್ನು ನವೆಂಬರ್ 2021ಕ್ಕೆ ರಿಲೀಸ್ ಮಾಡಲು ಪುನೀತ್ ಅವರು ಚಿಂತನೆ ನಡೆಸಿದ್ದರು. ಆದರೆ, ಅವರು 2021ರ ಅಕ್ಟೋಬರ್ 29ರಂದು ನಿಧನರಾದರು. ‘ಗಂಧದಗುಡಿ’ ಥಿಯೇಟರ್​ನಲ್ಲೇ ರಿಲೀಸ್ ಆಗಲಿದೆ ಎನ್ನುವ ಘೋಷಣೆ ಪಿಆರ್​ಕೆ ಕಡೆಯಿಂದ ಆಯಿದೆ. ಈಗ ‘ಗಂಧದಗುಡಿ’ ರಿಲೀಸ್ ಬಗ್ಗೆ ಹೊಸ ಅಪ್​ಡೇಟ್ ಕೇಳಿ ಫ್ಯಾನ್ಸ್ ಖುಷಿಯಾಗಿದ್ದಾರೆ.

ಇದನ್ನೂ ಓದಿ
Image
‘ಕಿಶೋರ್ ಪತ್ತಿಕೊಂಡಗೆ ಮೆದುಳಿನ ಸರ್ಜರಿ ಆಗಿದೆ, ಅವರು ಔಟ್​ ಆಫ್​ ಡೇಂಜರ್​’; ಧೀರೇನ್ ರಾಮ್​ಕುಮಾರ್
Image
Kishore Pathikonda: ‘ಜೇಮ್ಸ್​’ ನಿರ್ಮಾಪಕ ಕಿಶೋರ್​ ಪತ್ತಿಕೊಂಡ ಆರೋಗ್ಯ ಸ್ಥಿತಿ ಗಂಭೀರ; ಆಸ್ಪತ್ರೆಗೆ ದಾಖಲು
Image
ಆತ್ಮೀಯತೆಯಿಂದ ಮಾತನಾಡಿದ ಶಿವರಾಜ್​ಕುಮಾರ್ ಹಾಗೂ ಅಶ್ವಿನಿ ಪುನೀತ್​ರಾಜ್​ಕುಮಾರ್; ಇಲ್ಲಿದೆ ವಿಡಿಯೋ
Image
ಪುನೀತ್​ ನಟನೆಯ ‘ಜೇಮ್ಸ್’ ಮೂರು ದಿನಕ್ಕೆ ಗಳಿಸಿದ್ದೆಷ್ಟು? ಇಲ್ಲಿದೆ ಸಂಪೂರ್ಣ ರಿಪೋರ್ಟ್​

ಪಿಆರ್​​ಕೆ ಸ್ಟುಡಿಯೋಸ್ ನಿರ್ಮಾಣದ ಎಲ್ಲಾ ಸಿನಿಮಾಗಳು ರಿಲೀಸ್ ಆಗುವುದು ಗುರುವಾರ. ಹೀಗಾಗಿ, ಅಕ್ಟೋಬರ್ 27 ಅಥವಾ ನವೆಂಬರ್ 3ರಂದು ‘ಗಂಧದಗುಡಿ’ ಸಾಕ್ಷ್ಯಚಿತ್ರ ರಿಲೀಸ್ ಆಗಬಹುದು ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಸುದ್ದಿ ಹರಿದಾಡುತ್ತಿದೆ. ಈ ವಿಚಾರ ಕೇಳಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ.

ಕರ್ನಾಟಕದ ದಟ್ಟ ಕಾನನದ ಒಳಗೆ ‘ಗಂಧದಗುಡಿ’ಯನ್ನು ಚಿತ್ರೀಕರಿಸಲಾಗಿದೆ. ಪ್ರಕೃತಿ ಸೌಂದರ್ಯವನ್ನು, ವನ್ಯಜೀವಿಗಳ ಜೀವನವನ್ನು ಅದ್ಭುತವಾಗಿ ಸೆರೆ ಹಿಡಿಯಲಾಗಿದೆ. ಇದರ ಟೀಸರ್​ ನೋಡಿಯೇ ಜನರು ರೋಮಾಂಚನಗೊಂಡಿದ್ದಾರೆ. ಕಣ್ಮನ ತಣಿಸುವಂತಹ ಛಾಯಾಗ್ರಹಣ ಎಲ್ಲರಲ್ಲೂ ಬೆರಗು ಮೂಡಿಸಿದೆ. ಪುನೀತ್ ಅವರು ಇದಕ್ಕಾಗಿ ಸಾಕಷ್ಟು ಶ್ರಮವಹಿಸಿದ್ದಾರೆ.

ಸದ್ಯ ಹರಿದಾಡುತ್ತಿರುವ ಸುದ್ದಿ ಕೇಳಿ ಸ್ಯಾಂಡಲ್​ವುಡ್​ನ ಅನೇಕ ಸೆಲೆಬ್ರಿಟಗಳು ಸಂತಸ ವ್ಯಕ್ತಪಡಿಸಿದ್ದಾರೆ. ಈ ಸಾಕ್ಷ್ಯ ಚಿತ್ರಕ್ಕಾಗಿ ಕಾಯುತ್ತಿರುವ ಬಗ್ಗೆ ಟ್ವೀಟ್ ಮಾಡಿಕೊಂಡಿದ್ದಾರೆ. ‘ಗಂಧದಗುಡಿ’ ಮೂಲಕ ಪುನೀತ್ ಅವರನ್ನು ಮತ್ತೆ ಕಣ್ತುಂಬಿಕೊಳ್ಳುವ ಭಾಗ್ಯ ಸಿಗಲಿದೆ. ಅಲ್ಲದೆ, ಈ ಸಾಕ್ಷ್ಯಚಿತ್ರದಲ್ಲಿ ಪುನೀತ್ ರಾಜ್​ಕುಮಾರ್ ಅವರದ್ದೇ ಧ್ವನಿ ಇರಲಿದೆ ಎಂಬುದು ವಿಶೇಷ.

ಇದನ್ನೂ ಓದಿ: Kishore Pathikonda: ‘ಜೇಮ್ಸ್​’ ನಿರ್ಮಾಪಕ ಕಿಶೋರ್​ ಪತ್ತಿಕೊಂಡ ಆರೋಗ್ಯ ಸ್ಥಿತಿ ಗಂಭೀರ; ಆಸ್ಪತ್ರೆಗೆ ದಾಖಲು

‘ಕಿಶೋರ್ ಪತ್ತಿಕೊಂಡಗೆ ಮೆದುಳಿನ ಸರ್ಜರಿ ಆಗಿದೆ, ಅವರು ಔಟ್​ ಆಫ್​ ಡೇಂಜರ್​’; ಧೀರೇನ್ ರಾಮ್​ಕುಮಾರ್